ಮಂಗಳೂರು, ಅ.20: ಮಾಜಿ ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜಾ ಅವರ ನಗರದ ವೆಲೆನ್ಸಿಯಾದಲ್ಲಿರುವ ಮನೆಗೆ ಬಜರಂಗದಳದ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಮನೆಗೆ ನುಗ್ಗಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೇಸರಿ ಬಣ್ಣ ಮತ್ತು ಕೇಸರಿ ಶಾಲಿನ ಬಗ್ಗೆ ಐವನ್ ಡಿಸೋಜ ಅವಹೇಳನಕಾರಿಯಾಗಿ ಮಾತಾಡಿದ್ದಾರೆ ಎಂದು ಬಜರಂಗದಳ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿವಿ ಮಾಧ್ಯಮದ ಚರ್ಚೆಯ ಸಂದರ್ಭದಲ್ಲಿ ಐವಾನ್ ಡಿಸೋಜ, ಕೇಸರಿ ಶಾಲು ಹಾಕಿದವರು ಭಯೋತ್ಪಾದಕರು ಎಂದು ಹೇಳಿದ್ದಾರೆ ಎನ್ನಲಾಗಿದ್ದು ಈ ಬಗ್ಗೆ ಭಾರೀ ಆಕ್ರೋಶ ಕೇಳಿಬಂದಿದೆ.
ಸ್ಥಳಕ್ಕಾಗಮಿಸಿದ ಮಂಗಳೂರು ದಕ್ಷಿಣ ಪೊಲೀಸರು ಮುತ್ತಿಗೆ ಯತ್ನವನ್ನು ವಿಫಲಗೊಳಿಸಿದರು. ಬಜರಂಗದಳದ ಕೆಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.