• About us
  • Contact us
  • Disclaimer
Tuesday, March 24, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ: ಉಚ್ಚಿಲದ ಅಕ್ರಮ ಮರಳು ಅಡ್ಡೆಗೆ ಸಿಸಿಬಿ ಪೊಲೀಸರ ದಿಢೀರ್‌ ದಾಳಿ; ಮರಳು, ನಾಲ್ಕು ನಾಡದೋಣಿ ವಶಕ್ಕೆ

Coastal Times by Coastal Times
March 21, 2024
in ಕ್ರೈಮ್ ನ್ಯೂಸ್
ಉಳ್ಳಾಲ: ಉಚ್ಚಿಲದ ಅಕ್ರಮ ಮರಳು ಅಡ್ಡೆಗೆ ಸಿಸಿಬಿ ಪೊಲೀಸರ ದಿಢೀರ್‌ ದಾಳಿ; ಮರಳು, ನಾಲ್ಕು ನಾಡದೋಣಿ ವಶಕ್ಕೆ
58
VIEWS
WhatsappTelegramShare on FacebookShare on Twitter

ಉಳ್ಳಾಲ: ಸೋಮೇಶ್ವರ ಉಚ್ಚಿಲದ ನಾಗತೋಟದಲ್ಲಿನ ಖಾಸಗಿ ಜಾಗದ ಮರಳು ಅಡ್ಡೆಗೆ ಸಿಸಿಬಿ ಪೊಲೀಸರು, ಭೂ ಮತ್ತು ಗಣಿ ವಿಜ್ಞಾನ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿದ್ದು ಅಪಾರ ಪ್ರಮಾಣದಲ್ಲಿ ದಾಸ್ತಾನಿರಿಸಿದ್ದ ಮರಳು ಮತ್ತು ಹೊಳೆಯಲ್ಲಿ ಮರಳು ಸಾಗಾಟ ನಡೆಸುತ್ತಿದ್ದ ನಾಲ್ಕು ನಾಡದೋಣಿಗಳನ್ನ ವಶಕ್ಕೆ ತೆಗೆದುಕೊಂಡಿದ್ದಾರೆ.

ಸೋಮೇಶ್ವರ ಉಚ್ಚಿಲದ ಬಟ್ಟಪ್ಪಾಡಿ ಸಮುದ್ರ ತೀರದಿಂದ ನಿತ್ಯವೂ ಅಕ್ರಮವಾಗಿ ಮರಳು ತೆಗೆದು ನಾಡ ದೋಣಿಗಳ ಮೂಲಕ ಹೊಳೆಯಲ್ಲಿ ಸಾಗಾಟ ನಡೆಸಿ ನಾಗತೋಟ ನಿವಾಸಿ ಮಹಮ್ಮದ್‌ ಆಲಿ ಅವರ ಖಾಸಗಿ ಜಮೀನಿನಲ್ಲಿ ದಾಸ್ತಾನು ಇರಿಸಲಾಗುತ್ತಿತ್ತು.ಈ ಮರಳನ್ನು ಮಧ್ಯ ರಾತ್ರಿ ಕೇರಳಕ್ಕೆ ಸಾಗಾಟ ನಡೆಸಲಾಗುತ್ತಿತ್ತು. ಈ ಮರಳು ಮಾಫಿಯಾ ಬಗ್ಗೆ ಸ್ಥಳೀಯ ಸಾಮಾಜಿಕ  ಕಾರ್ಯಕರ್ತರಾದ ಸುಖೇಶ್ ಉಚ್ಚಿಲ್ ಮತ್ತು ರಂಜಿತ್ ಬಟ್ಟಪ್ಪಾಡಿ ಅವರು ಸ್ಥಳೀಯ ಪೊಲೀಸರಿಗೆ ಪದೇ ಪದೇ ದೂರು ನೀಡಿದ್ದರೂ ಅಕ್ರಮ ಮರಳುಗಾರಿಕೆಗೆ ಕಡಿವಾಣ ಬಿದ್ದಿರಲಿಲ್ಲ. ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ದೂರವಾಣಿ ಮೂಲಕ ದೂರು ನೀಡಿದ್ದು, ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಮರಳು ಅಡ್ಡೆಗೆ ದಾಳಿ ನಡೆಸಲಾಗಿದೆ ಎನ್ನಲಾಗಿದೆ.

ಎಗ್ಗಿಲ್ಲದೆ ಮುಂದುವರೆದಿದ್ದ ಅಕ್ರಮ ಮರಳುಗಾರಿಕೆಯ ಬಗ್ಗೆ ಸುಖೇಶ್ ಮತ್ತು ರಂಜಿತ್ ಅವರು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರಿಗೇ ಮಂಗಳವಾರ ಕರೆ ಮಾಡಿ ತಿಳಿಸಿದ್ದರು. ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಸಿಸಿಬಿ ಪೊಲೀಸರನ್ನೊಳಗೊಂಡ ತಂಡವು ಬುಧವಾರ ಬೆಳ್ಳಂಬೆಳಗ್ಗೆ ನಾಗತೋಟದ ಅಕ್ರಮ ಮರಳು ಅಡ್ಡೆಗೆ ದಿಢೀರ್ ದಾಳಿ ನಡೆಸಿದ್ದು ನಂತರ ಉಳ್ಳಾಲ ಪೊಲೀಸರಿಗೂ ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಸೇರಿ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಆರೋಪಿಗಳಾದ ಕುಂಜತ್ತೂರಿನ ಜಯರಾಮ್ ಶೆಟ್ಟಿ, ಇಬ್ರಾಹಿಂ ಕೋಟೆಪುರ, ವಿನೋದ್ ಉಚ್ಚಿಲ್ ಯಾನೆ ಹನಿ ಹಿಂದುಸ್ಥಾನಿ, ಚಂದ್ರ ಸೋಮೇಶ್ವರ  ಮತ್ತು ಸುನಿಲ್ ತಲೆಮರೆಸಿಕೊಂಡಿದ್ದಾರೆ. ವಶ ಪಡಿಸಿಕೊಳ್ಳಲಾದ ಅಪಾರ ಪ್ರಮಾಣದ ಮರಳು ಮತ್ತು ನಾಡ ದೋಣಿಗಳನ್ನು ಪೊಲೀಸರು ಭೂ ಮತ್ತು ಗಣಿ ವಿಜ್ನಾನ ಇಲಾಖಾಧಿರಿಗಳಿಗೆ ಹಸ್ತಾಂತರಿಸಿದ್ದಾರೆ. ಅಕ್ರಮ ಮರಳನ್ನು ದಾಸ್ತಾನು ಇರಿಸಲು ಸಹಕರಿಸುತ್ತಿರುವವರ ಜಮೀನನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಸ್ಥಳೀಯರು ಜಿಲ್ಲಾಧಿಕಾರಿಗಳನ್ನು ಆಗ್ರಹಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಆಂಡ್ರಾಯ್ಡ್ ಉತ್ಕೃಷ್ಟ ಸ್ಮಾರ್ಟ್​ಫೋನ್​ಗಳಿಗಾಗಿ (Snapdragon 8s Gen 3) ಚಿಪ್ ಬಿಡುಗಡೆ ಮಾಡಿದ ಕ್ವಾಲ್ಕಾಮ್

Next Post

ಬೆಡ್‌ರೂಂ ಕಿಟಕಿ ಹಾಕದೆ ಕಾಮಕೇಳಿ; ದಂಪತಿ ವಿರುದ್ಧ ಮಹಿಳೆ ಪೊಲೀಸರಿಗೆ ದೂರು!

Related Posts

ಮಂಗಳೂರು: ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.5 ಲಕ್ಷದ ಎಂಡಿಎಂಎ ಡ್ರಗ್ಸ್ ಸಹಿತ ಮೂವರ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು: ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.5 ಲಕ್ಷದ ಎಂಡಿಎಂಎ ಡ್ರಗ್ಸ್ ಸಹಿತ ಮೂವರ ಬಂಧನ

March 23, 2026
50
ಕೋರ್ಟಿಗೆ ವಂಚಿಸಿ ತಲೆಮರೆಸಿಕೊಂಡಿದ್ದ  ಉಳ್ಳಾಲದ ನಟೋರಿಯಸ್ ರೌಡಿಶೀಟರ್ ಸಿಸಿಬಿ ಪೊಲೀಸರ ಬಲೆಗೆ
ಕ್ರೈಮ್ ನ್ಯೂಸ್

ಕೋರ್ಟಿಗೆ ವಂಚಿಸಿ ತಲೆಮರೆಸಿಕೊಂಡಿದ್ದ ಉಳ್ಳಾಲದ ನಟೋರಿಯಸ್ ರೌಡಿಶೀಟರ್ ಸಿಸಿಬಿ ಪೊಲೀಸರ ಬಲೆಗೆ

March 21, 2026
57
Next Post
ಬೆಡ್‌ರೂಂ ಕಿಟಕಿ ಹಾಕದೆ ಕಾಮಕೇಳಿ; ದಂಪತಿ ವಿರುದ್ಧ ಮಹಿಳೆ ಪೊಲೀಸರಿಗೆ ದೂರು!

ಬೆಡ್‌ರೂಂ ಕಿಟಕಿ ಹಾಕದೆ ಕಾಮಕೇಳಿ; ದಂಪತಿ ವಿರುದ್ಧ ಮಹಿಳೆ ಪೊಲೀಸರಿಗೆ ದೂರು!

Discussion about this post

Recent News

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ

March 24, 2026
30
ಬೆಂದೂರ್: ಸಂತ ವಿನ್ಸೆಂಟ್ ಡಿ ಪೌಲ್ ಸೊಸೈಟಿಯಿಂದ ಸಂವಾದಾತ್ಮಕ ವಿಚಾರ ಸಂಕಿರಣ

ಬೆಂದೂರ್: ಸಂತ ವಿನ್ಸೆಂಟ್ ಡಿ ಪೌಲ್ ಸೊಸೈಟಿಯಿಂದ ಸಂವಾದಾತ್ಮಕ ವಿಚಾರ ಸಂಕಿರಣ

March 23, 2026
4
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ

March 24, 2026
ಬೆಂದೂರ್: ಸಂತ ವಿನ್ಸೆಂಟ್ ಡಿ ಪೌಲ್ ಸೊಸೈಟಿಯಿಂದ ಸಂವಾದಾತ್ಮಕ ವಿಚಾರ ಸಂಕಿರಣ

ಬೆಂದೂರ್: ಸಂತ ವಿನ್ಸೆಂಟ್ ಡಿ ಪೌಲ್ ಸೊಸೈಟಿಯಿಂದ ಸಂವಾದಾತ್ಮಕ ವಿಚಾರ ಸಂಕಿರಣ

March 23, 2026
ಮಂಗಳೂರು: ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.5 ಲಕ್ಷದ ಎಂಡಿಎಂಎ ಡ್ರಗ್ಸ್ ಸಹಿತ ಮೂವರ ಬಂಧನ

ಮಂಗಳೂರು: ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.5 ಲಕ್ಷದ ಎಂಡಿಎಂಎ ಡ್ರಗ್ಸ್ ಸಹಿತ ಮೂವರ ಬಂಧನ

March 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d