ಉಜಿರೆ: ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಸಂದರ್ಭದಲ್ಲಿ ಬುಧವಾರ ಆಯೋಜಿಸಿದ್ದ ಸಾಹಿತ್ಯ ಸಮ್ಮೇಳನದ 93ನೇ ಅಧಿವೇಶನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕನ್ನಡ ಬಳಕೆಯಿಂದ ಮಾತ್ರವೇ ಕನ್ನಡ ಬೆಳೆಸಲು ಸಾಧ್ಯ ಎಂದು ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಹೇಳಿದರು.

ಕನ್ನಡಕ್ಕೆ ಸ್ವಂತ ಲಿಪಿ ಇದ್ದು, ಎಲ್ಲ ದೃಷ್ಟಿ ಯಿಂದಲೂ ಕನ್ನಡ ಅತ್ಯಂತ ಪರಿಪೂರ್ಣ, ಸಮೃದ್ಧಹಾಗೂ ಸುಂದರ ಭಾಷೆಯಾಗಿದೆ. ಆದರೆ, ಕನ್ನಡಕ್ಕೆ ದೊಡ್ಡ ಸವಾಲು ಬಳಕೆ ಇಲ್ಲದಿರುವುದು. ಕನ್ನಡ ಉಳಿಸಬೇಕಾದರೆ ಭಾಷಾಶುದ್ಧಿಯೊಂದಿಗೆ ಮನೆಯಲ್ಲಿ ಹಾಗೂ ವ್ಯವಹಾರದಲ್ಲಿ ನಿತ್ಯವೂ ಬಳಸ ಬೇಕು. ಭಾಷೆ ಸ್ವಚ್ಛವಾಗಿದ್ದರೆ ಸಾಹಿತ್ಯವೂ ಸ್ವಚ್ಛವಾಗಿರುತ್ತದೆ. ದಿನನಿ ತ್ಯವೂ ನಾವು ಬೆಳಗ್ಗೆ ಹಲ್ಲು ಮತ್ತು ಮುಖ ಉಜ್ಜುವಂತೆ ನಾಲಗೆಯನ್ನೂ ಉಜ್ಜಬೇಕು. ಆಗ ಸ್ವಚ್ಛ ಕನ್ನಡ ಮಾತನಾಡಲು ಸಾಧ್ಯವಾಗುತ್ತದೆ. ಸಾಹಿತ್ಯ ಪುಸ್ತಕಕ್ಕೆ ಮಾತ್ರ ಸೀಮಿತವಾಗಬಾ ರದು, ಸಾಹಿತ್ಯವು ದೈನಂದಿನ ಬದುಕು ಮತ್ತು ಸಮಾಜಕ್ಕೆ ಸಂಬಂಧಪಟ್ಟಿದೆ. ಇಂಗ್ಲಿಷ್ ಪದಗಳ ಬಳಕೆಯಿಂದ ಕನ್ನಡವು ಅಪಾಯದ ಅಂಚಿನಲ್ಲಿದೆ ಎಂದು ಎಚ್ಚರಿಕೆ ನೀಡಿದರು.
ಬುರುಡೆಗಳು ಬರಿದಾಗಿವೆ : ಧರ್ಮಸ್ಥಳದ ಬಗ್ಗೆ ಇದ್ದ ಸಂಶಯದ ಗುಂಡಿಗಳೆಲ್ಲಾ ಮುಚ್ಚಿಹೋಗಿವೆ. ಬುರುಡೆ ಗಳು ಬರಿದಾಗಿವೆ. ಸುಳ್ಳು ಮಲಗಿದೆ, ಸತ್ಯ ಗೆದ್ದಿದೆ. ತನ್ಮೂಲಕ ಧರ್ಮಸ್ಥಳ ಕ್ಷೇತ್ರ ಮಹಾತ್ಮ ಪ್ರಕಟವಾಗಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ನಗುಮೊಗ, ಸ್ಥಿತಪ್ರಜ್ಞೆ ಮತ್ತು ನಿಷ್ಕಳಂಕ ವ್ಯಕ್ತಿತ್ವದಿಂದ ಅವರು ಮತ್ತೆ ಶೋಭಾಯಮಾ ನವಾಗಿ ಬೆಳಗುತ್ತಿದ್ದಾರೆ. ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹದಿಂದ ಶ್ರೀ ಕ್ಷೇತ್ರವು ಅಂತಾರಾಷ್ಟ್ರೀಯ ಮಟ್ಟದ ಧಾರ್ಮಿಕ ಶ್ರದ್ಧಾಕೇಂದ್ರವಾಗಿ ಇನ್ನಷ್ಟು ಬೆಳೆಯಲಿ, ಬೆಳಗಲಿ ಎಂದು ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಹೇಳಿದರು.

ಮಾನವೀಯತೆ ಮೂಡಿಸುವುದೇ ಸಾಹಿತ್ಯದ ಉದ್ದೇಶ : ಸಾಹಿತ್ಯ ಮತ್ತು ಜೀವನಕ್ಕೆ ಅವಿನಾಭಾವ ಸಂಬಂಧವಿದ್ದು, ಸರ್ವರ ಹಿತವನ್ನು ಬಯಸುವ ಸಾಹಿತ್ಯ ಸಾತ್ವಿಕವಾದ, ಸಭ್ಯ, ಸುಸಂಸ್ಕೃತ ಸಮಾಜವನ್ನು ನಿರ್ಮಾಣ ಮಾಡುತ್ತದೆ ಎಂದು ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಹೇಳಿದರು. ಪ್ರಾಸ್ತಾವಿಕ ಮಾತುಗಳೊಂದಿಗೆ ಎಲ್ಲರನ್ನೂ ಸ್ವಾಗತಿಸಿದ ಅವರು, ರಾಮಾಯಣ, ಮಹಾಭಾರತ ಗಳಿಂದ ಹಿಡಿದು ಆಧುನಿಕ ಸಾಹಿತ್ಯದ ತನಕ ಸಾಹಿತ್ಯ ಆದರ್ಶ ಜೀವನವನ್ನು ರೂಪಿ ಸುತ್ತಾ ಬಂದಿದೆ. ಪುರಾಣಕಥೆಗಳು, ಧಾರ್ಮಿಕಕಥೆಗಳು ಮಾನವನ ಮೇಲೆ ಗಾಢ ಪರಿಣಾಮ ಬೀರಿ ಸನ್ಮಾರ್ಗದಲ್ಲಿ ನಡೆಯಲು ಪ್ರೇರಣೆ ನೀಡುತ್ತವೆ. ಸಾಹಿತ್ಯವು ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತದೆ. ಇಂದಿನ ಆಧುನಿಕ ಶಿಕ್ಷಣ ಪದ್ಧತಿಯಲ್ಲಿ ಸಾಹಿತ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಸಾಹಿತ್ಯವಿಲ್ಲದೆ ಜೀವನವಿಲ್ಲ, ಜನಜೀವನ ವಿಲ್ಲದೆ ಸಾಹಿತ್ಯವಿಲ್ಲ ಎಂಬ ಮಾತಿನಂತೆ, ಸಭ್ಯ, ಸುಸಂಸ್ಕೃತ ಆರೋಗ್ಯಪೂರ್ಣ ಸಮಾಜ ನಿರ್ಮಾಣದಲ್ಲಿ ಸಾಹಿತ್ಯ ಪ್ರಮುಖ ಪಾತ್ರ ವಹಿಸುತ್ತದೆ. ಸರ್ವರ ಹಿತವನ್ನು ಬಯಸುವ ಸಾಹಿತ್ಯವೇ ಶ್ರೇಷ್ಠ ಸಾಹಿತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಹಿರಿಯ ಸಾಹಿತಿ ಪ್ರೊ.ಪ್ರೇಮಶೇಖರ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಹಣ ಮತ್ತು ಬಹುಮಾನಕ್ಕಾಗಿ ಸಾಹಿತ್ಯ ರಚನೆ ಸಲ್ಲದು, ಸಮಾಜ ಕಲ್ಯಾಣಕ್ಕಾಗಿ ಪ್ರೀತಿ ಯಿಂದ ಸಾಹಿತ್ಯ ರಚನೆ ಮಾಡಬೇಕು ಎಂದು ಹೇಳಿದರು. ಇತ್ತೀಚೆಗೆ ಸಾಹಿತಿಗಳು ಬದುಕಿನ ವಾಸ್ತವದ ಬಗ್ಗೆ ತಮ್ಮ ಕೃತಿಗಳಲ್ಲಿ ಪ್ರತಿಬಿಂಬಿ ಸುವುದಿಲ್ಲ. ಏನು ನಡೆಯುತ್ತಿ ದೆಯೋ ಅದಕ್ಕೆ ವಿರುದ್ಧವಾಗಿ ಬರೆಯು ತ್ತಾರೆ. ದೇಶದ ಅಸ್ತಿತ್ವ, ಭವಿಷ್ಯ, ಮುಂದಿನ ಸವಾಲುಗಳ ಬಗ್ಗೆ ಸಾಹಿತ್ಯ ರಚಿಸುವು ಮೂಲಕ ಸಮಾಜವನ್ನು ಜಾಗೃತಿಗೊಳಿಸಬೇಕು ಎಂದು ಸಲಹೆ ನೀಡಿದರು.
ಉಜಿರೆ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್ ಅವರು ಉಪನ್ಯಾಸಕರನ್ನು ಸಮ್ಮಾನಿಸಿದರು. ಪ್ರೊ| ಪ್ರೇಮಶೇಖರ ಅವರ ಅಷ್ಟಿದ್ದ ಭಾರತ ಇಷ್ಟಾಗಿ ಹೋದ ಕರುಣಕಥೆ, 75ರ ಭಾರತ ಈ ಸಂದರ್ಭದಲ್ಲಿ ಬಿಡುಗಡೆಗೊಂಡಿತು. ಎಸ್. ಡಿ.ಎಂ.ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಡಿ. ಸುರೇಂದ್ರ ಕುಮಾರ್, ಹೇಮಾವತಿ ವಿ. ಹೆಗ್ಗಡೆ ಹಾಗೂ ಧರ್ಮಾಧಿಕಾರಿಗಳ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.
ಬೆಂಗಳೂರಿನ ವ್ಯಾಖ್ಯಾನಕಾರೆ ಶಾಂತಾ ನಾಗಮಂಗಲ, ವಿವೇಕಹಂಸ ಮಾಸಪತ್ರಿಕೆ ಸಂಪಾದಕ ಡಾ| ರಘು ವಿ., ಧಾರವಾಡದ ಸಾಹಿತಿ ಡಾ| ಬಿ.ಎಂ.ಶರಭೇಂದ್ರ ಸ್ವಾಮಿ ಉಪನ್ಯಾಸ ನೀಡಿದರು.
ಉಜಿರೆ ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ| ಸತೀಶ್ಚಂದ್ರ ಎಸ್. ಹಾಗೂ ಎಜುಕೇಶನ್ ಸೊಸೈಟಿಯ ನಿರ್ದೇಶಕ (ಯೋಜನೆಗಳು) ಡಿ. ಶ್ರೇಯಸ್ ಕುಮಾರ್ ಅವರು ಸಮ್ಮಾನ ಪತ್ರ ವಾಚಿಸಿದರು. ಎಸ್‌ಡಿಎಂ ಶಿಕ್ಷಣ ಸಂಸ್ಥೆ ಸದಸ್ಯೆ ರಾಜಶ್ರೀ ಎಸ್. ಹೆಗ್ಡೆ ವಂದಿಸಿದರು. ಪ್ರಾಧ್ಯಾಪಕ ಡಾ| ಶ್ರೀಧರ ಭಟ್ ಹಾಗೂ ಉಪನ್ಯಾಸಕ ಡಾ| ದಿವಾ ಕೊಕ್ಕಡ ಕಾರ್ಯಕ್ರಮ ನಿರ್ವಹಿಸಿದರು.
Discover more from Coastal Times Kannada
Subscribe to get the latest posts sent to your email.







Discussion about this post