ಮಂಗಳೂರು: ಮಂಗಳೂರು ಕಥೋಲಿಕ್ ಕೊ – ಅಪರೇಟಿವ್ ಬ್ಯಾಂಕ್ ನಿಯಮಿತ ಇದರ , 13 ಅಗೋಸ್ತ್ ರಂದು ನಾಮಪತ್ರ ಸಲ್ಲಿಕೆಯೊಂದಿಗೆ ಆರಂಭಗೊಂಡ ಚುನಾವಣಾ ಪ್ರಕ್ರಿಯೆಗೆ , ಆಕಾಂಕ್ಷೆವುಳ್ಳ 14 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಅಗೋಸ್ತ್ 20 ರಂದು ನಾಮಪತ್ರ ಪರಿಶೀಲನೆಯಲ್ಲಿ ನಾಮಪತ್ರ ಸಲ್ಲಿಸಿದ ಎಲ್ಲಾ 14 ಅರ್ಭ್ಯರ್ಥಿಗಳು ಸಲ್ಲಿಸಿದ ನಾಮಪತ್ರಗಳು ಕ್ರಮಬದ್ದವಾಗಿರುವುದರಿಂದ, ರಿಟರ್ನಿಂಗ್ ಅಧಿಕಾರಿ ಶ್ರೀ ಸುಧೀರ್ ಕುಮಾರ್ ಜೆ. – ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳನ್ನು ಚುನಾಯಿತರೆಂದು ಫೋಷಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಮಂಗಳೂರು ಕಥೋಲಿಕ್ ಕೊ-ಅಪರೇಟಿವ್ ಬ್ಯಾಂಕ್ (ಎಂ.ಸಿ.ಸಿ.ಬ್ಯಾಂಕ್) ಇದರ ಆಡಳಿತ ಮಂಡಳಿಯ ಎಲ್ಲಾ ನಿರ್ದೇಶಕ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿರುವುದರಿಂದ, ಆಗಸ್ಟ್ 27 ರಂದು ನಡೆಯಬೇಕಿದ್ದ ಚುನಾವಣೆ ಪ್ರಕ್ರಿಯೆ ನಡೆಯುವುದಿಲ್ಲ ಎಂದು ಎಂದು ಬ್ಯಾಂಕಿನ ಮಹಾಪ್ರಬಂಧಕ ಸುನಿಲ್ ಮಿನೇಜಸ್ ತಿಳಿಸಿದ್ದಾರೆ.
ಈ ಮೂಲಕ 111 ವರ್ಷಗಳ ಇತಿಹಾಸವಿರುವ, ಮಂಗಳೂರಿನ ಸಹಕಾರಿ ರಂಗದ ಮುಂಚೂಣಿಯ ಎಂಸಿಸಿ ಬ್ಯಾಂಕಿನ ಚುಕ್ಕಾಣಿ, ಮುಂದಿನ 5 ವರ್ಷಗಳ ಅವಧಿಗೆ, ಹಾಲಿ ಅಧ್ಯಕ್ಷ ಶ್ರೀ ಅನಿಲ್ ಲೋಬೊ ನೇತೃತ್ವದ ತಂಡದ ಪಾಲಾಗಿದೆ. 111 ವರ್ಷಗಳ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಬ್ಯಾಂಕಿನ ನಿರ್ದೇಶಕ ಮಂಡಳಿಯ ಆಯ್ಕೆ ಅವಿರೋಧವಾಗಿ ನಡೆದಿದ್ದು, ವೆಲೆನ್ಸಿಯಾ ನಿವಾಸಿ ಶ್ರೀ ಅನಿಲ್ ಲೋಬೊ ನೇತೃತ್ವದ ತಂಡದಲ್ಲಿ ಜೆರಾಲ್ಡ್ ಪಿಂಟೋ, ಕಲ್ಯಾಣ್‌ಪುರ, ರೋಶನ್ ಡಿ’ಸೋಜ, ಮುಡಿಪು , ಹೆರಾಲ್ಡ್ ಜೋನ್ ಮೊಂತೆರೊ, ಕೆಲರಾಯ್, ಜೋಸೆಫ್ ಎಂ.ಅನಿಲ್ ಪತ್ರಾವೊ, ದೆರೆಬೈಲ್, ಡೇವಿಡ್ ಡಿ’ಸೋಜ, ಬಜಪೆ, ಮೆಲ್ವಿನ್ ಅಕ್ವಿನಸ್ ವಾಸ್, ಮಂಗಳೂರು, ಜೆ.ಪಿ.ರೋಡ್ರಿಗಸ್, ಪುತ್ತೂರು, ಆಂಡ್ರು ಡಿ’ಸೋಜ, ಮೂಡಬಿದ್ರಿ, ಎಲ್‌ರೊ ಕಿರಣ್ ಕ್ರಾಸ್ಟೊ, ಗಂಗೊಳ್ಳಿ, ಜೆರಾಲ್ಡ್ ಜೂಡ್ ಡಿ’ಸಿಲ್ವ, ಕಾರ್ಕಳ, ವಿನ್ಸೆಂಟ್ ಅನಿಲ್ ಲಸ್ರಾದೊ, ಬಂಟ್ವಾಳ, ಐರಿನ್ ರೆಬೆಲ್ಲೊ, ಕುಲಶೇಖರ ಮತ್ತು ಫ್ರೀಡಾ ಫ್ಲಾವಿಯಾ ಡಿ’ಸೋಜ, ಬಳ್ಕುಂಜೆ ಇದ್ದಾರೆ.
ಹಾಲಿ ಬ್ಯಾಂಕಿನ ಆಡಳಿತ ಮಂಡಲಿಯ ಅವಧಿಯು ಅಗೋಸ್ತ್ 26 ರಂದು ಕೊನೆಗೊಳ್ಳಲಿದ್ದು, ನಂತರ ನೂತನ ಆಡಳಿತ ಮಂಡಲಿ ಘಟನೆಯಾಗಲಿದೆ.
Discover more from Coastal Times Kannada
Subscribe to get the latest posts sent to your email.
Discussion about this post