• About us
  • Contact us
  • Disclaimer
Saturday, September 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ಸ್ಫೋಟ ಪ್ರಕರಣ- ಮೈಸೂರಿನ ಬಾಡಿಗೆ ಮನೆಯಲ್ಲಿ ಸ್ಫೋಟಕ ಸಾಮಗ್ರಿ ವಶ : ಎಡಿಜಿಪಿ ಅಲೋಕ್ ಕುಮಾರ್

Coastal Times by Coastal Times
November 21, 2022
in ಕ್ರೈಮ್ ನ್ಯೂಸ್
ಮಂಗಳೂರು ಸ್ಫೋಟ ಪ್ರಕರಣ- ಮೈಸೂರಿನ ಬಾಡಿಗೆ ಮನೆಯಲ್ಲಿ ಸ್ಫೋಟಕ ಸಾಮಗ್ರಿ ವಶ : ಎಡಿಜಿಪಿ ಅಲೋಕ್ ಕುಮಾರ್
71
VIEWS
WhatsappTelegramShare on FacebookShare on Twitter

ಮಂಗಳೂರು, ನ.20: ರಾಷ್ಟ್ರೀಯ ಹೆದ್ದಾರಿ 75ರ ಪಂಪ್‌ವೆಲ್ ಸಮೀಪದ ನಾಗುರಿ ಎಂಬಲ್ಲಿ ಶನಿವಾರ ಸಂಜೆ ಆಟೊ ರಿಕ್ಷಾದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದ ವೇಳೆ ರಿಕ್ಷಾದಲ್ಲಿದ್ದ ಆರೋಪಿ ಪ್ರಯಾಣಿಕನ ಗುರುತನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿ ಮುಹಮ್ಮದ್ ಶಾರಿಕ್(24) ಆರೋಪಿಯಾಗಿದ್ದಾನೆ. ಈತ 2020ರಲ್ಲಿ ಮಂಗಳೂರು ನಗರದಲ್ಲಿ ಕಂಡುಬಂದ ಪ್ರಚೋದನಕಾರಿ ಗೋಡೆ ಬರಹ ಪ್ರಕರಣದ ಆರೋಪಿಗಳಲ್ಲಿ ಓರ್ವನಾಗಿದ್ದ ಎಂದು ಎಡಿಜಿಪಿ ಅಲೋಕ್ ಕುಮಾರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಆರೋಪಿಯಿಂದ ವಶಪಡಿಸಿಕೊಂಡ ಮೊಬೈಲ್‌ ಫೋನ್ ಹಾಗೂ ಕುಟುಂಬದವರು ಆತ ಶಾರಿಕ್ ಎಂದು ಗುರುತಿಸಿರುವುದಾಗಿ ಎಡಿಜಿಪಿ ತಿಳಿಸಿದ್ದಾರೆ. ಈತನ ಮೇಲೆ ಮಂಗಳೂರಿನ ಪೂರ್ವ ಮತ್ತು ಉತ್ತರ ಪೊಲೀಸ್ ಠಾಣೆ ಹಾಗೂ ಶಿವಮೊಗ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಮೊದಲು ಪ್ರಕರಣದಲ್ಲಿ ಸುಟ್ಟ ಗಾಯ ಆಗಿದ್ದ ವ್ಯಕ್ತಿಯ ಜೊತೆಗಿದ್ದ ಆಧಾರ್ ಕಾರ್ಡ್ ನಲ್ಲಿ ಹುಬ್ಬಳ್ಳಿ ಮೂಲದ ಪ್ರೇಮ್ ರಾಜ್ ವಿಳಾಸ ಇತ್ತು. ಅಲ್ಲಿ ಚೆಕ್ ಮಾಡಿದಾಗ ಪ್ರೇಮ್ ರಾಜ್ ಅಲ್ಲಿ ಮನೆ ಬಿಟ್ಟಿರುವುದು ಗೊತ್ತಾಗಿತ್ತು. ಬಳಿಕ ಚೆಕ್ ಮಾಡಿದಾಗ ತುಮಕೂರಿನಲ್ಲಿ ರೈಲ್ವೇ ಉದ್ಯೋಗಿ ಆಗಿರುವುದು ತಿಳಿದು ಸ್ವತಃ ನಾನು ಫೋನ್ ಮಾಡಿದ್ದೆ. ಸ್ಥಳೀಯ ಪೊಲೀಸ್ ಠಾಣೆಗೆ ತಿಳಿಸುವಂತೆ ಸೂಚಿಸಿದ್ದೆ. ಪ್ರೇಮರಾಜ್ ತನ್ನ ಆಧಾರ್ ಕಾರ್ಡ್ ಕಳೆದು ಹೋಗಿದ್ದ ಬಗ್ಗೆ ಪೊಲೀಸರಿಗೆ ತಿಳಿಸಿದ್ದಾರೆ. ಆಧಾರ್ ಕಾರ್ಡ್ ನಲ್ಲಿ ಬೇರೆ ಫೋಟೊ ಮತ್ತು ಈ ವ್ಯಕ್ತಿ ಬೇರೆ ಇದ್ದಿರುವುದು ನೋಡಿ ಸಂಶಯ ಬಂದಿತ್ತು.‌ ನಮಗೆ ಶಾರೀಕ್ ಅಂತ ಅನುಮಾನ ಬಂದಿತ್ತು.‌ ಆದರೂ ಅವರ ಮನೆಯವರನ್ನ ಕರೆಸಿ ಗುರುತು ಪತ್ತೆ ಮಾಡಿದ್ದೇವೆ. ಅವರ ಮಲತಾಯಿ ಶಬನಾ, ಸಹೋದರಿ ಆಫಿಯಾ, ತಾಯಿ ತಂಗಿ ಯಾಸ್ಮೀನ್ ಅವನ ಗುರುತು ಪತ್ತೆ ಮಾಡಿದ್ದಾರೆ.

ಈ ಎರಡು ಪ್ರಕರಣದಲ್ಲಿ ದಸ್ತಗಿರಿಯಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಎಂದು ಅವರು ಮಾಹಿತಿ ನೀಡಿದ್ದಾರೆ. ಶಾರಿಕ್ ವಿರುದ್ಧ 2022ರ ಸೆ.19ರಂದು ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ದಾಖಲಾದ UNLAWFUL ACTIVITIES (PREVENTION) ACT 1967 ಪ್ರಕರಣ ದಾಖಲಾಗಿದ್ದು, ಇದರಲ್ಲಿ ಈತ 1ನೇ ಆರೋಪಿಯಾಗಿದ್ದಾನೆ. ಪ್ರಕರಣ ದಾಖಲಾದ ನಂತರ ಶಾರಿಕ್ ಅಲ್ಲಿಂದ ತಲೆಮರೆಸಿಕೊಂಡು ಮೈಸೂರಿನಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದನು. ನ.19ರಂದು  ಮೈಸೂರಿನಿಂದ ಹೊರಟಿದ್ದ ಶಾರಿಕ್ ಹೂಣಸೂರು, ಮಡಿಕೇರಿ, ಮತ್ತೂರು, ಬಿ.ಸಿ.ರೋಡ್ ಮೂಲಕ ಮಂಗಳೂರಿಗೆ ಆಗಮಿಸಿ ನಗರ ಹೊರವಲಯದಲ್ಲಿ ಬಸ್ಸಿನಿಂದ ಇಳಿದು ನಂತರ ಆಟೋದಲ್ಲಿ ಪಂಪವೆಲ್ ಕಡೆಗೆ ಹೋಗುತ್ತಿದ್ದಾಗ ಈ ಸ್ಫೋಟ ಸಂಭವಿಸಿದೆ ಎಂದು ಎಡಿಜಿಪಿ ತಿಳಿಸಿದ್ದಾರೆ.

ಮೈಸೂರಿನಲ್ಲಿ ಆರೋಪಿ ವಾಸವಿದ್ದ ಬಾಡಿಗೆ ಮನೆಯಿಂದ ಸಲ್ಫೆಕ್ಸ್ ಸಲ್ಫರ್ ಪೌಡರ್, ನಟ್ ಬೋಲ್ಡ್‌ಗಳು, ಸರ್ಕ್ಯೂಟ್‌ಗಳು, ಮಲ್ಟಿ ಫಂಕ್ಷನ್ ಡಿಲೆ ಟೈಮರ್, ಗ್ರೈಂಡರ್, ಮಿಕ್ಸರ್‌, ಮ್ಯಾಚ್ ಬಾಕ್ಸ್, ಬ್ಯಾಟರಿ, ಮೈಕ್ಯಾನಿಕಲ್ ಟೈಮರ್, ಆಧಾರ್ ಕಾರ್ಡ್, ಅಲ್ಯೂಮಿನಿಯಂ ಫೈಲ್ ಸಿಮ್ ಕಾರ್ಡ್‌ಗಳು, ಮೊಬೈಲ್‌ನ ಡಿಸ್‌ಪ್ಲೆಗಳು, ಸ್ಫೋಟಕಕ್ಕೆ ಬಳಸುವ ವಿವಿಧ ಬಗೆಯ ಕೆಮಿಕಲ್ಸ್‌ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಡಿಜಿಪಿ ಹೇಳಿದ್ದಾರೆ

ಆಟೋ ಚಾಲಕನಿಗೆ ಪರಿಹಾರ  : ಮೈಸೂರು ಬಿಟ್ಟು ಬೇರೆ ಇನ್ನೆಲ್ಲ ಇದ್ದ. ಆತನಿಗೆ ಯಾರೆಲ್ಲ ಸಹಕಾರ ನೀಡಿದ್ದಾರೆ ಎಂಬ ಬಗ್ಗೆ ತನಿಖೆ ನಡೆಸಬೇಕಾಗಿದೆ. ದೊಡ್ಡ ಅನಾಹುತ ತಪ್ಪಿದೆ, ಸ್ವಲ್ಪ ಡ್ಯಾಮೇಜ್ ಅಷ್ಟೇ ಆಗಿದೆ. ದೊಡ್ಡ ದುರಂತ ಆಗುತ್ತಿದ್ದರೆ ಕರಾವಳಿಯಲ್ಲಿ ಕಮ್ಯನಲ್ ಸಮಸ್ಯೆ ಆಗುತ್ತಿತ್ತು. ಈ ಭಾಗದಲ್ಲಿ ಕಮ್ಯುನಲ್ ಟೆನ್ಶನ್ ಹೆಚ್ಚು ಇದೆ. ಆತನಲ್ಲಿ ಮತ್ತಷ್ಟು ಮಾಹಿತಿ ಪಡೆಯಲು ಚಿಕಿತ್ಸೆ ಅಗತ್ಯವಿದೆ. ಬದುಕಿಸಬೇಕಾಗಿದೆ, ಆನಂತರ ಬಹಳಷ್ಟು ವಿಚಾರಣೆ ಆಗಬೇಕಿದೆ.‌ ಘಟನೆಯಲ್ಲಿ ಗಾಯಗೊಂಡಿರುವ ಆಟೋ ಚಾಲಕ ಪುರುಷೋತ್ತಮ್ ಇದರಲ್ಲಿ ಸಂತ್ರಸ್ತ, ಅವರಿಗೆ ಸರಕಾರದಿಂದ ಸೂಕ್ತ ಪರಿಹಾರ ಸಿಗಲಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.

ಸುಟ್ಟ ಗಾಯಗೊಂಡಿರುವ ಆರೋಪಿ ಗುಣಮುಖನಾದ ನಂತರ ಆತನನ್ನು ಕಸ್ಟಡಿಗೆ ಪಡೆದು ಹೆಚ್ಚಿನ ವಿಚಾರಣೆ ಮಾಡಲಾಗುವುದು. ಈ ಪ್ರಕರಣದ ತನಿಖೆಗೆ ಎಸಿಪಿ ಪರಮೇಶ್ವರ ಹೆಗಡೆಯವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ ಎಂದವರು ಹೇಳಿದರು. ಸುದ್ದಿಗೋಷ್ಟಿಯಲ್ಲಿ ಮೈಸೂರು ನಗರ ಕಮಿಷನರ್ ರಮೇಶ್ ಬಿ., ಮಂಗಳೂರು ನಗರ ಕಮಿಷನರ್ ಶಶಿಕುಮಾರ್, ಡಿಸಿಪಿಗಳಾದ ಅನ್ಶುಕುಮಾರ್, ದಿನೇಶ್ ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು ಸ್ಫೋಟದ ಆರೋಪಿ ಶಾರೀಕ್‌ನ ಹಿನ್ನೆಲೆ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

Next Post

ಕುಕ್ಕರ್ ಬಾಂಬ್ ಸ್ಫೋಟದ ಸಂತ್ರಸ್ತ, ಆಟೊ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಪರಿಹಾರ : ಎಡಿಜಿಪಿ ಅಲೋಕ್‌ ಕುಮಾರ್‌

Related Posts

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ
ಕ್ರೈಮ್ ನ್ಯೂಸ್

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
40
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
59
Next Post
ಕುಕ್ಕರ್ ಬಾಂಬ್ ಸ್ಫೋಟದ ಸಂತ್ರಸ್ತ, ಆಟೊ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಪರಿಹಾರ : ಎಡಿಜಿಪಿ ಅಲೋಕ್‌ ಕುಮಾರ್‌

ಕುಕ್ಕರ್ ಬಾಂಬ್ ಸ್ಫೋಟದ ಸಂತ್ರಸ್ತ, ಆಟೊ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಪರಿಹಾರ : ಎಡಿಜಿಪಿ ಅಲೋಕ್‌ ಕುಮಾರ್‌

Discussion about this post

Recent News

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
40
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
59
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d