ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳ ತಂಡ ಬೆಳ್ತಂಗಡಿ ನ್ಯಾಯಾಲಯಕ್ಕೆ ಆರು ಮಂದಿ ಆರೋಪಿಗಳ ವಿರುದ್ಧ ನ. 20 ರಂದು ‘ಸುಳ್ಳು ಸಾಕ್ಷಿ’ ನೀಡಿರುವ ಬಗ್ಗೆ ತನಿಖೆಯಿಂದ ಕಂಡು ಬಂದ ಮಾಹಿತಿಯ ವರದಿಯನ್ನು ಸಲ್ಲಿಸಿದೆ.
ಬೆಳ್ತಂಗಡಿ ಎಸ್ಐಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಮತ್ತು ತಂಡದವರು ಪ್ರಕರಣದಲ್ಲಿ ಜೈಲಿನಲ್ಲಿರುವ ಚಿನ್ನಯ್ಯ ಸೇರಿದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ಸೌಜನ್ಯ ಮಾವ ವಿಠಲ್ ಗೌಡ, ಸುಜಾತ ಭಟ್ ಸೇರಿ ಒಟ್ಟು ಆರು ಮಂದಿ ಷಡ್ಯಂತ್ರ ಪ್ರಕರಣದಲ್ಲಿ ಭಾಗಿಯಾದವರನ್ನು ಆರೋಪಿಗಳನ್ನಾಗಿ ಮಾಡಿ ‘ಸುಳ್ಳು ಸಾಕ್ಷಿ’ ನೀಡಿರುವ ಬಗ್ಗೆ ವರದಿಯನ್ನು ಸೆಕ್ಷನ್ 215ರ ಅಡಿಯಲ್ಲಿ ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯೇಂದ್ರ. ಹೆಚ್. ಟಿ ಮುಂದೆ ಇಂದು (ನ.20) ಮಧ್ಯಾಹ್ನ 3:15 ಗಂಟೆಗೆ ಸಲ್ಲಿಕೆ ಮಾಡಿದ್ದಾರೆ.
ಎಸ್‌ಐಟಿ ವರದಿಯಲ್ಲಿ ಸುಮಾರು 3,923 ಪುಟಗಳನ್ನು ನಮೂದಿಸಿದ್ದಾರೆ. ಐವರು ಆರೋಪಿಗಳು ತನಿಖೆಗೆ ಸಹಕರಿಸುತ್ತಿಲ್ಲ ಎಂಬುವುದಾಗಿಯೂ ವರದಿಯಲ್ಲಿ ಅಧಿಕಾರಿಗಳು ನ್ಯಾಯಾಲಯಕ್ಕೆ ನೀಡಿದ ವರದಿಯಲ್ಲಿ ತಿಳಿಸಿರುವುದಾಗಿ ತಿಳಿದು ಬಂದಿದೆ. ನ್ಯಾಯಾಲಯಕ್ಕೆ ಸಲ್ಲಿಕೆಯಾಗಿರುವ ವರದಿಯ ಬಗ್ಗೆ ನ್ಯಾಯಾಲಯ ಪರಿಶೀಲಿಸಿ ಇದರ ಆಧಾರದಲ್ಲಿ ಮುಂದಿನ ತನಿಖೆ ಬಗ್ಗೆ ಸೂಚನೆ ನೀಡುವಂತೆ ವರದಿಯಲ್ಲಿ ಕೇಳಿಕೊಂಡಿರುವುದಾಗಿ ತಿಳಿದು ಬಂದಿದೆ. ಒಟ್ಟು ಪ್ರಕರಣದ ತನಿಖೆ ಮುಗಿಸಿದ ಬಳಿಕ ಮುಂದಿನ ದಿನಗಳಲ್ಲಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಿದ್ದಾರೆ.
ಬೆಳ್ತಂಗಡಿ ಕೋರ್ಟ್ ವರದಿ ಸಲ್ಲಿಕೆ ಬಳಿಕ ಡಿಜಿಪಿ ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಸರ್ಕಾರಕ್ಕೂ ವರದಿ ನೀಡಲಿದ್ದಾರೆ. ಒಟ್ಟಿನಲ್ಲಿ ಇಡೀ ದೇಶದಲ್ಲಿ ಕುತೂಹಲ ಕೆರಳಿಸಿದ್ದ ಧರ್ಮಸ್ಥಳ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪ್ಪಿದ್ದು, ಸದ್ಯ ಪ್ರಕರಣದ ಎ1 ಆರೋಪಿಯಾಗಿ ಚಿನ್ನಯ್ಯ ಮಾತ್ರ ಅಂದರ್ ಆಗಿದ್ದಾರೆ. ಇನ್ನುಳಿದವರಿಗೂ ಎಸ್ಐಟಿ ವರದಿ ನಡುಕ ಹುಟ್ಟಿಸಿರುವುದಂತೂ ಸುಳ್ಳಲ್ಲ.
Discover more from Coastal Times Kannada
Subscribe to get the latest posts sent to your email.







Discussion about this post