• About us
  • Contact us
  • Disclaimer
Tuesday, July 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರಿನಲ್ಲಿ ಬೃಹತ್ ‘ಬಿಲ್ಲವ ಹಾಸ್ಟೆಲ್ ಸೆ. 24 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ

Coastal Times by Coastal Times
September 21, 2023
in ಕರಾವಳಿ
ಮಂಗಳೂರಿನಲ್ಲಿ ಬೃಹತ್ ‘ಬಿಲ್ಲವ ಹಾಸ್ಟೆಲ್ ಸೆ. 24 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ
23
VIEWS
WhatsappTelegramShare on FacebookShare on Twitter

ಮಂಗಳೂರು, ಸೆ.20 : ಬ್ರಹ್ಮಶ್ರೀ ನಾರಾಯಣಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ, ಸಂಘಟನೆಯಿಂದ ಬಲಯುತರಾಗಿರಿ ಎಂಬ ಧ್ಯೇಯೋದ್ದೇಶದೊಂದಿಗೆ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅಖಿಲ ಭಾರತ ಬಿಲ್ಲವರ ಯೂನಿಯನ್‌ ವತಿಯಿಂದ ಕುಂಜತ್ತಬೈಲಿನಲ್ಲಿ ದಿ.ದಾಮೋದರ ಆರ್. ಸುವರ್ಣ ಸ್ಮಾರಕ ಬಿಲ್ಲವ ಹಾಸ್ಟೆಲ್ ನಿರ್ಮಿಸಲಾಗಿದ್ದು ಸೆ.24 ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಅಖಿಲ ಭಾರತ ಬಿಲ್ಲವರ ಯುನಿಯನ್ ಅಧ್ಯಕ್ಷ ನವೀನ್ ಚಂದ್ರ ಡಿ. ಸುವರ್ಣ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ನಗರದ ಪುರಭವನದಲ್ಲಿ ಲೋಕಾರ್ಪಣೆ ಸಮಾರಂಭ ನಡೆಯಲಿದ್ದು ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ದೀಪ ಪ್ರಜ್ವಲನೆಯನ್ನು ಮಾಜಿ ಕೇಂದ್ರ ವಿತ್ತ ಸಚಿವ ಬಿ. ಜನಾರ್ದನ ಪೂಜಾರಿ ನಡೆಸಲಿದ್ದಾರೆ. ಸಭಾಧ್ಯಕ್ಷತೆಯನ್ನು ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್‌ಚಂದ್ರ ಡಿ. ಸುವರ್ಣ ವಹಿಸಲಿದ್ದಾರೆ. ಸ್ಮರಣ ಸಂಚಿಕೆಯನ್ನು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್‌ ಬಿಡುಗಡೆಗೊಳಿಸಲಿದ್ದಾರೆ.

5.25 ಕೋಟಿ ರೂ. ವೆಚ್ಚದ ಕಟ್ಟಡ : ಮಂಗಳೂರು ನಗರದಿಂದ 6 ಕಿ.ಮೀ. ದೂರದ ಕುಂಜತ್ತಬೈಲ್‌ನ ಪ್ರಶಾಂತ ವಾತಾವರಣದಲ್ಲಿ ಒಂದು ಎಕರೆ ವ್ಯಾಪ್ತಿಯಲ್ಲಿ 5.25 ಕೋಟಿ ರೂ. ವೆಚ್ಚದಲ್ಲಿ ಹಾಸ್ಟೆಲ್ ನಿರ್ಮಿಸಲಾಗಿದೆ. ಬಿಲ್ಲವ ಹಾಗೂ ಹಿಂದುಳಿದ ಸಮುದಾಯದಲ್ಲಿ ಉನ್ನತ ವೃತ್ತಿ ಶಿಕ್ಷಣ ಬಯಸುವ ವಿದ್ಯಾರ್ಥಿಗಳ ಅನುಕೂಲತೆಗಾಗಿ ಹಾಸ್ಟೆಲ್ ಕೊಡಿಸುವ ಉದ್ದೇಶ ಇದೆ. 5 ಮಹಡಿಯ ಕಟ್ಟಡ ಇದಾಗಿದ್ದು ಒಟ್ಟು 19,500 ಚದರ ಅಡಿ ವಿಸ್ತೀರ್ಣ ಹೊಂದಿದೆ. ನೆಲ ಅಂತಸ್ತಿನಲ್ಲಿ ಆಡಳಿತ ಕಚೇರಿ, ಗ್ರಂಥಾಲಯ ಹಾಗೂ ವಸತಿ ಕೊಠಡಿಗಳು, 1ನೇ ಹಾಗೂ 3ನೇ ಮಹಡಿಯಲ್ಲಿ ವಸತಿ ಕೊಠಡಿ ಮತ್ತು 2ನೇ ಮಹಡಿಯಲ್ಲಿ ಸಭಾಂಗಣ ಒಳಗೊಂಡಿದೆ. ತಳಮಹಡಿಯಲ್ಲಿ ಅಡುಗೆ ಕೋಣೆ, ಉಗ್ರಾಣ ಕೋಣೆಗಳಿವೆ. ಸುಮಾರು 100 ಮಂದಿ ವಿದ್ಯಾರ್ಥಿಗಳಿಗೆ ವ್ಯವಸ್ಥಿತವಾದ ವಸತಿ ಸೌಲಭ್ಯವಿದ್ದು ವೃತ್ತಿ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಮೊದಲ ಇರಲಿದೆ.

ಮುಖ್ಯ ಅಥಿತಿಗಳಾಗಿ ಮಾಜಿ ಸಂಸದ ಡಿ.ವಿ. ಸದಾನಂದ ಗೌಡ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡುರಾವ್, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ವಿ. ಸುನೀಲ್ ಕುಮಾರ್, ಉಮನಾಥ್ ಕೋಟ್ಯಾನ್, ವೇದವ್ಯಾಸ್‌ ಕಾಮತ್‌, ಡಾ.ವೈ. ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಮೇಯರ್ ಜಯಾನಂದ ಅಂಚನ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಮುಖ್ಯ ಸಚೇತಕ ಕೆ. ವಸಂತ ಬಂಗೇರ, ಮಾಜಿ ಶಾಸಕ ಗೋಪಾಲ ಪೂಜಾರಿ ಉಪಸ್ಥಿತಿ ಇರಲಿದ್ದಾರೆ. ಗೌರವ ಉಪಸ್ಥಿತಿಯಲ್ಲಿ ಉದ್ಯಮಿ ಜಯರಾಮ ಬನಾನ್, ಸಣ್ಣ ಕೈಗಾರಿಕಾ ರಾಷ್ಟ್ರೀಯ ಸಮಿತಿ ಅಧ್ಯಕ್ಷ‌ ಉದಯಚಂದ್ರ ಡಿ. ಸುವರ್ಣ, ಆರ್ಯ ಈಡಿಗ ಸಂಘದ ಅಧ್ಯಕ್ಷ ತಿಮ್ಮೇಗೌಡ, ಉದ್ಯಮಿ ಜೆ.ಪಿ. ಸುಧಾಕರ್‌, ಬಿಲ್ಲವ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಎನ್.ಟಿ. ಪೂಜಾರಿ, ಮುಂಬಯಿ ಬಿಲ್ಲವ ಅಸೋಸಿಯೇಶನ್ ಅಧ್ಯಕ್ಷ ಹರೀಶ್ ಜೆ. ಅಮೀನ್, ಬೆಂಗಳೂರು ಬಿಲ್ಲವ ಅಸೋಸಿಯೇಶನ್ ಅಧ್ಯಕ್ಷ ವೇದಕುಮಾರ್, ಅಖಿಲ ಭಾರತ ಬಿಲ್ಲವರ ಮಹಿಳಾ ಸಂಘದ ಅಧ್ಯಕ್ಷೆ ಸುಮಲತಾ ಎನ್. ಸುವರ್ಣ, ದುಬಾಯಿ ಬಿಲ್ಲವ ಬಳಗ-ಮಹಿಳಾ ವಿಭಾಗದ ಅಧ್ಯಕ್ಷೆ ಗೀತಾ ಸುವರ್ಣ, ಕಾರ್ಪೊರೇಟರ್ ಶರತ್ ಕುಮಾರ್ ಉಪಸ್ಥಿತರಿರಲಿದ್ದಾರೆ. ಇದೇ ಸಂದರ್ಭದಲ್ಲಿ ಉದ್ಯಮಿ  ಸುಶೀರ್ ಕುಮಾರ್, ಇಂಜಿನಿಯರ್ ಬಾಬು ಅಲಂಕಾರ್ ಅವರನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಅಖಿಲ ಭಾರತ ಬಿಲ್ಲವರ ಮಹಿಳಾ ಸಂಘದ ಅಧ್ಯಕ್ಷೆ ಸುಮಲತಾ ಎನ್. ಸುವರ್ಣ, ಸುಖಲಾಕ್ಷಿ ಸುವರ್ಣ, ಕೋಶಾಧಿಕಾರಿ ಕಾಶೀನಾಥ್, ಜೊತೆ ಕಾರ್ಯದರ್ಶಿ ಯೋಗೀಶ್ ಕುಮಾರ್, ಪ್ರಧಾನ ಕಾರ್ಯದರ್ಶಿ ಜೀವನ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Share this:

  • Facebook
  • X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಯಾರ್ ಸೂಪರ್ ಸ್ಟಾರ್” ತುಳು ಸಿನಿಮಾ ಸೆಪ್ಟೆಂಬರ್ 22 ರಂದು ಕರಾವಳಿಯಾದ್ಯಂತ ತೆರೆಗೆ

Next Post

ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಷನ್‌ಗೆ ವಂಚನೆ ನಡೆಸಿದ ಮಂಜುನಾಥ ಖಾರ್ವಿಗೆ ಜೈಲು ಶಿಕ್ಷೆ

Related Posts

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ
ಕರಾವಳಿ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
177
ಮಂಗಳೂರು: ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್​​ನಲ್ಲೇ ನಿವೃತ್ತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು
ಕರಾವಳಿ

ಮಂಗಳೂರು: ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್​​ನಲ್ಲೇ ನಿವೃತ್ತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು

June 27, 2025
92
Next Post
ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಷನ್‌ಗೆ ವಂಚನೆ ನಡೆಸಿದ ಮಂಜುನಾಥ ಖಾರ್ವಿಗೆ ಜೈಲು ಶಿಕ್ಷೆ

ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಷನ್‌ಗೆ ವಂಚನೆ ನಡೆಸಿದ ಮಂಜುನಾಥ ಖಾರ್ವಿಗೆ ಜೈಲು ಶಿಕ್ಷೆ

Discussion about this post

Recent News

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
33
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
177
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

June 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d