ಮಂಗಳೂರು, ನ.20: ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ. ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ., ಮಂಗಳೂರು, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್ಗಳು/ಸೌಹಾರ್ದ ಸಹಕಾರ ಸಂಘಗಳು, ಎಲ್ಲಾ ವಿಧದ ಸಹಕಾರ ಸಂಘಗಳು ಹಾಗೂ ಸಹಕಾರ ಇಲಾಖೆಯ ಸಹಯೋದಲ್ಲಿ ಆಯೋಜಿಸಿದ್ದ 73ನೇ ಸಹಕಾರ ಸಪ್ತಾಹದ ರಾಜ್ಯಮಟ್ಟದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾ ಡುತ್ತಿದ್ದರು.

ಸಹಕಾರಿ ರಂಗದ ಮೇಲೆ ಜನತೆ ಇಟ್ಟಿರುವ ನಂಬಿಕೆಯೇ ದೊಡ್ಡ ಶಕ್ತಿ. ಸಹಕಾರಿ ರಂಗದಲ್ಲಿ 2.60 ಕೋಟಿ ಸದಸ್ಯರಿದ್ದಾರೆ. ರಾಜೇಂದ್ರ ಕುಮಾರ್ ಸಹಕಾರಿ ರಂಗದ ಶಕ್ತಿ. ಮಹಿಳಾ ಸಶಕ್ತತೆಗೆ ಶಕ್ತಿ ನೀಡಿದ ದಕ್ಷಿಣ ಜಿಲ್ಲಾ ಕೇಂದ್ರ ಸಹಕಾರಿ ಸಂಘ ಕೃಷಿಕರ ಬದುಕಿನಲ್ಲಿ ಸಾಕಷ್ಟು ಬದಲಾವಣೆಗೆ ಕಾರಣವಾದ ಸಂಸ್ಥೆ ಎಂದು ಸಚಿವರು ಹೇಳಿದರು.
ರಾಜ್ಯದ ಕಬ್ಬು ಬೆಳೆಗಾರರಿಗೆ ಸಕ್ಕರೆ ಕಾರ್ಖಾನೆ ಗಳ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರವಹಿಸಿದೆ. ರಾಜ್ಯದ ಸಕ್ಕರೆ ಕಾರ್ಖಾನೆ ಗಳು ವಾರ್ಷಿಕ 15 ಸಾವಿರ ಜಿಎಸ್ ಟಿ ಮೂಲಕ ದೇಶದಲ್ಲಿ ತೆರಿಗೆ ಸಲ್ಲಿಸುವ ಎರಡನೆ ಸ್ಥಾನದಲ್ಲಿದೆ. ಸಕ್ಕರೆ ಉತ್ಪಾದನೆಯಲ್ಲಿ ದೇಶದಲ್ಲಿ ಕರ್ನಾಟಕ ಮೂರನೆ ಸ್ಥಾನದಲ್ಲಿದೆ. ಈ ಸಾಧನೆಗೆ ಸಹಕಾರಿ ರಂಗದ ಮಹತ್ವದ ಕೊಡುಗೆ ಇದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಮಾತನಾಡುತ್ತಾ, ಸಹಕಾರಿ ರಂಗದ ಮೂಲಕ ಜನರಿಗೆ ಆರ್ಥಿಕ ಸ್ವಾವಲಂಬನೆಯೊಂದಿಗೆ ಸಾಮರಸ್ಯದ ನಾಡು ನಿರ್ಮಾಣ ಮಾಡಲು ತೊಡಗಿಸಿಕೊಳ್ಳಬೇಕಾಗಿದೆ. ಗ್ರಾಮೀಣ ಜನರಿಗೆ ಆರ್ಥಿಕ ಶಕ್ತಿ ನೀಡಿದ ಸಹಕಾರಿ ರಂಗ ರೈತರಿಗೆ, ಮಹಿಳೆಯರಿಗೆ, ಆರ್ಥಿಕ ಶಕ್ತಿಯಾಗಿ ಬೆಳೆಯಲು ಸಹಾಯ ನೀಡಿದೆ ಮತ್ತು ನೆಮ್ಮದಿಯ ಬದುಕು ನೀಡುವಂತಾಗಬೇಕು ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರೂ ಆಗಿರುವ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಮಾತನಾಡಿ, ಸಹಕಾರ ಸಂಘಗಳ ಚಟುವಟಿಕೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ. ಮಹಿಳೆಯರ ಪಾತ್ರ ಹೆಚ್ಚಿದೆ. ರಾಜಕೀಯರಹಿತವಾಗಿ ಸಹಕಾರಿ ರಂಗವನ್ನು ಅಭಿವೃದ್ಧಿಪಡಿಸುವುದು ಗುರಿಯಾಗಿದೆ. ಮಹಿಳಾ ಸ್ವಾವಲಂಬನೆಯ ಜೊತೆ ನವೋದಯ ಸ್ವ ಸಹಾಯ ಗುಂಪಿನ ಮಹಿಳಾ ಸದಸ್ಯರ ಮಕ್ಕಳ ಶಿಕ್ಷಣಕ್ಕಾಗಿ ಒಂದು ಕೋಟಿ ಆರ್ಥಿಕ ಸಹಾಯವನ್ನು ತನ್ನ ವೈಯಕ್ತಿಕ ನೆಲೆಯಲ್ಲಿ ನೀಡುವುದಾಗಿ ತಿಳಿಸಿದ್ದಾರೆ.

“ಸಹಕಾರ ಮಾಣಿಕ್ಯ ಪ್ರಶಸ್ತಿ,”ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ, ಉತ್ತಮ ಸ್ವ-ಸಹಾಯ ಸಂಘಗಳಿಗೆ ಪುರಸ್ಕಾರವನ್ನು ಶಾಸಕ ಹಾಗೂ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ. ದೇವೇಗೌಡ ನೆರವೇರಿಸಿದರು.
ಮುಖ್ಯ ಅತಿಥಿಗಳಾಗಿದ್ದ ಸಂಸದ ಕ್ಯಾ.ಬ್ರಿಜೇಶ್ ಚೌಟ ಮಾತನಾಡಿ, ತ್ರಿಭುವನ್ ಸಹಕಾರಿ ವಿಶ್ವ ವಿದ್ಯಾನಿಲಯದ ಘಟಕವನ್ನು ಮಂಗಳೂರಿನಲ್ಲಿ ಆರಂಭಿಸಬೇಕು, ಅಡಿಕೆ ಹಳದಿ ರೋಗ ಸಂತ್ರಸ್ತರಿಗೆ ವಿಶೇಷ ಪ್ಯಾಕೇಜ್ ಸರಕಾರದಿಂದ ನೀಡಬೇಕು ಎಂದು ಆಗ್ರಹಿಸಿದರು.
ಸಮಾರಂಭದಲ್ಲಿ ಶಾಸಕರಾದ ಡಾ.ಭರತ್ ಶೆಟ್ಟಿ ವೈ, ಅಶೋಕ್ ಕುಮಾರ್ ರೈ ಯಶ್ಪಾಲ್ ಎ. ಸುವರ್ಣ, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಕಿಶೋರ್ ಕುಮಾರ್ ಬೊಟ್ಯಾಡಿ, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ, ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ ಇತರ ನಿರ್ದೇಶಕರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಬೆಂಗಳೂರು ಇದರ ವ್ಯವಸ್ಥಾಪಕ ನಿರ್ದೇಶಕ ಡಾ.ಸುರೇಶ್ ಗೌಡ, ಮೈಸೂರು ಸಹಕಾರ ಸಂಘಗಳ ಜಂಟಿ ನಿಬಂಧಕ ಶಶಿಧರ್ ಪಿ., ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಜಂಟಿ ನಿಬಂಧಕ ಕೆ.ಎಸ್.ನವೀನ್, ದಕ್ಷಿಣ ಕನ್ನಡ ಜಿಲ್ಲೆ ಸಹಕಾರ ಸಂಘಗಳ ಉಪ ನಿಬಂಧಕ ರಮೇಶ್ ಎಚ್.ಎನ್., ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧ ಕಲಾವಣ್ಯ ಕೆ.ಆರ್., ಸಹಕಾರ ಸಂಘಗಳ ಅಪರ ನಿಬಂಧಕ ಪ್ರಸಾದ್ ರೆಡ್ಡಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಗೋಪಾಲಕೃಷ್ಣ ಭಟ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟ ಇಂದ್ರಾಳಿ, ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್, ಮಂಗಳೂರು ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Discover more from Coastal Times Kannada
Subscribe to get the latest posts sent to your email.




Discussion about this post