• About us
  • Contact us
  • Disclaimer
Sunday, May 24, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಭಾರತ ಸೇರಿದಂತೆ ಅನೇಕ ದೇಶಗಳ ಮೇಲೆ ಟ್ರಂಪ್​ ಜಾರಿಗೆ ತಂದಿದ್ದ ಸುಂಕಗಳನ್ನು ರದ್ದುಗೊಳಿಸಿದ ಅಮೆರಿಕದ ಸುಪ್ರೀಂಕೋರ್ಟ್

Coastal Times by Coastal Times
February 21, 2026
in ವಿದೇಶಿ ಸುದ್ದಿ
ಭಾರತ ಸೇರಿದಂತೆ ಅನೇಕ ದೇಶಗಳ ಮೇಲೆ ಟ್ರಂಪ್​ ಜಾರಿಗೆ ತಂದಿದ್ದ ಸುಂಕಗಳನ್ನು ರದ್ದುಗೊಳಿಸಿದ ಅಮೆರಿಕದ ಸುಪ್ರೀಂಕೋರ್ಟ್
33
VIEWS
WhatsappTelegramShare on FacebookShare on Twitter

ವಾಷಿಂಗ್ಟನ್, ಫೆ 20: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಭಾರತ ಸೇರಿದಂತೆ ಅನೇಕ ದೇಶಗಳ ಮೇಲೆ ಮನಸಿಗೆ ಬಂದಂತೆ ಭಾರೀ ಸುಂಕ ಹೇರುತ್ತಿದ್ದರು. ರಷ್ಯಾದಿಂದ ತೈಲ ಖರೀದಿ ಮಾಡುತ್ತಿದೆ ಎಂಬ ಒಂದೇ ಕಾರಣಕ್ಕೆ ಭಾರತದ ಮೇಲೆ ಹೆಚ್ಚುವರಿ ಶೇ. 25ರಷ್ಟು ಸುಂಕ ವಿಧಿಸುವ ಮೂಲಕ ಭಾರತದ ಮೇಲಿನ ಆಮದು ಸುಂಕವನ್ನು ಶೇ. 50ಕ್ಕೆ ಏರಿಸಿದ್ದರು. ಆದರೆ, ಇತ್ತೀಚೆಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವ ಮೂಲಕ ಆ ಸುಂಕವನ್ನು ಶೇ. 18ಕ್ಕೆ ಕಡಿತಗೊಳಿಸಿದ್ದರು. ಈ ರೀತಿ ತಮಗಿಷ್ಟ ಬಂದಂತೆ ಸುಂಕಗಳನ್ನು ಹಾಕುವ ಅಧಿಕಾರ ಡೊನಾಲ್ಡ್ ಟ್ರಂಪ್​ಗಿಲ್ಲ ಎಂದು ಅಮೆರಿಕದ ಸುಪ್ರೀಂ ಕೋರ್ಟ್​ ಆದೇಶ ನೀಡುವ ಮೂಲಕ ದೊಡ್ಡ ಹೊಡೆತ ನೀಡಿದೆ.

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಕ್ಯಾಬಿನೆಟ್​​ ಒಪ್ಪಿಗೆಯಿಲ್ಲದೆ ಸರ್ವಾಧಿಕಾರದಿಂದ ಜಾಗತಿಕ ಸುಂಕಗಳನ್ನು ವಿಧಿಸುವ ಅಧಿಕಾರವಿಲ್ಲ ಎನ್ನುವ ಮೂಲಕ ಅಮೆರಿಕದ ಸುಪ್ರೀಂ ಕೋರ್ಟ್​ ಟ್ರಂಪ್​ಗೆ ದೊಡ್ಡ ಶಾಕ್ ನೀಡಿದೆ. ಅಲ್ಲದೆ, ಟ್ರಂಪ್ ಅವರ ಸುಂಕ ನೀತಿ ಕಾನೂನುಬಾಹಿರ ಎಂದು ಕೂಡ ಹೇಳಿದೆ. ಈ ಮೂಲಕ ಟ್ರಂಪ್ ಅವರ ಜಾಗತಿಕ ಸುಂಕಗಳನ್ನು ಅಮೆರಿಕದ ಸುಪ್ರೀಂ ಕೋರ್ಟ್ 6-3 ಅಂತರದಿಂದ ರದ್ದುಗೊಳಿಸಿದೆ. ಹೀಗಾಗಿ, ಟ್ರಂಪ್ ಅವರ ಮುಂದಿನ ಕಾನೂನು ನಡೆಯ ಬಗ್ಗೆ ಕುತೂಹಲ ಹೆಚ್ಚಾಗಿದೆ.

ವಾಷಿಂಗ್ಟನ್​ ಪೋಸ್ಟ್​ ವರದಿ ಪ್ರಕಾರ, ಅಮೆರಿಕದ ಬಹುತೇಕ ಎಲ್ಲಾ ವ್ಯಾಪಾರ ಪಾಲುದಾರರಿಂದ ಸರಕುಗಳ ಮೇಲೆ ವ್ಯಾಪಕ ಆಮದು ಸುಂಕಗಳನ್ನು ವಿಧಿಸಲು 1977 ರ ಅಂತಾರಾಷ್ಟ್ರೀಯ ತುರ್ತು ಆರ್ಥಿಕ ಅಧಿಕಾರ ಕಾಯ್ದೆ -IEEPA ಅಡಿ ಅಮೆರಿಕ ಅಧ್ಯಕ್ಷರು ಅಧಿಕಾರ ಹೊಂದಿಲ್ಲ ಎಂದು ಅಮೆರಿಕದ ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಈ ತೀರ್ಪು ಜಾಗತಿಕ ವ್ಯಾಪಾರ, ವ್ಯವಹಾರಗಳು, ಗ್ರಾಹಕರು, ಹಣದುಬ್ಬರ ಪ್ರವೃತ್ತಿಗಳು ಮತ್ತು ದೇಶಾದ್ಯಂತದ ಗೃಹ ಹಣಕಾಸುಗಳ ಮೇಲೆ ವ್ಯಾಪಕ ಪರಿಣಾಮಗಳನ್ನು ಬೀರುತ್ತದೆ ಎಂದು ನಿರೀಕ್ಷಿಸಲಾಗಿದೆ. ಈ ತೀರ್ಪಿನಿಂದ ದೇಶದಲ್ಲಿ ಭಾರಿ ಆರ್ಥಿಕ ಪರಿಣಾಮಗಳು ಉಂಟಾಗುವ ಸಾಧ್ಯತೆಗಳಿವೆ. ಇದು ಟ್ರಿಲಿಯನ್ ಗಟ್ಟಲೇ ವ್ಯವಹಾರವಾಗಿದ್ದು, ಇದು ದೊಡ್ಡ ಪೆಟ್ಟು ನೀಡುವ ಸಾಧ್ಯತೆಗಳಿವೆ. ಡಿಸೆಂಬರ್ 14ರವರೆಗೆ ಅಮೆರಿಕ ಸರ್ಕಾರವು ವಿವಾದಿತ ಪ್ರಾಧಿಕಾರದ ಅಡಿ ಸುಮಾರು 134 ಶತಕೋಟಿ ಡಾಲರ್‌ಗಳಷ್ಟು ಮೊತ್ತದ ಸುಂಕ ಸಂಗ್ರಹಿಸಿದೆ ಎಂದು ದಿ ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ.

ಟ್ಯಾಕ್ಸ್ ಫೌಂಡೇಶನ್‌ನ ಅಂದಾಜಿನ ಪ್ರಕಾರ, ಟ್ರಂಪ್‌ರ ವ್ಯಾಪಾರ ಯುದ್ಧವು 2025ರಲ್ಲಿ ಅಮೆರಿಕನ್ ಕುಟುಂಬಗಳಿಗೆ ತಲಾ ಸುಮಾರು 1,100 ಡಾಲರ್‌ಗಳಷ್ಟು ನಷ್ಟವನ್ನುಂಟು ಮಾಡುತ್ತದೆ ಎಂದು ದಿ ಪೋಸ್ಟ್ ತನ್ನ ವರದಿಯಲ್ಲಿ ಹೇಳಿದೆ. ಪರಸ್ಪರ ಪ್ರಯೋಜನಕಾರಿ ವ್ಯಾಪಾರಕ್ಕೆ ಸಂಬಂಧಿಸಿದಂತೆ ಮಧ್ಯಂತರ ಒಪ್ಪಂದಕ್ಕಾಗಿ ಒಂದು ಚೌಕಟ್ಟನ್ನು ರೂಪಿಸಿದ್ದೇವೆ ಎಂದು ಅಮೆರಿಕ ಮತ್ತು ಭಾರತ ಘೋಷಿಸಿದ ಕೆಲವು ದಿನಗಳ ನಂತರ ಈ ಮಹತ್ವದ ತೀರ್ಪು ಬಂದಿದೆ.

ಫೆಬ್ರವರಿ 13, 2025 ರಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾರಂಭಿಸಿದ ಭಾರತ -ಅಮೆರಿಕ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ (ಬಿಟಿಎ) ಮಾತುಕತೆಗಳಿಗೆ ದೇಶಗಳ ಬದ್ಧತೆಯನ್ನು ಈ ಮಧ್ಯಂತರ ಒಪ್ಪಂದ ಚೌಕಟ್ಟಿನಲ್ಲಿ ಪುನರುಚ್ಚರಿಸಲಾಗಿತ್ತು.

ಯುನೈಟೆಡ್ ಸ್ಟೇಟ್ಸ್ ಮತ್ತು ಭಾರತದ ನಡುವಿನ ಮಧ್ಯಂತರ ಒಪ್ಪಂದವು ನಮ್ಮ ದೇಶಗಳ ಪಾಲುದಾರಿಕೆಯಲ್ಲಿ ಐತಿಹಾಸಿಕ ಮೈಲಿಗಲ್ಲು ಎಂದು ಬಣ್ಣಿಸಲಾಗಿತ್ತು. ಪರಸ್ಪರ ಆಸಕ್ತಿಗಳು ಮತ್ತು ಕಾಂಕ್ರೀಟ್ ಫಲಿತಾಂಶಗಳ ಆಧಾರದ ಮೇಲೆ ಪರಸ್ಪರ ಮತ್ತು ಸಮತೋಲಿತ ವ್ಯಾಪಾರಕ್ಕೆ ಸಾಮಾನ್ಯ ಬದ್ಧತೆಯನ್ನು ಪ್ರದರ್ಶಿಸುತ್ತದೆ ಎಂದು ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಫೆ. 24ರಂದು ‘ಸಹಕಾರ ರತ್ನ” ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

Next Post

ಮಂಗಳೂರು: ಎಂ ಎಸ್ ಈ ಝೆಡ್ ಕೈಗಾರಿಕಾ ಪ್ರದೇಶದಲ್ಲಿ ಇಟಲಿಯ ಎಂಐಆರ್ ಗ್ರೂಪ್‌ನ ಉತ್ಪಾದನಾ ಘಟಕಕ್ಕೆ ಭೂಮಿ ಪೂಜೆ

Related Posts

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ
ವಿದೇಶಿ ಸುದ್ದಿ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
77
ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!
ವಿದೇಶಿ ಸುದ್ದಿ

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
104
Next Post
ಮಂಗಳೂರು: ಎಂ ಎಸ್ ಈ ಝೆಡ್ ಕೈಗಾರಿಕಾ ಪ್ರದೇಶದಲ್ಲಿ ಇಟಲಿಯ ಎಂಐಆರ್ ಗ್ರೂಪ್‌ನ ಉತ್ಪಾದನಾ ಘಟಕಕ್ಕೆ ಭೂಮಿ ಪೂಜೆ

ಮಂಗಳೂರು: ಎಂ ಎಸ್ ಈ ಝೆಡ್ ಕೈಗಾರಿಕಾ ಪ್ರದೇಶದಲ್ಲಿ ಇಟಲಿಯ ಎಂಐಆರ್ ಗ್ರೂಪ್‌ನ ಉತ್ಪಾದನಾ ಘಟಕಕ್ಕೆ ಭೂಮಿ ಪೂಜೆ

Discussion about this post

Recent News

ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ

ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ

May 23, 2026
54
ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

May 23, 2026
40
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ

ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ

May 23, 2026
ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

May 23, 2026
ವಚನಾನಂದ ಶ್ರೀಗಳಿಗೆ ಹೆಚ್ಚಿದ ಬಂಧನದ ಭೀತಿ: ನಿರೀಕ್ಷಣಾ ಜಾಮೀನು ರದ್ದು ಕೋರಿ ಕೋರ್ಟ್​ಗೆ ಪೊಲೀಸರ ಮನವಿ

ವಚನಾನಂದ ಶ್ರೀಗಳಿಗೆ ಹೆಚ್ಚಿದ ಬಂಧನದ ಭೀತಿ: ನಿರೀಕ್ಷಣಾ ಜಾಮೀನು ರದ್ದು ಕೋರಿ ಕೋರ್ಟ್​ಗೆ ಪೊಲೀಸರ ಮನವಿ

May 22, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d