ಮಂಗಳೂರು, ಏ 21: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭಾರಿ ಕುತೂಹಲಕ್ಕೆ ಕಾರಣವಾಗಿರುವ ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರದೊಂದಿಗೆ ತಮ್ಮ ಆಸ್ತಿ ವಿವರಗಳನ್ನು ಸಲ್ಲಿಸಿದ್ದು, ಕೈಯಲ್ಲಿ 10,500 ರೂಪಾಯಿ ನಗದು ಮತ್ತು ಬ್ಯಾಂಕ್‌ಗಳಲ್ಲಿ 2,63,500 ರೂಪಾಯಿ ಠೇವಣಿ ಹೊಂದಿರುವುದುದಾಗಿ ಘೋಷಣೆ ಮಾಡಿದ್ದಾರೆ.
ಇದನ್ನು ಬಿಟ್ಟರೆ ಬೇರೆ ಯಾವುದೇ ಚರಾಸ್ತಿ ಅಥವಾ ಸ್ಥಿರಾಸ್ತಿ, ಸ್ವಂತ ವಾಹನ ಅಥವಾ ಸಾಲ ಇಲ್ಲ ಎಂದು ತಿಳಿಸಿದ್ದಾರೆ. ಆದರೆ ಅವರ ಮೇಲೆ ರಾಜ್ಯದ ವಿವಿಧ ಠಾಣೆಗಳಲ್ಲಿ ಪ್ರಮುಖವಾಗಿ ಸೌಹಾರ್ದಕ್ಕೆ ಧಕ್ಕೆ ಉಂಟಿ ಮಾಡಿದ ಒಟ್ಟು 7 ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ. ಯಾದಗಿರಿ ಠಾಣೆಯಲ್ಲಿ (ಪ್ರಚೋದನಾಕಾರಿ ಭಾಷಣ ಮತ್ತು ಸಶಸ್ತ್ರ ಕಾಯ್ದೆ ಉಲ್ಲಂಘನೆ) ಪ್ರಕರಣ ದಾಖಲಾಗಿವೆ.
ಹಾಗೆಯೆ ಶೃಂಗೇರಿ ಠಾಣೆ (ಮಾನನಷ್ಟ ಮೊಕದ್ದಮೆ), ಬೆಂಗಳೂರು ಹೈಗ್ರೌಂಡ್ಸ್ ಠಾಣೆಯಲ್ಲಿ (ಪ್ರಚೋದನಾಕಾರಿ ಭಾಷಣ, ಜೀವ ಬೆದರಿಕೆ, ಧರ್ಮಗಳ ನಡುವೆ ದ್ವೇಷ ಭಾವನೆ, ಧಾರ್ಮಿಕ ಭಾವನೆಗೆ ಧಕ್ಕೆ), ಬಬಲೇಶ್ವರ ಠಾಣೆ (ದಾರ್ಮಿಕ ಭಾವನೆಗೆ ಧಕ್ಕೆ ಮತ್ತು ಅವಾಚ್ಯ ಶಬ್ದಗಳಿಂದ ನಿಂದನೆ), ಬಾಗಲಕೋಟೆಯ ನವಸಾಗರ ಠಾಣೆಯಲ್ಲಿ (ಧಾರ್ಮಿಕ ಭಾವನೆಗಳಿಗೆ ಧಕ್ಕೆ, ಪ್ರಚೋದನೆ, ಕೋಮು ಗಲಭೆ, ಜೀವ ಬೆದರಿಕೆ) ಪ್ರಕರಣಗಳು ದಾಖಲಾಗಿವೆ.
ಇನ್ನು ಜೇವರ್ಗಿ ಠಾಣೆ (ಧಾರ್ಮಿಕ ಭಾವನೆಗೆ ಧಕ್ಕೆ, ಪ್ರಚೋದನೆ, ಕೋಮು ಗಲಭೆ, ಜೀವ ಬೆದರಿಕೆ), ಮುರುಡೇಶ್ವರ ಠಾಣೆ (ಮತೀಯ ಭಾವನೆಗೆ ಧಕ್ಕೆ, ಪ್ರಚೋದನಕಾರಿ ಹೇಳಿಕೆ, ಅವಹೇಳನ, ಆದೇಶ ಉಲ್ಲಂಘನೆ) ಪ್ರಕರಣಗಳನ್ನು ಪ್ರಮೋದ್ ಮೊತಾಲಿಕ್ ಅವರು ಎದುರಿಸುತ್ತಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post