ಮಂಗಳೂರು : ಉಳ್ಳಾಲ ತೊಕ್ಕೊಟ್ಟು ಸಮೀಪದ ನೇತ್ರಾವತಿ ಸೇತುವೆಯಲ್ಲಿ ಉಂಟಾದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೋರ್ವ ಗಂಭೀರ ಗಾಯಗೊಂಡ ಘಟನೆ ನಿನ್ನೆ ರಾತ್ರಿ 11.45ರ ಸುಮಾರಿಗೆ ನಡೆದಿದೆ.
ಅಪಘಾತ ನಡೆಡ ಸ್ಥಳದಲ್ಲಿ ಪಾನ್ ಕಾರ್ಡ್ ದೊರೆತ ಆಧಾರದಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಚೇತನ್ ಕೆ.ಎಂ. ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳುವನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಸಂಚಾರಿ ಠಾಣೆ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
Discussion about this post