ಮಂಗಳೂರು, ನ.18: ವೆಲೆನ್ಸಿಯಾ ಚರ್ಚ್ ಧರ್ಮಗುರು ಸಿಪ್ರಿಯನ್ ಪಿಂಟೋ ಅವರನ್ನು ಎರಡನೇ ಬಾರಿಗೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪೆರ್ಮನ್ನೂರು ಚರ್ಚ್ ನಲ್ಲಿ ಪಾದ್ರಿಯಾಗಿದ್ದ ಸಂದರ್ಭದಲ್ಲಿ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಎರಡನೇ ಎಫ್ಐಆರ್ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಬುಧವಾರ ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಲಯವು ಡಿ.2ರ ತನಕ ನ್ಯಾಯಾಂಗ ಬಂಧನ ವಿಧಿಸಿದೆ.
ವೆಲೆನ್ಸಿಯಾ ಚರ್ಚ್ ನಲ್ಲಿ ಬಾಲಕನಿಗೆ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಇತ್ತೀಚೆಗೆ ಮಂಗಳೂರಿನ ಕೋರ್ಟ್ ಜಾಮೀನು ನೀಡಿತ್ತು. ಆದರೂ ಸಿಪ್ರಿಯನ್ ಪಿಂಟೋ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದರು. ಅನಾರೋಗ್ಯ ನೆಪದಲ್ಲಿ ಬಂಧನ ಪ್ರಕ್ರಿಯೆ ಮುಂದೂಡುತ್ತ ಬಂದಿದ್ದರು.
Discover more from Coastal Times Kannada
Subscribe to get the latest posts sent to your email.





Discussion about this post