• About us
  • Contact us
  • Disclaimer
Thursday, February 26, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ನ್ಯೂಜಿಲೆಂಡ್​​ನಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ 8 ಕೋಟಿ ಅಧಿಕ ವಂಚನೆ: ತನಿಖೆಯಲ್ಲಿ ನಿರ್ಲಕ್ಷ್ಯಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು

Coastal Times by Coastal Times
May 20, 2025
in ಕ್ರೈಮ್ ನ್ಯೂಸ್
ಮಂಗಳೂರು: ನ್ಯೂಜಿಲೆಂಡ್​​ನಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ 8 ಕೋಟಿ ಅಧಿಕ ವಂಚನೆ: ತನಿಖೆಯಲ್ಲಿ ನಿರ್ಲಕ್ಷ್ಯಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು
193
VIEWS
WhatsappTelegramShare on FacebookShare on Twitter

ಮಂಗಳೂರು, ಮೇ 19 : ವಿದೇಶದಲ್ಲಿ ಉದ್ಯೋಗ ತೆಗೆಸಿಕೊಡುವುದಾಗಿ ಹೇಳಿ ನೂರಾರು ಮಂದಿಗೆ ಕೋಟ್ಯಂತರ ರೂಪಾಯಿ ದೋಖಾ ಎಸಗಲಾಗಿದೆ ಎಂಬ ಪ್ರಕರಣಲ್ಲಿ ಕರ್ತವ್ಯ ಲೋಪ ಎಸಗಿದ್ದಾರೆಂದು ಕದ್ರಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸೋಮಶೇಖರ್ ಮತ್ತು ಎಸ್ಐ ಉಮೇಶ್ ಕೆ.ಎನ್ ಅವರನ್ನು ಪೊಲೀಸ್ ಕಮಿಷನರ್ ಇಲಾಖಾ ಕರ್ತವ್ಯದಿಂದ ಅಮಾನತು ಮಾಡಿದ್ದಾರೆ.

ನ್ಯೂಜಿಲೆಂಡ್​​ನಲ್ಲಿ ಕೆಲಸ ಕೊಡಿಸುವ ಆಮಿಷ : ಮಂಗಳೂರಿನ ಕಂಕನಾಡಿಯಲ್ಲಿ ಕಚೇರಿಯನ್ನು ‌ಹೊಂದಿದ್ದ ಖಾಸಗಿ ಸಂಸ್ಥೆ ನ್ಯೂಜಿಲೆಂಡ್​​ನ VALARIS ಕಂಪೆನಿಯಲ್ಲಿ ಉದ್ಯೋಗ ಕೊಡಿಸುವ ಬಗ್ಗೆ ಭರವಸೆ ನೀಡಿತ್ತು. ಹೀಗಾಗಿ ದಕ್ಷಿಣಕನ್ನಡ ಜಿಲ್ಲೆಯ 185ಕ್ಕೂ ಹೆಚ್ಚು ಮಂದಿ ಸಂತ್ರಸ್ತರಾಗಿದ್ದಾರೆ. Hire Glow Elegent overseas international Private Ltd ಎಂಬ ಹೆಸರಿನಿಂದ ವಂಚನೆಗೊಳಗಾದ 185 ಜನ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಪಕ್ಕದ ಉಡುಪಿ ಜಿಲ್ಲೆ, ಕೇರಳ ಸೇರಿದಂತೆ ಹೊರರಾಜ್ಯಗಳಿಂದ ಸುಮಾರು ‌300ಕ್ಕೂ ಹೆಚ್ಚು ಮಂದಿ ಉದ್ಯೋಗಕ್ಕಾಗಿ ಸಂಸ್ಥೆಯನ್ನು ಸಂಪರ್ಕಿಸಿದ್ದರು.

8 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹ! ಸಂಸ್ಥೆಯು 185ಕ್ಕೂ ಹೆಚ್ಚು ವ್ಯಕ್ತಿಗಳಿಂದ ತಲಾ 1ಲಕ್ಷದ 85 ಸಾವಿರ ರೂ., ಎಜೆಂಟ್​​ಗಳ ಮುಖಾಂತರ ಸುಮಾರು 60 ಮಂದಿಯಿಂದ ತಲಾ 3 ಲಕ್ಷ ರೂಪಾಯಿ ಹಾಗೂ ಬೇರೆ ಬೇರೆ ರಾಜ್ಯದ ಏಜೆನ್ಸಿಗಳ ಮೂಲಕ ತಲಾ 5ಲಕ್ಷ ರೂಪಾಯಿ ಸಂಗ್ರಹಿಸಿತ್ತು. ಒಟ್ಟಾರೆಯಾಗಿ 300ಕ್ಕೂ ಹೆಚ್ಚು ಮಂದಿಯಿಂದ ಸುಮಾರು ‌8 ಕೋಟಿ ರೂಪಾಯಿಗೂ‌ ಅಧಿಕ ಹಣ ಪಡೆದಿರುವ ಆರೋಪ ಸಂಸ್ಥೆಯ ಮೇಲಿದೆ. ಉದ್ಯೋಗಕಾಂಕ್ಷಿಗಳು ಎಲ್ಲಾ ಹಣವನ್ನು ಆನ್​​ಲೈನ್ ಮುಖಾಂತರವೇ ಹೈರ್ ಗ್ಲೋ ಕಂಪೆನಿಗೆ ಪಾವತಿಸಿದ್ದಾರೆ.

ವಂಚನೆ ತನಿಖೆಯಲ್ಲಿ ಲೋಪ, ಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು : ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚಿಸಿದ ಪ್ರಕರಣ ಸಂಬಂಧ ತನಿಖೆಯಲ್ಲಿ ನಿರ್ಲಕ್ಷ್ಯ ತೋರಿದ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಆದೇಶ ಹೊರಡಿಸಿದ್ದಾರೆ. ನಕಲಿ ಸಂಸ್ಥೆಯ ಬಗ್ಗೆ ಆಫೀಸ್ ಪ್ರೊಟೆಕ್ಟರ್ ಎಮಿಗ್ರೇಟ್ಸ್ ಮೊದಲೇ ಎಚ್ಚರಿಕೆ ನೀಡಿತ್ತು ಎನ್ನಲಾಗಿದೆ. ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಕಚೇರಿಗೂ ಮಾಹಿತಿ ನೀಡಿತ್ತು. ಅದರಂತೆ, ಸಂಸ್ಥೆಯ ವಿರುದ್ದ ತನಿಖೆ ನಡೆಸುವಂತೆ ಕದ್ರಿ ಪೊಲೀಸ್ ಠಾಣೆ ಅಧಿಕಾರಿಗಳಿಗೆ ಪೊಲೀಸ್ ಕಮೀಷನರ್ ಆದೇಶಿಸಿದ್ದರು. ಆದರೆ, ಪೊಲೀಸ್ ಅಧಿಕಾರಿಗಳು ತನಿಖೆಗೆ ನಿರ್ಲಕ್ಷ್ಯ ತೋರಿದ್ದರು ಎಂಬ ಆರೋಪ ಕೇಳಿಬಂದಿದೆ. ಪೊಲೀಸ್ ಅಧಿಕಾರಿಗಳು ನಕಲಿ ಸಂಸ್ಥೆಯಿಂದಲೇ ಹಣ ಪಡೆದು ದೋಖಾ ನಡೆಸಲು ಅವಕಾಶ ಮಾಡಿಕೊಟ್ಟಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸದ್ಯ ಕದ್ರಿ ಠಾಣೆ ಇನ್ಸ್​​ಪೆಕ್ಟರ್ ಸೋಮಶೇಖರ್, ಆ ಸಂದರ್ಭ ಪಿಎಸ್​ಐ ಆಗಿದ್ದ ಉಮೇಶ್ ಅವರನ್ನು ಅಮಾನತು ಮಾಡಲಾಗಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಸಚಿವ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಪೋಸ್ಟ್​: ಬಿಜೆಪಿ ಮಾಜಿ ಕಾರ್ಪೊರೇಟರ್ ವಿರುದ್ಧ ಕೇಸ್

Next Post

ಆನೇಕಲ್: ಚಂದಾಪುರ ರೈಲ್ವೆ ಸೇತುವೆಯ ಬಳಿ ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವವೊಂದು ರುಂಡ – ಮುಂಡ ಕತ್ತರಿಸಿದ ಸ್ಥಿತಿಯಲ್ಲಿ ಪತ್ತೆ, ಬೆಚ್ಚಿಬಿದ್ದ ಜನರು

Related Posts

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
57
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ
ಕ್ರೈಮ್ ನ್ಯೂಸ್

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
46
Next Post
ಆನೇಕಲ್: ಚಂದಾಪುರ ರೈಲ್ವೆ ಸೇತುವೆಯ ಬಳಿ ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವವೊಂದು ರುಂಡ – ಮುಂಡ ಕತ್ತರಿಸಿದ ಸ್ಥಿತಿಯಲ್ಲಿ ಪತ್ತೆ, ಬೆಚ್ಚಿಬಿದ್ದ ಜನರು

ಆನೇಕಲ್: ಚಂದಾಪುರ ರೈಲ್ವೆ ಸೇತುವೆಯ ಬಳಿ ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವವೊಂದು ರುಂಡ - ಮುಂಡ ಕತ್ತರಿಸಿದ ಸ್ಥಿತಿಯಲ್ಲಿ ಪತ್ತೆ, ಬೆಚ್ಚಿಬಿದ್ದ ಜನರು

Discussion about this post

Recent News

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
57
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
46
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

February 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d