• About us
  • Contact us
  • Disclaimer
Tuesday, August 11, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸೌದಿಯಲ್ಲಿ ಹ್ಯಾಕರ್‌ಗಳ ಸುಳಿಗೆ ಸಿಲುಕಿ ಬಂಧಿಯಾಗಿದ್ದ ಕಡಬದ ಯುವಕ ಬಂಧಮುಕ್ತ – ಇಂದು ಸ್ವದೇಶಕ್ಕೆ ಆಗಮನ

Coastal Times by Coastal Times
November 20, 2023
in ರಾಷ್ಟ್ರೀಯ ಸುದ್ದಿ
ಸೌದಿಯಲ್ಲಿ ಹ್ಯಾಕರ್‌ಗಳ ಸುಳಿಗೆ ಸಿಲುಕಿ ಬಂಧಿಯಾಗಿದ್ದ ಕಡಬದ ಯುವಕ ಬಂಧಮುಕ್ತ – ಇಂದು ಸ್ವದೇಶಕ್ಕೆ ಆಗಮನ
119
VIEWS
WhatsappTelegramShare on FacebookShare on Twitter

ಕಡಬ, ನ 12 : ಸೌದಿ ಅರೇಬಿಯಾದ ರಿಯಾದ್‌ನ ಜೈಲಿನಲ್ಲಿ ಕಳೆದ 11 ತಿಂಗಳಿನಿಂದ ಬ್ಯಾಂಕ್‌ ಖಾತೆ ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಂಚನೆ ಆರೋಪಕ್ಕೆ ಒಳಗಾಗಿ ಬಂಧಿಯಾಗಿದ್ದ ಕಡಬದ ಯುವಕ ಚಂದ್ರಶೇಖರ್‌ ಬಂಧಮುಕ್ತನಾಗಿದ್ದು, ಇಂದು (ನ. 20) ಸ್ವದೇಶಕ್ಕೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಚಂದ್ರಶೇಖರ್‌ ಅವರನ್ನು ಸೌದಿ ಅರೇಬಿಯಾದ ರಿಯಾದ್‌ನಿಂದ ಅಲ್ಲಿನ ಪೊಲೀಸರು ವಿಮಾನದಲ್ಲಿ ಮುಂಬಯಿಗೆ ಕಳುಹಿಸಿಕೊಡಲಿದ್ದು, ಅಲ್ಲಿಂದ ಅವರು ಸಂಜೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ ಎಂದು ವರದಿಯಾಗಿದೆ,

ಇನ್ನು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಚಂದ್ರಶೇಖರ್‌ ಕೆಲಸದಲ್ಲಿ ಪದೋನ್ನತಿ ಪಡೆದು ಸೌದಿ ಅರೇಬಿಯಾಕ್ಕೆ 2022ರಲ್ಲಿ ತೆರಳಿದ್ದರು. ಅಲ್ಲಿ 2022ರ ನವೆಂಬರ್‌ನಲ್ಲಿ ಮೊಬೈಲ್‌ ಮತ್ತು ಸಿಮ್‌ ಖರೀದಿಗೆ ಅಂಗಡಿಗೆ ಭೇಟಿ ನೀಡಿದ್ದು ಅರ್ಜಿಯೊಂದಕ್ಕೆ ಎರಡು ಬಾರಿ ಹೆಬ್ಬೆಟ್ಟು (ತಂಬ್‌) ಸಹಿ ನೀಡಿದ್ದರು. ವಾರದ ಬಳಿಕ ಅವರಿಗೆ ಅರೇಬಿಕ್‌ ಭಾಷೆಯಲ್ಲಿ ಹೊಸ ದೂರವಾಣಿ ಸಂಖ್ಯೆಗೆ ಸಂದೇಶ ಬಂದಿತ್ತು. ಅದನ್ನು ತೆರೆದು ಚಂದ್ರಶೇಖರ್‌ ನೋಡಿದ್ದರು. 2 ದಿನಗಳ ನಂತರ ದೂರವಾಣಿ ಕರೆ ಬಂದು ಸಿಮ್‌ನ ಬಗ್ಗೆ ಮಾಹಿತಿ ಕೇಳಲಾಗಿತ್ತು. ಒಟಿಪಿ ತಿಳಿಸಿದ್ದರು. ವಾರದ ಬಳಿಕ ಅಲ್ಲಿನ ಪೊಲೀಸರು ಬಂದು ಚಂದ್ರಶೇಖರ್‌ ಅವರನ್ನು ಬಂಧಿಸಿದ್ದರು.

ಚಂದ್ರಶೇಖರ್‌ ಅವರನ್ನು ಬಂಧಿಸಲು ಕಾರಣ ಏನೆಂದರೆ ಅವರಿಗೆ ತಿಳಿಯದಂತೆ ಅಲ್ಲಿನ ಬ್ಯಾಂಕೊಂದರಲ್ಲಿ ಅವರದೇ ಹೆಸರಿನಲ್ಲಿ ಹ್ಯಾಕರ್‌ಗಳು ಖಾತೆ ತೆರೆದಿದ್ದರು. ಅಲ್ಲಿನ ಮಹಿಳೆಯೊಬ್ಬರ ಖಾತೆಯಿಂದ ಚಂದ್ರಶೇಖರ್‌ ಖಾತೆಗೆ 22 ಸಾವಿರ ರಿಯಲ್‌ ಜಮೆಯಾಗಿ, ಅದರಿಂದ ಕೂಡಲೇ ಬೇರೆ ಯಾವುದೋ ದೇಶಕ್ಕೆ ಆ ಹಣ ವರ್ಗಾವಣೆಯಾಗಿತ್ತು.

ಇನ್ನು ಹಣ ಕಳೆದುಕೊಂಡ ಮಹಿಳೆಯು ಚಂದ್ರಶೇಖರ್‌ ಅವರ ಖಾತೆಗೆ ಹಣ ಜಮೆಯಾಗಿರುವುದನ್ನು ಗಮನಿಸಿ ಪೊಲೀಸರಿಗೆ ದೂರು ನೀಡಿದ್ದರು. ಆ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿತ್ತು. ಬಂಧನವಾಗಿರುವ ಬಗ್ಗೆ ಚಂದ್ರಶೇಖರ್‌ ಅವರ ಗೆಳೆಯರು ಮನೆಯವರಿಗೆ ತಿಳಿಸಿದ್ದರು. ಜೈಲಿನಲ್ಲಿ ಇರುವ ವೇಳೆ ದಿನದಲ್ಲಿ ಕೇವಲ 2 ನಿಮಿಷ ಮಾತ್ರ ದೂರವಾಣಿ ಕರೆ ಮಾಡಲು ಚಂದ್ರಶೇಖರ್‌ ಅವರಿಗೆ ಅವಕಾಶ ನೀಡಲಾಗಿತ್ತು. ಅಲ್ಲಿನ ಸ್ನೇಹಿತರಿಗೂ ಅವರನ್ನು ಭೇಟಿಯಾಗಲು ಅವಕಾಶವಿರಲಿಲ್ಲ. ಇದೀಗ ಚಂದ್ರಶೇಖರ್‌ ಅವರು ನಿರಪರಾಧಿ ಎಂದು ತಿಳಿದು ಬಂಧಮುಕ್ತ ಮಾಡಲಾಗಿದೆ.

ಅಗಷ್ಟ್‌ ತಿಂಗಳ ಮಧ್ಯ ಭಾಗದಲ್ಲಿ ಕನ್ನಡದ ಪ್ರತಿಷ್ಟಿತ ಚಾನೆಲ್‌ʼನ ಸುದ್ದಿ ನಿರೂಪಕರೊಬ್ಬರು ಘಟನೆಯ ಕುರಿತು ದ.ಕ. ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರ ಗಮನ ಸೆಳೆದಿದ್ದರು. ಈ ವೇಳೆ ಸಂಸದರು ಟ್ವಿಟ್ ಮಾಡಿ ವಾರದೊಳಗೆ ಯುವಕನನ್ನು ಕರೆ ತರುವುದಾಗಿ ಕುಟುಂಬಸ್ಥರಿಗೆ ಭರವಸೆ ನೀಡಿದ್ದರು. ಆದರೇ ಅವರ ಪ್ರಯತ್ನ ಕೇವಲ ಟ್ವೀಟ್‌ ಗೆ ಸೀಮಿತವಾಗಿತ್ತು ಬಿಟ್ಟರೆ ಬೇರಾವುದೇ ಪ್ರಯತ್ನ ಮಾಡಿಲ್ಲ ಎಂದು ಚಂದ್ರಶೇಖರ್ ಕುಟುಂಬಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ದುಬೈನಿಂದ ಮಂಗಳೂರಿಗೆ ಅಕ್ರಮ ಚಿನ್ನ ಸಾಗಾಟ- 69 ಲಕ್ಷ ರೂ. ಮೌಲ್ಯದ ಚಿನ್ನ ಕಸ್ಟಮ್ಸ್ ಅಧಿಕಾರಿಗಳ ವಶ

Next Post

ಉಡುಪಿ: ನೇಜಾರು ಹತ್ಯೆ ಬಗ್ಗೆ ಫೇಸ್ ಬುಕ್‌‌ನಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಂಚಿಕೊಂಡಾತನ ವಿರುದ್ಧ ಸುಮೋಟೋ ಕೇಸ್

Related Posts

ಬಂಧನಕ್ಕೊಳಗಾದ ಕೆಲವೇ ಗಂಟೆಯಲ್ಲಿ ಉದಯನಿಧಿ ಸ್ಟಾಲಿನ್ ಬಿಡುಗಡೆ ಮಾಡಿ ಪೊಲೀಸರಿಗೆ ಮದ್ರಾಸ್ ಹೈಕೋರ್ಟ್ ಆದೇಶ
ರಾಷ್ಟ್ರೀಯ ಸುದ್ದಿ

ಬಂಧನಕ್ಕೊಳಗಾದ ಕೆಲವೇ ಗಂಟೆಯಲ್ಲಿ ಉದಯನಿಧಿ ಸ್ಟಾಲಿನ್ ಬಿಡುಗಡೆ ಮಾಡಿ ಪೊಲೀಸರಿಗೆ ಮದ್ರಾಸ್ ಹೈಕೋರ್ಟ್ ಆದೇಶ

August 4, 2026
40
ರೂ.1 ಕೋಟಿ ಸಂಬಳದ AI ಉದ್ಯೋಗ ಗಿಟ್ಟಿಸಿಕೊಂಡ ಯುವಕ: ಕಿವುಡ ಮತ್ತು ಮೂಕ ತಂದೆಯ ಕನಸನ್ನು ನನಸಾಗಿಸಿದ ಮಗ
ರಾಷ್ಟ್ರೀಯ ಸುದ್ದಿ

ರೂ.1 ಕೋಟಿ ಸಂಬಳದ AI ಉದ್ಯೋಗ ಗಿಟ್ಟಿಸಿಕೊಂಡ ಯುವಕ: ಕಿವುಡ ಮತ್ತು ಮೂಕ ತಂದೆಯ ಕನಸನ್ನು ನನಸಾಗಿಸಿದ ಮಗ

July 28, 2026
68
Next Post
ಉಡುಪಿ: ನೇಜಾರು ಹತ್ಯೆ ಬಗ್ಗೆ ಫೇಸ್ ಬುಕ್‌‌ನಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಂಚಿಕೊಂಡಾತನ ವಿರುದ್ಧ ಸುಮೋಟೋ ಕೇಸ್

ಉಡುಪಿ: ನೇಜಾರು ಹತ್ಯೆ ಬಗ್ಗೆ ಫೇಸ್ ಬುಕ್‌‌ನಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಂಚಿಕೊಂಡಾತನ ವಿರುದ್ಧ ಸುಮೋಟೋ ಕೇಸ್

Discussion about this post

Recent News

55.8 ಕೋಟಿ ಮೌಲ್ಯದ ಒಟ್ಟು 200 ಕೆಜಿಗೂ ಅಧಿಕ ಮಾದಕವಸ್ತು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು: 39 ಆರೋಪಿಗಳು ಸೆರೆ

55.8 ಕೋಟಿ ಮೌಲ್ಯದ ಒಟ್ಟು 200 ಕೆಜಿಗೂ ಅಧಿಕ ಮಾದಕವಸ್ತು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು: 39 ಆರೋಪಿಗಳು ಸೆರೆ

August 10, 2026
37
ಗಾಲ್ಫ್ ಆಟಕ್ಕೆ ನೂತನ ಅಲೈನ್‌ಮೆಂಟ್ ಸಾಧನಗಳ ಪರಿಚಯ ಮಾಡಿದ ಮಂಗಳೂರು ಮೂಲದ ಡಾ. ದಿನಕರ್ ರೈ

ಗಾಲ್ಫ್ ಆಟಕ್ಕೆ ನೂತನ ಅಲೈನ್‌ಮೆಂಟ್ ಸಾಧನಗಳ ಪರಿಚಯ ಮಾಡಿದ ಮಂಗಳೂರು ಮೂಲದ ಡಾ. ದಿನಕರ್ ರೈ

August 10, 2026
14
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

55.8 ಕೋಟಿ ಮೌಲ್ಯದ ಒಟ್ಟು 200 ಕೆಜಿಗೂ ಅಧಿಕ ಮಾದಕವಸ್ತು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು: 39 ಆರೋಪಿಗಳು ಸೆರೆ

55.8 ಕೋಟಿ ಮೌಲ್ಯದ ಒಟ್ಟು 200 ಕೆಜಿಗೂ ಅಧಿಕ ಮಾದಕವಸ್ತು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು: 39 ಆರೋಪಿಗಳು ಸೆರೆ

August 10, 2026
ಗಾಲ್ಫ್ ಆಟಕ್ಕೆ ನೂತನ ಅಲೈನ್‌ಮೆಂಟ್ ಸಾಧನಗಳ ಪರಿಚಯ ಮಾಡಿದ ಮಂಗಳೂರು ಮೂಲದ ಡಾ. ದಿನಕರ್ ರೈ

ಗಾಲ್ಫ್ ಆಟಕ್ಕೆ ನೂತನ ಅಲೈನ್‌ಮೆಂಟ್ ಸಾಧನಗಳ ಪರಿಚಯ ಮಾಡಿದ ಮಂಗಳೂರು ಮೂಲದ ಡಾ. ದಿನಕರ್ ರೈ

August 10, 2026
ಕಾಂಗ್ರೆಸ್‌ ಮುಖಂಡ, ಡೇವಿಡ್ ಡಿಸೋಜಾ ಹತ್ಯೆ;‌ ಹಂತಕನ ಕಾಲಿಗೆ ಗುಂಡೇಟು, ಸುಪಾರಿ ಕೊಟ್ಟವರು ಯಾರು?

ಕಾಂಗ್ರೆಸ್‌ ಮುಖಂಡ, ಡೇವಿಡ್ ಡಿಸೋಜಾ ಹತ್ಯೆ;‌ ಹಂತಕನ ಕಾಲಿಗೆ ಗುಂಡೇಟು, ಸುಪಾರಿ ಕೊಟ್ಟವರು ಯಾರು?

August 8, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d