• About us
  • Contact us
  • Disclaimer
Saturday, June 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

​ಕೊಣಾಜೆ: ಪತ್ನಿ ಸಂಬಂಧಿಕರ ಮನೆಯಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಪತಿ ಸಾವು !

Coastal Times by Coastal Times
March 20, 2023
in ಕರಾವಳಿ
​ಕೊಣಾಜೆ: ಪತ್ನಿ ಸಂಬಂಧಿಕರ ಮನೆಯಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಪತಿ ಸಾವು !
114
VIEWS
WhatsappTelegramShare on FacebookShare on Twitter

ಉಳ್ಳಾಲ, ಮಾ.19: ವ್ಯಕ್ತಿಯೋರ್ವ ಪತ್ನಿಯ ಸಂಬಂಧಿಕರ ಮನೆಯಲ್ಲೇ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ ನಂತರ ಆಸ್ಪತ್ರೆಗೆ ತೆರಳಲು ಖುದ್ದಾಗಿ ಆಂಬುಲೆನ್ಸ್ ಹತ್ತಿ ಕುಳಿತು ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಮುಚ್ಚಿಲಕೋಡಿ ಎಂಬಲ್ಲಿ ಸಂಭವಿಸಿದೆ. ವಿಟ್ಲ ಕನ್ಯಾನ ನಿವಾಸಿ  ಬಾಬು ಶೆಟ್ಟಿಗಾರ್ ಎಂಬವರ ಪುತ್ರ  ಹರೀಶ್ (33) ಆತ್ಮಹತ್ಯೆ ಮಾಡಿಕೊಂಡವರು.  ಹಲವು  ವರ್ಷಗಳಿಂದ ಇವರು ಮುಡಿಪುವಿನ ಇನ್ಫೋಸಿಸ್ ಸಂಸ್ಥೆಯ ಗಾರ್ಡನ್ ಕೆಲಸ ನಿರ್ವಹಿಸುತ್ತಿದ್ದರು.

ಇತ್ತೀಚೆಗೆ ಹರೀಶ್ ಅವರು ಸಿದ್ದಕಟ್ಟೆ ಸಂಗಬೆಟ್ಟು ನಿವಾಸಿ ಯುವತಿಯನ್ನು ವಿವಾಹವಾಗಿದ್ದರು. ಇದೀಗ ಆಕೆ 7 ತಿಂಗಳ ಗರ್ಭಿಣಿಯಾಗಿದ್ದಾಳೆ. ಮಾ.12ರಂದು ಹರೀಶ್ ತನ್ನ ತಾಯಿಯ ಅಕ್ಕನ ಮಗನಾಗಿರುವ ಕೊಣಾಜೆ ಮುಚ್ಚಿಲಕೋಡಿ ನಿವಾಸಿ ರಮೇಶ್ ಶೆಟ್ಟಿಗಾರ್ ಎಂಬವರಿಗೆ ಕರೆ ಮಾಡಿ ತನ್ನ ಬ್ಯಾಗಿನಲ್ಲಿ ಭಸ್ಮ, ತಗಡು ದೊರೆತಿದ್ದು, ವಾಮಾಚಾರ ಮಾಡಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಸಹೋದರ ರಮೇಶ್ ಮಾ.19ರಂದು ಮನೆಗೆ ಬಂದು ಮಾತನಾಡುವ ಎಂದು ತಿಳಿಸಿರುವಂತೆ ಹರೀಶ್ ಅವರು ಮಾತುಕತೆಗೆಂದು ಬಂದಿದ್ದರು. ಆದರೆ ಬರುವಾಗಲೇ ಕೈಯಲ್ಲಿ ಪೆಟ್ರೋಲ್ ಅನ್ನು ಕ್ಯಾನಿನಲ್ಲಿ ಹಿಡಿದುಕೊಂಡು ಬಂದಿದ್ದಾರೆ. ಮಾತುಕತೆ ಆರಂಭವಾಗುವ ಮುನ್ನವೇ ಅಂಗಳದಲ್ಲಿ ಮೈಪೂರ್ತಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮನೆಮಂದಿ ಗಾಬರಿಗೊಂಡು ಕೊಣಾಜೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೊಣಾಜೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಹರೀಶ್ ಸಾವನ್ನಪ್ಪಿದ್ದಾರೆ. ಅರೆಬೆಂದ ಸ್ಥಿತಿಯಲ್ಲಿದ್ದ ಹರೀಶ್ ಖುದ್ದಾಗಿಯೇ ಆಂಬ್ಯುಲೆನ್ಸ್  ಹತ್ತಿದ್ದರು ಎಂದು ತಿಳಿದುಬಂದಿದೆ.

ರಮೇಶ್ ಶೆಟ್ಟಿಗಾರ್ ಹರೀಶ್ ಅವರ ಸಹೋದರನಾಗಿದ್ದರೆ, ರಮೇಶ್ ಅವರ ಪತ್ನಿಗೆ ಹರೀಶ್ ಅವರ ಪತ್ನಿ ಚಿಕ್ಕಮ್ಮನ ಮಗಳಾಗಿದ್ದಳು. ಸಂಬಂಧದ ಒಳಗಡೆ ಇಬ್ಬರಿಗೂ ವಿವಾಹ ನಡೆದಿತ್ತು. ಪತ್ನಿ ಸರಿಯಾಗಿ ಮಾತನಾಡುತ್ತಿಲ್ಲ , ಕಿವಿ ಕೇಳದಂತೆ ವರ್ತಿಸುತ್ತಾರೆ ಅನ್ನುವ ಆರೋಪವನ್ನು ಹರೀಶ್ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ಆರ್ಥಿಕವಾಗಿ ಯಾವುದೇ ರೀತಿಯ ಸಂಕಷ್ಟ ಇಲ್ಲದ ಹರೀಶ್ , ಇದೇ ತಿಂಗಳ ಒಳಗೆ ಪತ್ನಿಗೆ ಸೀಮಂತ ಮಾಡುವವರಿದ್ದರು.

ಕೊಣಾಜೆ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಸುರತ್ಕಲ್‌: ಅಕ್ರಮ ಮರಳು ಅಡ್ಡೆ ಮೇಲೆ ಪೊಲೀಸ್‌ ದಾಳಿ- 250 ಲೋಡ್‌ ವಶಕ್ಕೆ

Next Post

ನರ್ಸಿಂಗ್ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ, ಕನ್ಯಾಕುಮಾರಿಯ ಯುವ ಪಾದ್ರಿ ಬೆಂಗಳೂರಿನಲ್ಲಿ ಅರೆಸ್ಟ್

Related Posts

ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿ, 1ಕೆಜಿ 600 ಗ್ರಾಮ್ ತೂಕದ ಬೆಳ್ಳಿಯ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್
ಕರಾವಳಿ

ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿ, 1ಕೆಜಿ 600 ಗ್ರಾಮ್ ತೂಕದ ಬೆಳ್ಳಿಯ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್

June 12, 2026
74
ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಗೆ ಅದ್ದೂರಿ ಸ್ವಾಗತ
ಕರಾವಳಿ

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಗೆ ಅದ್ದೂರಿ ಸ್ವಾಗತ

June 12, 2026
76
Next Post
ನರ್ಸಿಂಗ್ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ, ಕನ್ಯಾಕುಮಾರಿಯ ಯುವ ಪಾದ್ರಿ ಬೆಂಗಳೂರಿನಲ್ಲಿ ಅರೆಸ್ಟ್

ನರ್ಸಿಂಗ್ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ, ಕನ್ಯಾಕುಮಾರಿಯ ಯುವ ಪಾದ್ರಿ ಬೆಂಗಳೂರಿನಲ್ಲಿ ಅರೆಸ್ಟ್

Discussion about this post

Recent News

ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿ, 1ಕೆಜಿ 600 ಗ್ರಾಮ್ ತೂಕದ ಬೆಳ್ಳಿಯ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್

ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿ, 1ಕೆಜಿ 600 ಗ್ರಾಮ್ ತೂಕದ ಬೆಳ್ಳಿಯ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್

June 12, 2026
74
ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಗೆ ಅದ್ದೂರಿ ಸ್ವಾಗತ

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಗೆ ಅದ್ದೂರಿ ಸ್ವಾಗತ

June 12, 2026
76
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿ, 1ಕೆಜಿ 600 ಗ್ರಾಮ್ ತೂಕದ ಬೆಳ್ಳಿಯ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್

ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿ, 1ಕೆಜಿ 600 ಗ್ರಾಮ್ ತೂಕದ ಬೆಳ್ಳಿಯ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್

June 12, 2026
ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಗೆ ಅದ್ದೂರಿ ಸ್ವಾಗತ

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಗೆ ಅದ್ದೂರಿ ಸ್ವಾಗತ

June 12, 2026
ಸೂರಿಂಜೆ-ಪುಚ್ಚಾಡಿ ಹದಗೆಟ್ಟ ರಸ್ತೆ: ಸಾಮೂಹಿಕ ರಾಜೀನಾಮೆ ಹಾಗೂ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಸೂರಿಂಜೆ-ಪುಚ್ಚಾಡಿ ಹದಗೆಟ್ಟ ರಸ್ತೆ: ಸಾಮೂಹಿಕ ರಾಜೀನಾಮೆ ಹಾಗೂ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

June 12, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d