• About us
  • Contact us
  • Disclaimer
Saturday, May 2, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಲಾಲ್ ಬಾಗ್ ನ ಅಪಾರ್ಟ್ ಮೆಂಟ್ ನುಗ್ಗಿ 20 ಲಕ್ಷದ ಚಿನ್ನಾಭರಣ, ನಗದು ಹಣ, ವಿದೇಶಿ ಕರೆನ್ಸಿ,ಮೊಬೈಲ್ ಕಳವು, ಅಸ್ಸಾಂ ಮೂಲದ ಇಬ್ಬರ ಬಂಧನ

Coastal Times by Coastal Times
October 21, 2025
in ಕ್ರೈಮ್ ನ್ಯೂಸ್
ಮಂಗಳೂರು: ಲಾಲ್ ಬಾಗ್ ನ ಅಪಾರ್ಟ್ ಮೆಂಟ್ ನುಗ್ಗಿ 20 ಲಕ್ಷದ ಚಿನ್ನಾಭರಣ, ನಗದು ಹಣ, ವಿದೇಶಿ ಕರೆನ್ಸಿ,ಮೊಬೈಲ್ ಕಳವು, ಅಸ್ಸಾಂ ಮೂಲದ ಇಬ್ಬರ ಬಂಧನ
58
VIEWS
WhatsappTelegramShare on FacebookShare on Twitter

ಮಂಗಳೂರು: ನಗರದ ಅಪಾರ್ಟ್ ಮೆಂಟ್ ನ 3 ಫ್ಲಾಟ್ ಗಳಲ್ಲಿ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಹಣ, ವಿದೇಶಿ ಕರೆನ್ಸಿ ಮತ್ತು  ಮೊಬೈಲ್ ಫೋನ್ ಕಳವು ಮಾಡಿರುವ ಕುರಿತು ಅ.20ರ ಸೋಮವಾರ ದೂರು ದಾಖಲಾಗಿತ್ತು.

ಪೊಲೀಸರ ಶೀಘ್ರ ಕಾರ್ಯಾಚರಣೆಯಿಂದ ಕಳವು ಮಾಡಿದ ಇಬ್ಬರು ಆರೋಪಿಗಳನ್ನು 20 ಗಂಟೆಯೊಳಗೆ ಬಂಧಿಸಿ ಚಿನ್ನಾಭರಣ, ನಗದು ಹಾಗೂ 3000 ದಿರ್‌ಹಂ  ಗಳ ಜಪ್ತಿ ಮಾಡಲಾಗಿದೆ ಎಂದು ಆ.21ರ ಮಂಗಳವಾರ ವರದಿಯಾಗಿದೆ. ಅಸ್ಸಾಂ ರಾಜ್ಯದ ಮೆಹೆರ್ ಪುರ್ ಅಂಚೆ ಕಾಚಾರ್ ಜಿಲ್ಲೆಯ ಅಭಿಜಿತ್ ದಾಸ್ (24) ಹಾಗೂ ದೇಬಾ ದಾಸ್ (21) ಬಂಧಿತರು.

ಆರೋಪಿಗಳು ಅಪಾರ್ಟ್ ಮೆಂಟ್ ನಲ್ಲಿರುವ 3 ಫ್ಲಾಟ್ ಗಳಿಗೆ ನುಗ್ಗಿ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು, 5000 ರೂ. ನಗದು ಹಣ,  3000 ದಿರ್‌ಹಂ ಹಾಗೂ ಮೊಬೈಲ್ ಫೋನ್ ಕಳ್ಳತನ ಮಾಡಿರುವ ಬಗ್ಗೆ ರಿಯಾಜ್ ರಶೀದ್ ಎಂಬವರು ನೀಡಿದ ದೂರಿನ ಮೇರೆಗೆ ಅ.20 ರಂದು ಉರ್ವಾ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿತ್ತು.

ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಉರ್ವ ಪೊಲೀಸ್ ಠಾಣೆಯ ಠಾಣಾಧಿಕಾರಿ ಮತ್ತು ಸಿಬ್ಬಂದಿಯವರು, ಶ್ವಾನ ದಳ ಹಾಗೂ ಫಿಂಗರ್ ಪ್ರಿಂಟ್ ತಜ್ಞರ ತಂಡ ಕೃತ್ಯ ನಡೆದ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ, ಆರೋಪಿ ಪತ್ತೆ ಕಾರ್ಯವನ್ನು ನಡೆಸಿದ್ದು, ಪ್ರಕರಣ ದಾಖಲಾಗಿ ಸುಮಾರು 20 ಗಂಟೆಗಳ ಒಳಗಾಗಿ ಶೀಘ್ರ ಕಾರ್ಯ ಪ್ರವೃತ್ತರಾಗಿ, ಸದ್ರಿ ಮನೆಗಳ ಕನ್ನ ಕಳವು ಗಳಲ್ಲಿ ಭಾಗಿಯಾಗಿದ್ದ ಇಬ್ಬರು ಅಂತರಾಜ್ಯ ಮನೆ ಕಳ್ಳರನ್ನು ಆ.21ರ ಮಂಗಳವಾರ ಬೆಳಗಿನ ಜಾವ ಬೆಂಗಳೂರಿನಲ್ಲಿ ಬಂಧಿಸಿ ಆರೋಪಿತರಿಂದ ಪ್ರಕರಣದಲ್ಲಿ ಕಳ್ಳತನ ಮಾಡಿದ್ದ ಎಲ್ಲಾ ಚಿನ್ನಾಭರಣಗಳನ್ನು 5000 ರೂ. ನಗದು ಹಣ, 70,000 ರೂ. ಬೆಲೆಯ 3000 ದಿರ್‌ಹಂ ಹಾಗೂ ಮೊಬೈಲ್ ಫೋನನ್ನು ವಶಕ್ಕೆ  ಪಡೆಯಲಾಗಿದೆ.

ಆರೋಪಿ ಅಭಿಜಿತ್ ದಾಸ್ ಎಂಬಾತನ ಮೇಲೆ ಈ ಮೊದಲು ಬೆಂಗಳೂರು ನಗರ ಮತ್ತು ಅಸ್ಸಾಂ ಸೇರಿದಂತೆ ಹಲವು ಮನೆ ಕಳ್ಳತನ ಪ್ರಕರಣಗಳು ದಾಖಲಾಗಿತ್ತು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ, ಹೆಚ್ಚಿನ ವಿಚಾರಣೆಗೆ ಪೊಲೀಸ್ ವಶಕ್ಕೆ ಪಡೆದು ಮುಂದಿನ ತನಿಖೆ ನಡೆಸಲಾಗುತ್ತದೆ, ಮತ್ತು ಇತರೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಬಗ್ಗೆ ತನಿಖೆಗೆ ಒಳಪಡಿಸಲಾಗುವುದು ಎಂದು ಪೊಲೀಸ್‌ ಪ್ರಕಟಣೆ ತಿಳಿಸಿದೆ.

ಈ ಕಾರ್ಯಾಚರಣೆಯನ್ನು ಡಿಸಿಪಿ ಕ್ರೈಂ ಅವರ ಮೇಲ್ವಿಚಾರಣೆಯಲ್ಲಿ ಕೇಂದ್ರ ಉಪ ವಿಭಾಗದ ಎಸಿಪಿ, ಪಿ.ಐ, ಉರ್ವ ಪೊಲೀಸ್ ಠಾಣೆ ಮತ್ತು ಸಿಬ್ಬಂದಿಗಳ ತಂಡ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಮಲ್ಲಿಕಟ್ಟೆ ಎಸ್ ಬಿಐ ಬ್ಯಾಂಕಿನಲ್ಲಿ MSME ಸಾಲ ಯೋಜನೆ ಹೆಸರಲ್ಲಿ ಮತ್ತೊಂದು ನಕಲಿ ಕಂಪನಿ ಸೃಷ್ಟಿಸಿ1.20 ಕೋಟಿ ವಂಚನೆ, ಬ್ಯಾಂಕ್ ಅಧಿಕಾರಿ ಸೇರಿ ಐವರ ಬಂಧನ, ಪ್ರಮುಖ ಆರೋಪಿಗಳು ಪರಾರಿ

Next Post

ಪುತ್ತೂರು: ಕೇರಳಕ್ಕೆ ಅಕ್ರಮ ಜಾನುವಾರು ಸಾಗಾಟ; ಪರಾರಿಯಾಗುತ್ತಿದ್ದ ಆರೋಪಿ ಕಾಲಿಗೆ ​ಗುಂಡೇಟು

Related Posts

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ
ಕ್ರೈಮ್ ನ್ಯೂಸ್

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

May 1, 2026
1
ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್
ಕ್ರೈಮ್ ನ್ಯೂಸ್

ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್

April 29, 2026
303
Next Post
ಪುತ್ತೂರು: ಕೇರಳಕ್ಕೆ ಅಕ್ರಮ ಜಾನುವಾರು ಸಾಗಾಟ; ಪರಾರಿಯಾಗುತ್ತಿದ್ದ ಆರೋಪಿ ಕಾಲಿಗೆ ​ಗುಂಡೇಟು

ಪುತ್ತೂರು: ಕೇರಳಕ್ಕೆ ಅಕ್ರಮ ಜಾನುವಾರು ಸಾಗಾಟ; ಪರಾರಿಯಾಗುತ್ತಿದ್ದ ಆರೋಪಿ ಕಾಲಿಗೆ ​ಗುಂಡೇಟು

Discussion about this post

Recent News

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

May 1, 2026
1
ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
19
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

May 1, 2026
ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

April 30, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d