ಬಂಟ್ವಾಳ : ಬಂಟ್ವಾಳ ಸಮೀಪ ಶುಕ್ರವಾರ ಬೆಳಗ್ಗೆ ನಡೆದ ಅಪಘಾತದಲ್ಲಿ ಕಾರಿಗೆ ಬಸ್ ಡಿಕ್ಕಿಯಾಗಿ ಮೆಸ್ಕಾಂ ವಿಟ್ಲದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರವೀಣ್ ಜೋಶಿ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ಕಾರು ಹಾಗೂ ಬಸ್ ನಡುವೆ ಅಪಘಾತ ನಡೆದಿದೆ. ಒಂದು ಕಾರಿನಲ್ಲಿದ್ದ ವಿಟ್ಲ ಮೆಸ್ಕಾಂ ಎಇಇ ಪ್ರವೀಣ್ ಜೋಶಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೊಂದು ಕಾರಿನಲ್ಲಿದ್ದ ನಾಲ್ವರು ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಂಟ್ವಾಳ ಕಡೆಯಿಂದ ವಗ್ಗ ಕಡೆಗೆ ಹೋಗುತ್ತಿದ್ದ ಬ್ರಿಝಾ ಕಾರು, ವಗ್ಗದ ಮದ್ವ ಮನೆಯಿಂದ ಬರುತ್ತಿದ್ದ ಮೆಸ್ಕಾಂ ಎ.ಇ.ಪ್ರವೀಣ್ ಜೋಶಿ ಅವರ ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಇದೇವೇಳೆ ಹಿಂದಿನಿಂದ ಬಂದ ಸರಕಾರಿ ಬಸ್ ಕಾರುಗಳಿಗೆ ಢಿಕ್ಕಿ ಹೊಡೆದಿದೆಯೆನ್ನಲಾಗಿದೆ. ಅಪಘಾತದಲ್ಲಿ ಫಿಗೋ ಕಾರಿನಲ್ಲಿದ್ದ ಜೋಶಿ ಅವರ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನೊಳಗೆ ಸಿಲುಕಿದ್ದ ಅವರನ್ನು ಹೊರತೆಗೆಯಲು ಸಾರ್ವಜನಿಕರು ಹರಸಾಹಸ ಪಡೆಯಬೇಕಾಯಿತು. ವಿಜಯಲಕ್ಷ್ಮಿ ಗ್ರೂಪ್ ನ ಕ್ರೇನ್ ಬಳಸಿ ಅಪಘಾತ ನಡೆದ ವಾಹನಗಳನ್ನು ರಸ್ತೆಯಿಂದ ಬದಿಗೆ ಸರಿಸಲಾಯಿತು. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್ಐ ಮೂರ್ತಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Discover more from Coastal Times Kannada
Subscribe to get the latest posts sent to your email.







Discussion about this post