ಮಂಗಳೂರು, ಡಿ.19: ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಎಂಬಿಬಿಎಸ್ ಪೂರೈಸಿ ವೈದ್ಯಕೀಯ ಇಂಟರ್ನ್ ಶಿಪ್ ನಡೆಸುತ್ತಿದ್ದ ಯುವತಿ ತನ್ನ ಕೊಠಡಿಯಲ್ಲಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.
ಮೂಲತಃ ಬೀದರ್ ಜಿಲ್ಲೆಯ ಆನಂದ್ ನಗರದ ನಿವಾಸಿ, ತೊಕ್ಕೊಟ್ಟು ಬಳಿಯ ಕುತ್ತಾರಿನಲ್ಲಿ ಅಪಾರ್ಟ್ಮೆಂಟ್ ಒಂದರಲ್ಲಿ ವಾಸವಿದ್ದ ವೈಶಾಲಿ ಗಾಯಕವಾಡ್(25) ಮೃತ ಯುವತಿ. ಈಕೆ ತನ್ನ ಎಂಬಿಬಿಎಸ್ ಕ್ಲಾಸ್ ಮೇಟ್ ಆಗಿದ್ದ ಕೇರಳದ ಪಾಲಕ್ಕಾಡ್ ಜಿಲ್ಲೆಯ ನಿವಾಸಿ ಸುಜೀಶ್ ನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ.
ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿ ಮುಗಿಸಿ ಅಲ್ಲೇ ಇಂಟನ್೯ಶಿಪ್ ನಡೆಸುತ್ತಿದ್ದರು. ಕುತ್ತಾರು ಸಿಲಿಕೋನಿಯಾ ಅಪಾಟ್೯ಮೆಂಟಿನ ರೂಮಿನಲ್ಲಿ ಫ್ಯಾ ನಿಗೆ ನೇಣುಬಿಗಿದು ಆತ್ಮಹತ್ಯೆ ನಡೆಸಿದ್ದಾರೆ. ಸುಜೀಶ್ ಕೂಡಾ ಅದೇ ಅಪಾರ್ಟ್ಮೆಂಟ್ ನಲ್ಲಿ ವಾಸವಿದ್ದ. ಸಾವಿಗೆ ಕಾರಣ ತಿಳಿದುಬಂದಿಲ್ಲ. ಉಳ್ಳಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.