ಕೋಜಿಕ್ಕೋಡ್, ಜ.19 : ಬಸ್‌ನಲ್ಲಿ ಲೈಂಗಿಕ ಕಿರುಕುಳದ ಆರೋಪ ಮಾಡಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಕೇರಳದಲ್ಲಿ 42 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೋವಿಂದಪುರಂ ನಿವಾಸಿಯಾದ 41 ವರ್ಷದ ದೀಪಕ್ ಅವರು ತಮ್ಮ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳವನ್ನೇ ಬೆಚ್ಚಿಬೀಳಿಸಿದೆ.
ಲೋಕನ್ ಬಸ್ಸಿನಲ್ಲಿ ಆತನ ಪ್ರಯಾಣಿಸುತ್ತಿದ್ದಾಗ ಆತ ಲೈಂಗಿಕ ಕಿರುಕುಳ ಕೊಡುವುದನ್ನು ಮಹಿಳೆ ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು ದೀಪಕ್ ಯು ಎಂಬ ಈ ವ್ಯಕ್ತಿ ಕೋಳಿಕ್ಕೋಡ್‌ನ ಗೋವಿಂದಪುರಂ ನಿವಾಸಿ. ಬೆಳಗ್ಗೆ 7 ಗಂಟೆ ಸುಮಾರಿಗೆ ಪೋಷಕರು ಆತನನ್ನು ಎಬ್ಬಿಸಲು ಪ್ರಯತ್ನಿಸಿದಾಗ ಆತ ತನ್ನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಹಲವು ಬಾರಿ ಬಾಗಿಲು ಬಡಿದು ಕರೆ ಮಾಡಿದರೂ ಬಲಿಪಶು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಭಯಗೊಂಡು ಆತನ ಪೋಷಕರು ಅಕ್ಕಪಕ್ಕದ ಮನೆಯವರ ಸಹಾಯ ಪಡೆದು ಬಲವಂತವಾಗಿ ಬಾಗಿಲು ತೆರೆದಿದ್ದಾರೆ, ಅಷ್ಟರಲ್ಲಾಗಲೇ ಆಗ ಮೃತಪಟ್ಟಿದ್ದ ಎಂದು ಕುಟುಂಬದವರು ಹೇಳಿದ್ದಾರೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಆ ವ್ಯಕ್ತಿ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎಂದು ವರದಿಯಾಗಿದೆ. 20 ಲಕ್ಷಕ್ಕೂ ಹೆಚ್ಚು ಜನರು ಇದನ್ನು ವೀಕ್ಷಿಸಿದ್ದಾರೆ. ಆನ್‌ಲೈನ್ ಪ್ರಚಾರಕ್ಕಾಗಿ ಮಹಿಳೆ ತಮ್ಮ ಮಗನನ್ನೇ ಹತ್ಯೆ ಮಾಡಿದ್ದಾಳೆ ಎಂದು ಅವರು ಆರೋಪಿಸಿದ್ದಾರೆ.
ಬಸ್ಸಿನಲ್ಲಿ ಅಶ್ಲೀಲ ವರ್ತನೆ ನಡೆಸಿದ್ದಾರೆ ಎಂಬ ಆರೋಪದೊಂದಿಗೆ ಯೂಟ್ಯೂಬರ್‌ವೊಬ್ಬರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದ ಬೆನ್ನಲ್ಲೇ ಈ ದುರ್ಘಟನೆ ನಡೆದಿದೆ. ಈ ಬಗ್ಗೆ ದೀಪಕ್ ಅವರ ಆಪ್ತ ಸ್ನೇಹಿತ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, “ವೈರಲ್ ವಿಡಿಯೋ ಕುರಿತು ನಾನು ಮೊದಲ ಬಾರಿಗೆ ದೀಪಕ್‌ಗೆ ಮಾಹಿತಿ ನೀಡಿದೆ. ಅದನ್ನು ಕೇಳಿ ಅವರು ಸಂಪೂರ್ಣವಾಗಿ ಶಾಕ್‌ಗೆ ಒಳಗಾದ. ಇಂತಹ ಯಾವುದೇ ಘಟನೆ ನಡೆದಿದ್ದರೆ ಅವರಿಗೆ ಖಂಡಿತ ನೆನಪಿರುತ್ತಿತ್ತು. ಆದರೆ ಅವರು ತಾವು ನಿರಪರಾಧಿ ಎಂಬ ನಂಬಿಕೆಯಲ್ಲೇ ಇದ್ದರು ಎಂದಿದ್ದಾರೆ.
ಕಾನೂನು ಕ್ರಮಕ್ಕೆ ತೀರ್ಮಾನಿಸಿದ್ದ ದೀಪಕ್: ಶನಿವಾರ ರಾತ್ರಿ ದೀಪಕ್ ಮತ್ತು ಅಸ್ಗರ್ ನಡುವಿನ ಕೊನೆಯ ಸಂಭಾಷಣೆಯಲ್ಲಿ, “ಯೂಟ್ಯೂಬರ್ ಮಹಿಳೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ವಕೀಲರನ್ನು ಭೇಟಿ ಮಾಡಿ ದೂರು ದಾಖಲಿಸೋಣ” ಎಂದು ದೀಪಕ್ ಹೇಳಿದ್ದಾರೆಂದು ಸ್ನೇಹಿತ ಬಹಿರಂಗಪಡಿಸಿದ್ದಾರೆ. ಅಲ್ಲದೆ ತಾವು ತಪ್ಪು ಮಾಡಿಲ್ಲ ಎಂಬ ಆತ್ಮವಿಶ್ವಾಸ ದೀಪಕ್‌ಗೆ ಇತ್ತು. ಆರೋಪ ಮಾಡಿದ ಮಹಿಳೆ ವಿದೇಶಕ್ಕೆ ತೆರಳುವ ಮೊದಲು ಅವರನ್ನು ಬಂಧಿಸಬೇಕು ಎಂಬುದು ಅವರ ಆಶಯವಾಗಿತ್ತು ಎಂದಿದ್ದಾರೆ.
ಈ ಆತ್ಮಹತ್ಯೆ ಬಳಿಕ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದೀಪಕ್ ಕುಟುಂಬದವರು, ಸ್ನೇಹಿತರು ಮತ್ತು ಸಾಮಾಜಿಕ ಕಾರ್ಯಕರ್ತರು, ಸತ್ಯಾಸತ್ಯತೆ ಪರಿಶೀಲಿಸದೇ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯ ಮಾನ ಹರಣ ಮಾಡುವ ಪ್ರವೃತ್ತಿ ಅಪಾಯಕಾರಿ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ದೀಪಕ್ ಕುಟುಂಬಸ್ಥರು ಸ್ಥಳೀಯ ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿ, ಈ ಸಾವಿಗೆ ಕಾರಣವಾದ ಎಲ್ಲ ಅಂಶಗಳ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ. ರಾಜ್ಯ ಪೊಲೀಸ್ ಮುಖ್ಯಸ್ಥರಿಗೂ ಹಲವಾರು ದೂರುಗಳು ಸಲ್ಲಿಕೆಯಾಗಿವೆ.
Discover more from Coastal Times Kannada
Subscribe to get the latest posts sent to your email.








Discussion about this post