• About us
  • Contact us
  • Disclaimer
Saturday, August 22, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರಿನಲ್ಲಿ ಏಕಕಾಲಕ್ಕೆ ಮೇ 23ರಂದು ನಾಲ್ಕು ಅದ್ದೂರಿ ಸಭಾಭವನಗಳ ಲೋಕಾರ್ಪಣೆ: ಕೃಷ್ಣ ಪಾಲೆಮಾರ್

Coastal Times by Coastal Times
May 21, 2026
in ಕರಾವಳಿ
ಮಂಗಳೂರಿನಲ್ಲಿ ಏಕಕಾಲಕ್ಕೆ ಮೇ 23ರಂದು ನಾಲ್ಕು ಅದ್ದೂರಿ ಸಭಾಭವನಗಳ ಲೋಕಾರ್ಪಣೆ: ಕೃಷ್ಣ ಪಾಲೆಮಾರ್
66
VIEWS
WhatsappTelegramShare on FacebookShare on Twitter

ಮಂಗಳೂರು: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ ಗೊಳ್ಳಲಿದೆ ಎಂದು ಮಾಜಿ ಸಚಿವ ಹಾಗೂ ವಿಕಾಸ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಕೃಷ್ಣ ಜೆ ಪಾಲೆಮಾರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಲ್ಯಾಂಡ್ ಲಿಂಕ್ಸ್ ಸಂಸ್ಥೆಯ 45 ವರ್ಷಗಳ ಯಶಸ್ವಿ ಹಾದಿಯ ಸವಿನೆನಪಿಗಾಗಿ ಕರಾವಳಿ ಜನತೆಗೆ ಸಂದ ವಿಶಿಷ್ಟ ಕೊಡುಗೆ ಮಂಗಳೂರಿನ ನಾಲ್ಕು ಕಡೆಗಳಲ್ಲಿ ನಾಲ್ಕು ಅತ್ಯಾಧುನಿಕ ಸಭಾಂಗಣಗಳು ಉದ್ಘಾಟನೆ ಗೊಳ್ಳಲಿದೆ ಎಂದು ಪಾಲೆಮಾರ್ ತಿಳಿಸಿದ್ದಾರೆ.

ಕರಾವಳಿಯ ಹೆಮ್ಮೆಯ ಹಾಗೂ ಅತ್ಯಂತ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾದ ಲ್ಯಾಂಡ್ ಲಿಂಕ್ಸ್, ಕರಾವಳಿ ಭಾಗದಲ್ಲಿ ಕಳೆದ 45 ವರ್ಷಗಳಿಂದ ತನ್ನ ಪ್ರಾಮಾಣಿಕ ಮತ್ತು ಯಶಸ್ವಿ ಉದ್ಯಮದ ಮೂಲಕ ಲಕ್ಷಾಂತರ ಜನರ ನಂಬಿಕೆಯನ್ನು ಗಳಿಸಿದೆ. ಈ ಸುದೀರ್ಘ ಯಶಸ್ವಿ ಹಾದಿಯ ಸವಿನೆನಪಿಗಾಗಿ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ಪ್ರಪ್ರಥಮ ಬಾರಿಗೆ ಅತ್ಯಾಧುನಿಕ ಸೌಲಭ್ಯಗಳನ್ನೊಳ ಗೊಂಡ, ನಾಡಿನ ಜನತೆಗೆ ಯೋಗ್ಯವಾದ ನಾಲ್ಕು ಭವ್ಯ ಸಭಾಭವನಗಳನ್ನು ಏಕಕಾಲದಲ್ಲಿ ಲೋಕಾರ್ಪಣೆ ಮಾಡುತ್ತಿದೆ.

ಈ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವದ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಂಧ್ರ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಜ| ಎಸ್. ಅಬ್ದುಲ್ ನಜೀರ್ ಅವರು ಆಗಮಿಸಿ, ನಾಲ್ಕೂ ಸಭಾಂಗಣಗಳನ್ನು ಅಧಿಕೃತವಾಗಿ ಲೋಕಾರ್ಪಣೆ ಮಾಡಲಿದ್ದಾರೆ. ಈ ನಾಲ್ಕು ಅದ್ದೂರಿ ಪಾಲೆಮಾರ್ ಸಭಾಂಗಣಗಳ ಮಹಾ ಲೋಕಾರ್ಪಣಾ ಸಮಾರಂಭವು ಮೇ23ರಂದು ಅತ್ಯಂತ ವೈಭವದಿಂದ ಜರುಗಲಿದೆ. ಅಂದು ಬೆಳಿಗ್ಗೆ 10ಗಂಟೆಗೆ ಮಂಗಳೂರಿನ ಮೇರಿಹಿಲ್‌ನ ಲ್ಲಿರುವ ಪಾಲೆಮಾರ್ ಕನ್ವೆನ್ಶನ್ ಸೆಂಟರ್‌ ನಲ್ಲಿ ಲೋಕಾರ್ಪಣಾ ಕಾರ್ಯಕ್ರಮ ನಡೆಯಲಿದೆ ಎಂದು ಪಾಲೆಮಾರ್ ತಿಳಿಸಿದ್ದಾರೆ.

ಸಮಾರಂಭದಲ್ಲಿ ಭಾರತ ಸರ್ಕಾರದ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ, ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು. ಟಿ. ಖಾದರ್, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಬ್ರಿಜೇಶ್ ಚೌಟ, ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ, ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಮುಲ್ಕಿ-ಮೂಡುಬಿದಿರೆ ಕ್ಷೇತ್ರದ ಶಾಸಕರಾದ ಉಮಾನಾಥ ಕೋಟ್ಯಾನ್ ಹಾಗೂ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾದ ಐವನ್ ಡಿಸೋಜ ಸೇರಿದಂತೆ ಕರಾವಳಿ ಮತ್ತು ರಾಜ್ಯ ಮಟ್ಟದ ಹಲವಾರು ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಖಂಡರು ಭಾಗವಹಿಸಲಿದ್ದಾರೆ ಎಂದು ಕೃಷ್ಣಾ ಜೆ ಪಾಲೆಮಾರ್ ತಿಳಿಸಿದ್ದಾರೆ.

1.ಪಾಲೆಮಾರ್ ಕನ್ವೆನ್ಶನ್ ಸೆಂಟರ್, ಮೇರಿಹಿಲ್, ಮಂಗಳೂರು: ಅದ್ದೂರಿತನ ಮತ್ತು ಸಾಂಪ್ರದಾಯಿಕತೆಯ ಅದ್ಭುತ ಸಮ್ಮಿಲನವೇ ಮೇರಿಹಿಲ್‌ನಲ್ಲಿರುವ ಪಾಲೆಮಾರ್ ಕನ್ವೆನ್ಶನ್ ಸೆಂಟರ್. ನೋಡುಗರ ಕಣ್ಣು ಸೆಳೆಯುವ ಮರದ ಕರಕುಶಲತೆಯಿಂದ ಕೂಡಿದ ಭವ್ಯ ಒಳಾಂಗಣ ವಿನ್ಯಾಸ ಇದರ ಪ್ರಮುಖ ಆಕರ್ಷಣೆಯಾಗಿದೆ. ಸಾಂಪ್ರದಾಯಿಕ ಮದುವೆ ಸಮಾರಂಭಗಳ ಜೊತೆಗೆ ಕಾರ್ಪೊರೇಟ್ ಶೈಲಿಯ ಹೈ-ಟೆಕ್ ಕಾರ್ಯಕ್ರಮಗಳನ್ನು ನಡೆಸಲು ಸೂಕ್ತವಾಗಿದೆ.

2.ಪಾಲೆಮಾರ್ ಗಾರ್ಡನ್ ಮೊರ್ಗನ್ಸ್ ಗೇಟ್ :- ಸುಂದರವಾದ ಹೊರಾಂಗಣ ಈಜುಕೊಳ, ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ ಮತ್ತು ಬೃಹತ್ ಹಸಿರು ಮೈದಾನ.ಸುಂದರ ವಿನ್ಯಾಸದ ಪಾರಂಪರಿಕ ಕಟ್ಟಡಗಳು ಇಲ್ಲಿನ ವಿಶೇಷ ತೆಯಾಗಿದೆ.

3. ಪಾಲೆಮಾರ್ ಫಾರ್ಮ್ಸ್, ಸುರತ್ಕಲ್: ನಗರ ಪ್ರದೇಶದ ವಾತಾವರಣದಿಂದ ದೂರವಿದ್ದು, ನಿಸರ್ಗದ ಮೌನ, ತಂಪಾದ ಗಾಳಿ, ಮರಗಳ ನೆರಳು ಹಾಗೂ ಪಕ್ಷಿಗಳ ಕಲರವದ ನಡುವೆ ಹಸಿರನ್ನು ಪ್ರೀತಿಸುವವರಿಗಾಗಿ ಸುರತ್ಕಲ್ ಸಮೀಪ 20 ಎಕರೆ ವಿಶಾಲವಾದ ಜಾಗ ದಲ್ಲಿ ಈ ಫಾರ್ಮ್ಸ್ ಸಿದ್ಧಗೊಂಡಿದೆ. ಆಪ್ತ ಒಡನಾಡಿಗಳೊಂದಿಗೆ ಆಚರಿಸುವ ಮದುವೆ, ಹೊರಾಂಗಣ ಕಾರ್ಯಕ್ರಮ ಗಳು, ಬರ್ತ್ಡೇ ಪಾರ್ಟಿಗಳು, ಮೆಹೆಂದಿ ಹಾಗೂ ಕೌಟುಂಬಿಕ ಸಮಾರಂಭಗಳಿಗೆ ಇದು ಸೂಕ್ತ ತಾಣ.

4. ನೇತ್ರಾವತಿ ಸಭಾಭವನ, ಕಡೆಕಾರ್, ಜೆಪ್ಪಿನಮೊಗರು: ಮಂಗಳೂರಿನ ಜೀವನಾಡಿ ನೇತ್ರಾವತಿ ನದಿಯ ದಡದಲ್ಲಿರುವ ಜೆಪ್ಪಿನಮೊಗರಿನ ಕಡೆಕಾರ್ ಎಂಬ ಅತ್ಯಂತ ಪ್ರಶಾಂತ ಮತ್ತು ಪವಿತ್ರ ವಾತಾವರಣದಲ್ಲಿ ಈ ಸಭಾಂಗಣ ತಲೆಯೆತ್ತಿದೆ. ಒಂದು ಬದಿಯಲ್ಲಿ ನದಿಯ ತಣ್ಣನೆ ಗಾಳಿ, ಇನ್ನೊಂದು ಬದಿಯಲ್ಲಿ ಪುರಾತನ ದೇವಸ್ಥಾನವಿದ್ದು, ಇಡೀ ಪರಿಸರಕ್ಕೆ ದೈವಿಕ ಕಳೆಯನ್ನು ನೀಡುತ್ತದೆ. ವಿವಾಹ ಕಾರ್ಯಕ್ರಮಗಳು, ಧಾರ್ಮಿಕ ಕಾರ್ಯಕ್ರಮಗಳು, ಸಂಗೀತ ಕಛೇರಿಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಇದು ಅತ್ಯಂತ ಪ್ರಶಸ್ತವಾಗಿದೆ. ಕಡಿಮೆ ದರದಲ್ಲಿ ಜನಸಾಮಾನ್ಯರಿಗೂ ಅನುಕೂಲವಾಗುವಂತೆ ಇದನ್ನು ನಿರ್ಮಿಸ ಲಾಗಿದೆ. ವಾಹನ ಪಾರ್ಕಿಂಗ್. ಈ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ನಾಲ್ಕೂ ಸಭಾಭವನಗಳಲ್ಲಿ ಅತ್ಯಂತ ವಿಶಾಲವಾದ, ವ್ಯವಸ್ಥಿತವಾದ ಪಾರ್ಕಿಂಗ್ ಸ್ಥಳಾವಕಾಶವನ್ನು ಕಲ್ಪಿಸಲಾಗಿದೆ. ನೂರಾರು ವಾಹನಗಳು ಏಕಕಾಲದಲ್ಲಿ ಯಾವುದೇ ಗೊಂದಲವಿಲ್ಲದೆ ಬಂದು ಹೋಗಲು ಇಲ್ಲಿ ಮುಕ್ತ ಅವಕಾಶವಿದೆ.

ರಾಷ್ಟ್ರೀಯ ಹೆದ್ದಾರಿ ಹಾಗೂ ಮುಖ್ಯರಸ್ತೆಗಳ ಸಂಪರ್ಕಎಲ್ಲಾ ನಾಲ್ಕು ಸಭಾಭವನಗಳನ್ನು ನಗರದ ಪ್ರಮುಖ ಮುಖ್ಯ ರಸ್ತೆ ಹಾಗೂ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿಯೇ ನಿರ್ಮಿಸಲಾಗಿದೆ. ಹಾಗಾಗಿ ದೂರದ ಊರುಗಳಿಂದ ಬರುವ ಅತಿಥಿಗಳು ಹೆಚ್ಚಿನ ಹುಡುಕಾಟವಿಲ್ಲದೆ, ಉತ್ತಮ ರಸ್ತೆ ಸಂಪರ್ಕದ ಮೂಲಕ ಅತ್ಯಂತ ಸುಲಭವಾಗಿ ಮತ್ತು ಸರಾಗ ವಾಗಿ ನಿಗದಿತ ಸಮಯಕ್ಕೆ ಸಭಾಭವನಗಳನ್ನು ತಲುಪಬಹುದು.

ಎಲ್ಲರಿಗೂ ಕೈಗೆಟಕುವ ದರದಲ್ಲಿ ಲಭ್ಯ: ಕಾರ್ಪೊರೇಟ್ ಶೈಲಿಯ ಅದ್ದೂರಿ ಈವೆಂಟ್‌ಗಳಿಂದ ಹಿಡಿದು ಜನಸಾಮಾನ್ಯರ ಸಣ್ಣ ಬಜೆಟ್‌ನ ಕಾರ್ಯಕ್ರಮ ಗಳವರೆಗೆ, ಪ್ರತಿಯೊಬ್ಬರ ಆರ್ಥಿಕ ಶಕ್ತಿಗೆ ತಕ್ಕಂತೆ ಇಲ್ಲಿ ಸಭಾಂಗಣಗಳು ಲಭ್ಯವಿವೆ. ಎಲ್ಲ ವರ್ಗದ ಜನರಿಗೂ ಕೈಗೆಟಕುವ ದರದ ಸಭಾಂಗಣಗಳನ್ನು ಇಲ್ಲಿ ರೂಪಿಸಲಾಗಿದೆ.

ಸುದ್ದಿಗೋಷ್ಠಿಯಲ್ಲಿ ವಿಕಾಸ ಎಜುಕೇಶನ್ ಟ್ರಸ್ಟ್ ನ ಟ್ರಸ್ಟಿಗಳಾದ ಜೆ.ಕೆ.ರಾವ್, ಕೊರಗಪ್ಪ, ಸೂರಜ್ ಕುಮಾರ್ ಕಲ್ಯ, ಜೆ.ಸಂತೋಷ್ ಕುಮಾರ್, ಲ್ಯಾಂಡ್ ಲಿಂಕ್ಸ್ ನ ಉಪಾಧ್ಯಕ್ಷ ಪ್ರದೀಪ್ ಪಾಲ್ ಮಾರ್ ಮೊದಲಾದವರು ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ದೆಹಲಿ ಮೂಲದ ಬೃಹತ್ ಡ್ರಗ್ ಜಾಲ ಭೇದಿಸಿದ ಬೆಂಗಳೂರು ಪೊಲೀಸರು; 34 ಕೋಟಿ ಮೌಲ್ಯದ ಡ್ರಗ್ಸ್​​ ವಶಕ್ಕೆ; 8 ಮಂದಿ ಬಂಧನ

Next Post

ಅಹಮದಾಬಾದ್ ಜ್ಯುವೆಲ್ಲರಿ ಶಾಪ್ ಉದ್ಯೋಗಿಯಿಂದ 1.66 ಕೋಟಿ ಮೌಲ್ಯದ ಚಿನ್ನಾಭರಣ ಲೂಟಿ- ಆರೋಪಿ ಹರ್ಷಿದಾ ಶೆಟ್ಟಿ ಅರೆಸ್ಟ್‌

Related Posts

ತುಳುನಾಡಿನಲ್ಲಿ ಶ್ರದ್ಧಾಭಕ್ತಿಯ ನಾಗರಪಂಚಮಿ ಸಂಭ್ರಮ: ಮೂಲಸ್ಥಾನ, ನಾಗಬನಗಳಲ್ಲಿ ಕುಟುಂಬಸ್ಥರಿಂದ ಹಾಲು-ಎಳನೀರು ಸಮರ್ಪಣೆ
ಕರಾವಳಿ

ತುಳುನಾಡಿನಲ್ಲಿ ಶ್ರದ್ಧಾಭಕ್ತಿಯ ನಾಗರಪಂಚಮಿ ಸಂಭ್ರಮ: ಮೂಲಸ್ಥಾನ, ನಾಗಬನಗಳಲ್ಲಿ ಕುಟುಂಬಸ್ಥರಿಂದ ಹಾಲು-ಎಳನೀರು ಸಮರ್ಪಣೆ

August 18, 2026
10
ರೋಹನ್ ಕಾರ್ಪೊರೇಶನ್ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ – ಜ್ಯಾಕ್ ಅನಿಲ್ ಅವರಿಗೆ ‘ಕೃಷಿ ವೃಕ್ಷಾನ್ವೇಷಕ ಸಾಧಕ’ ಪ್ರಶಸ್ತಿ ಪ್ರದಾನ
ಕರಾವಳಿ

ರೋಹನ್ ಕಾರ್ಪೊರೇಶನ್ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ – ಜ್ಯಾಕ್ ಅನಿಲ್ ಅವರಿಗೆ ‘ಕೃಷಿ ವೃಕ್ಷಾನ್ವೇಷಕ ಸಾಧಕ’ ಪ್ರಶಸ್ತಿ ಪ್ರದಾನ

August 15, 2026
35
Next Post
ಅಹಮದಾಬಾದ್ ಜ್ಯುವೆಲ್ಲರಿ ಶಾಪ್ ಉದ್ಯೋಗಿಯಿಂದ 1.66 ಕೋಟಿ ಮೌಲ್ಯದ ಚಿನ್ನಾಭರಣ ಲೂಟಿ- ಆರೋಪಿ ಹರ್ಷಿದಾ ಶೆಟ್ಟಿ ಅರೆಸ್ಟ್‌

ಅಹಮದಾಬಾದ್ ಜ್ಯುವೆಲ್ಲರಿ ಶಾಪ್ ಉದ್ಯೋಗಿಯಿಂದ 1.66 ಕೋಟಿ ಮೌಲ್ಯದ ಚಿನ್ನಾಭರಣ ಲೂಟಿ- ಆರೋಪಿ ಹರ್ಷಿದಾ ಶೆಟ್ಟಿ ಅರೆಸ್ಟ್‌

Discussion about this post

Recent News

94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ

94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ

August 21, 2026
10
1988ರಲ್ಲಿ ನಡೆದ ಕೊಲೆ ಪ್ರಕರಣ ಮುಕ್ತಾಯಗೊಳಿಸಿರುವ ಸುಪ್ರೀಂ ಕೋರ್ಟ್, ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 105 ವರ್ಷದ ವೃದ್ಧನಿಗೆ ​ಸೆರೆವಾಸದಿಂದ ಮುಕ್ತಿ

1988ರಲ್ಲಿ ನಡೆದ ಕೊಲೆ ಪ್ರಕರಣ ಮುಕ್ತಾಯಗೊಳಿಸಿರುವ ಸುಪ್ರೀಂ ಕೋರ್ಟ್, ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 105 ವರ್ಷದ ವೃದ್ಧನಿಗೆ ​ಸೆರೆವಾಸದಿಂದ ಮುಕ್ತಿ

August 21, 2026
35
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ

94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ

August 21, 2026
1988ರಲ್ಲಿ ನಡೆದ ಕೊಲೆ ಪ್ರಕರಣ ಮುಕ್ತಾಯಗೊಳಿಸಿರುವ ಸುಪ್ರೀಂ ಕೋರ್ಟ್, ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 105 ವರ್ಷದ ವೃದ್ಧನಿಗೆ ​ಸೆರೆವಾಸದಿಂದ ಮುಕ್ತಿ

1988ರಲ್ಲಿ ನಡೆದ ಕೊಲೆ ಪ್ರಕರಣ ಮುಕ್ತಾಯಗೊಳಿಸಿರುವ ಸುಪ್ರೀಂ ಕೋರ್ಟ್, ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 105 ವರ್ಷದ ವೃದ್ಧನಿಗೆ ​ಸೆರೆವಾಸದಿಂದ ಮುಕ್ತಿ

August 21, 2026
ಬಂಟ್ವಾಳ: ಬೈಕ್ ಸವಾರನಿಗೆ ಅಡ್ಡಗಟ್ಟಿ ತಲ್ವಾರ್ ತೋರಿಸಿ, ಸಿಮೆಂಟ್ -ಕಬ್ಬಿಣ ಮಾರಾಟ ಸಂಸ್ಥೆಯ ಲೈನ್ ಸೇಲ್ ಸಂಗ್ರಹದ 8.5 ಲಕ್ಷ ರೂ ಸುಲಿಗೆ

ಬಂಟ್ವಾಳ: ಬೈಕ್ ಸವಾರನಿಗೆ ಅಡ್ಡಗಟ್ಟಿ ತಲ್ವಾರ್ ತೋರಿಸಿ, ಸಿಮೆಂಟ್ -ಕಬ್ಬಿಣ ಮಾರಾಟ ಸಂಸ್ಥೆಯ ಲೈನ್ ಸೇಲ್ ಸಂಗ್ರಹದ 8.5 ಲಕ್ಷ ರೂ ಸುಲಿಗೆ

August 21, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d