ಮಂಗಳೂರು: ನಗರದ ಅಪಾರ್ಟ್ ಮೆಂಟ್ ನ 3 ಫ್ಲಾಟ್ ಗಳಲ್ಲಿ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಹಣ, ವಿದೇಶಿ ಕರೆನ್ಸಿ ಮತ್ತು ಮೊಬೈಲ್ ಫೋನ್ ಕಳವು ಮಾಡಿರುವ ಕುರಿತು ಅ.20ರ ಸೋಮವಾರ ದೂರು ದಾಖಲಾಗಿತ್ತು.
ಪೊಲೀಸರ ಶೀಘ್ರ ಕಾರ್ಯಾಚರಣೆಯಿಂದ ಕಳವು ಮಾಡಿದ ಇಬ್ಬರು ಆರೋಪಿಗಳನ್ನು 20 ಗಂಟೆಯೊಳಗೆ ಬಂಧಿಸಿ ಚಿನ್ನಾಭರಣ, ನಗದು ಹಾಗೂ 3000 ದಿರ್‌ಹಂ ಗಳ ಜಪ್ತಿ ಮಾಡಲಾಗಿದೆ ಎಂದು ಆ.21ರ ಮಂಗಳವಾರ ವರದಿಯಾಗಿದೆ. ಅಸ್ಸಾಂ ರಾಜ್ಯದ ಮೆಹೆರ್ ಪುರ್ ಅಂಚೆ ಕಾಚಾರ್ ಜಿಲ್ಲೆಯ ಅಭಿಜಿತ್ ದಾಸ್ (24) ಹಾಗೂ ದೇಬಾ ದಾಸ್ (21) ಬಂಧಿತರು.
ಆರೋಪಿಗಳು ಅಪಾರ್ಟ್ ಮೆಂಟ್ ನಲ್ಲಿರುವ 3 ಫ್ಲಾಟ್ ಗಳಿಗೆ ನುಗ್ಗಿ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು, 5000 ರೂ. ನಗದು ಹಣ, 3000 ದಿರ್‌ಹಂ ಹಾಗೂ ಮೊಬೈಲ್ ಫೋನ್ ಕಳ್ಳತನ ಮಾಡಿರುವ ಬಗ್ಗೆ ರಿಯಾಜ್ ರಶೀದ್ ಎಂಬವರು ನೀಡಿದ ದೂರಿನ ಮೇರೆಗೆ ಅ.20 ರಂದು ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಉರ್ವ ಪೊಲೀಸ್ ಠಾಣೆಯ ಠಾಣಾಧಿಕಾರಿ ಮತ್ತು ಸಿಬ್ಬಂದಿಯವರು, ಶ್ವಾನ ದಳ ಹಾಗೂ ಫಿಂಗರ್ ಪ್ರಿಂಟ್ ತಜ್ಞರ ತಂಡ ಕೃತ್ಯ ನಡೆದ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ, ಆರೋಪಿ ಪತ್ತೆ ಕಾರ್ಯವನ್ನು ನಡೆಸಿದ್ದು, ಪ್ರಕರಣ ದಾಖಲಾಗಿ ಸುಮಾರು 20 ಗಂಟೆಗಳ ಒಳಗಾಗಿ ಶೀಘ್ರ ಕಾರ್ಯ ಪ್ರವೃತ್ತರಾಗಿ, ಸದ್ರಿ ಮನೆಗಳ ಕನ್ನ ಕಳವು ಗಳಲ್ಲಿ ಭಾಗಿಯಾಗಿದ್ದ ಇಬ್ಬರು ಅಂತರಾಜ್ಯ ಮನೆ ಕಳ್ಳರನ್ನು ಆ.21ರ ಮಂಗಳವಾರ ಬೆಳಗಿನ ಜಾವ ಬೆಂಗಳೂರಿನಲ್ಲಿ ಬಂಧಿಸಿ ಆರೋಪಿತರಿಂದ ಪ್ರಕರಣದಲ್ಲಿ ಕಳ್ಳತನ ಮಾಡಿದ್ದ ಎಲ್ಲಾ ಚಿನ್ನಾಭರಣಗಳನ್ನು 5000 ರೂ. ನಗದು ಹಣ, 70,000 ರೂ. ಬೆಲೆಯ 3000 ದಿರ್‌ಹಂ ಹಾಗೂ ಮೊಬೈಲ್ ಫೋನನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿ ಅಭಿಜಿತ್ ದಾಸ್ ಎಂಬಾತನ ಮೇಲೆ ಈ ಮೊದಲು ಬೆಂಗಳೂರು ನಗರ ಮತ್ತು ಅಸ್ಸಾಂ ಸೇರಿದಂತೆ ಹಲವು ಮನೆ ಕಳ್ಳತನ ಪ್ರಕರಣಗಳು ದಾಖಲಾಗಿತ್ತು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ, ಹೆಚ್ಚಿನ ವಿಚಾರಣೆಗೆ ಪೊಲೀಸ್ ವಶಕ್ಕೆ ಪಡೆದು ಮುಂದಿನ ತನಿಖೆ ನಡೆಸಲಾಗುತ್ತದೆ, ಮತ್ತು ಇತರೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಬಗ್ಗೆ ತನಿಖೆಗೆ ಒಳಪಡಿಸಲಾಗುವುದು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಈ ಕಾರ್ಯಾಚರಣೆಯನ್ನು ಡಿಸಿಪಿ ಕ್ರೈಂ ಅವರ ಮೇಲ್ವಿಚಾರಣೆಯಲ್ಲಿ ಕೇಂದ್ರ ಉಪ ವಿಭಾಗದ ಎಸಿಪಿ, ಪಿ.ಐ, ಉರ್ವ ಪೊಲೀಸ್ ಠಾಣೆ ಮತ್ತು ಸಿಬ್ಬಂದಿಗಳ ತಂಡ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.








Discussion about this post