• About us
  • Contact us
  • Disclaimer
Monday, October 5, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಂಟ್ವಾಳ: ಬೈಕ್ ಸವಾರನಿಗೆ ಅಡ್ಡಗಟ್ಟಿ ತಲ್ವಾರ್ ತೋರಿಸಿ, ಸಿಮೆಂಟ್ -ಕಬ್ಬಿಣ ಮಾರಾಟ ಸಂಸ್ಥೆಯ ಲೈನ್ ಸೇಲ್ ಸಂಗ್ರಹದ 8.5 ಲಕ್ಷ ರೂ ಸುಲಿಗೆ

Coastal Times by Coastal Times
August 21, 2026
in ಕ್ರೈಮ್ ನ್ಯೂಸ್
ಬಂಟ್ವಾಳ: ಬೈಕ್ ಸವಾರನಿಗೆ ಅಡ್ಡಗಟ್ಟಿ ತಲ್ವಾರ್ ತೋರಿಸಿ, ಸಿಮೆಂಟ್ -ಕಬ್ಬಿಣ ಮಾರಾಟ ಸಂಸ್ಥೆಯ ಲೈನ್ ಸೇಲ್ ಸಂಗ್ರಹದ 8.5 ಲಕ್ಷ ರೂ ಸುಲಿಗೆ
67
VIEWS
WhatsappTelegramShare on FacebookShare on Twitter

ಬಂಟ್ವಾಳ : ಹಾಡಹಗಲೇ ಬೈಕ್​ನಲ್ಲಿ ಸಂಚರಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ತಡೆದು ತಲವಾರು ತೋರಿಸಿ, ಬೆದರಿಸಿ, 8.5 ಲಕ್ಷ ರೂ ನಗದನ್ನು ದೋಚಿದ ಘಟನೆ ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಮುಲ್ಕಾಜೆಮಾಡ ಎಂಬಲ್ಲಿ ಗುರುವಾರ ನಡೆದಿದೆ. ಈ ಘಟನೆಗೆ ಸಂಬಂಧಿಸಿ ತೀವ್ರ ತನಿಖೆ ನಡೆಸುತ್ತಿದ್ದು, ಆರೋಪಿಗಳ ಪತ್ತೆಗೆ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಂಗಳೂರಿನ ಕಣ್ಣೂರು ಎಂಬಲ್ಲಿರುವ ಸಿಮೆಂಟ್ ಹಾಗೂ ಕಬ್ಬಿಣ ಮಾರಾಟದ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಮಯ್ಯದಿ (40) ಎಂಬುವರು, ತನ್ನ ಸಂಸ್ಥೆಯ ವ್ಯವಹಾರದ ಹಣವನ್ನು ವಿವಿಧ ಅಂಗಡಿಗಳಿಂದ ಸಂಗ್ರಹಿಸಿಕೊಂಡು ಬರುವ ಸಲುವಾಗಿ ಗುರುವಾರ ಬೈಕ್​ನಲ್ಲಿ ತೆರಳಿದ್ದರು. ಹಲವು ಅಂಗಡಿಗಳಿಂದ ನಗದು ಹಣವನ್ನು ಸಂಗ್ರಹಿಸಿ, ಬಂಟ್ವಾಳ ಕಕ್ಕೆಪದವಿನಿಂದ ಪಾಣೆಮಂಗಳೂರಿಗೆ ಬೈಕ್​ನಲ್ಲಿ ಬರುತ್ತಿದ್ದ ವೇಳೆ, ಮಧ್ಯಾಹ್ನ ಸುಮಾರು 1 ಗಂಟೆಯ ಹೊತ್ತಿಗೆ, ಬಂಟ್ವಾಳ ಮಣಿನಾಲ್ಕೂರು ಮುಲ್ಕಾಜೆಮಾಡ ಎಂಬಲ್ಲಿ ಈ ಘಟನೆ ನಡೆದಿದೆ.

ಎರಡು ಬೈಕ್​ಗಳಲ್ಲಿ ಬಂದ ನಾಲ್ಕು ಜನ ಅಪರಿಚಿತರು, ಮಯ್ಯದಿ ಅವರಿಗೆ ತಲವಾರು ತೋರಿಸಿ, ಬೆದರಿಸಿ ಅವರ ಬಳಿಯಿದ್ದ 8,52,000 ರೂ ನಗದನ್ನು ಸುಲಿಗೆ ಮಾಡಿ ಪರಾರಿಯಾಗಿರುತ್ತಾರೆ, ನಗದು ರೂಪದ ಹಣವಲ್ಲದೆ, ಕೆಲವು ಕಡೆ ಚೆಕ್, ಡಿಡಿಗಳನ್ನು ನೀಡುತ್ತಾರೆ. ಎಲ್ಲವನ್ನೂ ಬ್ಯಾಗಿನಲ್ಲಿ ಕಟ್ಟಿಕೊಂಡು ಬರುವುದು ರೂಢಿಯಾಗಿತ್ತು. ಮಯ್ಯದಿ ಮಧ್ಯಾಹ್ನ ಮಣಿ ನಾಲ್ಕೂರು ಗ್ರಾಮದಿ‌ಂದ ಮಣಿಹಳ್ಳಕ್ಕೆ ಬರುವ ನಿರ್ಜನ ಪ್ರದೇಶದಲ್ಲಿ ಬೈಕಿನಲ್ಲಿ ಬಂದವರು ಹಿಂದಿನಿಂದ ಡಿಕ್ಕಿ ಹೊಡೆಸಿದ್ದಾರೆ. ಈ ವೇಳೆ, ಮತ್ತೊಂದು ಬೈಕಿನಲ್ಲಿದ್ದವರು ಮಯ್ಯದಿ ಕಣ್ಣಿಗೆ ಮೆಣಸಿನ ಪುಡಿ ಎರಚಿ ಕೈಯಲ್ಲಿದ್ದ ಹಣದ ಚೀಲವನ್ನು ಎಗರಿಸಿ ಪರಾರಿಯಾಗಿದ್ದಾರೆ. ನಗದು ಹಣವಲ್ಲದೆ, ಎಷ್ಟು ಮೊತ್ತದ ಚೆಕ್, ಡಿಡಿಗಳಿದ್ದವು ಎಂಬ ಬಗ್ಗೆ ಮಾಹಿತಿ ಗೊತ್ತಾಗಿಲ್ಲ. ಹಣ ಹಿಡಿದುಕೊಂಡು ಬರುತ್ತಿದ್ದ ಇವರ ಬಗ್ಗೆ ತಿಳಿದವರೇ ಕೃತ್ಯ ಎಸಗಿದ್ದಾರೆ‌‌. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಎಂದು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಹಿತಿ ತಿಳಿದ ತಕ್ಷಣ ಗ್ರಾಮಾಂತರ ಠಾಣೆಯ ಇನ್ಸ್​ಪೆಕ್ಟರ್​ ಅನಂತ ಪದ್ಮನಾಭ ಹಾಗೂ ಎಸ್‌ಐ ಮಂಜುನಾಥ್ ನೇತೃತ್ವದ ಪೊಲೀಸ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಘಟನೆಯ ಕುರಿತು ತನಿಖೆ ಆರಂಭಿಸಿದ್ದು, ಆರೋಪಿಗಳ ಪತ್ತೆಗೆ ವಿವಿಧ ಆಯಾಮಗಳಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಎರಡು ಪ್ರತ್ಯೇಕ ಪ್ರಕರಣ; ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

Next Post

1988ರಲ್ಲಿ ನಡೆದ ಕೊಲೆ ಪ್ರಕರಣ ಮುಕ್ತಾಯಗೊಳಿಸಿರುವ ಸುಪ್ರೀಂ ಕೋರ್ಟ್, ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 105 ವರ್ಷದ ವೃದ್ಧನಿಗೆ ​ಸೆರೆವಾಸದಿಂದ ಮುಕ್ತಿ

Related Posts

AI ಬಳಸಿ ನಕಲಿ ಹಾಲ್‌ಟಿಕೆಟ್ ಸೃಷ್ಟಿಸಿ ಪೊಲೀಸ್ ನೇಮಕಾತಿ ದೈಹಿಕ ಪರೀಕ್ಷೆಗೆ ಹಾಜರಾಗಲು ಯತ್ನ: ಕಡಬ ಮೂಲದ ಯುವಕ ಅರೆಸ್ಟ್​
ಕ್ರೈಮ್ ನ್ಯೂಸ್

AI ಬಳಸಿ ನಕಲಿ ಹಾಲ್‌ಟಿಕೆಟ್ ಸೃಷ್ಟಿಸಿ ಪೊಲೀಸ್ ನೇಮಕಾತಿ ದೈಹಿಕ ಪರೀಕ್ಷೆಗೆ ಹಾಜರಾಗಲು ಯತ್ನ: ಕಡಬ ಮೂಲದ ಯುವಕ ಅರೆಸ್ಟ್​

October 1, 2026
342
ಬಂಟ್ವಾಳ ದಾಸಕೋಡಿಯಲ್ಲಿ ಬಸ್‌ನಿಂದ ಇಳಿದ ಕಾರ್ಮಿಕನಿಗೆ ಕಾರು ಢಿಕ್ಕಿ: ಸ್ಥಳದಲ್ಲೇ ಸಾವು
ಕ್ರೈಮ್ ನ್ಯೂಸ್

ಬಂಟ್ವಾಳ ದಾಸಕೋಡಿಯಲ್ಲಿ ಬಸ್‌ನಿಂದ ಇಳಿದ ಕಾರ್ಮಿಕನಿಗೆ ಕಾರು ಢಿಕ್ಕಿ: ಸ್ಥಳದಲ್ಲೇ ಸಾವು

October 1, 2026
31
Next Post
1988ರಲ್ಲಿ ನಡೆದ ಕೊಲೆ ಪ್ರಕರಣ ಮುಕ್ತಾಯಗೊಳಿಸಿರುವ ಸುಪ್ರೀಂ ಕೋರ್ಟ್, ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 105 ವರ್ಷದ ವೃದ್ಧನಿಗೆ ​ಸೆರೆವಾಸದಿಂದ ಮುಕ್ತಿ

1988ರಲ್ಲಿ ನಡೆದ ಕೊಲೆ ಪ್ರಕರಣ ಮುಕ್ತಾಯಗೊಳಿಸಿರುವ ಸುಪ್ರೀಂ ಕೋರ್ಟ್, ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 105 ವರ್ಷದ ವೃದ್ಧನಿಗೆ ​ಸೆರೆವಾಸದಿಂದ ಮುಕ್ತಿ

Discussion about this post

Recent News

ಸರ್ವಾಂಗಾಸನವನ್ನು ನಿರಂತರ 32 ನಿಮಿಷಗಳ ಕಾಲ ಮಾಡುವ ಮೂಲಕ ಆಳ್ವಾಸ್ ವಿದ್ಯಾರ್ಥಿ ಪಿಕೆ ವಿಕಾಸ್ ‘ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ನಿಂದ ವಿಶ್ವ ದಾಖಲೆ ಮಾನ್ಯತೆ ಪಡೆದಿದ್ದಾರೆ.

ಸರ್ವಾಂಗಾಸನವನ್ನು ನಿರಂತರ 32 ನಿಮಿಷಗಳ ಕಾಲ ಮಾಡುವ ಮೂಲಕ ಆಳ್ವಾಸ್ ವಿದ್ಯಾರ್ಥಿ ಪಿಕೆ ವಿಕಾಸ್ ‘ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ನಿಂದ ವಿಶ್ವ ದಾಖಲೆ ಮಾನ್ಯತೆ ಪಡೆದಿದ್ದಾರೆ.

October 5, 2026
25
ಪೈಲಟ್​ಗಳ ಹೊಡೆದಾಟದ ವೇಳೆ 34 ಸಾವಿರ ಅಡಿ ಎತ್ತರದಲ್ಲಿ ಹಾರುತ್ತಿದ್ದ ಫ್ಲೈದುಬೈ ವಿಮಾನ ಭೂಮಿಯತ್ತ ಬೀಳುತ್ತಿದ್ದಾಗ ಅದನ್ನು ನಿಯಂತ್ರಣಕ್ಕೆ ಪಡೆದು ಸೇಫ್​​ ಲ್ಯಾಂಡ್​ ಮಾಡಿದವರು ಯಾರು?

ಪೈಲಟ್​ಗಳ ಹೊಡೆದಾಟದ ವೇಳೆ 34 ಸಾವಿರ ಅಡಿ ಎತ್ತರದಲ್ಲಿ ಹಾರುತ್ತಿದ್ದ ಫ್ಲೈದುಬೈ ವಿಮಾನ ಭೂಮಿಯತ್ತ ಬೀಳುತ್ತಿದ್ದಾಗ ಅದನ್ನು ನಿಯಂತ್ರಣಕ್ಕೆ ಪಡೆದು ಸೇಫ್​​ ಲ್ಯಾಂಡ್​ ಮಾಡಿದವರು ಯಾರು?

October 5, 2026
95
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸರ್ವಾಂಗಾಸನವನ್ನು ನಿರಂತರ 32 ನಿಮಿಷಗಳ ಕಾಲ ಮಾಡುವ ಮೂಲಕ ಆಳ್ವಾಸ್ ವಿದ್ಯಾರ್ಥಿ ಪಿಕೆ ವಿಕಾಸ್ ‘ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ನಿಂದ ವಿಶ್ವ ದಾಖಲೆ ಮಾನ್ಯತೆ ಪಡೆದಿದ್ದಾರೆ.

ಸರ್ವಾಂಗಾಸನವನ್ನು ನಿರಂತರ 32 ನಿಮಿಷಗಳ ಕಾಲ ಮಾಡುವ ಮೂಲಕ ಆಳ್ವಾಸ್ ವಿದ್ಯಾರ್ಥಿ ಪಿಕೆ ವಿಕಾಸ್ ‘ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ನಿಂದ ವಿಶ್ವ ದಾಖಲೆ ಮಾನ್ಯತೆ ಪಡೆದಿದ್ದಾರೆ.

October 5, 2026
ಪೈಲಟ್​ಗಳ ಹೊಡೆದಾಟದ ವೇಳೆ 34 ಸಾವಿರ ಅಡಿ ಎತ್ತರದಲ್ಲಿ ಹಾರುತ್ತಿದ್ದ ಫ್ಲೈದುಬೈ ವಿಮಾನ ಭೂಮಿಯತ್ತ ಬೀಳುತ್ತಿದ್ದಾಗ ಅದನ್ನು ನಿಯಂತ್ರಣಕ್ಕೆ ಪಡೆದು ಸೇಫ್​​ ಲ್ಯಾಂಡ್​ ಮಾಡಿದವರು ಯಾರು?

ಪೈಲಟ್​ಗಳ ಹೊಡೆದಾಟದ ವೇಳೆ 34 ಸಾವಿರ ಅಡಿ ಎತ್ತರದಲ್ಲಿ ಹಾರುತ್ತಿದ್ದ ಫ್ಲೈದುಬೈ ವಿಮಾನ ಭೂಮಿಯತ್ತ ಬೀಳುತ್ತಿದ್ದಾಗ ಅದನ್ನು ನಿಯಂತ್ರಣಕ್ಕೆ ಪಡೆದು ಸೇಫ್​​ ಲ್ಯಾಂಡ್​ ಮಾಡಿದವರು ಯಾರು?

October 5, 2026
ಹಣೆಗೆ ಮುತ್ತಿಟ್ಟು, ಸ್ಮಿತ್ ಮಚ್ಚರ್ ಆರೋಗ್ಯ ವಿಚಾರಿಸಿದ ಯುಎಇ ಉಪಪ್ರಧಾನಿ, ಅಗತ್ಯ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.

ಹಣೆಗೆ ಮುತ್ತಿಟ್ಟು, ಸ್ಮಿತ್ ಮಚ್ಚರ್ ಆರೋಗ್ಯ ವಿಚಾರಿಸಿದ ಯುಎಇ ಉಪಪ್ರಧಾನಿ, ಅಗತ್ಯ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.

October 4, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d