• About us
  • Contact us
  • Disclaimer
Friday, October 16, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ಯುವತಿಯರ ವೀಡಿಯೋ ಬಳಸಿ ಹನಿಟ್ರ್ಯಾಪ್, ಡೆತ್ ನೋಟಲ್ಲಿದ್ದ ನರ್ಸ್ ನಿರೀಕ್ಷಾ ಬಂಧನ

Coastal Times by Coastal Times
October 20, 2025
in ಕ್ರೈಮ್ ನ್ಯೂಸ್
ಮಂಗಳೂರು: ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ಯುವತಿಯರ ವೀಡಿಯೋ ಬಳಸಿ ಹನಿಟ್ರ್ಯಾಪ್, ಡೆತ್ ನೋಟಲ್ಲಿದ್ದ ನರ್ಸ್ ನಿರೀಕ್ಷಾ ಬಂಧನ
124
VIEWS
WhatsappTelegramShare on FacebookShare on Twitter

ಮಂಗಳೂರು, ಅ. 19 : ಇತ್ತೀಚೆಗೆ ತನ್ನ ಸಾವಿಗೆ ಹನಿಟ್ರ್ಯಾಪ್ ನಡೆಸಿದ್ದ ಯುವತಿ ಸೇರಿ ನಾಲ್ವರು ಕಾರಣವೆಂದು ಡೆತ್ ನೋಟ್ ಬರೆದಿಟ್ಟು ಲೇಡಿಗೋಷನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್ ಆಚಾರ್ಯ ಎಂಬ ಯುವಕ ಕಾರ್ಕಳದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಡೆತ್ ನೋಟ್ ನಲ್ಲಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ನರ್ಸ್ ಆಗಿರುವ ನಿರೀಕ್ಷಾ ಎಂಬ ಯುವತಿ ಬಗ್ಗೆಯೇ ಆರೋಪ ಹೊರಿಸಲಾಗಿತ್ತು. ಆಕೆಯನ್ನು ಈಗ ನಗರದ ಕದ್ರಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಡೆತ್ ನೋಟ್ ನಲ್ಲಿ ನಿರೀಕ್ಷಾ ತನ್ನ ಜೊತೆಗೆ ರೂಮಿನಲ್ಲಿದ್ದ ಬೇರೆ ಹುಡುಗಿಯರ ಫೋಟೊ, ವಿಡಿಯೋಗಳನ್ನೂ ಗುಪ್ತ ಕ್ಯಾಮರಾದಲ್ಲಿ ತೆಗೆದಿಟ್ಟು ಬ್ಲಾಕ್ಮೇಲ್ ಮಾಡುತ್ತಿದ್ದಾಳೆ ಎಂದೂ ಬರೆಯಲಾಗಿತ್ತು. ಅದರಲ್ಲಿ ಉಲ್ಲೇಖಿಸಲಾಗಿದ್ದ ಯುವತಿಯೊಬ್ಬಳು ಕದ್ರಿ ಠಾಣೆಯಲ್ಲಿ ದೂರು ನೀಡಿದ್ದು ತನ್ನ ಬಟ್ಟೆ ತೆಗೆಯುವ ವಿಡಿಯೋವನ್ನು ಚಿತ್ರೀಕರಿಸಿ ಜಾಲತಾಣದಲ್ಲಿ ಹಂಚಿದ್ದಾಳೆಂದು ನಿರೀಕ್ಷಾ ವಿರುದ್ಧ ದೂರು ನೀಡಿದ್ದಳು. ಪ್ರಕರಣ ಸಂಬಂಧಿಸಿ ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಹಿನ್ನೆಲೆಯಲ್ಲಿ ನಿರೀಕ್ಷಾಳನ್ನು ರವಿವಾರ (ಅ.19) ಬಂಧಿಸಿರುವ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದಾರೆ. ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಇದೇ ವೇಳೆ, ಹನಿಟ್ರ್ಯಾಪ್ ಪ್ರಕರಣದಲ್ಲಿ ಅಭಿಷೇಕ್ ಸಾವಿಗೆ ಕಾರಣವಾದ ನಿರೀಕ್ಷಾ, ರಾಕೇಶ್, ತಸ್ಲೀಂ ಎಂಬವರನ್ನು ಒಳಗೊಂಡ ತಂಡವನ್ನು ಬಂಧಿಸಬೇಕೆಂದು ಜಾಲತಾಣದಲ್ಲಿ ಆಗ್ರಹ ಕೇಳಿಬರುತ್ತಿದೆ. ವಿಶ್ವಕರ್ಮ ಸಮಾಜದ ಮುಖಂಡರು ರಾಜ್ಯ ಗೃಹ ಸಚಿವರಿಗೂ ಮನವಿ ನೀಡಿದ್ದಾರೆ. ಅಲ್ಲದೆ, ಉಡುಪಿ ಎಸ್ಪಿ ಅವರನ್ನೂ ಭೇಟಿಯಾಗಿ ಮನವಿ ನೀಡಿದ್ದಾರೆ.

ಉಡುಪಿ ಎಸ್ಪಿ ಹರಿರಾಮ್ ಶಂಕರ್  ಸ್ಪಷ್ಟನೆ ನೀಡಿದ್ದು, ಸೂಸೈಡ್ ನೋಟ್‌ನಲ್ಲಿರುವ ವಿಷಯಗಳ ಬಗ್ಗೆ ಸಂಪೂರ್ಣ ತನಿಖೆ ನಡೆಸಲಾಗುವುದು. ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸಿ, ಆತ್ಮಹತ್ಯೆ ಹಿಂದಿರುವ ನೈಜತೆಯನ್ನು ಪತ್ತೆಹಚ್ಚುವತ್ತ ಗಮನಹರಿಸಲಾಗಿದೆ. ಈಗಲೇ ಯಾವುದೇ ತೀರ್ಮಾನಕ್ಕೆ ಬರುವುದಿಲ್ಲ, ಆತ್ಮಹತ್ಯೆಗೆ ಪ್ರಚೋದನೆ ನೀಡಿದವರು ಯಾರೇ ಇದ್ದರೂ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಕಾರ್ಕಳ ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ನಾಲ್ವರ ಪೈಕಿ ಈಗಾಗಲೇ ಮೂವರನ್ನು ವಿಚಾರಣೆ ನಡೆಸಲಾಗಿದ್ದು, ಅವರ ಮೊಬೈಲ್ ಫೋನ್‌ ವಶಪಡಿಸಿ ತಾಂತ್ರಿಕ ಪರೀಕ್ಷೆಗೆ ಕಳುಹಿಸಲಾಗಿದೆ. ಮೃತ ಅಭಿಷೇಕ್​​ನ ಫೋನ್ ಕೂಡ ವಶಕ್ಕೆ ಪಡೆದಿದ್ದು, ಅದರಲ್ಲಿರುವ ಫೋಟೋಗಳು, ವಿಡಿಯೋಗಳು ಮತ್ತು ಸಂದೇಶಗಳನ್ನು ಸಾಕ್ಷ್ಯವಾಗಿ ದಾಖಲಿಸಿಕೊಳ್ಳಲಾಗಿದೆ. ಹೆಚ್ಚಿನ ವೈಜ್ಞಾನಿಕ ಸಾಕ್ಷ್ಯಗಳಿಗಾಗಿ ಫೋನ್ ಅನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಕೇಂದ್ರ ಸರ್ಕಾರದ MSME ಸಾಲ ಯೋಜನೆ ಹೆಸರಲ್ಲಿ ನಕಲಿ ಕಂಪನಿ ಸೃಷ್ಟಿಸಿ ಎಸ್ ಬಿಐ ಬ್ಯಾಂಕ್ ಗೆ 1.30 ಕೋಟಿ ವಂಚನೆ, ಬ್ಯಾಂಕ್ ಮ್ಯಾನೇಜರ್ ಸಹಿತ ಎಲ್ಲಾ ಆರೋಪಿಗಳು ಅರೆಸ್ಟ್

Next Post

ಚಿನ್ನಾಭರಣಗಳ ಹಾಗೂ ಎಲೆಕ್ಟ್ರಾನಿಕ್ ಅಂಗಡಿಗಳಿಗೆ ನಕಲಿ ಚೆಕ್ ನೀಡಿ ವಂಚಿಸುತ್ತಿದ್ದ ವಂಚಕಿ ಫರೀದಾ ಬೇಗಂ ಅರೆಸ್ಟ್

Related Posts

ಮಂಗಳೂರು: ಚರ್ಚ್ ಪಾದ್ರಿ ವಿರುದ್ಧ 50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆರೋಪ ; ಒಡನಾಡಿ ಸಂಸ್ಥೆಯಿಂದ ಮಂಗಳೂರು ಕಮಿಷನರಿಗೆ ದೂರು
ಕ್ರೈಮ್ ನ್ಯೂಸ್

ಮಂಗಳೂರು: ಚರ್ಚ್ ಪಾದ್ರಿ ವಿರುದ್ಧ 50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆರೋಪ ; ಒಡನಾಡಿ ಸಂಸ್ಥೆಯಿಂದ ಮಂಗಳೂರು ಕಮಿಷನರಿಗೆ ದೂರು

October 15, 2026
215
ಪೆಹಲ್ಗಾಮ್ ಹತ್ಯಾಕಾಂಡದ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಮುಂಬೈ ಪೊಲೀಸ್ ಸೋಗಿನಲ್ಲಿ ಪುತ್ತೂರಿನ ವ್ಯಕ್ತಿಯೊಬ್ಬರಿಗೆ 1.3 ಕೋಟಿ ರೂ. ವಂಚನೆ!
ಕ್ರೈಮ್ ನ್ಯೂಸ್

ಪೆಹಲ್ಗಾಮ್ ಹತ್ಯಾಕಾಂಡದ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಮುಂಬೈ ಪೊಲೀಸ್ ಸೋಗಿನಲ್ಲಿ ಪುತ್ತೂರಿನ ವ್ಯಕ್ತಿಯೊಬ್ಬರಿಗೆ 1.3 ಕೋಟಿ ರೂ. ವಂಚನೆ!

October 13, 2026
29
Next Post
ಚಿನ್ನಾಭರಣಗಳ ಹಾಗೂ ಎಲೆಕ್ಟ್ರಾನಿಕ್ ಅಂಗಡಿಗಳಿಗೆ ನಕಲಿ ಚೆಕ್ ನೀಡಿ ವಂಚಿಸುತ್ತಿದ್ದ ವಂಚಕಿ ಫರೀದಾ ಬೇಗಂ ಅರೆಸ್ಟ್

ಚಿನ್ನಾಭರಣಗಳ ಹಾಗೂ ಎಲೆಕ್ಟ್ರಾನಿಕ್ ಅಂಗಡಿಗಳಿಗೆ ನಕಲಿ ಚೆಕ್ ನೀಡಿ ವಂಚಿಸುತ್ತಿದ್ದ ವಂಚಕಿ ಫರೀದಾ ಬೇಗಂ ಅರೆಸ್ಟ್

Discussion about this post

Recent News

ಮಂಗಳೂರು: ಚರ್ಚ್ ಪಾದ್ರಿ ವಿರುದ್ಧ 50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆರೋಪ ; ಒಡನಾಡಿ ಸಂಸ್ಥೆಯಿಂದ ಮಂಗಳೂರು ಕಮಿಷನರಿಗೆ ದೂರು

ಮಂಗಳೂರು: ಚರ್ಚ್ ಪಾದ್ರಿ ವಿರುದ್ಧ 50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆರೋಪ ; ಒಡನಾಡಿ ಸಂಸ್ಥೆಯಿಂದ ಮಂಗಳೂರು ಕಮಿಷನರಿಗೆ ದೂರು

October 15, 2026
215
ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಂಗಳೂರಿನ ಯುಟ್ಯೂಬರ್ ವಿರುದ್ಧ ಕ್ರಮಕ್ಕೆ ಆಗ್ರಹ!!

ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಂಗಳೂರಿನ ಯುಟ್ಯೂಬರ್ ವಿರುದ್ಧ ಕ್ರಮಕ್ಕೆ ಆಗ್ರಹ!!

October 14, 2026
133
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಚರ್ಚ್ ಪಾದ್ರಿ ವಿರುದ್ಧ 50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆರೋಪ ; ಒಡನಾಡಿ ಸಂಸ್ಥೆಯಿಂದ ಮಂಗಳೂರು ಕಮಿಷನರಿಗೆ ದೂರು

ಮಂಗಳೂರು: ಚರ್ಚ್ ಪಾದ್ರಿ ವಿರುದ್ಧ 50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆರೋಪ ; ಒಡನಾಡಿ ಸಂಸ್ಥೆಯಿಂದ ಮಂಗಳೂರು ಕಮಿಷನರಿಗೆ ದೂರು

October 15, 2026
ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಂಗಳೂರಿನ ಯುಟ್ಯೂಬರ್ ವಿರುದ್ಧ ಕ್ರಮಕ್ಕೆ ಆಗ್ರಹ!!

ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಂಗಳೂರಿನ ಯುಟ್ಯೂಬರ್ ವಿರುದ್ಧ ಕ್ರಮಕ್ಕೆ ಆಗ್ರಹ!!

October 14, 2026
ಮಂಗಳೂರು ಏರ್ ಪೋರ್ಟ್ ನಲ್ಲಿ ಟೂರಿಸ್ಟ್ ವಾಹನಗಳಿಂದ ದುಬಾರಿ ಶುಲ್ಕ ವಸೂಲಿ: ಟ್ಯಾಕ್ಸಿ ಚಾಲಕರಿಂದ 10 ದಿನಗಳ ಗಡುವು, ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ

ಮಂಗಳೂರು ಏರ್ ಪೋರ್ಟ್ ನಲ್ಲಿ ಟೂರಿಸ್ಟ್ ವಾಹನಗಳಿಂದ ದುಬಾರಿ ಶುಲ್ಕ ವಸೂಲಿ: ಟ್ಯಾಕ್ಸಿ ಚಾಲಕರಿಂದ 10 ದಿನಗಳ ಗಡುವು, ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ

October 14, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d