• About us
  • Contact us
  • Disclaimer
Friday, October 16, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಚಿನ್ನಾಭರಣಗಳ ಹಾಗೂ ಎಲೆಕ್ಟ್ರಾನಿಕ್ ಅಂಗಡಿಗಳಿಗೆ ನಕಲಿ ಚೆಕ್ ನೀಡಿ ವಂಚಿಸುತ್ತಿದ್ದ ವಂಚಕಿ ಫರೀದಾ ಬೇಗಂ ಅರೆಸ್ಟ್

Coastal Times by Coastal Times
October 20, 2025
in ಕ್ರೈಮ್ ನ್ಯೂಸ್
ಚಿನ್ನಾಭರಣಗಳ ಹಾಗೂ ಎಲೆಕ್ಟ್ರಾನಿಕ್ ಅಂಗಡಿಗಳಿಗೆ ನಕಲಿ ಚೆಕ್ ನೀಡಿ ವಂಚಿಸುತ್ತಿದ್ದ ವಂಚಕಿ ಫರೀದಾ ಬೇಗಂ ಅರೆಸ್ಟ್
69
VIEWS
WhatsappTelegramShare on FacebookShare on Twitter

ಮಂಗಳೂರು, ಅ.19 : ಮಂಗಳೂರು ನಗರ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ವಿವಿಧೆಡೆ ದಾಖಲಾದ ಒಟ್ಟು 9 ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ವಂಚಕಿ ಫರೀದಾ ಬೇಗಂ ಎಂಬಾಕೆಯನ್ನು ಬರ್ಕೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಮಂಗಳೂರು ನಗರದ ಎಂಪಾಯರ್ ಮಾಲ್ ನಲ್ಲಿ ಲ್ಯಾಪ್ ಟಾಪ್ ಬಜಾರ್ ಎಂಬ ಸ್ಟೋರ್ ಇಟ್ಟುಕೊಂಡು ಎಲ್ಲಾ ಕಂಪನಿಗಳ ಲ್ಯಾಪ್ ಟಾಪ್ ಗಳನ್ನು ಸೇಲ್ಸ್ ಮತ್ತು ಸರ್ವೀಸ್ ಮಾಡಿಕೊಂಡಿದ್ದ ಜಯರಾಮ ಎಂಬವರಿಗೆ ಮೋಸಗೊಳಿಸಿದ ಪ್ರಕರಣದಲ್ಲಿ ಪೊಲೀಸರು ಆರೋಪಿ ಮಹಿಳೆಯನ್ನು ಬಂಧಿಸಿದ್ದಾರೆ. ಜಯರಾಮ ಅವರಿಗೆ ಸೇರಿದ ಈ ಶಾಪ್ ನಿಂದ ಆಪಲ್ ಕಂಪನಿಯ Macbook pro A2141 ಲ್ಯಾಪ್ ಟಾಪ್, ಡೆಲ್ ಕಂಪನಿಯ Dell 5440/Core i5-13/16GB ಲ್ಯಾಪ್ ಟಾಪ್ ಮತ್ತು ಆಪಲ್ ಕಂಪನಿಯ Macbook pro 2442 2021 M1 PRO ಲ್ಯಾಪ್ ಟಾಪ್ ಅನ್ನು ಆರೋಪಿತೆ ಫರೀದಾ ಬೇಗಂ ತನ್ನ ಪರಿಚಯದ ವ್ಯಕ್ತಿಯ ಮೂಲಕ ಮಾನ್ಯತೆ ಇಲ್ಲದ ಚೆಕ್ ಗಳನ್ನು ನೀಡಿ ಲ್ಯಾಪ್ ಟಾಪ್ ಗಳನ್ನು ಖರೀದಿಸಿ ಪಿರ್ಯಾದಿದಾರಿಗೆ ಒಟ್ಟು ರೂ 1,98,000/- ರೂ. ಹಣವನ್ನು ಪಾವತಿಸದೇ ಮೋಸ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿತ್ತು.

ಬರ್ಕೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮೋಹನ ಕೊಟ್ಟಾರಿ ನೇತೃತ್ವದಲ್ಲಿ ಪ್ರಕರಣದ ತನಿಖಾಧಿಕಾರಿ ವಿನಾಯಕ ತೊರಗಲ್ ಮತ್ತು ಮಹಿಳಾ ಸಿಬ್ಬಂದಿಗಳ ಮೂಲಕ ಪತ್ತೆ ಮಾಡಿ ಮಹಿಳೆಯನ್ನು ಬಂಧಿಸಿದ್ದಾರೆ. ಫರಿದಾ  ಬೇಗಂ (28) ಮಂಗಳೂರು ತಾಲೂಕಿನ ಕುಪ್ಪೆಪದವು ನಿವಾಸಿಯಾಗಿದ್ದು ನ್ಯಾಯಾಲಯವು ನ.3ರ ವರೆಗೆ  ನ್ಯಾಯಾಂಗ ಬಂಧನ ವಿಧಿಸಿದೆ.‌

ಮುತ್ತೂರು ಗ್ರಾಮದ ಫರೀದಾ ಕುಪ್ಪೆಪದವು ನಿವಾಸಿಯಾಗಿದ್ದು, ರಮೀಜ್ ರಾಜ್ ಎಂಬುವವರನ್ನು ವಿವಾಹವಾಗಿದ್ದಾರೆ. ತನಿಖೆಯಿಂದ ಇದು ಆಕೆಯ ಏಕೈಕ ಅಪರಾಧವಲ್ಲ ಎಂದು ತಿಳಿದುಬಂದಿದೆ. ಫರೀದಾ ಒಟ್ಟು ಒಂಬತ್ತು ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಪ್ರತಿಯೊಂದೂ ಒಂದೇ ರೀತಿಯ ವಂಚನೆ ಪ್ರಕರಣಗಳನ್ನು ಒಳಗೊಂಡಿದೆ.

ಆರೋಪಿ ಮಹಿಳೆ ಪ್ರತಿಷ್ಠಿತ ಚಿನ್ನಾಭರಣಗಳ ಹಾಗೂ ಎಲೆಕ್ಟ್ರಾನಿಕ್ ಅಂಗಡಿಗಳಿಗೆ ಭೇಟಿ ನೀಡಿ ತನ್ನ ಮಾತುಗಳಿಂದ ಅಂಗಡಿ ಮಾಲಕರನ್ನು ನಂಬಿಸಿ, ವಿವಿಧ ಬ್ಯಾಂಕ್ ಗಳ ಮಾನ್ಯತೆ ಇಲ್ಲದ ಚೆಕ್ ಗಳನ್ನು ನೀಡಿ ಬೆಲೆಬಾಳುವ ಸೊತ್ತುಗಳನ್ನು ಖರೀದಿಸಿ ಮೋಸಗೊಳಿಸಿದ ಬಗ್ಗೆ ಬರ್ಕೆ ಪೊಲೀಸ್ ಠಾಣೆ, ಕಾವೂರು, ಬಜಪೆ, ಮೂಡಬಿದ್ರೆ, ಮುಲ್ಕಿ ಪೊಲೀಸ್ ಠಾಣೆಯಲ್ಲಿ ತಲಾ ಒಂದೊಂದು ಮೋಸ, ವಂಚನೆಯ ಪ್ರಕರಣಗಳು ಮತ್ತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ 3 ಪ್ರಕರಣಗಳು ಹಾಗೂ ಉಡುಪಿ ಜಿಲ್ಲೆಯ ಶಿರ್ವ ಪೊಲೀಸ್ ಠಾಣೆಯಲ್ಲಿ ಒಂದು ಮೋಸ ವಂಚನೆಯ ಪ್ರಕರಣವು  ದಾಖಲಾಗಿರುತ್ತದೆ.

ಅಲ್ಲದೇ ಆರೋಪಿ ಫರೀದಾ ಬೇಗಂ ಮುಲ್ಕಿ ಪೊಲೀಸ್ ಠಾಣೆಯ ಪ್ರಕರಣದಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದು ಪ್ರಕರಣದ ವಿಚಾರಣೆಗೆ ಹಾಜರಾಗದೇ ಇದ್ದುದರಿಂದ ವಾರೆಂಟ್ ಹೊರಡಿಸಿತ್ತು.ಕಾವೂರು ಮತ್ತು ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಗಳಲ್ಲಿ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದಳು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ಯುವತಿಯರ ವೀಡಿಯೋ ಬಳಸಿ ಹನಿಟ್ರ್ಯಾಪ್, ಡೆತ್ ನೋಟಲ್ಲಿದ್ದ ನರ್ಸ್ ನಿರೀಕ್ಷಾ ಬಂಧನ

Next Post

ಕುಂಪಲ ಅಪ್ರಾಪ್ತೆ ಮೇಲೆ ಮಲತಂದೆಯಿಂದಲೇ ನಿರಂತರ ಅತ್ಯಾಚಾರ ಪೋಕ್ಸೊ ಕಾಯ್ದೆಯಡಿ ಆರೋಪಿ ಬಂಧನ

Related Posts

ಮಂಗಳೂರು: ಚರ್ಚ್ ಪಾದ್ರಿ ವಿರುದ್ಧ 50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆರೋಪ ; ಒಡನಾಡಿ ಸಂಸ್ಥೆಯಿಂದ ಮಂಗಳೂರು ಕಮಿಷನರಿಗೆ ದೂರು
ಕ್ರೈಮ್ ನ್ಯೂಸ್

ಮಂಗಳೂರು: ಚರ್ಚ್ ಪಾದ್ರಿ ವಿರುದ್ಧ 50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆರೋಪ ; ಒಡನಾಡಿ ಸಂಸ್ಥೆಯಿಂದ ಮಂಗಳೂರು ಕಮಿಷನರಿಗೆ ದೂರು

October 15, 2026
213
ಪೆಹಲ್ಗಾಮ್ ಹತ್ಯಾಕಾಂಡದ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಮುಂಬೈ ಪೊಲೀಸ್ ಸೋಗಿನಲ್ಲಿ ಪುತ್ತೂರಿನ ವ್ಯಕ್ತಿಯೊಬ್ಬರಿಗೆ 1.3 ಕೋಟಿ ರೂ. ವಂಚನೆ!
ಕ್ರೈಮ್ ನ್ಯೂಸ್

ಪೆಹಲ್ಗಾಮ್ ಹತ್ಯಾಕಾಂಡದ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಮುಂಬೈ ಪೊಲೀಸ್ ಸೋಗಿನಲ್ಲಿ ಪುತ್ತೂರಿನ ವ್ಯಕ್ತಿಯೊಬ್ಬರಿಗೆ 1.3 ಕೋಟಿ ರೂ. ವಂಚನೆ!

October 13, 2026
29
Next Post
ಕುಂಪಲ ಅಪ್ರಾಪ್ತೆ ಮೇಲೆ ಮಲತಂದೆಯಿಂದಲೇ ನಿರಂತರ ಅತ್ಯಾಚಾರ ಪೋಕ್ಸೊ ಕಾಯ್ದೆಯಡಿ ಆರೋಪಿ ಬಂಧನ

ಕುಂಪಲ ಅಪ್ರಾಪ್ತೆ ಮೇಲೆ ಮಲತಂದೆಯಿಂದಲೇ ನಿರಂತರ ಅತ್ಯಾಚಾರ ಪೋಕ್ಸೊ ಕಾಯ್ದೆಯಡಿ ಆರೋಪಿ ಬಂಧನ

Discussion about this post

Recent News

ಮಂಗಳೂರು: ಚರ್ಚ್ ಪಾದ್ರಿ ವಿರುದ್ಧ 50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆರೋಪ ; ಒಡನಾಡಿ ಸಂಸ್ಥೆಯಿಂದ ಮಂಗಳೂರು ಕಮಿಷನರಿಗೆ ದೂರು

ಮಂಗಳೂರು: ಚರ್ಚ್ ಪಾದ್ರಿ ವಿರುದ್ಧ 50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆರೋಪ ; ಒಡನಾಡಿ ಸಂಸ್ಥೆಯಿಂದ ಮಂಗಳೂರು ಕಮಿಷನರಿಗೆ ದೂರು

October 15, 2026
213
ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಂಗಳೂರಿನ ಯುಟ್ಯೂಬರ್ ವಿರುದ್ಧ ಕ್ರಮಕ್ಕೆ ಆಗ್ರಹ!!

ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಂಗಳೂರಿನ ಯುಟ್ಯೂಬರ್ ವಿರುದ್ಧ ಕ್ರಮಕ್ಕೆ ಆಗ್ರಹ!!

October 14, 2026
133
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಚರ್ಚ್ ಪಾದ್ರಿ ವಿರುದ್ಧ 50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆರೋಪ ; ಒಡನಾಡಿ ಸಂಸ್ಥೆಯಿಂದ ಮಂಗಳೂರು ಕಮಿಷನರಿಗೆ ದೂರು

ಮಂಗಳೂರು: ಚರ್ಚ್ ಪಾದ್ರಿ ವಿರುದ್ಧ 50ಕ್ಕೂ ಹೆಚ್ಚು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆರೋಪ ; ಒಡನಾಡಿ ಸಂಸ್ಥೆಯಿಂದ ಮಂಗಳೂರು ಕಮಿಷನರಿಗೆ ದೂರು

October 15, 2026
ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಂಗಳೂರಿನ ಯುಟ್ಯೂಬರ್ ವಿರುದ್ಧ ಕ್ರಮಕ್ಕೆ ಆಗ್ರಹ!!

ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಂಗಳೂರಿನ ಯುಟ್ಯೂಬರ್ ವಿರುದ್ಧ ಕ್ರಮಕ್ಕೆ ಆಗ್ರಹ!!

October 14, 2026
ಮಂಗಳೂರು ಏರ್ ಪೋರ್ಟ್ ನಲ್ಲಿ ಟೂರಿಸ್ಟ್ ವಾಹನಗಳಿಂದ ದುಬಾರಿ ಶುಲ್ಕ ವಸೂಲಿ: ಟ್ಯಾಕ್ಸಿ ಚಾಲಕರಿಂದ 10 ದಿನಗಳ ಗಡುವು, ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ

ಮಂಗಳೂರು ಏರ್ ಪೋರ್ಟ್ ನಲ್ಲಿ ಟೂರಿಸ್ಟ್ ವಾಹನಗಳಿಂದ ದುಬಾರಿ ಶುಲ್ಕ ವಸೂಲಿ: ಟ್ಯಾಕ್ಸಿ ಚಾಲಕರಿಂದ 10 ದಿನಗಳ ಗಡುವು, ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ

October 14, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d