ರಾಯಚೂರು, ಜುಲೈ 21: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿಶೆಟ್ಟಿ (43) ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ.

ರವಿ ಶೆಟ್ಟಿ ತಮ್ಮ ಸ್ನೇಹಿತರೊಂದಿಗೆ ಮಂತ್ರಾಲಯ ರಾಘವೇಂದ್ರ ಸ್ವಾಮಿಯ ದರ್ಶನಕ್ಕೆ ತೆರಳಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅವರ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ರವಿ ಶೆಟ್ಟಿಯವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಮಂಗಳೂರಿನ ಪ್ರದೀಪ್ ಆಳ್ವ, ಪುರುಷೋತ್ತಮ ಭಂಡಾರಿ, ಸಿಎ ಸುಧೇಶ್ ರೈ ಎಂದು ಗುರುತಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಕಾರಿನಲ್ಲಿದ್ದ ಇತರ ಮೂವರು ಕುಟುಂಬ ಸದಸ್ಯರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಅಪಘಾತ ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿಯಲು ತನಿಖೆ ನಡೆಯುತ್ತಿದೆ.


Discover more from Coastal Times Kannada
Subscribe to get the latest posts sent to your email.








Discussion about this post