• About us
  • Contact us
  • Disclaimer
Friday, June 26, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು : ಪ್ರಾಧ್ಯಾಪಕಿಯ ಕುರಿತು ಮಾನಹಾನಿ ಕರಪತ್ರ, ಪೋಸ್ಟರ್: ಎಸ್ ವಿಎಸ್ ಕಾಲೇಜಿನ ಕಾರ್ಯದರ್ಶಿ, ಇಬ್ಬರು ಉಪನ್ಯಾಸಕರು ಅರೆಸ್ಟ್ !

Coastal Times by Coastal Times
April 20, 2022
in ಕ್ರೈಮ್ ನ್ಯೂಸ್
ಮಂಗಳೂರು : ಪ್ರಾಧ್ಯಾಪಕಿಯ ಕುರಿತು ಮಾನಹಾನಿ ಕರಪತ್ರ, ಪೋಸ್ಟರ್: ಎಸ್ ವಿಎಸ್ ಕಾಲೇಜಿನ ಕಾರ್ಯದರ್ಶಿ, ಇಬ್ಬರು ಉಪನ್ಯಾಸಕರು ಅರೆಸ್ಟ್ !
130
VIEWS
WhatsappTelegramShare on FacebookShare on Twitter

ಮಂಗಳೂರು: ಕಾಲೇಜಿನ ಪ್ರಾಧ್ಯಾಪಕಿಯೋರ್ವರ ಬಗ್ಗೆ ಕೀಳು ಮಟ್ಟದ ಭಾಷೆ, ಮಾನಹಾನಿಕರವಾಗಿ ಪತ್ರವನ್ನು ಬರೆದು ಸಾರ್ವಜನಿಕ ಸ್ಥಳದಲ್ಲಿ ಪೋಸ್ಟರ್ ಗಳನ್ನು ಅಂಟಿಸಿ ಕಿರುಕುಳ ನೀಡುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ನಿವಾಸಿ, ಪ್ರಕಾಶ್ ಶೆಣೈ (44), ಬಂಟ್ವಾಳದ ಸಿದ್ದಕಟ್ಟೆ, ಮೇಗಿನ ಉಳಿರೋಡಿ ನಿವಾಸಿ, ಪ್ರದೀಪ್ ಪೂಜಾರಿ (36), ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಸೀತಾನದಿ ನಡ್ಪಾಲು ನಿವಾಸಿ ತಾರಾನಾಥ ಬಿ ಎಸ್ ಶೆಟ್ಟಿ, (32) ಬಂಧಿತ ಆರೋಪಿಗಳು.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪ್ರತಿಷ್ಠಿತ ಕಾಲೇಜ್ ವೊಂದರ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ನಡುವಿನ ಪ್ರಾಧ್ಯಾಪಕರ ನೇಮಕಾತಿ ಹಾಗೂ ಆಡಳಿತ ವಿಚಾರದ ಗಲಾಟೆಯಲ್ಲಿ ಕಾಲೇಜಿನ ಪ್ರಾಧ್ಯಾಪಕಿಯ ವಿರುದ್ಧ ಮಾನಹಾನಿಕರವಾದ ಪತ್ರವನ್ನು, ಪೋಸ್ಟರ್ ಗಳನ್ನು ತಯಾರಿಸಿ ಅಂಚೆ ಮೂಲಕ ಸಹೋದ್ಯೋಗಿ ಪ್ರಾಧ್ಯಾಪಕರಿಗೆ, ಕಾಲೇಜಿನ ಮುಖ್ಯಸ್ಥರಿಗೆ, ಶಿಕ್ಷಣ ಇಲಾಖೆಯ ಉನ್ನತ ದರ್ಜೆಯ ಅಧಿಕಾರಿಗಳಿಗೆ ಕಳುಹಿಸಿ ಮಾನಹಾನಿ, ಜೀವ ಬೆದರಿಕೆ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಾಧ್ಯಾಪಕಿ ನೀಡಿದ ದೂರಿನಂತೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ಕಾಲೇಜಿನ ಸಂಚಾಲಕ ಹಾಗೂ ಪ್ರಾಧ್ಯಾಪಕರಾಗಿದ್ದು, ಅವರು ಜೊತೆಗೂಡಿ ಪ್ರಾಧ್ಯಾಪಕಿಯ ವಿರುದ್ಧ ಮಾನಹಾನಿಕರವಾದ ಬರಹವನ್ನು ಪ್ರಾರಂಭದಲ್ಲಿ ಪೋಸ್ಟ್ ಕಾರ್ಡ್, ಇನ್ ಲ್ಯಾಂಡ್ ಲೆಟರ್ ಮೂಲಕ ಪ್ರಾಧ್ಯಾಪಕಿಯ ಭಾವಚಿತ್ರದೊಂದಿಗೆ ಸಹೋದ್ಯೋಗಿ ಪ್ರಾಧ್ಯಾಪಕರಿಗೆ, ಕಾಲೇಜಿನ ಮುಖ್ಯಸ್ಥರಿಗೆ, ಶಿಕ್ಷಣ ಇಲಾಖೆಯ ಉನ್ನತ ದರ್ಜೆಯ ಅಧಿಕಾರಿಗಳಿಗೆ ಅಂಚೆ ಮೂಲಕ ಕಳುಹಿಸಿಕೊಡುತ್ತಿದ್ದರು. ಇದಾದ ನಂತರ ಪ್ರಾಧ್ಯಾಪಕಿಯ ಮೊಬೈಲ್ ನಂಬ್ರ ಹಾಗೂ ಇ-ಮೇಲ್ ಐಡಿಯನ್ನು ನಮೂದಿಸಿ ಅಶ್ಲೀಲವಾಗಿ ಬರೆದು ಪೋಸ್ಟರ್ ಗಳನ್ನು ತಯಾರಿಸಿ ಸುಳ್ಯ, ಸುಬ್ರಹ್ಮಣ್ಯ, ಸಂಪಾಜೆ, ಮಡಿಕೇರಿ, ಮೈಸೂರು, ಚಿಕ್ಕಮಗಳೂರು, ಮೂಡಿಗೆರೆ, ಬಾಳೆಹೊನ್ನೂರು, ಎನ್ ಆರ್ ಪುರ, ಶಿವಮೊಗ್ಗ ಮುಂತಾದ ಬಸ್ ಸ್ಟಾಂಡ್ ಗಳ ಸಾರ್ವಜನಿಕ ಶೌಚಾಲಯಗಳಲ್ಲಿ ಅಂಟಿಸಿದ್ದು, ಇದನ್ನು ನೋಡಿದ ಸಾರ್ವಜನಿಕರು ಪ್ರಾಧ್ಯಾಪಕಿಗೆ ಕರೆ ಮಾಡಿ ಅಶ್ಲೀಲವಾಗಿ ಮಾನಹಾನಿಕರವಾಗಿ ಮಾತನಾಡಿ ಮಾನಸಿಕ ಕಿರುಕುಳ ನೀಡುತ್ತಿದ್ದರು. ಆರೋಪಿಗಳ ಪೈಕಿ ಪ್ರದೀಪ್ ಪೂಜಾರಿ ಎಂಬಾತನ ವಿರುದ್ಧ ಈ ಹಿಂದೆ 2019ನೇ ಇಸವಿಯಲ್ಲಿ ಕಾಲೇಜ್ ಪ್ರಾಧ್ಯಾಪಕಿಯೊಬ್ಬರ ಮಾನಹಾನಿಗೆ ಯತ್ನಿಸಿದ ಪ್ರಕರಣ ದಾಖಲಾಗಿರುತ್ತದೆ.

ಈ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ. ಆರೋಪಿಗಳಿಂದ 3 ಮೊಬೈಲ್ ಫೋನುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿರುತ್ತದೆ ಎಂದು ಕಮಿಷನರ್ ಮಾಹಿತಿ ನೀಡಿದ್ದಾರೆ. ‌ಗೋಷ್ಠಿಯಲ್ಲಿ ಡಿಸಿಪಿ ಹರಿರಾಂ ಶಂಕರ್, ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್, ಸೆನ್ ಇನ್ಸ್ ಪೆಕ್ಟರ್ ಸತೀಶ್ ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರಿನ ಖ್ಯಾತ ವೈದ್ಯರ ಹೆಸರಲ್ಲಿ ನಕಲಿ ಫೇಸ್​ಬುಕ್​ ಸೃಷ್ಟಿ: ಕೇಸ್​ ದಾಖಲು

Next Post

ಮಂಗಳೂರು ವಿ.ವಿ: 40ನೇ ಘಟಿಕೋತ್ಸವ: ‌ತೆಲಿಕೆದ ಬೊಳ್ಳಿ ಕಾಪಿಕಾಡ್, ಹರಿಕೃಷ್ಣ ಪುನರೂರು, ಹೇಮಾವತಿ ಹೆಗ್ಗಡೆಗೆ, ಮೂವರಿಗೆ ಗೌರವ ಡಾಕ್ಟರೇಟ್‌

Related Posts

ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!
ಕ್ರೈಮ್ ನ್ಯೂಸ್

ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

June 25, 2026
73
ಮಂಗಳೂರು: ಅಪ್ರಾಪ್ತೆಗೆ ಗರ್ಭಿಣಿಯಾಗಿಸಿ ವಂಚನೆ ; ಡೆತ್ ನೋಟ್ ಬರೆದಿಟ್ಟು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ!
ಕ್ರೈಮ್ ನ್ಯೂಸ್

ಮಂಗಳೂರು: ಅಪ್ರಾಪ್ತೆಗೆ ಗರ್ಭಿಣಿಯಾಗಿಸಿ ವಂಚನೆ ; ಡೆತ್ ನೋಟ್ ಬರೆದಿಟ್ಟು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ!

June 24, 2026
335
Next Post
ಮಂಗಳೂರು ವಿ.ವಿ: 40ನೇ ಘಟಿಕೋತ್ಸವ: ‌ತೆಲಿಕೆದ ಬೊಳ್ಳಿ ಕಾಪಿಕಾಡ್, ಹರಿಕೃಷ್ಣ ಪುನರೂರು, ಹೇಮಾವತಿ ಹೆಗ್ಗಡೆಗೆ, ಮೂವರಿಗೆ ಗೌರವ ಡಾಕ್ಟರೇಟ್‌

ಮಂಗಳೂರು ವಿ.ವಿ: 40ನೇ ಘಟಿಕೋತ್ಸವ: ‌ತೆಲಿಕೆದ ಬೊಳ್ಳಿ ಕಾಪಿಕಾಡ್, ಹರಿಕೃಷ್ಣ ಪುನರೂರು, ಹೇಮಾವತಿ ಹೆಗ್ಗಡೆಗೆ, ಮೂವರಿಗೆ ಗೌರವ ಡಾಕ್ಟರೇಟ್‌

Discussion about this post

Recent News

ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

June 25, 2026
73
ಜೂ.28: ಎಂಸಿಸಿ ಬ್ಯಾಂಕಿನ 22 ನೇ ಶಾಖೆ ದೇರಳಕಟ್ಟೆ ಮತ್ತು ಆಗಸ್ಟ್ 2 ರಂದು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

ಜೂ.28: ಎಂಸಿಸಿ ಬ್ಯಾಂಕಿನ 22 ನೇ ಶಾಖೆ ದೇರಳಕಟ್ಟೆ ಮತ್ತು ಆಗಸ್ಟ್ 2 ರಂದು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

June 25, 2026
32
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

June 25, 2026
ಜೂ.28: ಎಂಸಿಸಿ ಬ್ಯಾಂಕಿನ 22 ನೇ ಶಾಖೆ ದೇರಳಕಟ್ಟೆ ಮತ್ತು ಆಗಸ್ಟ್ 2 ರಂದು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

ಜೂ.28: ಎಂಸಿಸಿ ಬ್ಯಾಂಕಿನ 22 ನೇ ಶಾಖೆ ದೇರಳಕಟ್ಟೆ ಮತ್ತು ಆಗಸ್ಟ್ 2 ರಂದು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

June 25, 2026
ಮಂಗಳೂರು: ಅಪ್ರಾಪ್ತೆಗೆ ಗರ್ಭಿಣಿಯಾಗಿಸಿ ವಂಚನೆ ; ಡೆತ್ ನೋಟ್ ಬರೆದಿಟ್ಟು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ!

ಮಂಗಳೂರು: ಅಪ್ರಾಪ್ತೆಗೆ ಗರ್ಭಿಣಿಯಾಗಿಸಿ ವಂಚನೆ ; ಡೆತ್ ನೋಟ್ ಬರೆದಿಟ್ಟು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ!

June 24, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d