ಬೆಂಗಳೂರು : ಖ್ಯಾತ ನೇತ್ರ ತಜ್ಞ ಡಾ.ಭುಜಂಗ ಶೆಟ್ಟಿ ಶುಕ್ರವಾರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ನಾರಾಯಣ ನೇತ್ರಾಲಯದ ಮುಖ್ಯಸ್ಥರಾಗಿದ್ದ ಇವರು ಡಾ.ರಾಜ್‌ಕುಮಾರ್ ನೇತ್ರದಾನ ಸಂಸ್ಥೆ ಸ್ಥಾಪಿಸಿ ಬಹುದೊಡ್ಡ ಸಮಾಜಮುಖಿ ಕಾರ್ಯದಲ್ಲಿ ತೊಡಗಿದ್ದರು.
ಡಾ.ಭುಜಂಗ ಶೆಟ್ಟಿಯವರಿ 69 ವರ್ಷ ವಯಸ್ಸಾಗಿತ್ತು. ನಾರಾಯಣ ನೇತ್ರಾಲಯದ ಮುಖ್ಯಸ್ಥರಾಗಿದ್ದರು. ಎಂದಿನಂತೆ ಬೆಳಿಗ್ಗೆ ಆಸ್ಪತ್ರೆಗೆ ಬಂದು ರೋಗಿಗಳಿಗೆ ಚಿಕಿತ್ಸೆ ನೀಡಿದ್ದರು. ಎಂದಿನಂತೆ ಜಿಮ್‌ನಲ್ಲಿ ವ್ಯಾಯಾಮಕ್ಕೆ ತೆರಳಿದ್ದರು. ಆ ಸಂದರ್ಭದಲ್ಲಿ ಏಕಾಏಕಿ ಕುಸಿದು ಬಿದ್ದಿದ್ದು, ಅವರನ್ನು ಯಶವಂತಪುರದ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ಕರೆತರಲಾಗಿದೆ. ಆಸ್ಪತ್ರೆ ದಾಖಲಿಸಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಸದ್ಯ ಮೃತದೇಹ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿದೆ. ಸಾರ್ವಜನಿಕ ದರ್ಶನಕ್ಕಾಗಿ ರಾಜಾಜಿನಗರದ ನಾರಾಯಣ ನೇತ್ರಾಲಯದ ಬಳಿ ಶನಿವಾರ ಬೆಳಿಗ್ಗೆ 11 ಗಂಟೆಯಿಂದ ಮಧಾಹ್ನ 2 ಗಂಟೆಯವರೆಗೂ ವ್ಯವಸ್ಥೆ ಮಾಡಲಾಗಿದೆ. ಅಭಿಮಾನಿಗಳು, ಭುಜಂಗ ಶೆಟ್ಟಿ ಡಾಕ್ಟರ್ ಬಳಿ ಚಿಕಿತ್ಸೆಯಿಂದ ಗುಣಮುಖರಾದವರು ಆಗಮಿಸಿ ಅಂತಿಮ ದರ್ಶನ ಪಡೆಯಬಹುದು ಎಂದು ನಾರಾಯಣ ನೇತ್ರಾಲಯ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.








Discussion about this post