ಮಂಗಳೂರು, ಜೂ.20 : ಬಿಗ್ ಬಾಸ್ ಒಟಿಟಿ ಹಾಗೂ ಸೀಸನ್ 9ರ ವಿನ್ನರ್ ರೂಪೇಶ್ ಶೆಟ್ಟಿ ನಿರ್ದೇಶನ ಮತ್ತು ಅಭಿನಯದ “ಸರ್ಕಸ್” ತುಳು ಸಿನಿಮಾ ಬಿಡುಗಡೆ ಜೂನ್ 23 ರಂದು ಅದ್ದೂರಿಯಾಗಿ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಪ್ರೀಮಿಯರ್ ಶೋ ಗೆ ಅದ್ಭುತ ಪ್ರತಿಕ್ರಿಯೆ ಈಗಾಗಲೇ ಬಿಡುಗಡೆಗೆ ಮುನ್ನವೇ ದೇಶ ವಿದೇಶಗಳಲ್ಲಿ 51 ಪ್ರೀಮಿಯರ್ ಶೋ ಗಳನ್ನು ಮಾಡಲಾಗಿದೆ ಹಾಗೂ ಚಿತ್ರಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ಸಿಕ್ಕಿದೆ. ಸಿನಿಮಾ ಏಕಕಾಲದಲ್ಲಿ ವಿದೇಶದಲ್ಲೂ ಬಿಡುಗಡೆಯಾಗಲಿದೆ.
ತುಳು ಸಿನಿಮಾರಂಗದಲ್ಲಿ ಅತಿ ದೊಡ್ಡ ಹಿಟ್ ಚಿತ್ರ “ಗಿಲಿಗಿಟ್” ಸಿನಿಮಾ ಭರ್ಜರಿ ಯಶಸ್ಸಿನ ಬಆಕ ರೂಪೇಶ್ ಶೆಟ್ಟಿ ನಿರ್ದೇಶನದ 2ನೇ ಚಿತ್ರ ಸರ್ಕಸ್. ಗಿಲಿಗಿಟ್ ಗೆ ಸಂಭಾಷಣೆ ಬರೆದ ಪ್ರಸನ್ನ ಶೆಟ್ಟಿ ಬೈಲೂರು ಈ ಸಿನಿಮಾಕ್ಕೂ ಸಂಭಾಷಣೆ ಬರೆದಿದ್ದಾರೆ. ಸಲಗ ಖ್ಯಾತಿಯ ಯಶ್ ಶೆಟ್ಟಿ ಸರ್ಕಸ್ ಮೂಲಕ ತುಳುವಿಗೆ ಪರಿಚಯ ಆಗುತ್ತಿದ್ದಾರೆ. ಅದೇ ರೀತಿ ರಚನಾ ರೈ ಎಂಬ ನಟಿಯನ್ನು ತುಳು ಸಿನಿಮಾ ರಂಗಕ್ಕೆ ಪರಿಚಯಿಸಲಾಗಿದೆ.. ‘ಗಿಲಿಗಿಟ್’ ತುಳು ಚಿತ್ರಗಳ ಪೈಕಿ ಅತ್ಯಂತ ಯಶಸ್ವಿಯಾದ ಹಾಸ್ಯಮಯ ಚಿತ್ರ. ಹಲವು ದೇಶಗಳಲ್ಲಿ ಗಿಲಿಗಿಟ್ ಬಿಡುಗಡೆ ಗೊಂಡು ಭರ್ಜರಿ ಪ್ರದರ್ಶನ ಕಂಡಿದೆ. ಈಗ ಅದೇ ತಂಡ ‘ಸರ್ಕಸ್’ ಸಿನಿಮಾ ಮಾಡಿದೆ.
ತುಳು ಚಿತ್ರಗಳ ಸಾಮಾನ್ಯ ಪ್ರಕಾರವೇ ಹಾಸ್ಯ. ‘ಸರ್ಕಸ್’ನಲ್ಲೂ ಅದೇ ಪ್ರಧಾನ ವಸ್ತು. ತುಳು ಚಿತ್ರರಂಗದ ಘಟಾನುಘಟಿ ಕಲಾವಿದರಾದ ನವೀನ್ ಡಿ. ಪಡೀಲ್, ಭೋಜರಾಜ ವಾಮಂಜೂರು, ಅರವಿಂದ ಬೋಳಾರ್, ಸಾಯಿಕೃಷ್ಣ ಕುಡ್ಲ, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಉಮೇಶ್ ಮಿಜಾರ್, ಚಂದ್ರಹಾಸ ಉಲ್ಟಾಲ್, ನಿತೇಶ್ ಶೆಟ್ಟಿ ಎಕ್ತಾರ್, ರೂಪಾ ವರ್ಕಾಡಿ, ಪಂಚಮಿ ಭೋಜರಾಜ್, ತಾರಾಗಣದಲ್ಲಿದ್ದಾರೆ.
ಶೂಅನ್ ಫಿಲಂಸ್, ಮುಗೋಡಿ ಫಿಲಂಸ್ ಲಾಂಛನದಡಿಯಲ್ಲಿ ಸರ್ಕಸ್ ಸಿನಿಮಾ ತಯಾರಾಗಿದೆ. ಅನಿಲ್ ಶೆಟ್ಟಿ, ಸುಧಾಕರ ಶೆಟ್ಟಿ, ಮಂಜುನಾಥ ಅತ್ತಾವರ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಕರಾವಆಯಾದ್ಯಂತ ಸುತ್ತಮುತ್ತನ ಪರಿಸರದಲ್ಲಿ ಚಿತ್ರೀಕರಣ ನಡೆದಿದೆ. ಸಂಭಾಷಣೆ ಪ್ರಸನ್ನ ಶೆಟ್ಟಿ ಬೈಲೂರು, ನವೀನ್ ಶೆಟ್ಟಿ ನೃತ್ಯ ನಿರ್ದೇಶನ, ನಿರಂಜನ ದಾಸ್ ಕ್ಯಾಮರಾ, ರಾಹುಲ್ ವಶಿಷ್ಠ ಸಂಕಲನ, ಲೋಯ್ ಅವರ ಸಂಗೀತ ಈ ಚಿತ್ರಕ್ಕಿದೆ. ಸರ್ಕಸ್ ಚಿತ್ರ ಈಗಾಗಲೇ ಕುತೂಹಲ ಕೆರಆಸಿದ್ದು, ಜೂನ್ 23 ರಂದು ಚಿತ್ರವನ್ನು ನೋಡಿ ಅಶೀರ್ವದಿಸಿ.
Discover more from Coastal Times Kannada
Subscribe to get the latest posts sent to your email.
Discussion about this post