• About us
  • Contact us
  • Disclaimer
Tuesday, July 7, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ದೆಹಲಿ ಮೂಲದ ಬೃಹತ್ ಡ್ರಗ್ ಜಾಲ ಭೇದಿಸಿದ ಬೆಂಗಳೂರು ಪೊಲೀಸರು; 34 ಕೋಟಿ ಮೌಲ್ಯದ ಡ್ರಗ್ಸ್​​ ವಶಕ್ಕೆ; 8 ಮಂದಿ ಬಂಧನ

Coastal Times by Coastal Times
May 20, 2026
in ಕ್ರೈಮ್ ನ್ಯೂಸ್
ದೆಹಲಿ ಮೂಲದ ಬೃಹತ್ ಡ್ರಗ್ ಜಾಲ ಭೇದಿಸಿದ ಬೆಂಗಳೂರು ಪೊಲೀಸರು; 34 ಕೋಟಿ ಮೌಲ್ಯದ ಡ್ರಗ್ಸ್​​ ವಶಕ್ಕೆ; 8 ಮಂದಿ ಬಂಧನ
165
VIEWS
WhatsappTelegramShare on FacebookShare on Twitter

ಬೆಂಗಳೂರು, ಮೇ 20:  ಅಂತಾರಾಜ್ಯ ಮಟ್ಟದ ಬೃಹತ್​​ ಮಾದಕ ಜಾಲವನ್ನು ಭೇದಿಸುವಲ್ಲಿ ಹೆಬ್ಬಾಳ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಮಾದಕ ಪದಾರ್ಥ ತಂದು ಮಾರಾಟ ಮಾಡುತ್ತಿದ್ದ ಆರೋಪದಡಿ ಸೆನೆಗಲ್​ ಮೂಲದ ಡನ್ಫಾ ಗೆರಾಲ್ಡ್, ತಾಂಜೇನಿಯಾ ಮೂಲದ ಮೆಗ್ರಾತ್​​, ನೈಜೀರಿಯಾ ಮೂಲದ ಒಬಿಯಾನಿಜ್​ ರೀಟಾ, ದೆಹಲಿ ಮೂಲದ ರೀನಾ ಯಾದವ್​​, ದೆಬಾಶಿಶ್​ ಬ್ಯಾನರ್ಜಿ ಮತ್ತು ಬೆಂಗಳೂರಿನ ಪೆಡ್ಲರ್‌ಗಳಾದ ಧೀರಜ್​​, ಮೊಹಮ್ಮದ್​​ ಮನ್ಸೂರ್​​ ಹಾಗೂ ಅಬ್ದುಲ್​ ಸಮದ್​ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಬರೋಬ್ಬರಿ 35 ಕೋಟಿ ರೂ. ಮೌಲ್ಯದ 17.4 ಕೆ.ಜಿ. ಎಂಡಿಎಂಎ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಶಯ ಬಾರದಂತೆ ಸೀರೆಗಳು, ಇಸ್ತ್ರಿ ಮಾಡಲು ಬಳಸುವ ಟೇಬಲ್‌ಗಳು ಮತ್ತು ಕುರ್ಚಿಗಳ ಒಳಭಾಗದಲ್ಲಿ ಎಂಡಿಎಂಎ ಕ್ರಿಸ್ಟಲ್‌ಗಳನ್ನು ಅಡಗಿಸಿ, ಸುಂದರವಾದ ಉಡುಗೊರೆಗಳಂತೆ ಆರೋಪಿಗಳು ಪ್ಯಾಕ್ ಮಾಡುತ್ತಿದ್ದರು. ನಂತರ ಅವುಗಳನ್ನು ಚಾಣಾಕ್ಷತನದಿಂದ ದೆಹಲಿಯಿಂದ ರೈಲಿನ ಮೂಲಕ ಬೆಂಗಳೂರಿಗೆ ತರುತ್ತಿದ್ದರು. ಹೀಗೆ ಬೆಂಗಳೂರು ತಲುಪುವ ಮಾದಕವನ್ನು ನಿರ್ಜನ ಪ್ರದೇಶಗಳಲ್ಲಿ ಕಾರಿನಲ್ಲಿಟ್ಟುಕೊಂಡು ಮಾರಾಟ ಮಾಡುತ್ತಿದ್ದರು.

ಇದೇ ರೀತಿ ಹೆಬ್ಬಾಳದ ಆನಂದನಗರದ ಸಮೀಪ ದಂಧೆಯಲ್ಲಿ ತೊಡಗಿದ್ದ ಮೂವರನ್ನು ವಶಕ್ಕೆ ಪಡೆದಿದ್ದ ಪೊಲೀಸರು 4 ಕೆ.ಜಿ. 300 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದರು. ಬಳಿಕ ಸರ್ಜಾಪುರದ ಚೂಡಸಂದ್ರದಲ್ಲಿರುವ ಸ್ಥಳೀಯ ಪೆಡ್ಲರ್​ ಮೊಹಮ್ಮದ್​ ಮನ್ಸೂರ್​ ನಿವಾಸದ ಮೇಲೆ ದಾಳಿ ಮಾಡಿದಾಗ 10 ಕೆ.ಜಿ ಎಂಡಿಎಂಎ ಪತ್ತೆಯಾಗಿತ್ತು. ​

ಇದರ ಬೆನ್ನಲ್ಲೇ ಅಬ್ದುಲ್ ಸಮದ್ ಎಂಬಾತನ ಹೆಣ್ಣೂರಿನ ನಿವಾಸದ ಮೇಲೆಯೂ ದಾಳಿ ನಡೆಸಿ 3.5 ಕೆ.ಜಿ ಮಾದಕ ವಸ್ತುವನ್ನು ಜಪ್ತಿ ಮಾಡಲಾಯಿತು. ವಿಚಾರಣೆ ವೇಳೆ, ದೆಹಲಿ ಮತ್ತು ಹರಿಯಾಣದವರೆಗೂ ಆರೋಪಿಗಳ ಜಾಲ ವಿಸ್ತರಿಸಿರುವುದು ಬಯಲಾಗಿತ್ತು. ಸುಮಾರು 40 ಜನ ಪೊಲೀಸ್ ಸಿಬ್ಬಂದಿಗಳ ವಿಶೇಷ ತಂಡ ದೆಹಲಿಯಲ್ಲಿ ಒಂದು ವಾರಕ್ಕೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಹೆಡೆಮುರಿಕಟ್ಟಿದೆ.

​ಬೆಂಗಳೂರು ​ಉತ್ತರ ವಿಭಾಗದ ಡಿಸಿಪಿ ಬಿ.ಎಸ್. ನೇಮಗೌಡ ಹಾಗೂ ಜೆ.ಸಿ.ನಗರ ಎಸಿಪಿ ಕೆ.ಎಸ್. ತನ್ವಿರ್ ಅವರ ನೇರ ಮಾರ್ಗದರ್ಶನದಲ್ಲಿ ನಡೆದಿರುವ ಈ ಬೃಹತ್ ಕಾರ್ಯಾಚರಣೆಯನ್ನು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಶ್ಲಾಘಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ ಬೆಳಗಾವಿ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

Next Post

ಮಂಗಳೂರಿನಲ್ಲಿ ಏಕಕಾಲಕ್ಕೆ ಮೇ 23ರಂದು ನಾಲ್ಕು ಅದ್ದೂರಿ ಸಭಾಭವನಗಳ ಲೋಕಾರ್ಪಣೆ: ಕೃಷ್ಣ ಪಾಲೆಮಾರ್

Related Posts

ಮಂಗಳೂರು: ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ ; 14 ಆರೋಪಿಗಳ ಫೋಟೊ ಬಿಡುಗಡೆ, ಮಾಹಿತಿ ನೀಡಿದವರಿಗೆ ಬಹುಮಾನ ಘೋಷಿಸಿದ ಪೊಲೀಸರು
ಕ್ರೈಮ್ ನ್ಯೂಸ್

ಮಂಗಳೂರು: ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ ; 14 ಆರೋಪಿಗಳ ಫೋಟೊ ಬಿಡುಗಡೆ, ಮಾಹಿತಿ ನೀಡಿದವರಿಗೆ ಬಹುಮಾನ ಘೋಷಿಸಿದ ಪೊಲೀಸರು

July 7, 2026
96
ಕಡಬ: ತೂಕ ಹೆಚ್ಚಿಸಿದ ನಕಲಿ ಚಿನ್ನದ ಆಭರಣಗಳನ್ನು  ಬ್ಯಾಂಕ್​ನಲ್ಲಿ ಅಡವಿಟ್ಟು ವಂಚಿಸಲು ಯತ್ನ: ಇಬ್ಬರ ಬಂಧನ
ಕ್ರೈಮ್ ನ್ಯೂಸ್

ಕಡಬ: ತೂಕ ಹೆಚ್ಚಿಸಿದ ನಕಲಿ ಚಿನ್ನದ ಆಭರಣಗಳನ್ನು ಬ್ಯಾಂಕ್​ನಲ್ಲಿ ಅಡವಿಟ್ಟು ವಂಚಿಸಲು ಯತ್ನ: ಇಬ್ಬರ ಬಂಧನ

July 6, 2026
42
Next Post
ಮಂಗಳೂರಿನಲ್ಲಿ ಏಕಕಾಲಕ್ಕೆ ಮೇ 23ರಂದು ನಾಲ್ಕು ಅದ್ದೂರಿ ಸಭಾಭವನಗಳ ಲೋಕಾರ್ಪಣೆ: ಕೃಷ್ಣ ಪಾಲೆಮಾರ್

ಮಂಗಳೂರಿನಲ್ಲಿ ಏಕಕಾಲಕ್ಕೆ ಮೇ 23ರಂದು ನಾಲ್ಕು ಅದ್ದೂರಿ ಸಭಾಭವನಗಳ ಲೋಕಾರ್ಪಣೆ: ಕೃಷ್ಣ ಪಾಲೆಮಾರ್

Discussion about this post

Recent News

ಅಮರನಾಥ ಯಾತ್ರಿಕ ರಾತ್ರಿ ಫುಟ್​ಪಾತ್​ ಮೇಲೆ ಮಲಗಿದ್ದಾಗ ಹಾವು ಕಡಿದು ಸಾವು

ಅಮರನಾಥ ಯಾತ್ರಿಕ ರಾತ್ರಿ ಫುಟ್​ಪಾತ್​ ಮೇಲೆ ಮಲಗಿದ್ದಾಗ ಹಾವು ಕಡಿದು ಸಾವು

July 7, 2026
16
ವಯನಾಡ್​ ಸುರಂಗ ಯೋಜನಾ ಸ್ಥಳದಲ್ಲಿ ಭೀಕರ ಭೂಕುಸಿತ; ಮೂವರು ಸಾವು, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ವಯನಾಡ್​ ಸುರಂಗ ಯೋಜನಾ ಸ್ಥಳದಲ್ಲಿ ಭೀಕರ ಭೂಕುಸಿತ; ಮೂವರು ಸಾವು, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

July 7, 2026
20
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಅಮರನಾಥ ಯಾತ್ರಿಕ ರಾತ್ರಿ ಫುಟ್​ಪಾತ್​ ಮೇಲೆ ಮಲಗಿದ್ದಾಗ ಹಾವು ಕಡಿದು ಸಾವು

ಅಮರನಾಥ ಯಾತ್ರಿಕ ರಾತ್ರಿ ಫುಟ್​ಪಾತ್​ ಮೇಲೆ ಮಲಗಿದ್ದಾಗ ಹಾವು ಕಡಿದು ಸಾವು

July 7, 2026
ವಯನಾಡ್​ ಸುರಂಗ ಯೋಜನಾ ಸ್ಥಳದಲ್ಲಿ ಭೀಕರ ಭೂಕುಸಿತ; ಮೂವರು ಸಾವು, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ವಯನಾಡ್​ ಸುರಂಗ ಯೋಜನಾ ಸ್ಥಳದಲ್ಲಿ ಭೀಕರ ಭೂಕುಸಿತ; ಮೂವರು ಸಾವು, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

July 7, 2026
ಮಂಗಳೂರು: ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ ; 14 ಆರೋಪಿಗಳ ಫೋಟೊ ಬಿಡುಗಡೆ, ಮಾಹಿತಿ ನೀಡಿದವರಿಗೆ ಬಹುಮಾನ ಘೋಷಿಸಿದ ಪೊಲೀಸರು

ಮಂಗಳೂರು: ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ ; 14 ಆರೋಪಿಗಳ ಫೋಟೊ ಬಿಡುಗಡೆ, ಮಾಹಿತಿ ನೀಡಿದವರಿಗೆ ಬಹುಮಾನ ಘೋಷಿಸಿದ ಪೊಲೀಸರು

July 7, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d