• About us
  • Contact us
  • Disclaimer
Wednesday, July 22, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಆ.24: ಪುರಭವನದಲ್ಲಿ “ತುಳುನಾಡ ಜಾನಪದ ಉಚ್ಛಯ”

Coastal Times by Coastal Times
August 21, 2024
in ಕರಾವಳಿ
ಆ.24: ಪುರಭವನದಲ್ಲಿ “ತುಳುನಾಡ ಜಾನಪದ ಉಚ್ಛಯ”
16
VIEWS
WhatsappTelegramShare on FacebookShare on Twitter

ಮಂಗಳೂರು: “ಅಖಿಲ ಭಾರತ ತುಳು ಒಕ್ಕೂಟ ತುಳು ಭಾಷೆ, ಸಂಸ್ಕೃತಿ ಅಭಿವೃದ್ಧಿ ನೆಲೆಯಲ್ಲಿ ಸ್ಥಾಪಿಸಲ್ಪಟ್ಟಿದ್ದು ದೇಶದಾದ್ಯಂತ ಸುಮಾರು 46 ತುಳು ಸೇವಾ ಸಂಸ್ಥೆಗಳು ಇದರ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿವೆ. ತುಳು ಭಾಷೆಗೆ ಸಂಬಂಧಿಸಿದಂತೆ ಕಾರ್ಯಕ್ರಮಗಳು, ಸಮಾರಂಭಗಳು, ಸಮ್ಮೇಳನಗಳು ದೇಶ ವಿದೇಶದಲ್ಲಿ ನಡೆಯುತ್ತಿದೆ. ಬರುವ ಅಗಸ್ಟ್ 24, ಶನಿವಾರದಂದು ತುಳುನಾಡ ಜಾನಪದ ಉಚ್ಛಯ ಕಾರ್ಯಕ್ರಮ ನಡೆಯಲಿದ್ದು ಇದಕ್ಕೆ ತುಳುವರ ಸಹಕಾರ ನಿರೀಕ್ಷಿಸುತ್ತಿದ್ದೇವೆ“ ಎಂದು ಸಂಘಟನೆಯ ಅಧ್ಯಕ್ಷ ಎಸಿ ಭಂಡಾರಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.

ಅಂದು ಬೆಳಗ್ಗೆ 8.30ಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಪುರಭವನದ ವರೆಗೆ ತುಳುವೆರ ದಿಬ್ಬಣ ಮೆರವಣಿಗೆ ನಡೆಯಲಿದೆ. ಇದರಲ್ಲಿ ಸುಮಾರು 8 ಜಾನಪದ ಕಲಾಕೂಟಗಳು ಭಾಗವಹಿಸಲಿವೆ. ಈ ಸಮಾರಂಭವನ್ನು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಉದ್ಘಾಟಿಸಲಿದ್ದು, ಅತಿಥಿಗಳಾಗಿ ದಿವಾಕರ ಶೆಟ್ಟಿ ಸಾಂಗ್ಲಿ, ನಗ್ರಿಗುತ್ತು ರೋಹಿತ್‌ ಶೆಟ್ಟಿ, ಕರ್ನೂರು ಮೋಹನ್ ರೈ, ಅಶೋಕ್ ಪಕ್ಕಳ ಮುಂಬೈಯವರು ಭಾಗವಹಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ಕಂಬಳಕೂಟ ಹೆಸರುವಾಸಿಯಾದ ನಂದಳಿಕೆ ಶ್ರೀಕಾಂತ ಭಟ್ ರವರ ಗಿಡ್ಡೆರು “ನಂದಳಿಕೆ ಪಾಂಡು”ವಿಗೆ ಸನ್ಮಾನ ನಡೆಯಲಿದೆ. ಬೆಳಗ್ಗೆ 9.30ಕ್ಕೆ ಪುರಭವನದಲ್ಲಿ ನಡೆಯಲಿರುವ ನಮ್ಮ ತುಳುನಾಡ ಕಲಾಪಂಥವನ್ನುಡಾ| ಎ. ಸದಾನಂದ ಶೆಟ್ಟಿ ಇವರು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಮೇಯರ್ ಸುಧೀರ್ ಶೆಟ್ಟಿಕಣ್ಣೂರು ಇವರು ವಹಿಸಲಿದ್ಧಾರೆ. ಮುಖ್ಯ ಅತಿಥಿಗಳಾಗಿ ಪ್ರೊ.ಪಿ.ಎಲ್ ಧರ್ಮ, ಮಾಜಿ ಸಚಿವ ಬಿ.ರಮಾನಾಥ ರೈ, ಐವನ್ ಡಿ’ಸೋಜ, ರಾಜೇಶ್ ಖನ್ನಾ, ಜಾನಕಿ ಬ್ರಹ್ಮಾವರ ಭಾಗವಹಿಸುವರು.

ಅಖಿಲ ಭಾರತ ತುಳು ಒಕ್ಕೂಟ ತುಳು ಭಾಷೆ, ಸಂಸ್ಕೃತಿ ಅಭಿವೃದ್ಧಿ ನೆಲೆಯಲ್ಲಿ ಸ್ಥಾಪಿಸಲ್ಪಟ್ಟಿದ್ದು ದೇಶದಾದ್ಯಂತ ಸುಮಾರು 46 ತುಳು ಸೇವಾ ಸಂಸ್ಥೆಗಳು ಇದರ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿವೆ. ತುಳು ಭಾಷೆಗೆ ಸಂಬಂಧಿಸಿದಂತೆ ಕಾರ್ಯಕ್ರಮಗಳು, ಸಮಾರಂಭಗಳು, ಸಮ್ಮೇಳನಗಳು ದೇಶ ವಿದೇಶದಲ್ಲಿ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಈ ಸಮಾರಂಭದಲ್ಲಿ ವಿವಿಧ ಭಾಷಾ ಅಕಾಡೆಮಿಗಳ ಅಧ್ಯಕ್ಷರುಗಳಾದ ತಾರನಾಥ್ ಗಟ್ಟಿ ಕಾಪಿಕಾಡ್, ತಲ್ಲೂರು ಶಿವರಾಮ್ ಶೆಟ್ಟಿ, ಜೋಕಿಂ ಸ್ವಾನಿ ಅಲ್ವಾರಿಸ್, ಉಮರ್ ಯು. ಹೆಚ್. ಸದಾನಂದ ಮಾವಜಿ, ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ ಭಾಗವಹಿಸಲಿದ್ದಾರೆ. ನಮ್ಮ ತುಳುನಾಡ ಕಲಾಪಂಥದಲ್ಲಿ ಸುಮಾರು 13 ತುಳು ಸೇವಾ ಸಂಘಟನೆಗಳು ಭಾಗವಹಿಸಲಿದ್ದು, ಪ್ರಥಮ ನಗದು ಬಹುಮಾನ 50,000, ದ್ವಿತೀಯ ರೂ.30,000, ತೃತೀಯ ರೂ. 20,000 ಹಾಗೂ ಭಾಗವಹಿಸಿದ ಎಲ್ಲಾ ತಂಡಗಳಿಗೆ ಗೌರವ ಧನ ರೂ.5,000 ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಗುವುದು“ ಎಂದರು.

ಸಂಘಟನೆಯ ಪ್ರಧಾನ ಸಂಚಾಲಕರಾದ ಕದ್ರಿ ನವನೀತ ಶೆಟ್ಟಿ ಈ ಬಗ್ಗೆ ವಿವರಣೆ ನೀಡುತ್ತಾ”ಸಂಜೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಗುರುದೇವಾನಂದ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದು, ಸಭಾಧ್ಯಕ್ಷರಾಗಿ ಸ್ಪೀಕರ್ ಯು.ಟಿ. ಖಾದರ್,ಅತಿಥಿಗಳಾಗಿ ಶಿವರಾಜ್ ಎಸ್. ತಂಗಡಗಿ, ಸೋಮಣ್ಣ ಬೇವಿನಮರದ ಭಾಗವಹಿಸಲಿದ್ದಾರೆ.

“ಪೆರ್ಮೆದ ತುಳುವೆ” 2024 ಪ್ರಶಸ್ತಿಯನ್ನು ಹಿರಿಯ ನಾಟಕಕಾರ, ನಟ, ನಿರ್ಮಾಪಕ, ನಿರ್ದೇಶಕ, ಸಂಘಟಕ ತೋನ್ಸೆ ವಿಜಯಕುಮಾರ್ ಶೆಟ್ಟಿ ಮುಂಬೈ ಇವರಿಗೆ ನೀಡಿ ಗೌರವಿಸಲಾಗುವುದು. ಪ್ರಶಸ್ತಿ ಪ್ರದಾನವನ್ನು ಡಾ| ಎಂ. ಮೋಹನ್ಆಳ್ವ ಮೂಡಬಿದಿರೆ ನಿರ್ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಶಶಿಕಿರಣ್ ಶೆಟ್ಟಿ, ಮುಂಬೈ, ಐಕಳ ಹರೀಶ್ ಶೆಟ್ಟಿ, ಪ್ರವೀಣ್ ಭೋಜ ಶೆಟ್ಟಿ, ಧರ್ಮಪಾಲ ಯು. ದೇವಾಡಿಗ, ಕೆ.ಡಿ. ಶೆಟ್ಟಿ, ರವೀಂದ್ರನಾಥ ಎಂ. ಭಂಡಾರಿ, ಕಿಶನ್ ಶೆಟ್ಟಿ ಮುಂಬೈಯವರು ಉಪಸ್ಥಿತರಿರುವರು.

ಬಹುಮಾನ ವಿತರಣೆಯನ್ನು ಬರೋಡ ತುಳುಕೂಟದ ಅಧ್ಯಕ್ಷ ಶಶಿಧರ್ ಬಿ. ಶೆಟ್ಟಿಯವರು ನೆರವೇರಿಸಲಿದ್ದಾರೆ. ರಾತ್ರಿ 7.00ರಿಂದ 9.00ರವರೆಗೆ ಅಕಾಡೆಮಿಗಳ ಪ್ರಾಯೋಜಿತ ಕಲಾ ಪ್ರದರ್ಶನ ನಡೆಯಲಿದೆ“ ಎಂದವರು ಮಾಹಿತಿ ನೀಡಿದರು.

ಪತ್ರಿಕಾಗೋಷ್ಟಿಯಲ್ಲಿ ಒಕ್ಕೂಟದ ಉಪಾಧ್ಯಕ್ಷರಾದ ದಾಮೋದರ ನಿಸರ್ಗ, ವಿಜಯಲಕ್ಷ್ಮಿ ಬಿ. ಶೆಟ್ಟಿ, ತಾರನಾಥ ಶೆಟ್ಟಿ ಬೋಳಾರ್, ಪ್ರಧಾನ ಕಾರ್ಯದರ್ಶಿ ಮುಚ್ಚಿ ಕರುಣಾಕರ ಶೆಟ್ಟಿ, ಕೋಶಾಧಿಕಾರಿ ಚಂದ್ರಹಾಸ ದೇವಾಡಿಗ, ರಾಜೇಶ್ ಆಳ್ವ, ಪ್ರಧಾನ ಕಾರ್ಯದರ್ಶಿ ಮುಲ್ಕಿ ಕರುಣಾಕರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಬೆಳ್ತಂಗಡಿ: ಮನೆ ಅಂಗಳದಲ್ಲಿಯೇ ನಿವೃತ್ತ ಶಿಕ್ಷಕನ ಬರ್ಬರ ಹತ್ಯೆ

Next Post

ರಾಜ್ಯದ್ಯಂತ ಕೈ ಪ್ರತಿಭಟನೆ ; ಪ್ರಾಸಿಕ್ಯೂಷನ್ ಅನುಮತಿ ನೀಡಿದ ಬೆನ್ನಲೇ ಎಚ್ಚರಿಕೆ ನಡೆ ಅನುಸರಿಸಿದ ರಾಜ್ಯಪಾಲರು, ಬುಲೆಟ್ ಪ್ರೂಫ್ ಕಾರು ಬಳಕೆ

Related Posts

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ
ಕರಾವಳಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
165
ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ
ಕರಾವಳಿ

ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ

July 21, 2026
29
Next Post
ರಾಜ್ಯದ್ಯಂತ ಕೈ ಪ್ರತಿಭಟನೆ ; ಪ್ರಾಸಿಕ್ಯೂಷನ್ ಅನುಮತಿ ನೀಡಿದ ಬೆನ್ನಲೇ ಎಚ್ಚರಿಕೆ ನಡೆ ಅನುಸರಿಸಿದ ರಾಜ್ಯಪಾಲರು, ಬುಲೆಟ್ ಪ್ರೂಫ್ ಕಾರು ಬಳಕೆ

ರಾಜ್ಯದ್ಯಂತ ಕೈ ಪ್ರತಿಭಟನೆ ; ಪ್ರಾಸಿಕ್ಯೂಷನ್ ಅನುಮತಿ ನೀಡಿದ ಬೆನ್ನಲೇ ಎಚ್ಚರಿಕೆ ನಡೆ ಅನುಸರಿಸಿದ ರಾಜ್ಯಪಾಲರು, ಬುಲೆಟ್ ಪ್ರೂಫ್ ಕಾರು ಬಳಕೆ

Discussion about this post

Recent News

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

July 22, 2026
35
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
165
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

July 22, 2026
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d