ಉಡುಪಿ : ಕಾಪು ತಾಲ್ಲೂಕಿನ ಮಲ್ಲಾರು ಫಕೀರನ ಕಟ್ಟೆಯಲ್ಲಿರುವ ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸ್ಫೋಟದ ತೀವ್ರತೆಗೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು. ಇದೀಗ ಗಂಭೀರ ಗಾಯಗೊಂಡಿದ್ದ ಗಾಯಾಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರನ್ನು ನಿಯಾಝ್ ಎಂದು ಗುರುತಿಸಲಾಗಿದೆ.
ಗುಜರಿ ಅಂಗಡಿಯಲ್ಲಿ ಇರಿಸಲಾದ ಹಳೆಯ ಪ್ರಿಜ್ ಸೇರಿದಂತೆ ಗುಜರಿ ಸಾಮಗ್ರಿಗಳು ಬೆಂಕಿಯ ಕೆನ್ನಾಲಗೆಗೆ ಸಿಲುಕಿ ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದುಬಂದಿದೆ.
ಸ್ಫೋಟಕ್ಕೆ ನಿಖರ ಕಾರಣಗಳಿಗಾಗಿ ಪರಿಶೀಲನೆ ನಡೆಸಲಾಗುತ್ತಿದೆ. ಇದೇ ವೇಳೆ ನಷ್ಟದ ಮೌಲ್ಯವನ್ನು ಲೆಕ್ಕ ಹಾಕಲಾಗುತ್ತಿದೆ. ಸ್ಥಳಕ್ಕೆ ಎರಡು ಅಗ್ನಿಶಾಮಕ ದಳದ ವಾಹನಗಳೊಂದಿಗೆ ಆಗಮಿಸಿರುವ ಅಧಿಕಾರಿಗಳು ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ.