• About us
  • Contact us
  • Disclaimer
Friday, April 3, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ರಾಷ್ಟ್ರಪತಿ ಚುನಾವಣೆ: ವಿಪಕ್ಷಗಳ ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ಕಣಕ್ಕೆ?

Coastal Times by Coastal Times
June 20, 2022
in ರಾಷ್ಟ್ರೀಯ ಸುದ್ದಿ
ರಾಷ್ಟ್ರಪತಿ ಚುನಾವಣೆ: ವಿಪಕ್ಷಗಳ ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ಕಣಕ್ಕೆ?
32
VIEWS
WhatsappTelegramShare on FacebookShare on Twitter

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಲು ಮಹಾತ್ಮ ಗಾಂಧಿ ಅವರ ಮೊಮ್ಮಗ, ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಗೋಪಾಲಕೃಷ್ಣ ಗಾಂಧಿ ಅವರು ಸೋಮವಾರ ನಿರಾಕರಿಸಿದ್ದಾರೆ. ಹಾಗಾಗಿ, ವಿರೋಧ ಪಕ್ಷಗಳು ಕೇಂದ್ರದ ಮಾಜಿ ಸಚಿವ ಯಶವಂತ ಸಿನ್ಹಾ ಅವರನ್ನು ಜಂಟಿ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ಚಿಂತನೆ ನಡೆಸಿವೆ.

‘ಬಿಜೆಪಿಯ ಮಾಜಿ ನಾಯಕ ಸಿನ್ಹಾ ಅವರು ಕಳೆದ ವರ್ಷ ತೃಣಮೂಲ ಕಾಂಗ್ರೆಸ್‌ಗೆ (ಟಿಎಂಸಿ) ಸೇರ್ಪಡೆಯಾಗಿದ್ದಾರೆ. ಸಿನ್ಹಾ ಅವರನ್ನು ವಿರೋಧ ಪಕ್ಷಗಳ ಕೆಲವು ನಾಯಕರು ಪ್ರಸ್ತಾಪಿಸಿದ್ದು, ಬೆಂಬಲವನ್ನೂ ವ್ಯಕ್ತಪಡಿಸಿವೆ’ ಎಂದು ಟಿಎಂಸಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

‘ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಅವರಿಗೆ ಸಿನ್ಹಾ ಅವರ ಹೆಸರನ್ನು ಸೂಚಿಸುವ ಫೋನ್ ಕರೆಗಳು ಬಂದಿವೆ. ಮಮತಾ ಕೂಡಾ ಸಿನ್ಹಾ ಅವರನ್ನು ವಿರೋಧ ಪಕ್ಷದ ಜಂಟಿ ಅಭ್ಯರ್ಥಿಯಾಗಿ ಆಯ್ಕೆ ಮಾಡಲು ಆಸಕ್ತಿ ತೋರಿದ್ದಾರೆ’ ಎಂದೂ ಅವರು ಹೇಳಿದ್ದಾರೆ. ವಿರೋಧ ಪಕ್ಷಗಳು ಗೋಪಾಲಕೃಷ್ಣ ಅವರ ಮನವೊಲಿಸುವ ಸಾಧ್ಯತೆಯಿದ್ದು, ಆದರೆ, ಅವರು ಸ್ಪರ್ಧೆಗೆ ಒಪ್ಪಿಕೊಳ್ಳುವರೇ ಎಂಬುದನ್ನು ಕಾದು ನೋಡಬೇಕಿದೆ. ಈ ಹಿಂದೆ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯಾಗಿ ಸ್ಪರ್ಧಿಸುವ ಪ್ರಸ್ತಾವವನ್ನು ಮಹಾರಾಷ್ಟ್ರದ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ನ್ಯಾಷನಲ್ ಕಾನ್ಫರೆನ್ಸ್‌ನ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರು ನಿರಾಕರಿಸಿದ್ದರು.

ಯಶ್ವಂತ್ ಸಿನ್ಹಾರತ್ತ ಎಲ್ಲರ ಚಿತ್ತ : ಇನ್ನು ಗೋಪಾಲಕೃಷ್ಣ ಗಾಂಧಿ ಅವರು ಪ್ರಸ್ತಾವನೆಯನ್ನು ತಿರಸ್ಕರಿಸಿದ ನಂತರ, ಮಾಜಿ ಹಣಕಾಸು ಸಚಿವ ಮತ್ತು ಟಿಎಂಸಿ ನಾಯಕ ಯಶವಂತ್ ಸಿನ್ಹಾ ಅವರನ್ನು ಅಭ್ಯರ್ಥಿಯನ್ನಾಗಿ ಪರಿಗಣಿಸಲಾಗಿದೆ. ಈ ಸಭೆಗೆ ಮಮತಾ ಬ್ಯಾನರ್ಜಿ ಹಾಜರಾಗದಿದ್ದರೂ, ಜೂನ್ 21 ರಂದು ದೆಹಲಿಯಲ್ಲಿ ಶರದ್ ಪವಾರ್ ನೇತೃತ್ವದಲ್ಲಿ ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ಕುರಿತು ಸಭೆ ನಡೆಯಲಿದೆ. ಟಿಎಂಸಿ ಮೂಲಗಳ ಪ್ರಕಾರ, ಪಕ್ಷದ ಪರವಾಗಿ ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮತ್ತೊಂದೆಡೆ ಯಶವಂತ್ ಸಿನ್ಹಾ ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಮಂಡಿಸಲು ಈಗ ಸಿದ್ಧತೆ ನಡೆದಿದೆ. ಯಶವಂತ್ ಸಿನ್ಹಾ ಪ್ರಸ್ತುತ ಟಿಎಂಸಿ ಪಕ್ಷದಲ್ಲಿದ್ದು, ಅವರು ಬಿಜೆಪಿಯ ಬದ್ಧ ವಿರೋಧಿ ಎಂದು ಪರಿಗಣಿಸಲಾಗಿದೆ. ಮಮತಾ ಬ್ಯಾನರ್ಜಿ ಜೊತೆಗಿನ ಮಾತುಕತೆಯ ವೇಳೆ ಯಶವಂತ್ ಸಿನ್ಹಾ ಅವರ ಹೆಸರನ್ನು ಹಲವು ರಾಜಕೀಯ ಪಕ್ಷಗಳ ನಾಯಕರು ಒಪ್ಪಿಕೊಂಡಿದ್ದಾರೆ ಎಂದು ಟಿಎಂಸಿ ಮೂಲಗಳು ತಿಳಿಸಿವೆ. ಆದರೆ, ನಾಳೆ ನಡೆಯಲಿರುವ ವಿರೋಧ ಪಕ್ಷದ ಸಭೆಯಲ್ಲಿ ಈ ಕುರಿತ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

‘ಅಗ್ನಿಪಥ’ ಯೋಜನೆಯನ್ನು ಕೈಬಿಡುವ ಪ್ರಶ್ನೆಯೇ ಇಲ್ಲ : ಸೇನೆ ಸ್ಪಷ್ಟನೆ

Next Post

ವಾಟ್ಸ್​​ಆ್ಯಪ್ ನಿಮ್ಮ ಡಿಪಿಯನ್ನು ಇಷ್ಟಪಡುವರಿಗೆ ಮಾತ್ರ ಕಾಣುವಂತೆ ಮಾಡಬಹುದು!

Related Posts

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ
ರಾಷ್ಟ್ರೀಯ ಸುದ್ದಿ

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ

March 24, 2026
46
LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ
ರಾಷ್ಟ್ರೀಯ ಸುದ್ದಿ

LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ

March 15, 2026
64
Next Post
ವಾಟ್ಸ್​​ಆ್ಯಪ್ ನಿಮ್ಮ ಡಿಪಿಯನ್ನು ಇಷ್ಟಪಡುವರಿಗೆ ಮಾತ್ರ ಕಾಣುವಂತೆ ಮಾಡಬಹುದು!

ವಾಟ್ಸ್​​ಆ್ಯಪ್ ನಿಮ್ಮ ಡಿಪಿಯನ್ನು ಇಷ್ಟಪಡುವರಿಗೆ ಮಾತ್ರ ಕಾಣುವಂತೆ ಮಾಡಬಹುದು!

Discussion about this post

Recent News

ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯು 1ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಭಾರತದ ಅತಿದೊಡ್ಡ ವಿದ್ಯಾರ್ಥಿವೇತನ ಪರೀಕ್ಷೆ ಏಪ್ರಿಲ್ 5 ಭಾನುವಾರ ನಡೆಯಲಿದೆ

ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯು 1ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಭಾರತದ ಅತಿದೊಡ್ಡ ವಿದ್ಯಾರ್ಥಿವೇತನ ಪರೀಕ್ಷೆ ಏಪ್ರಿಲ್ 5 ಭಾನುವಾರ ನಡೆಯಲಿದೆ

April 2, 2026
24
ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ; ಹತ್ತಡಿ ದೂರಕ್ಕೆ ಹಾರಿ ಬಿದ್ದ ಮಹಿಳೆ, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ; ಹತ್ತಡಿ ದೂರಕ್ಕೆ ಹಾರಿ ಬಿದ್ದ ಮಹಿಳೆ, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

April 1, 2026
107
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯು 1ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಭಾರತದ ಅತಿದೊಡ್ಡ ವಿದ್ಯಾರ್ಥಿವೇತನ ಪರೀಕ್ಷೆ ಏಪ್ರಿಲ್ 5 ಭಾನುವಾರ ನಡೆಯಲಿದೆ

ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯು 1ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಭಾರತದ ಅತಿದೊಡ್ಡ ವಿದ್ಯಾರ್ಥಿವೇತನ ಪರೀಕ್ಷೆ ಏಪ್ರಿಲ್ 5 ಭಾನುವಾರ ನಡೆಯಲಿದೆ

April 2, 2026
ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ; ಹತ್ತಡಿ ದೂರಕ್ಕೆ ಹಾರಿ ಬಿದ್ದ ಮಹಿಳೆ, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ; ಹತ್ತಡಿ ದೂರಕ್ಕೆ ಹಾರಿ ಬಿದ್ದ ಮಹಿಳೆ, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

April 1, 2026
ರಿಜಿಸ್ಟರ್ ಮದ್ವೆಯಾದ ಒಂದೇ ತಿಂಗಳಲ್ಲಿ ಬೆಳ್ತಂಗಡಿಯ ಯುವ ಉದ್ಯಮಿ ವಿಷ ಸೇವಿಸಿ ಸಾವು

ರಿಜಿಸ್ಟರ್ ಮದ್ವೆಯಾದ ಒಂದೇ ತಿಂಗಳಲ್ಲಿ ಬೆಳ್ತಂಗಡಿಯ ಯುವ ಉದ್ಯಮಿ ವಿಷ ಸೇವಿಸಿ ಸಾವು

March 31, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d