• About us
  • Contact us
  • Disclaimer
Thursday, August 20, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಎರಡು ಪ್ರತ್ಯೇಕ ಪ್ರಕರಣ; ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

Coastal Times by Coastal Times
August 20, 2026
in ಕ್ರೈಮ್ ನ್ಯೂಸ್
ಮಂಗಳೂರು: ಎರಡು ಪ್ರತ್ಯೇಕ ಪ್ರಕರಣ; ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ
18
VIEWS
WhatsappTelegramShare on FacebookShare on Twitter

ಮಂಗಳೂರು, ಆ. 19 : ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಪೂರ್ವ ಠಾಣಾ ಪೊಲೀಸರು ಹಾಗೂ ಸುರತ್ಕಲ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

ಕೇರಳದ ವರ್ಕಾಡಿಯ ವಯಾ ಮಂಜೇಶ್ವರ ನಿವಾಸಿ ಮೊಹಮ್ಮದ್ ಇರ್ಷಾದ್(30) ಹಾಗೂ ಕೇರಳದ ಕಣ್ಣೂರು ತಾಳಿಪರಂಬ ಮೂಲದ ಪ್ರಸ್ತುತ ಮಂಗಳೂರು ಕೊಂಚಾಡಿ ನಿವಾಸಿ ನಿತಿನ್ ಕೃಷ್ಣನ್(27) ಬಂಧಿತ ಆರೋಪಿಗಳು.

ಮೊದಲ ಪ್ರಕರಣದಲ್ಲಿ, ಆ. 18 ರಂದು ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪಂಪ್ ವೇಲ್‌ನಿಂದ ನಂತೂರು ಕಡೆಗೆ ತೆರಳುವ ಸರ್ವಿಸ್ ರಸ್ತೆಯ ಬದಿಯಲ್ಲಿ, ವ್ಯಕ್ತಿಯೋರ್ವ ಆಟೋ ರಿಕ್ಷಾದಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವುದಾಗಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಖಚಿತ ಮಾಹಿತಿ ದೊರೆತಿರುತ್ತದೆ. ಮಾಹಿತಿ ಮೇರೆಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ತಕ್ಷಣ ಸ್ಥಳಕ್ಕೆ ತೆರಳಿ ದಾಳಿ ನಡೆಸಿದ್ದಾರೆ.

ದಾಳಿ ವೇಳೆ ಆರೋಪಿ ಮೊಹಮ್ಮದ್ ಇರ್ಷಾದ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜೊತೆಗೆ ಆರೋಪಿಯ ಬಳಿಯಿದ್ದ ಅಂದಾಜು 1,36,000 ರೂ. ಮೌಲ್ಯದ 13.69 ಗ್ರಾಂ ತೂಕದ ಎಂಡಿಎಂಎ, ನಗದು ಹಣ ಹಾಗೂ ಕೃತ್ಯಕ್ಕೆ ಬಳಸಿದ ಆಟೋ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 2,94,500 ರೂ. ಆಗಿರುತ್ತದೆ.

ಆರೋಪಿ ಇರ್ಷಾದ್ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಅ.ಕ್ರ. 82/2026, ಕಲಂ 8(c), 22(c) ಎನ್.ಡಿ.ಪಿ.ಎಸ್. ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಆರೋಪಿಯನ್ನು ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಎರಡನೇ ಪ್ರಕರಣದಲ್ಲಿ, ಆ.17 ರಂದು ಗಾಂಜಾ ಸೇವನೆ ಮಾಡಿದ ಪ್ರಕರಣದಲ್ಲಿ ಆರೋಪಿತನಾದ ಆಶ್ವಿನ್ ಕ್ಸೇವಿಯರ್ (24) ಎಂಬಾತನನ್ನು ವಿಚಾರಣೆಗೊಳಪಡಿಸಿದ ಸಂದರ್ಭದಲ್ಲಿ, ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ನಿತಿನ್ ಕೃಷ್ಣನ್ ಎಂಬಾತನ ಬಗ್ಗೆ ಮಾಹಿತಿ ನೀಡಿರುತ್ತಾನೆ.

ಈ ಹಿನ್ನೆಲೆಯಲ್ಲಿ ಆ.18 ರಂದು ಕದ್ರಿ ಗ್ರಾಮದ ಪದವು ಮೈದಾನದ ಬಳಿ ಇರುವ ಆಯುರ್ವೇದ ಕ್ಲಿನಿಕ್ನಲ್ಲಿ ಥೆರಪಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿ ನಿತಿನ್ ಕೃಷ್ಣನ್ ಎಂಬಾತನನ್ನು ಪತ್ತೆಹಚ್ಚಿ, ಆತನ ವಶದಲ್ಲಿದ್ದ 60,000 ರೂ. ಮೌಲ್ಯದ 1.206 ಕೆ.ಜಿ. ತೂಕದ ಗಾಂಜಾ, ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನ್ ಹಾಗೂ ಬೈಕ್ ಅನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

ಆರೋಪಿ ನಿತಿನ್ ಕೃಷ್ಣನ್ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯ ಮೊ.ನಂ. 104/2026, ಕಲಂ 8(c), 20(b)(ii)(B), 27(b) ಎನ್.ಡಿ.ಪಿ.ಎಸ್. ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಮಾನ್ಯ ನ್ಯಾಯಾಲಯದ ಮುಂದೆ ಹಾಜರರು ಪಡಿಸಲಾಗಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಹೆಸರು, ವಿಳಾಸ ಬದಲಿಸಿ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಸೆರೆ

Related Posts

ಮಂಗಳೂರು: ಹೆಸರು, ವಿಳಾಸ ಬದಲಿಸಿ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಸೆರೆ
ಕ್ರೈಮ್ ನ್ಯೂಸ್

ಮಂಗಳೂರು: ಹೆಸರು, ವಿಳಾಸ ಬದಲಿಸಿ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಸೆರೆ

August 19, 2026
102
ವಿಟ್ಲ: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಪ್ರಕರಣ: ಆರೋಪಿಯ ಬಂಧನ
ಕ್ರೈಮ್ ನ್ಯೂಸ್

ವಿಟ್ಲ: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಪ್ರಕರಣ: ಆರೋಪಿಯ ಬಂಧನ

August 18, 2026
61

Discussion about this post

Recent News

ಮಂಗಳೂರು: ಎರಡು ಪ್ರತ್ಯೇಕ ಪ್ರಕರಣ; ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಮಂಗಳೂರು: ಎರಡು ಪ್ರತ್ಯೇಕ ಪ್ರಕರಣ; ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

August 20, 2026
18
ಮಂಗಳೂರು: ಹೆಸರು, ವಿಳಾಸ ಬದಲಿಸಿ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಸೆರೆ

ಮಂಗಳೂರು: ಹೆಸರು, ವಿಳಾಸ ಬದಲಿಸಿ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಸೆರೆ

August 19, 2026
102
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಎರಡು ಪ್ರತ್ಯೇಕ ಪ್ರಕರಣ; ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಮಂಗಳೂರು: ಎರಡು ಪ್ರತ್ಯೇಕ ಪ್ರಕರಣ; ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

August 20, 2026
ಮಂಗಳೂರು: ಹೆಸರು, ವಿಳಾಸ ಬದಲಿಸಿ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಸೆರೆ

ಮಂಗಳೂರು: ಹೆಸರು, ವಿಳಾಸ ಬದಲಿಸಿ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಸೆರೆ

August 19, 2026
ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ

August 19, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d