• About us
  • Contact us
  • Disclaimer
Thursday, November 19, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಪಶ್ಚಿಮ ವಲಯ ನೂತನ ಐಜಿಪಿಯಾಗಿ ಎನ್. ಶಶಿಕುಮಾರ್ ಅಧಿಕಾರ ಸ್ವೀಕಾರ

Coastal Times by Coastal Times
November 19, 2026
in ಕರಾವಳಿ
ಮಂಗಳೂರು: ಪಶ್ಚಿಮ ವಲಯ ನೂತನ ಐಜಿಪಿಯಾಗಿ ಎನ್. ಶಶಿಕುಮಾರ್ ಅಧಿಕಾರ ಸ್ವೀಕಾರ
15
VIEWS
WhatsappTelegramShare on FacebookShare on Twitter

ಮಂಗಳೂರು, 19: ಪಶ್ಚಿಮ ವಲಯದ ನಾಲ್ಕು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡದಲ್ಲಿ ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ಶಾಂತಿಯುತ ವಾತಾವರಣ ಹಾಗೂ ಜನಸ್ನೇಹಿ ಪೊಲೀಸ್ ವ್ಯವಸ್ಥೆ ನಿರ್ಮಾಣಕ್ಕೆ ನಮ್ಮ ಪ್ರಮುಖ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ವಲಯದ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಜತೆ ಸಂಕ್ಷಿಪ್ತ ಸಭೆ ನಡೆಸಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಪಶ್ಚಿಮ ವಲಯ ನೂತನ ಐಜಿಪಿ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಮಂಗಳೂರಿನ ಐಜಿಪಿ ಕಚೇರಿಯಲ್ಲಿ ಗುರುವಾರ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರಿಂದ ಅಧಿಕಾರ ವಹಿಸಿಕೊಂಡ ಬಳಿಕ ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ ಅಭಿಪ್ರಾಯ ಹಂಚಿಕೊಂಡರು. ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿಯೂ ಇಲಾಖೆಯ ಜತೆಗೆ ಸಾರ್ವಜನಿಕರು, ಜನಪ್ರತಿನಿಧಿಗಳು, ವಿವಿಧ ಸಾಮಾಜಿಕ ಸಂಘಟನೆಗಳು, ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮ ಸಹಕಾರ ನೀಡಿದ್ದು, ಮುಂದೆಯೂ ಸಹಕಾರ ಬಯಸುತ್ತಿದ್ದೇನೆ ಎಂದವರು ಹೇಳಿದರು.

ಕರಾವಳಿಯಲ್ಲಿ ಕಳೆದ ಒಂದೂವರೆ ವರ್ಷಗಳಿಂದ ಕಾನೂನು ಸುವ್ಯವಸ್ಥೆ ನಿಯಂತ್ರಣದ್ದಲ್ಲಿದ್ದು, ಸದ್ಯ ನಿಮ್ಮ ಮುಂದಿರುವ ಸವಾಲುಗಳೇನು ಎಂಬ ಸುದ್ದಿಗಾರರ ಪ್ರಶ್ನೆಗೆ, ಪೊಲೀಸ್ ವ್ಯವಸ್ಥೆಯಡಿ ಪ್ರತಿ ವಲಯ ಅಥವಾ ಜಿಲ್ಲೆಗಳಲ್ಲಿ ಸ್ಥಳೀಯ ವಿಷಯಗಳಿರುತ್ತವೆ. ಕಲಬುರ್ಗಿ, ಹುಬ್ಬಳ್ಳಿ ಧಾರವಾಡ, ರಾಯಚೂರು ಮೊದಲಾದ ಜಿಲ್ಲೆಗಳಲ್ಲಿ ನಾನು ಈ ಹಿಂದೆ ಕೆಲಸ ಮಾಡಿದ್ದೇನೆ. ನಮ್ಮ ಪ್ರಮುಖ ಆದ್ಯತೆ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿಯುವ ವಾತಾವರಣ ನಿರ್ಮಿಸುವುದು, ಅಪರಾಧ ತಡೆ ಹಾಗೂ ಪತ್ತೆ ಕಾರ್ಯ, ಸಂಚಾರ ಸಮಸ್ಯೆಗಳು ಹಲವು ಕಡೆ ನಿಭಾಯಿಸಬೇಕಾಗಿರುತ್ತದೆ. ಜತೆಗೆ ಜನಸ್ನೇಹಿ ಪೊಲೀಸ್ ವ್ಯವಸ್ಥೆ ನಿರ್ಮಾಣ ಮಾಡುವಲ್ಲಿ ಇಲಾಖೆಯ ಎಲ್ಲಾ ಅಧಿಕಾರಿ ಸಿಬ್ಬಂದಿಯನ್ನು ಪ್ರೇರೇಪಿಸುವ ಕಾರ್ಯ ಮಾಡಬೇಕಿರುತ್ತದೆ. ಪೊಲೀಸ್ ಇಲಾಖೆಯಲ್ಲಿ ತ್ವರಿತ ಕ್ರಮ ಅಗತ್ಯವಾಗಿರುತ್ತದೆ. ಯಾವುದೇ ಪ್ರತಿಕ್ರಿಯೆಗೆ ಕ್ರಮಕ್ಕೆ ಹೆಚ್ಚಿನ ಸಮಯ ಇರುವುದಿಲ್ಲ. ಹಾಗಾಗಿ ಎದುರಾಗಬಹುದಾದ ಸಮಸ್ಯೆಗಳ ಬಗ್ಗೆ ವಿಸ್ತೃತವಾಗಿ ಚರ್ಚೆ ಮಾಡಿಕೊಂಡು ಅವಲೋಕನ ಮಾಡಿಕೊಂಡರೆ ಸಮಸ್ಯೆಗಳ ಸಂದರ್ಭ ಸುಲಭವಾಗಿ ನಿಭಾಯಿಸಲು ಸಾಧ್ಯವಾಗಲಿದೆ ಎಂದವರು ಹೇಳಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ: ಎರಡನೇ ಬಾರಿ ವೆಲೆನ್ಸಿಯಾ ಚರ್ಚ್ ಪಾದ್ರಿ ಸಿಪ್ರಿಯನ್ ಪಿಂಟೋ ಮತ್ತೆ ಅರೆಸ್ಟ್

Related Posts

ಕೊಲ್ಯ ಐಡಿಯಲ್ ಐಸ್ ಕ್ರೀಮ್ ಕೋಲ್ಡ್ ಸ್ಟೋರೇಜ್, ಹೋಟೆಲ್, ಸ್ವೀಟ್ಸ್, ಘಟಕಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಿಢೀರ್ ದಾಳಿ
ಕರಾವಳಿ

ಕೊಲ್ಯ ಐಡಿಯಲ್ ಐಸ್ ಕ್ರೀಮ್ ಕೋಲ್ಡ್ ಸ್ಟೋರೇಜ್, ಹೋಟೆಲ್, ಸ್ವೀಟ್ಸ್, ಘಟಕಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಿಢೀರ್ ದಾಳಿ

November 18, 2026
36
ಮಂಗಳೂರಿನಲ್ಲಿ ವಿಮಾನ ಟೇಕ್ ಆಫ್ ಆಗುವ ವೇಳೆ ಇಂಜಿನ್ ನಲ್ಲಿ ದೋಷ, ಪೈಲಟ್ ಸಮಯ ಪ್ರಜ್ಞೆಯಿಂದ ಉಳಿಯಿತು 236 ಜನರ ಪ್ರಾಣ..!
ಕರಾವಳಿ

ಮಂಗಳೂರಿನಲ್ಲಿ ವಿಮಾನ ಟೇಕ್ ಆಫ್ ಆಗುವ ವೇಳೆ ಇಂಜಿನ್ ನಲ್ಲಿ ದೋಷ, ಪೈಲಟ್ ಸಮಯ ಪ್ರಜ್ಞೆಯಿಂದ ಉಳಿಯಿತು 236 ಜನರ ಪ್ರಾಣ..!

November 17, 2026
50

Discussion about this post

Recent News

ಮಂಗಳೂರು: ಪಶ್ಚಿಮ ವಲಯ ನೂತನ ಐಜಿಪಿಯಾಗಿ ಎನ್. ಶಶಿಕುಮಾರ್ ಅಧಿಕಾರ ಸ್ವೀಕಾರ

ಮಂಗಳೂರು: ಪಶ್ಚಿಮ ವಲಯ ನೂತನ ಐಜಿಪಿಯಾಗಿ ಎನ್. ಶಶಿಕುಮಾರ್ ಅಧಿಕಾರ ಸ್ವೀಕಾರ

November 19, 2026
15
ಮಂಗಳೂರು ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ: ಎರಡನೇ ಬಾರಿ ವೆಲೆನ್ಸಿಯಾ ಚರ್ಚ್ ಪಾದ್ರಿ ಸಿಪ್ರಿಯನ್ ಪಿಂಟೋ ಮತ್ತೆ ಅರೆಸ್ಟ್

ಮಂಗಳೂರು ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ: ಎರಡನೇ ಬಾರಿ ವೆಲೆನ್ಸಿಯಾ ಚರ್ಚ್ ಪಾದ್ರಿ ಸಿಪ್ರಿಯನ್ ಪಿಂಟೋ ಮತ್ತೆ ಅರೆಸ್ಟ್

November 19, 2026
9
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಪಶ್ಚಿಮ ವಲಯ ನೂತನ ಐಜಿಪಿಯಾಗಿ ಎನ್. ಶಶಿಕುಮಾರ್ ಅಧಿಕಾರ ಸ್ವೀಕಾರ

ಮಂಗಳೂರು: ಪಶ್ಚಿಮ ವಲಯ ನೂತನ ಐಜಿಪಿಯಾಗಿ ಎನ್. ಶಶಿಕುಮಾರ್ ಅಧಿಕಾರ ಸ್ವೀಕಾರ

November 19, 2026
ಮಂಗಳೂರು ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ: ಎರಡನೇ ಬಾರಿ ವೆಲೆನ್ಸಿಯಾ ಚರ್ಚ್ ಪಾದ್ರಿ ಸಿಪ್ರಿಯನ್ ಪಿಂಟೋ ಮತ್ತೆ ಅರೆಸ್ಟ್

ಮಂಗಳೂರು ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ: ಎರಡನೇ ಬಾರಿ ವೆಲೆನ್ಸಿಯಾ ಚರ್ಚ್ ಪಾದ್ರಿ ಸಿಪ್ರಿಯನ್ ಪಿಂಟೋ ಮತ್ತೆ ಅರೆಸ್ಟ್

November 19, 2026
ಬೆಂಗಳೂರಿನಲ್ಲಿ ರಸ್ತೆಯಲ್ಲೇ ವ್ಯಕ್ತಿಯ ಕೈಕಾಲು ಕಟ್ಟಿ ಬೆಂಕಿ ಹಚ್ಚಿದ ದುಷ್ಕರ್ಮಿಗಳು; ಚಿಕಿತ್ಸೆ ಫಲಿಸದೆ ಸಾವು!

ಬೆಂಗಳೂರಿನಲ್ಲಿ ರಸ್ತೆಯಲ್ಲೇ ವ್ಯಕ್ತಿಯ ಕೈಕಾಲು ಕಟ್ಟಿ ಬೆಂಕಿ ಹಚ್ಚಿದ ದುಷ್ಕರ್ಮಿಗಳು; ಚಿಕಿತ್ಸೆ ಫಲಿಸದೆ ಸಾವು!

November 19, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d