• About us
  • Contact us
  • Disclaimer
Saturday, April 18, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಧರ್ಮಸ್ಥಳ ಲಕ್ಷ ದೀಪೋತ್ಸವ ; ಧರ್ಮಸ್ಥಳ ಸರ್ವ ಧರ್ಮೀಯರಿಗೂ ಶ್ರದ್ಧಾ ಕೇಂದ್ರ: ಎಂ.ಬಿ.ಪಾಟೀಲ್

Coastal Times by Coastal Times
November 19, 2025
in ಕರಾವಳಿ
ಧರ್ಮಸ್ಥಳ ಲಕ್ಷ ದೀಪೋತ್ಸವ ; ಧರ್ಮಸ್ಥಳ ಸರ್ವ ಧರ್ಮೀಯರಿಗೂ ಶ್ರದ್ಧಾ ಕೇಂದ್ರ: ಎಂ.ಬಿ.ಪಾಟೀಲ್
25
VIEWS
WhatsappTelegramShare on FacebookShare on Twitter

ಉಜಿರೆ: ವಿವಿಧತೆಯಲ್ಲಿ ಏಕತೆಯನ್ನು ಸಾಧಿಸಿರುವ ಭಾರತದ ಸರ್ವಧರ್ಮಗಳೂ ಸತ್ಯ, ಅಹಿಂಸೆ, ಪರೋಪಕಾರ, ಸೇವೆ, ಅನುಕಂಪ ಮಾನವೀಯ ಮೌಲ್ಯಗಳಿಗೆ ಒತ್ತು ನೀಡಿ ವಿಶ್ವವೇ ಒಂದು ಕುಟುಂಬ ಎಂದು ಪರಿಭಾವಿಸಿದ್ದು ಇತರ ಗೌರವಿಸುವುದು ನಮ್ಮ ಸನಾತನ ಧರ್ಮದ ಜೀವಾಳ ಎಂದು ರಾಜ್ಯ ಸರಕಾರದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಡಾ.ಎಂ.ಬಿ.ಪಾಟೀಲ್ ಅವರು ಹೇಳಿದರು.

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಮಂಗಳವಾರ ನಡೆದ ಲಕ್ಷದೀ ಪೋತ್ಸವ ಸಂದರ್ಭದಲ್ಲಿ ಆಯೋಜಿಸಿದ ಸರ್ವ ಧರ್ಮ ಸಮ್ಮೇಳನದ 93ನೆಯ ಅಧಿವೇಶನದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಸರ್ವಧರ್ಮೀಯರಿಗೂ ಸೇವೆ ನೀಡುವ ಧರ್ಮಸ್ಥಳ ಅನುಪಮ ಶ್ರದ್ಧಾ-ಭಕ್ತಿಯ ಕೇಂದ್ರವಾ: ಗಿದೆ. ಇಲ್ಲಿನ ಧರ್ಮಸಹಿಷ್ಣುತೆ, ಚತುರ್ವಿದ ದಾನ ಪರಂಪರೆ, ಮಾನವೀಯ ಸೇವೆ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಮಾನವ ಸೇವೆಯೇ ಶ್ರೇಷ್ಠ ಧರ್ಮವಾಗಿದ್ದು, ಲಕ್ಷದೀಪೋತ್ಸವ ಪ್ರತಿ ಮನೆ ಯಲ್ಲಿಯೂ, ಪ್ರತಿಯೊಬ್ಬರ ಮನದಲ್ಲಿಯೂ ವಿಶ್ವಸಾಮರಸ್ಯದ ಬೆಸುಗೆಯನ್ನು ಬೆಸೆಯಲಿ, ಪರಸ್ಪರ ಪ್ರೀತಿ-ವಿಶ್ವಾಸದೊಂದಿಗೆ ಶಾಂತಿ, ಸಾಮ ರಸ್ಯದ ಸೌಹಾರ್ದಯುತ ಬದುಕಿಗೆ ಲಕ್ಷದೀಪೋತ್ಸವ ನಾಂದಿಯಾಗಲಿ, ಲಕ್ಷದೀಪೋತ್ಸವದ ಹೊಂಬೆಳಕಿ ನಲ್ಲಿ ನೈತಿಕತೆ, ಸೇವೆ ಜೀವನ ಮೌಲ್ಯಗಳು ನಿರಂತರ ನಂದಾದೀಪವಾಗಿ ಸರ್ವರ ಸಾರ್ಥಕ ಬದುಕಿಗೆ ದಾರಿದೀಪವಾಗಲಿ ಎಂದು ಅವರು ಹಾರೈಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು ಮಾನವೀಯತೆಯೇ ಸಕಲ ಧರ್ಮಗಳ ಸಾರ, ಮಾನವನು ತನ್ನ ಜೀವನದಲ್ಲಿ ನೈತಿಕ, ಆಧ್ಯಾತ್ಮಿಕ ಹಾಗೂ ಸಾಮಾಜಿಕವಾಗಿ ಆದರ್ಶ ಬದುಕನ್ನು ನಡೆಸಲು ದಾರಿ ತೋರುವುದೇ ಧರ್ಮದ ಉದ್ದೇಶ ಎಂದು ಹೇಳಿದರು. ಧರ್ಮ ಕೇವಲ ಪೂಂಜೆ ಹಾಗೂ ಧಾರ್ಮಿಕ ಆಚರಣೆಗಳಿಗೆ ಸೀಮಿತವಾಗದೆ, ಸತ್ಯ, ಅಹಿಂಸೆ, ಕರುಣೆ, ಶಾಂತಿ, ನೆಮ್ಮದಿ, ಪರೋಪಕಾರ, ಸಮಾನತೆ ಮೌಲ್ಯಗಳನ್ನು ಉದ್ದೀಪನಗೊಳಿಸಬೇಕು.

ಸರ್ವಧರ್ಮ ಸಮ್ಮೇಳನದ ಅಧ್ಯಕ್ಷತೆಯನ್ನು ಹರಿಹರಪುರದ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿಯವರು ವಹಿಸಿ ಮಾತನಾಡಿ, ವೈವಿಧ್ಯತೆಯನ್ನು ಹೃದಯದಿಂದ ಒಪ್ಪಿಕೊಳ್ಳುವಂತಹ ಸಮನ್ವಯ ದೃಷ್ಟಿ ಇದ್ದಾಗ ಮಾತ್ರ ಎಲ್ಲ ಮಾನವರೂ ಶಾಂತಿ ಸೌಹಾರ್ದತೆ ಸಮಾನತೆಯಿಂದ ಬದುಕಲು ಸಾಧ್ಯವಾಗುತ್ತದೆ, ಭಾರತೀಯ ಸಂಸ್ಕೃತಿಯಲ್ಲಿ ವೈವಿಧ್ಯತೆಯೆನ್ನುವುದು ಒಂದು ಸಹಜವಾದ ಪ್ರಕ್ರಿಯೆಯಾಗಿದೆ. ವಿಚಾರಕ್ಕೆ ಮುಕ್ತವಾದ ಅವಕಾಶವಿದ್ದಾಗ ವೈವಿಧ್ಯಯಿರಲು ಸಾಧ್ಯ, ಧರ್ಮ ಎಂದಿಗೂ ಅಶಾಂತಿಗೆ ಕಾರಣವಾಗುವುದಿಲ್ಲ, ನಾವು ನಮ್ಮ ಸ್ವಾರ್ಥಕ್ಕಾಗಿ ಅದನ್ನು ತಪ್ಪಾಗಿ ಉಪಯೋಗಿಸಿದಾಗ ಅಶಾಂತಿಗೆ ಕಾರಣವಾಗುತ್ತದೆ. ನಮ್ಮ ಧರ್ಮ ಸಂಪ್ರದಾಯಗಳನ್ನು ತಿಳಿದು ಪಾಲಿಸುವುದರೊಂದಿಗೆ ಇತರನ್ನು ಗೌರವಿಸುವ ಗುಣವನ್ನು ಬೆಳೆಸಿಕೊಳ್ಳಿ ಎಂದರು.

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಬಂದ ಅಂಕಣಕಾರ ತನ್ನೀರ್ ಅಹಮ್ಮದ್ ಉಲ್ಲಾ ಮಾತನಾಡಿ, ಸತ್ಯಮೇವ ಜಯತೇ ಎನ್ನುವಂತೆ ಸತ್ಯ ಯಾವಾಗಲೂ ಗೆಲ್ಲುತ್ತದೆ, ಸುಳ್ಳು ಸೋಲುತ್ತದೆ. ಪಾದಯಾತ್ರೆ ತನಗೆ ಅಮೂಲ್ಯ ಜೀವನಪಾಠ ಕಲಿಸಿದೆ. ಹತ್ತು ಸಾವಿರ ಮಂದಿಯನ್ನು ಪಾದಯಾತ್ರೆಯಲ್ಲಿ ತಾನು ಭೇಟಿಯಾಗಿ ಅಪಾರ ಲೋಕಾನುಭವ ಪಡೆದೆ ಎಂದು ಸಂತಸ ವ್ಯಕ್ತ ಪಡಿಸಿದರು.

ಸಮ್ಮೇಳನದಲ್ಲಿ ಉಪನ್ಯಾಸಕರಾಗಿ ವಿದ್ವಾಂಸರಾದ ಎಸ್.ಸೂರ್ಯಪ್ರಕಾಶ್ ಪಂಡಿತ್, ತನ್ವೀರ್ ಅಹಮ್ಮದ್ ಉಲ್ಲಾ, ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಡಿ ಸುರೇಂದ್ರ ಕುಮಾರ್, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ ಹರ್ಷೇಂದ್ರ ಕುಮಾರ್, ವೇದಿಕೆಯಲ್ಲಿ ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

300ಕ್ಕೂ ಹೆಚ್ಚು ಬ್ಯಾಂಕ್ ಖಾತೆ, 250ಕ್ಕೂ ಹೆಚ್ಚು ಸಿಮ್ ಕಾರ್ಡ್​ ಬಳಸಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಮಂಗಳೂರಿನ ಸೆನ್​ ಪೊಲೀಸ್​ ಠಾಣೆಯ ಸಿಬ್ಬಂದಿ

Next Post

ರಚನಾ ಕ್ರೈಸ್ತ ವಾಣಿಜ್ಯ ಮಂಡಳಿಗೆ ನೂತನ ಸಮಿತಿ ಆಯ್ಕೆ, ರಚನಾ – ಮಂಗಳೂರಿನ ಕಥೊಲಿಕ್ ವಾಣಿಜ್ಯ ಮಹಾಮಂಡಳಿಯ ಅಧ್ಯಕ್ಷರಾಗಿ ರೊಯ್ ಕ್ಯಾಸ್ತೆಲಿನೊ

Related Posts

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.
ಕರಾವಳಿ

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

April 16, 2026
15
ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು
ಕರಾವಳಿ

ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು

April 15, 2026
72
Next Post
ರಚನಾ ಕ್ರೈಸ್ತ ವಾಣಿಜ್ಯ ಮಂಡಳಿಗೆ ನೂತನ ಸಮಿತಿ ಆಯ್ಕೆ, ರಚನಾ – ಮಂಗಳೂರಿನ ಕಥೊಲಿಕ್ ವಾಣಿಜ್ಯ ಮಹಾಮಂಡಳಿಯ ಅಧ್ಯಕ್ಷರಾಗಿ ರೊಯ್ ಕ್ಯಾಸ್ತೆಲಿನೊ

ರಚನಾ ಕ್ರೈಸ್ತ ವಾಣಿಜ್ಯ ಮಂಡಳಿಗೆ ನೂತನ ಸಮಿತಿ ಆಯ್ಕೆ, ರಚನಾ – ಮಂಗಳೂರಿನ ಕಥೊಲಿಕ್ ವಾಣಿಜ್ಯ ಮಹಾಮಂಡಳಿಯ ಅಧ್ಯಕ್ಷರಾಗಿ ರೊಯ್ ಕ್ಯಾಸ್ತೆಲಿನೊ

Discussion about this post

Recent News

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

April 18, 2026
13
ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

April 18, 2026
40
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

April 18, 2026
ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

ಕೊಣಾಜೆ : ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ , ಲುಕ್ ಔಟ್ ನೋಟಿಸ್ ಜಾರಿ

April 18, 2026
ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

April 16, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d