• About us
  • Contact us
  • Disclaimer
Wednesday, May 27, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಅವಾಚ್ಯ ಪದ ಬಳಕೆ ; ಸುವರ್ಣಸೌಧದಿಂದಲೇ ಸಿ.ಟಿ ರವಿನ ಹೊತ್ತೊಯ್ದ ಪೊಲೀಸರು

Coastal Times by Coastal Times
December 20, 2024
in ರಾಜಕೀಯ, ರಾಜ್ಯ
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಅವಾಚ್ಯ ಪದ ಬಳಕೆ ; ಸುವರ್ಣಸೌಧದಿಂದಲೇ ಸಿ.ಟಿ ರವಿನ ಹೊತ್ತೊಯ್ದ ಪೊಲೀಸರು
39
VIEWS
WhatsappTelegramShare on FacebookShare on Twitter

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿಧಾನ ಪರಿಷತ್​ನಲ್ಲಿ ಅಶ್ಲೀಲ ಪದ ಬಳಸಿದ ಆರೋಪದಡಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ಇಂದು ಸಂಜೆ ಹಿರೇಬಾಗೇವಾಡಿ ಪೊಲೀಸರು ಬಂಧಿಸಿದ್ದಾರೆ. ಇದಕ್ಕೂ ಮುನ್ನ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ್ದ ದೂರಿನನ್ವಯ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು.

ಸುವರ್ಣ ವಿಧಾನಸೌಧದಲ್ಲಿ ನಡೆದ ಪರಿಷತ್ ಕಲಾಪದಲ್ಲಿ ಮಧ್ಯಾಹ್ನ 1 ಗಂಟೆ‌ಗೆ ಸಿ.ಟಿ.ರವಿ ಅವರು, ಆಕ್ಷೇಪಾರ್ಹ ಹೇಳಿಕೆ ನೀಡಿದ್ದಲ್ಲದೇ ನನ್ನ ಕಡೆ ನುಗ್ಗಿ ಅಶ್ಲೀಲ ರೀತಿ ಸನ್ನೆ ಮಾಡಿದರು ಎಂದು ಆರೋಪಿಸಿ ಲಕ್ಷ್ಮೀ ಹೆಬ್ಬಾಳ್ಕರ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಸಿ.ಟಿ.ರವಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 75 (ಲೈಂಗಿಕ ಕಿರುಕುಳ) ಮತ್ತು 79 (ಮಹಿಳೆಯರ ಗೌರವಕ್ಕೆ ಧಕ್ಕೆ ತರುವ ಮಾತು, ಕೈ ಸನ್ನೆ ಮತ್ತು ಅಶ್ಲೀಲ ಪದ ಪ್ರಯೋಗ) ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

ಬಂಧನಕ್ಕೆ ಪ್ರತಿರೋಧವೊಡ್ಡಿದ ಹಿನ್ನೆಲೆಯಲ್ಲಿ ಪೊಲೀಸರು ಸಿ.ಟಿ.ರವಿ ಅವರನ್ನು ಮುಲಾಜಿಲ್ಲದೇ ಮೇಲೆತ್ತಿದ ಪೊಲೀಸರು ಪೊಲೀಸ್ ವಾಹನಕ್ಕೆ ತುಂಬಿಸಿ ಕರೆದೊಯ್ದಿದ್ದಾರೆ. ಬಿಜೆಪಿ ನಾಯಕರು ಪೊಲೀಸರ ವಾಹನಕ್ಕೆ ಅಡ್ಡಗಟ್ಟಿ ಪ್ರತಿಭಟನೆ ನಡೆಸಿದರೂ ಪೊಲೀಸರು ಕ್ಯಾರೆಂದಿಲ್ಲ. ಇದಕ್ಕೂ ಮುನ್ನ ಸುವರ್ಣ ವಿಧಾನಸೌಧದಲ್ಲಿ ಸಿ.ಟಿ.ರವಿ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ ಘಟನೆ ಖಂಡಿಸಿ ಬಿಜೆಪಿ ನಾಯಕರು ಸೌಧದ ಮುಂಭಾಗ ಪ್ರತಿಭಟಿಸಿದರು. ಈ ವೇಳೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಸೇರಿ ಹಲವರನ್ನು ಪೊಲೀಸರು ವಶಕ್ಕೆ ಪಡೆದರು.
ದೂರು, ಪ್ರತಿದೂರು ದಾಖಲು: ಸಿ.ಟಿ.ರವಿ ನನ್ನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಅವರನ್ನು ತಕ್ಷಣವೇ ಅಮಾನತು ಮಾಡಬೇಕು ಎಂದು ಪರಿಷತ್ ಸಭಾಪತಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ದೂರು ನೀಡಿದರೆ, ಇದಕ್ಕೆ ಪ್ರತಿದೂರು ನೀಡಿರುವ ಸಿ.ಟಿ.ರವಿ, ನಾನು ಆ ರೀತಿ ಪದ ಬಳಕೆ ಮಾಡಿಲ್ಲ. ಎಲ್ಲ ಮಹಿಳೆಯರನ್ನೂ ಗೌರವದಿಂದ ಕಾಣುತ್ತೇನೆ ಎಂದು ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಸಾಲ ಮರುಪಾವತಿ ಕಿರುಕುಳಕ್ಕೆ ವ್ಯಕ್ತಿ ಆತ್ಮಹತ್ಯೆ: ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಅರೆಸ್ಟ್

Next Post

ಮಂಗಳೂರು: ಹೊಸ ವರ್ಷಕ್ಕೆಂದು ತರಿಸಿದ್ದ 9 ಲಕ್ಷ ರೂ ಮೌಲ್ಯದ ಡ್ರಗ್ಸ್ ವಶಕ್ಕೆ, ಮೂವರ ಬಂಧನ

Related Posts

ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್
ಆರೋಗ್ಯ

ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

May 23, 2026
47
ವಚನಾನಂದ ಶ್ರೀಗಳಿಗೆ ಹೆಚ್ಚಿದ ಬಂಧನದ ಭೀತಿ: ನಿರೀಕ್ಷಣಾ ಜಾಮೀನು ರದ್ದು ಕೋರಿ ಕೋರ್ಟ್​ಗೆ ಪೊಲೀಸರ ಮನವಿ
ರಾಜ್ಯ

ವಚನಾನಂದ ಶ್ರೀಗಳಿಗೆ ಹೆಚ್ಚಿದ ಬಂಧನದ ಭೀತಿ: ನಿರೀಕ್ಷಣಾ ಜಾಮೀನು ರದ್ದು ಕೋರಿ ಕೋರ್ಟ್​ಗೆ ಪೊಲೀಸರ ಮನವಿ

May 22, 2026
25
Next Post
ಮಂಗಳೂರು: ಹೊಸ ವರ್ಷಕ್ಕೆಂದು ತರಿಸಿದ್ದ 9 ಲಕ್ಷ ರೂ ಮೌಲ್ಯದ ಡ್ರಗ್ಸ್ ವಶಕ್ಕೆ, ಮೂವರ ಬಂಧನ

ಮಂಗಳೂರು: ಹೊಸ ವರ್ಷಕ್ಕೆಂದು ತರಿಸಿದ್ದ 9 ಲಕ್ಷ ರೂ ಮೌಲ್ಯದ ಡ್ರಗ್ಸ್ ವಶಕ್ಕೆ, ಮೂವರ ಬಂಧನ

Discussion about this post

Recent News

ಮಂಗಳೂರಿಗೆ ಆಗಮಿಸಿದ ಅಮ್ಮ ; ಮೇ 28 ಮತ್ತು 29ರಂದು ಬ್ರಹ್ಮಸ್ಥಾನ ಮಹೋತ್ಸವ

ಮಂಗಳೂರಿಗೆ ಆಗಮಿಸಿದ ಅಮ್ಮ ; ಮೇ 28 ಮತ್ತು 29ರಂದು ಬ್ರಹ್ಮಸ್ಥಾನ ಮಹೋತ್ಸವ

May 27, 2026
18
ಗ್ಲೋಬಲ್ ಬಿಸಿನೆಸ್ ಫೆಲೋಶಿಪ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾಗಿ ಮಂಗಳೂರಿನ ಯುವ ನಾಯಕ ಡೆನಿಸ್ ಡಿಸಿಲ್ವಾ ಆಯ್ಕೆ

ಗ್ಲೋಬಲ್ ಬಿಸಿನೆಸ್ ಫೆಲೋಶಿಪ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾಗಿ ಮಂಗಳೂರಿನ ಯುವ ನಾಯಕ ಡೆನಿಸ್ ಡಿಸಿಲ್ವಾ ಆಯ್ಕೆ

May 27, 2026
29
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರಿಗೆ ಆಗಮಿಸಿದ ಅಮ್ಮ ; ಮೇ 28 ಮತ್ತು 29ರಂದು ಬ್ರಹ್ಮಸ್ಥಾನ ಮಹೋತ್ಸವ

ಮಂಗಳೂರಿಗೆ ಆಗಮಿಸಿದ ಅಮ್ಮ ; ಮೇ 28 ಮತ್ತು 29ರಂದು ಬ್ರಹ್ಮಸ್ಥಾನ ಮಹೋತ್ಸವ

May 27, 2026
ಗ್ಲೋಬಲ್ ಬಿಸಿನೆಸ್ ಫೆಲೋಶಿಪ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾಗಿ ಮಂಗಳೂರಿನ ಯುವ ನಾಯಕ ಡೆನಿಸ್ ಡಿಸಿಲ್ವಾ ಆಯ್ಕೆ

ಗ್ಲೋಬಲ್ ಬಿಸಿನೆಸ್ ಫೆಲೋಶಿಪ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾಗಿ ಮಂಗಳೂರಿನ ಯುವ ನಾಯಕ ಡೆನಿಸ್ ಡಿಸಿಲ್ವಾ ಆಯ್ಕೆ

May 27, 2026
ಆರೀಫ್ ಕೊಲೆ ಪ್ರಕರಣ ; ಹಣಕಾಸು ನೆರವು ನೀಡಿದ್ದ ಟೋಪಿ ನೌಫಾಲ್ ಸೋದರ ಇಬ್ರಾಹಿಂ ಸಿನಾನ್ ಬಂಧನ,

ಆರೀಫ್ ಕೊಲೆ ಪ್ರಕರಣ ; ಹಣಕಾಸು ನೆರವು ನೀಡಿದ್ದ ಟೋಪಿ ನೌಫಾಲ್ ಸೋದರ ಇಬ್ರಾಹಿಂ ಸಿನಾನ್ ಬಂಧನ,

May 26, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d