ಮಂಗಳೂರು ಫೆ.20: ಸಹಕಾರಿ ಕ್ಷೇತ್ರದ ಬಲವರ್ಧನೆಗೆ ತನ್ನದೇ ಆದ ಪ್ರಾಮಾಣಿಕ ಸೇವೆಯನ್ನು ಸಲ್ಲಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದೆ. ಬ್ಯಾಂಕಿನ ಬೆಳವಣಿಗೆಯಲ್ಲಿ ಪ್ರಾಮಾಣಿಕ ರೀತಿಯ ಸಾರ್ಥಕತೆಯನ್ನು ಕಂಡ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಎಲ್ಲರ ಪ್ರೀತಿ ವಿಶ್ವಾಸವನ್ನು ಗಳಿಸಿದವರು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮಾದರಿ ಸಹಕಾರಿ ನಾಯಕರಾಗಿ ರಾಜ್ಯ, ರಾಷ್ಟ್ರ ಮಟ್ಟದಲ್ಲೂ ಗುರುತಿಸಿಕೊಂಡಿರುವ ‘ಸಹಕಾರ ರತ್ನ’ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ 74ನೇ ಹುಟ್ಟುಹಬ್ಬದ ಸಂಭ್ರಮಾಚರಣೆಯನ್ನು ನಡೆಸಲು ಅವಿಭಜಿತ ಜಿಲ್ಲೆಯ ಸಮಸ್ತ ಸಹಕಾರಿಗಳೆಲ್ಲರೂ ತೀರ್ಮಾನಿಸಿದ್ದೇವೆ. ಎಂದು ಆಚರಣಾ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಫೆ.20 ಸೋಮವಾರದಂದು ಎಸ್‌ಸಿಡಿಸಿಸಿ ಆಡಳಿತ ಮಂಡಳಿ ಕೊಠಡಿಯಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಫೆಬ್ರವರಿ-24 ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ ಹುಟ್ಟುಹಬ್ಬದ ದಿನ. ಅದೇ ದಿನ ಪೂರ್ವಾಹ್ನ 10.30 ಗಂಟೆಗೆ ಎಸ್‌ಸಿಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ 74ನೇ ಹುಟ್ಟುಹಬ್ಬದ ಸಂಭ್ರಮದ ಜೊತೆಗೆ ಅಭಿವಂದನಾ ಕಾರ್ಯಕ್ರಮ ಹಾಗೂ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಸಮಾರಂಭ ನಡೆಯಲಿದೆ.

ಡಾ| ಎಂ.ಎನ್.ಆರ್. ಆದರ್ಶ ನಾಯಕ: ಸಹಕಾರ ಕ್ಷೇತ್ರವನ್ನು ಸದೃಢಗೊಳಿಸುವ ಚಿಂತನೆಯೊಂದಿಗೆ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಕ್ರಾಂತಿಯನ್ನು ಸೃಷ್ಟಿಸಿರುವ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಸಹಕಾರಿಗಳೆಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆ. ಸಹಕಾರ ಕ್ಷೇತ್ರದ ಬೆಳವಣಿಗೆಗೆ ವಿಶೇಷ ಕಾರ್ಯಯೋಜನೆಯನ್ನು ಆಯೋಜಿಸಿ, ನಮಗೆಲ್ಲರಿಗೂ ಮಾರ್ಗದರ್ಶಕರಾದ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ 74 ಅರ್ಹ ಫಲಾನುಭವಿಗಳಿಗೆ 74 ಹೊಲಿಗೆ ಯಂತ್ರಗಳನ್ನು ವಿತರಿಸುವ ಕಾರ್ಯಕ್ರಮವು ಈ ಸಂದರ್ಭದಲ್ಲಿ ಆಯೋಜನೆಯಾಗಿದೆ. ಸಹಕಾರ ಕ್ಷೇತ್ರವು
ಸರ್ವಧರ್ಮೀಯರ ಕ್ಷೇತ್ರವಾಗಿರುವುದರಿಂದ ಸಮಾಜದ ಎಲ್ಲಾ ವರ್ಗದ ಫಲಾನುಭವಿಗಳನ್ನು ಗುರುತಿಸಿ, ಸವಲತ್ತುಗಳನ್ನು ಈ ಕಾರ್ಯಕ್ರಮದಲ್ಲಿ ವಿತರಿಸಲಾಗುವುದು. ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಕಾರ್ಯಕ್ರಮವು ಒಡಿಯೂರು ಗುರುದೇವದತ್ತ ಸಂಸ್ಥಾನಮ್, ಒಡಿಯೂರು ಇಲ್ಲಿನ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆಯಲಿದೆ, ಈ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ, ಸ್ವಾಮೀಜಿಯವರು ಆಶೀರ್ವಚನ ನೀಡಲಿರುವರು.
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಡಿ. ವೇದವ್ಯಾಸ ಕಾಮತ್ ಇವರು ಸಮಾರಂಭದ ಅಧ್ಯಕ್ಷತೆ ವಹಿಸಲಿರುವರು. ಸಮಸ್ತ ಸಹಕಾರಿಗಳ ಪರವಾಗಿ ಈ ಕಾರ್ಯಕ್ರಮದಲ್ಲಿ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರು ಅಭಿವಂದನೆಯನ್ನು ಸ್ವೀಕರಿಸಲಿದ್ದು, ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ ಪಿ.ಎಸ್. ಯಡಪಡಿತ್ತಾಯ ಅವರು ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಅಭಿವಂದಿಸಲಿರುವರು. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇದರ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಇವರು ಅಭಿವಂದನಾ ಭಾಷಣ ಮಾಡಲಿರುವರು.
74 ಫಲಾನುಭವಿಗಳಿಗೆ 74 ಹೊಲಿಗೆ ಯಂತ್ರಗಳನ್ನು ವಿತರಣೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯವರಾದ ಶ್ರೀ ರವಿಕುಮಾರ್ ಎಂ. ಆರ್. ಹಾಗೂ ಹೊಸ ದಿಗಂತ ಪತ್ರಿಕೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಪ್ರಕಾಶ್ ಪಿ.ಎಸ್. ಇವರು ನೆರವೇರಿಸಲಿರುವರು. ಕಾರ್ಯಕ್ರಮದಲ್ಲಿ 3000 ಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕ ಡಿ.ಆರ್.ರಮೇಶ್, ವ್ಯವಸ್ಥಾಪಕ ನಿರ್ದೇಶಕ ಗೋಪಾಲಕೃಷ್ಣ ಭಟ್ ಮತ್ತಿತರರು ಉಪಸ್ಥಿತರಿದ್ದರು.
Discover more from Coastal Times Kannada
Subscribe to get the latest posts sent to your email.








Discussion about this post