• About us
  • Contact us
  • Disclaimer
Friday, September 4, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

FIFA World Cup 2026: ಅರ್ಜೆಂಟೀನಾಗೆ ಸೋಲು – ಸ್ಪೇನ್ ಮುಡಿಗೆ ಫಿಫಾ ವಿಶ್ವಕಪ್​ ಕಿರೀಟ

Coastal Times by Coastal Times
July 20, 2026
in ಕ್ರೀಡಾ ಸುದ್ದಿ
FIFA World Cup 2026: ಅರ್ಜೆಂಟೀನಾಗೆ ಸೋಲು – ಸ್ಪೇನ್ ಮುಡಿಗೆ ಫಿಫಾ ವಿಶ್ವಕಪ್​ ಕಿರೀಟ
42
VIEWS
WhatsappTelegramShare on FacebookShare on Twitter

ನ್ಯೂಯಾರ್ಕ್:  ಯುರೋ ಚಾಂಪಿಯನ್ ಸ್ಪೇನ್ ತಂಡವು ಹಾಲಿ ಚಾಂಪಿಯನ್ ಅರ್ಜೆಂಟೀನ ತಂಡವನ್ನು 1-0 ಗೋಲು ಅಂತರದಿಂದ ಮಣಿಸುವುದರೊಂದಿಗೆ 23ನೇ ಆವೃತ್ತಿಯ ಫಿಫಾ ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. 2010ರ ನಂತರ ಎರಡನೇ ಬಾರಿ ವಿಶ್ವಕಪ್ ಟ್ರೋಫಿಗೆ ಮುತ್ತಿಕ್ಕಿದೆ.

ರವಿವಾರ ತಡರಾತ್ರಿ ನ್ಯೂಜೆರ್ಸಿಯ ಮೆಟ್‌ಲೈಫ್ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ, ನಿಗದಿತ 90 ನಿಮಿಷಗಳ ಅವಧಿಯಲ್ಲಿ ಒಂದೂ ಗೋಲು ದಾಖಲಾಗಲಿಲ್ಲ. ಬಳಿಕ ಹೆಚ್ಚುವರಿ ಸಮಯದ 16ನೇ ನಿಮಿಷದಲ್ಲಿ ಫೆರನ್ ಟೊರೆಸ್ ಸ್ಪೇನ್ ತಂಡದ ಗೆಲುವಿನ ಗೋಲನ್ನು ಬಾರಿಸಿದರು. ಇದು ಸ್ಪೇನ್ ಪಂದ್ಯದಲ್ಲಿ ನಡೆಸಿದ 20ನೇ ಗೋಲು ಪ್ರಯತ್ನವಾಗಿತ್ತು.

ಪಂದ್ಯದ ದ್ವಿತೀಯಾರ್ಧದ ಇಂಜುರಿ ಟೈಮ್‌ನಲ್ಲಿ (Stoppage Time) ಅರ್ಜೆಂಟೀನಾದ ಎಂಜೊ ಫೆರ್ನಾಂಡಿಸ್ ಅವರು ಸ್ಪೇನ್‌ನ ಡಿಫೆಂಡರ್ ಪಾವು ಕುಬಾರ್ಸಿ ಅವರ ವಿರುದ್ಧ ಅಪಾಯಕಾರಿ ಫೌಲ್ ಮಾಡಿದ್ದಕ್ಕಾಗಿ ಎರಡನೇ ಹಳದಿ ಕಾರ್ಡ್ ಪಡೆದು ಮೈದಾನದಿಂದ ಹೊರನಡೆದರು. ಇದರಿಂದಾಗಿ ಅರ್ಜೆಂಟೀನಾ ಪಂದ್ಯದ ಕೊನೆಯ ಹಂತದಲ್ಲಿ ಕೇವಲ 10 ಆಟಗಾರರೊಂದಿಗೆ ಆಡಬೇಕಾಯಿತು.

ಪಂದ್ಯದ 90 ನಿಮಿಷಗಳ ಅವಧಿಯಲ್ಲಿ ಸ್ಪೇನ್ ಬರೋಬ್ಬರಿ 15 ಬಾರಿ ಗೋಲು ಬಾರಿಸಲು ಯತ್ನಿಸಿದರೆ, ಅರ್ಜೆಂಟೀನಾ ಒಂದು ಬಾರಿಯೂ ಯತ್ನಿಸಲಿಲ್ಲ. ಆದರೆ ಅರ್ಜೆಂಟೀನಾದ ಗೋಲ್‌ಕೀಪರ್ ಎಮಿಲಿಯಾನೊ ಮಾರ್ಟಿನೆಜ್ ಗೋಡೆಗಿಂತ ಗಟ್ಟಿಯಾಗಿ ನಿಂತು ಸ್ಪೇನ್‌ನ 10 ಗೋಲುಗಳ ಯತ್ನವನ್ನು ತಡೆದರು. ಇದು ವಿಶ್ವಕಪ್ ಫೈನಲ್ ಇತಿಹಾಸದಲ್ಲೇ ಗೋಲ್‌ಕೀಪರ್ ಒಬ್ಬರು ಮಾಡಿದ ಅತಿ ಹೆಚ್ಚು ಗೋಲುಗಳ ರಕ್ಷಣೆಯಾಗಿದೆ. ವಿಶೇಷವಾಗಿ ಇಂಜುರಿ ಟೈಮ್‌ನಲ್ಲಿ ಲ್ಯಾಮೈನ್ ಯಮಾಲ್ ಅವರ ಅದ್ಭುತ ಫ್ರೀ-ಕಿಕ್ ಅನ್ನು ಮಾರ್ಟಿನೆಜ್ ತಡೆದ ರೀತಿ ಅಮೋಘವಾಗಿತ್ತು.

ಈ ಐತಿಹಾಸಿಕ ಜಯದೊಂದಿಗೆ ಸ್ಪೇನ್ ಜಗತ್ತಿನ ಫುಟ್‌ಬಾಲ್ ಇತಿಹಾಸದಲ್ಲೇ ಪುರುಷರ ಹಾಗೂ ಮಹಿಳೆಯರ ಫಿಫಾ ವಿಶ್ವಕಪ್ ಎರಡೂ ಟ್ರೋಫಿಗಳನ್ನು ಏಕಕಾಲದಲ್ಲಿ ಹೊಂದಿರುವ ಮೊದಲ ದೇಶ ಎಂಬ ಕೀರ್ತಿಗೆ ಪಾತ್ರವಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮೂಡಬಿದ್ರೆ ಬಸ್ ನಿಲ್ದಾಣದಲ್ಲಿ ತಲ್ವಾರ್ ಹಿಡಿದು ಯುವಕನ ರಂಪಾಟ: ಮೊಬೈಲ್ ಶಾಪ್‌ಗೆ ನುಗ್ಗಿ ಬೆದರಿಕೆ, ಯುವಕನ ಬಂಧನ

Next Post

ಉಕ್ರೇನ್‌ನ ಒಡೆಸಾದಲ್ಲಿ ವಾಣಿಜ್ಯ ನೌಕೆ ಮೇಲೆ ಕ್ಷಿಪಣಿ ದಾಳಿ; ಕೇರಳದ ಕಾಸರಗೋಡಿನ ಯುವಕ ಸೇರಿ ನಾಲ್ವರು ಭಾರತೀಯರು ಸಾವು

Related Posts

ಕ್ರಿಕೆಟ್ ಆಸ್ಟ್ರೇಲಿಯಾ ಅನಯಾ ಬಂಗಾರ್​ಗೆ ಆಡುವ ಅವಕಾಶ; ಮಹಿಳಾ ಆಟಗಾರ್ತಿಯರ ವಿರೋಧ
ಕ್ರೀಡಾ ಸುದ್ದಿ

ಕ್ರಿಕೆಟ್ ಆಸ್ಟ್ರೇಲಿಯಾ ಅನಯಾ ಬಂಗಾರ್​ಗೆ ಆಡುವ ಅವಕಾಶ; ಮಹಿಳಾ ಆಟಗಾರ್ತಿಯರ ವಿರೋಧ

August 29, 2026
51
ಕಾಮನ್‌ವೆಲ್ತ್ ಕ್ರೀಡಾಕೂಟ: 57 ಕೆಜಿ ಹಾಗೂ 54 ಕೆಜಿ ಬಾಕ್ಸಿಂಗ್​ನಲ್ಲಿ ಚಿನ್ನದ ಪದಕ ಗೆದ್ದ ಪ್ರೀತಿ, ಜೈಸ್ಮಿನ್​!
ಕ್ರೀಡಾ ಸುದ್ದಿ

ಕಾಮನ್‌ವೆಲ್ತ್ ಕ್ರೀಡಾಕೂಟ: 57 ಕೆಜಿ ಹಾಗೂ 54 ಕೆಜಿ ಬಾಕ್ಸಿಂಗ್​ನಲ್ಲಿ ಚಿನ್ನದ ಪದಕ ಗೆದ್ದ ಪ್ರೀತಿ, ಜೈಸ್ಮಿನ್​!

August 1, 2026
21
Next Post
ಉಕ್ರೇನ್‌ನ ಒಡೆಸಾದಲ್ಲಿ ವಾಣಿಜ್ಯ ನೌಕೆ ಮೇಲೆ ಕ್ಷಿಪಣಿ ದಾಳಿ; ಕೇರಳದ ಕಾಸರಗೋಡಿನ ಯುವಕ ಸೇರಿ ನಾಲ್ವರು ಭಾರತೀಯರು ಸಾವು

ಉಕ್ರೇನ್‌ನ ಒಡೆಸಾದಲ್ಲಿ ವಾಣಿಜ್ಯ ನೌಕೆ ಮೇಲೆ ಕ್ಷಿಪಣಿ ದಾಳಿ; ಕೇರಳದ ಕಾಸರಗೋಡಿನ ಯುವಕ ಸೇರಿ ನಾಲ್ವರು ಭಾರತೀಯರು ಸಾವು

Discussion about this post

Recent News

ಮಂಗಳೂರು: ಬ್ಲಿಂಕಿಟ್​ನಲ್ಲಿ ಆರ್ಡರ್​​ ಮಾಡಿದ್ದ ಮೊಟ್ಟೆಯಲ್ಲಿ ಹುಳು: ದೂರು ನೀಡಿದ ಬೆನ್ನಲ್ಲೇ ಫಳ್ನೀರಿನ ಬ್ಲಿಂಕಿಟ್ ಮಳಿಗೆ ಮೇಲೆ ದಾಳಿ ಮಾಡಿದ ಆರೋಗ್ಯ ಇಲಾಖೆ

ಮಂಗಳೂರು: ಬ್ಲಿಂಕಿಟ್​ನಲ್ಲಿ ಆರ್ಡರ್​​ ಮಾಡಿದ್ದ ಮೊಟ್ಟೆಯಲ್ಲಿ ಹುಳು: ದೂರು ನೀಡಿದ ಬೆನ್ನಲ್ಲೇ ಫಳ್ನೀರಿನ ಬ್ಲಿಂಕಿಟ್ ಮಳಿಗೆ ಮೇಲೆ ದಾಳಿ ಮಾಡಿದ ಆರೋಗ್ಯ ಇಲಾಖೆ

September 4, 2026
49
ಬಜ್ಪೆ- ಕಟೀಲು ರಸ್ತೆಯಲ್ಲಿ ಕಿರು ಸೇತುವೆ ಕುಸಿತ: ವಾಹನ ಸಂಚಾರ ಮಾರ್ಗ ಬದಲು, ವಿಮಾನ ನಿಲ್ದಾಣದಿಂದ ಪ್ರಯಾಣಿಕರಿಗೆ ಮಹತ್ವದ ಸೂಚನೆ

ಬಜ್ಪೆ- ಕಟೀಲು ರಸ್ತೆಯಲ್ಲಿ ಕಿರು ಸೇತುವೆ ಕುಸಿತ: ವಾಹನ ಸಂಚಾರ ಮಾರ್ಗ ಬದಲು, ವಿಮಾನ ನಿಲ್ದಾಣದಿಂದ ಪ್ರಯಾಣಿಕರಿಗೆ ಮಹತ್ವದ ಸೂಚನೆ

September 3, 2026
21
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಬ್ಲಿಂಕಿಟ್​ನಲ್ಲಿ ಆರ್ಡರ್​​ ಮಾಡಿದ್ದ ಮೊಟ್ಟೆಯಲ್ಲಿ ಹುಳು: ದೂರು ನೀಡಿದ ಬೆನ್ನಲ್ಲೇ ಫಳ್ನೀರಿನ ಬ್ಲಿಂಕಿಟ್ ಮಳಿಗೆ ಮೇಲೆ ದಾಳಿ ಮಾಡಿದ ಆರೋಗ್ಯ ಇಲಾಖೆ

ಮಂಗಳೂರು: ಬ್ಲಿಂಕಿಟ್​ನಲ್ಲಿ ಆರ್ಡರ್​​ ಮಾಡಿದ್ದ ಮೊಟ್ಟೆಯಲ್ಲಿ ಹುಳು: ದೂರು ನೀಡಿದ ಬೆನ್ನಲ್ಲೇ ಫಳ್ನೀರಿನ ಬ್ಲಿಂಕಿಟ್ ಮಳಿಗೆ ಮೇಲೆ ದಾಳಿ ಮಾಡಿದ ಆರೋಗ್ಯ ಇಲಾಖೆ

September 4, 2026
ಬಜ್ಪೆ- ಕಟೀಲು ರಸ್ತೆಯಲ್ಲಿ ಕಿರು ಸೇತುವೆ ಕುಸಿತ: ವಾಹನ ಸಂಚಾರ ಮಾರ್ಗ ಬದಲು, ವಿಮಾನ ನಿಲ್ದಾಣದಿಂದ ಪ್ರಯಾಣಿಕರಿಗೆ ಮಹತ್ವದ ಸೂಚನೆ

ಬಜ್ಪೆ- ಕಟೀಲು ರಸ್ತೆಯಲ್ಲಿ ಕಿರು ಸೇತುವೆ ಕುಸಿತ: ವಾಹನ ಸಂಚಾರ ಮಾರ್ಗ ಬದಲು, ವಿಮಾನ ನಿಲ್ದಾಣದಿಂದ ಪ್ರಯಾಣಿಕರಿಗೆ ಮಹತ್ವದ ಸೂಚನೆ

September 3, 2026
13 ವರ್ಷಗಳ ದುನಿಯಾ ವಿಜಯ್-ನಾಗರತ್ನ ಕಾನೂನು ಸಮರ ಅಂತ್ಯ: ಪತ್ನಿಗೆ 2 ಕೋಟಿ ರೂ ಜೀವನಾಂಶ ನೀಡಲು ಹೈಕೋರ್ಟ್ ಆದೇಶ

13 ವರ್ಷಗಳ ದುನಿಯಾ ವಿಜಯ್-ನಾಗರತ್ನ ಕಾನೂನು ಸಮರ ಅಂತ್ಯ: ಪತ್ನಿಗೆ 2 ಕೋಟಿ ರೂ ಜೀವನಾಂಶ ನೀಡಲು ಹೈಕೋರ್ಟ್ ಆದೇಶ

September 3, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d