• About us
  • Contact us
  • Disclaimer
Saturday, September 19, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

100ನೇ ದಿನದ ದಾಖಲೆ ಬರೆಯಲಿದೆ ಕೊಂಕಣಿಯ ‘ಅಸ್ಮಿತಾಯ್’

Coastal Times by Coastal Times
December 20, 2023
in ಸಿನಿಮಾ
100ನೇ ದಿನದ ದಾಖಲೆ ಬರೆಯಲಿದೆ ಕೊಂಕಣಿಯ ‘ಅಸ್ಮಿತಾಯ್’
83
VIEWS
WhatsappTelegramShare on FacebookShare on Twitter

ಮಂಗಳೂರು, ಡಿ.20 : ಮಾಂಡ್ ಸೊಭಾಣ್ ನಿರ್ಮಾಣದ ‘ಅಸ್ಮಿತಾಯ್’ ಕೊಂಕಣಿ ಚಲನಚಿತ್ರವು 100 ನೇ ದಿನದ ಮೈಲಿಗಲ್ಲನ್ನು 23-12-23 ರಂದು ದಾಟಲಿದೆ. ಅಂದು ಬಿಜಯ್ ಭಾರತ್ ಸಿನೆಮಾದಲ್ಲಿ ಸಂಜೆ 4.00 ಗಂಟೆಗೆ ಶತದಿನಾಚರಣೆ ನಡೆಯಲಿದೆ. ಕರ್ನಾಟಕದ ಕೊಂಕಣಿ ಚಲನಚಿತ್ರ ಕ್ಷೇತ್ರದಲ್ಲಿ ಇದುವರೆಗೆ ಶತದಿನ ಪೂರೈಸಿದ ಪ್ರಥಮ ಸಿನೆಮಾ ಎಂದು ಅಸ್ಮಿತಾಯ್ ದಾಖಲೆ ಬರೆಯಲಿದೆ. ಮುಂಬಯಿಯ ಉದ್ಯಮಿ ಹಾಗೂ ಶಿಕ್ಷಣ ಕ್ಷೇತ್ರದ ದಿಗ್ಗಜ ಆಲ್ಡೆಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷ ಆಲ್ಬರ್ಟ್ ಡಬ್ಲ್ಯೂ. ಡಿಸೋಜ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು ಸಿನೆಮಾದ ನಟ-ನಿರ್ದೇಶಕ ವರ್ಗವನ್ನು ಗೌರವಿಸಲಿದ್ದಾರೆ. ಗಿನ್ನೆಸ್ ದಾಖಲೆ ಬರೆದ ಕೊಂಕಣಿಯ ಪ್ರಮುಖ ಸಾಂಸ್ಕೃತಿಕ ಸಂಘಟನೆ ಮಾಂಡ್ ಸೊಭಾಣ್, `ಚಲನಚಿತ್ರದಿಂದ ಚಳುವಳಿ’ ಎಂಬ ಧ್ಯೇಯದೊಡನೆ ನಿರ್ಮಿಸಿದ ‘ಅಸ್ಮಿತಾಯ್’ ಚಲನಚಿತ್ರವು ಸೆಪ್ಟೆಂಬರ್ 15 ರಂದು ತೆರೆ ಕಂಡಿದ್ದು, ಇದುವರೆಗೆ ಮಂಗಳೂರು, ಉಡುಪಿ, ಉತ್ತರ ಕನ್ನಡ, ಗೋವಾ, ಮೈಸೂರು, ಬೆಂಗಳೂರು, ಕೇರಳ, ಅಹ್ಮದಾಬಾದ್, ಮುಂಬಯಿ ಹಾಗೂ ಯು.ಎ.ಇ., ಕುವೇಯ್ಟ್, ಬಹರೇಯ್ನ್, ಸೌದಿ ಅರೇಬಿಯಾ, ಕತಾರ್, ಓಮನ್,  ಆಯರ್ಲೆಂಡ್, ಆಸ್ಟ್ರೇಲಿಯಾ, ನ್ಯೂಝಿಲ್ಯಾಂಡ್, ಕೆನಡಾ, ಅಮೇರಿಕಾ, ಜರ್ಮನಿ ಹೀಗೆ 14 ದೇಶಗಳ ವಿವಿಧ ಪ್ರದೇಶಗಳಲ್ಲಿ ಸುಮಾರು 490 ಕ್ಕೂ ಮಿಕ್ಕಿ ಪ್ರದರ್ಶನ ಕಂಡಿದೆ. ವಾಷಿಂಗ್ಟನ್ ಡಿಸಿಯ ಸೌಥ್ ಏಷಿಯಾ ಚಲನಚಿತ್ರೋತ್ಸವದಲ್ಲಿ ಭಾಗಿಯಾಗಿದೆ.

ಕೊಂಕಣಿ ಜನರ ಅಸ್ಮಿತೆಯ ಹುಡುಕಾಟದ ಎಳೆಯೊಂದಿಗೆ ಸಾಗುವ ಕತೆಯು ಗೋವಾದಿಂದ ವಲಸೆ, ಕೊಂಕಣಿಯ ಶ್ರೀಮಂತ ಜನಪದ ಪರಂಪರೆಯ ದೃಶ್ಯ ವೈಭವವನ್ನು ನವಿರಾದ ಪ್ರೇಮಕತೆಯೊಂದಿಗೆ ತೋರಿಸುತ್ತದೆ. ಎರಿಕ್ ಒಝೇರಿಯೊ ಬರೆದ ಮೂಲಕತೆಗೆ ಜೊಯೆಲ್ ಪಿರೇರಾ ಚಿತ್ರಕತೆ ಮತ್ತು ಸಂಭಾಷಣೆ ರಚಿಸಿದ್ದು, ವಿಲಾಸ್ ರತ್ನಾಕರ್ ಕ್ಷತ್ರಿಯ ನಿರ್ದೇಶನ ನೀಡಿದ್ದಾರೆ. ಬಾಲರಾಜ ಗೌಡ ಸಿನೆಮಾಟೊಗ್ರಾಫಿ, ಮೇವಿನ್ ಜೊಯೆಲ್ ಪಿಂಟೊ ಸಂಕಲನ ಮಾಡಿದ್ದಾರೆ. ಮಾರ್ಕೆಟ್ ಬರ್ಡ್ ಹಾಗೂ ಕೊಮಿಡಿ ಕಂಪೆನಿ ಇವರು ಪ್ರಚಾರದ ಉಸ್ತುವಾರಿ ವಹಿಸಿದ್ದು, ವಿನೂತನ ಪರಿಕಲ್ಪನೆಗಳ ಮುಖಾಂತರ ಈ ಚಿತ್ರವನ್ನು ಜನರೆಡೆಗೆ ತಲುಪಿಸುವಲ್ಲಿ ಶ್ರಮಿಸಿದ್ದಾರೆ.

ಆರು ಹಾಡುಗಳಿಗೆ ಆಲ್ವಿನ್ ಫೆರ್ನಾಂಡಿಸ್, ಕ್ಯಾಜಿಟನ್ ಡಾಯಸ್, ಜೊಯೆಲ್ ಪಿರೇರಾ ಹಾಗೂ ಎರಿಕ್ ಒಝೇರಿಯೊ ಮುದಗೊಳಿಸುವ ಸಂಗೀತ ರಚಿಸಿದ್ದು, ಪ್ರಸಿದ್ಧ ಗಾಯಕರಾದ ನಿಹಾಲ್ ತಾವ್ರೊ, ಜೊಯ್ಸ್ ಒಝೇರಿಯೊ, ಡಿಯಲ್ ಡಿಸೋಜ, ವೈಭವ್ ಕಾಮತ್ ಮತ್ತಿತರ ಗಾಯಕರು ದನಿಗೂಡಿಸಿದ್ದಾರೆ. ಡೆನಿಸ್ ಮೊಂತೇರೊ, ಅಶ್ವಿನ್ ಡಿಕೊಸ್ತಾ, ವೆನ್ಸಿಟಾ ಡಾಯಸ್, ಪ್ರಿನ್ಸ್ ಜೇಕಬ್, ಸಾಯಿಶ್ ಪನಂದಿಕರ್, ಗೌರೀಶ್ ವೆರ್ಣೆಕರ್, ಸ್ಟ್ಯಾನಿ ಆಲ್ವಾರಿಸ್, ನೆಲ್ಲು ಪೆರ್ಮನ್ನೂರ್, ಸುನೀಲ್ ಸಿದ್ದಿ, ಲುಲು ಫೊರ್ಟೆಸ್, ನವೀನ್ ಲೋಬೊ ಹೀಗೆ ಗೋವಾ ಮತ್ತು ಮಂಗಳೂರಿನ ಖ್ಯಾತ ಕಲಾವಿದರು ಪ್ರಮುಖ ಭೂಮಿಕೆಯಲ್ಲಿದ್ದಾರೆ. ಇತರ ಸುಮಾರು 500 ಕ್ಕೂ ಮಿಕ್ಕಿ ಕಲಾವಿದರು ಪ್ರಥಮ ಬಾರಿಗೆ ಕ್ಯಾಮರಾದ ಮುಂದೆ ಕಾಣಿಸಿದ್ದಾರೆ. ಮಾಂಡ್ ಸೊಭಾಣ್ ಈ ಚಿತ್ರವನ್ನು ಜನರ, ದಾನಿಗಳ ಸಹಕಾರದಿಂದ ನಿರ್ಮಿಸಿದ್ದು ಅಧ್ಯಕ್ಷ ಲುವಿ ಜೆ ಪಿಂಟೊ ನಿರ್ಮಾಣ ಮತ್ತು ಪ್ರದರ್ಶನಗಳ ಉಸ್ತುವಾರಿ ವಹಿಸಿದ್ದಾರೆ.

ಪತ್ರಿಕಾ ಗೋಷ್ಟಿಯಲ್ಲಿ ಹಾಜರಿದ್ದವರು : ಎರಿಕ್ ಒಝೆರಿಯೊ – (ಕತೆ – ಅಸ್ಮಿತಾಯ್). ಲುವಿಸ್ ಜೆ. ಪಿಂಟೊ – (ನಿರ್ಮಾಪಕ – ಅಸ್ಮಿತಾಯ್), ಜೊಯೆಲ್ ಪಿರೇರಾ – (ಚಿತ್ರಕತೆ, ಸಂಭಾಷಣೆ – ಅಸ್ಮಿತಾಯ್), ನವೀನ್ ಲೋಬೊ – (ಕಾರ್ಯ ನಿರ್ವಾಹಕ ನಿರ್ಮಾಪಕ – ಅಸ್ಮಿತಾಯ್), ಅಶ್ವಿನ್ ಡಿಕೋಸ್ತಾ, ವೆನ್ಸಿಟಾ ಡಾಯಸ್ (ಪಾತ್ರವರ್ಗ).

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಬೆಳ್ತಂಗಡಿ ; ಕುಡಿದ ಮತ್ತಿನಲ್ಲಿ ಪತ್ನಿಯ ಕಣ್ಣು ಕಚ್ಚಿ ಕಿತ್ತು ಹಾಕಿದ ಕಟುಕ ಪತಿರಾಯ !

Next Post

ಮಂಗಳೂರು ; ಬಾಲಕಿಯ ಅಪಹರಣ, ಅತ್ಯಾಚಾರ ಪ್ರಕರಣ ; ಪೋಕ್ಸೋ ಕಾಯ್ದೆಯಡಿ ಬಂಧಿತ ಆರೋಪಿ ಖುಲಾಸೆ

Related Posts

13 ವರ್ಷಗಳ ದುನಿಯಾ ವಿಜಯ್-ನಾಗರತ್ನ ಕಾನೂನು ಸಮರ ಅಂತ್ಯ: ಪತ್ನಿಗೆ 2 ಕೋಟಿ ರೂ ಜೀವನಾಂಶ ನೀಡಲು ಹೈಕೋರ್ಟ್ ಆದೇಶ
ಸಿನಿಮಾ

13 ವರ್ಷಗಳ ದುನಿಯಾ ವಿಜಯ್-ನಾಗರತ್ನ ಕಾನೂನು ಸಮರ ಅಂತ್ಯ: ಪತ್ನಿಗೆ 2 ಕೋಟಿ ರೂ ಜೀವನಾಂಶ ನೀಡಲು ಹೈಕೋರ್ಟ್ ಆದೇಶ

September 3, 2026
49
94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ
ಸಿನಿಮಾ

94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ

August 21, 2026
14
Next Post
ಮಂಗಳೂರು ; ಬಾಲಕಿಯ ಅಪಹರಣ, ಅತ್ಯಾಚಾರ ಪ್ರಕರಣ ; ಪೋಕ್ಸೋ ಕಾಯ್ದೆಯಡಿ ಬಂಧಿತ ಆರೋಪಿ ಖುಲಾಸೆ

ಮಂಗಳೂರು ; ಬಾಲಕಿಯ ಅಪಹರಣ, ಅತ್ಯಾಚಾರ ಪ್ರಕರಣ ; ಪೋಕ್ಸೋ ಕಾಯ್ದೆಯಡಿ ಬಂಧಿತ ಆರೋಪಿ ಖುಲಾಸೆ

Discussion about this post

Recent News

ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ – ಸಿಎಂ ಘೋಷಣೆ, ಮಂಗಳೂರಿನಲ್ಲಿ ಸಂಭ್ರಮಾಚರಣೆ

ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ – ಸಿಎಂ ಘೋಷಣೆ, ಮಂಗಳೂರಿನಲ್ಲಿ ಸಂಭ್ರಮಾಚರಣೆ

September 18, 2026
30
ಪ್ರಜಾಸೌಧದಲ್ಲಿ ಮುಖ್ಯಮಂತ್ರಿ, ಸಚಿವರಿಗೆ ಸಾಂಪ್ರದಾಯಿಕ ಪೂರ್ಣಕುಂಭ ಸ್ವಾಗತ, ಕದ್ರಿಯಿಂದ ಪಡೀಲಿಗೆ ತೆರೆದ ಬಸ್ಸಿನಲ್ಲಿ ಮೆರವಣಿಗೆ

ಪ್ರಜಾಸೌಧದಲ್ಲಿ ಮುಖ್ಯಮಂತ್ರಿ, ಸಚಿವರಿಗೆ ಸಾಂಪ್ರದಾಯಿಕ ಪೂರ್ಣಕುಂಭ ಸ್ವಾಗತ, ಕದ್ರಿಯಿಂದ ಪಡೀಲಿಗೆ ತೆರೆದ ಬಸ್ಸಿನಲ್ಲಿ ಮೆರವಣಿಗೆ

September 18, 2026
45
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ – ಸಿಎಂ ಘೋಷಣೆ, ಮಂಗಳೂರಿನಲ್ಲಿ ಸಂಭ್ರಮಾಚರಣೆ

ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ – ಸಿಎಂ ಘೋಷಣೆ, ಮಂಗಳೂರಿನಲ್ಲಿ ಸಂಭ್ರಮಾಚರಣೆ

September 18, 2026
ಪ್ರಜಾಸೌಧದಲ್ಲಿ ಮುಖ್ಯಮಂತ್ರಿ, ಸಚಿವರಿಗೆ ಸಾಂಪ್ರದಾಯಿಕ ಪೂರ್ಣಕುಂಭ ಸ್ವಾಗತ, ಕದ್ರಿಯಿಂದ ಪಡೀಲಿಗೆ ತೆರೆದ ಬಸ್ಸಿನಲ್ಲಿ ಮೆರವಣಿಗೆ

ಪ್ರಜಾಸೌಧದಲ್ಲಿ ಮುಖ್ಯಮಂತ್ರಿ, ಸಚಿವರಿಗೆ ಸಾಂಪ್ರದಾಯಿಕ ಪೂರ್ಣಕುಂಭ ಸ್ವಾಗತ, ಕದ್ರಿಯಿಂದ ಪಡೀಲಿಗೆ ತೆರೆದ ಬಸ್ಸಿನಲ್ಲಿ ಮೆರವಣಿಗೆ

September 18, 2026
ಬಡವರರಿಗಾಗಿ ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶಗಳನ್ನು ನೀಡುವ ಬಗ್ಗೆ ಸರ್ಕಾರ ಚಿಂತನೆ: ಸಚಿವ ಕೆ.ಹೆಚ್. ಮುನಿಯಪ್ಪ

ಬಡವರರಿಗಾಗಿ ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶಗಳನ್ನು ನೀಡುವ ಬಗ್ಗೆ ಸರ್ಕಾರ ಚಿಂತನೆ: ಸಚಿವ ಕೆ.ಹೆಚ್. ಮುನಿಯಪ್ಪ

September 18, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d