ಸುರತ್ಕಲ್, ಎ.20: ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರಕ್ಕೆ ಕೊನೆಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ಹೆಸರನ್ನು ಅಂತಿಮಗೊಳಿಸಿ ಕಾಂಗ್ರೆಸ್ ಹೈಕಮಾಂಡ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಘೊಷಿಸಿದೆ. ಬುಧವಾರ ರಾತ್ರಿ ಕಾಂಗ್ರೆಸ್ ಪ್ರಕಟಿಸಿದ ಅಭ್ಯರ್ಥಿಗಳ 6ನೇ ಪಟ್ಟಿಯಲ್ಲಿ ಇನಾಯತ್ ಅಲಿ ಅವರನ್ನು ಅಧಿಕೃತ ಅಭ್ಯರ್ಥಿಯಾಗಿ ಘೋಷಿಸಿದೆ ಎಂದು ತಿಳಿದು ಬಂದಿದೆ.
ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಮೊಹಿಯುದ್ದೀನ್ ಬಾವ ಅವರು ಕಾಂಗ್ರೆಸ್ ವಿರುದ್ದ ಬಂಡಾಯದ ಸುಳಿವು ನೀಡಿದ್ದಾರೆ. ವೀಡಿಯೊ ಮೂಲಕ ಸಂದೇ ಕಳುಹಿಸಿರುವ ಅವರು, ಕಾಂಗ್ರೆಸ್ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ. ನನ್ನನ್ನು ಕಾಂಗ್ರೆಸ್ ಪಕ್ಷ ಉಪಯೋಗಿಸಿ ಹಣದ ಆಸೆಗಾಗಿ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದೆ. ನನ್ನ ಹೆಸರಿಗಾಗಿದ್ದ ಬಿಫಾರಂ ಅನ್ನು ಎರಡು ಬಾರಿ ತಪ್ಪಿಸಲಾಗಿದೆ. ಇಂದು ಮಧ್ಯಾಹ್ನ 11 ಗಂಟೆಗೆ ಚೊಕ್ಕಬೆಟ್ಟಿನ ನನ್ನ ಮನೆಯಲ್ಲಿ ಬೆಂಬಲಿಗರ ಸಭೆ ಕರೆದಿದ್ದೇನೆ ಎಂದು ತಿಳಿಸಿದ್ದಾರೆ.
ಗುರುವಾರ ಬೆಳಗ್ಗೆ ಸರ್ವ ಧರ್ಮಗಳ ಪ್ರಾರ್ಥನಾ ಕೇಂದ್ರಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ಬೆಳಗ್ಗೆ 10ಗಂಟೆಗೆ ಕಾವೂರು ಪೇಟೆಯಲ್ಲಿ ಬಹಿರಂಗ ಸಭೆ ನಡೆಯಲಿದೆ. ಬಳಿಕ ಕಾವೂರು ಪೇಟೆಯಿಂದ ಮಹಾಲಿಂಗೇಶ್ವರ ದೇವಸ್ಥಾನದ ವರೆಗೆ ಜಾಥಾ ನಡೆಸಿ ದೇವಸ್ಥಾನಕ್ಕೆ ಭೇಟಿ ನೀಡಿ ಮಧ್ಯಾಹ್ನ 1ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಇನಾಯತ್ ಅವರ ಆಪ್ತವಲಯ ಮಾಹಿತಿ ನೀಡಿದೆ.
ಕರ್ನಾಟಕ 224 ವಿಧಾನಸಭಾ ಕ್ಷೇತ್ರಗಳಿಗೆ ಮೇ 10ರಂದು ಮತದಾನ ನಡೆಯಲಿದ್ದು, ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
#KarnatakaElections2023 | Congress releases the sixth and final list of candidates. pic.twitter.com/UYw0oYmapz
— ANI (@ANI) April 19, 2023
Discover more from Coastal Times Kannada
Subscribe to get the latest posts sent to your email.
Discussion about this post