ಬೆಳ್ತಂಗಡಿ, ಡಿ.21: ಸರಕಾರಿ ಸಂಸ್ಥೆಯ ಉದ್ಯೋಗಿಯೊಬ್ಬರು ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಬಸ್ ಹತ್ತುತ್ತಿದ್ದಾಗ ಕರಿಮಣಿ ಸರ ಕಳವಾದ ಪ್ರಕರಣವನ್ನು ಭೇದಿಸಿದ ಬೆಳ್ತಂಗಡಿ ಪೊಲೀಸರು ಇಬ್ಬರು ತಮಿಳುನಾಡು ಮೂಲದ ಕಳ್ಳಿಯರನ್ನು ಬಂಧಿಸಿದ್ದಾರೆ.
ವಾರಿಜಾ ಅವರು ಡಿ.12ರಂದು ಕೆಎಸ್ಸಾರ್ಟಿಸಿ ಬಸ್ ಹತ್ತುತ್ತಿದ್ದಾಗ 24 ಗ್ರಾಂ ತೂಕದ ಚಿನ್ನದ ಕರಿಮಣಿ ಸರವನ್ನು ಕಳ್ಳತನ ಮಾಡಲಾಗಿತ್ತು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ನೀಡಿದ್ದರು. ಅದರಂತೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದರು.
ಪ್ರಕರಣದ ತನಿಖೆ ಸಂದರ್ಭದಲ್ಲಿ ಬೆಳ್ತಂಗಡಿ ಉಪ ನಿರೀಕ್ಷಕ ಚಂದ್ರಶೇಖರ್ ಮತ್ತು ತಂಡದ ಪೊಲೀಸರು ಸಂಶಯದ ಮೇರೆಗೆ ತಮಿಳುನಾಡು ಮೂಲದ ಇಬ್ಬರು ಮಹಿಳೆಯರನ್ನು ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದರು. ವಿಚಾರಣೆ ವೇಳೆ ಕಳ್ಳತನ ಒಪ್ಪಿಕೊಂಡಿದ್ದು ಇಬ್ಬರನ್ನೂ ಬಂಧಿಸಿದ್ದಾರೆ. ತಮಿಳುನಾಡಿನ ತಿರುಪೂರ್ ಜಿಲ್ಲೆಯ ಮೋಹಿನಿ ಯಾನೆ ಮಾರಿಮುತ್ತು (35) ಮತ್ತು ದಿವ್ಯಾ ಯಾನೆ ಕಾಮಾಚಿ (30) ಬಂಧಿತರಾಗಿದ್ದು ಕದ್ದ ಕರಿಮಣಿ ಸರವನ್ನು ಪೊಲೀಸರಿಗೆ ನೀಡಿದ್ದಾರೆ.
ಆರೋಪಿಗಳನ್ನು ಡಿ. 20 ನ್ಯಾಯಾಧೀಶರ ಬಳಿ ಹಾಜರುಪಡಿಸಲಾಗಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಗಳಿಬ್ಬರ ಮೇಲೆ ಈ ಹಿಂದೆ ಬೆಳ್ತಂಗಡಿ ಸೇರಿದಂತೆ ವಿವಿಧ ಠಾಣೆಗಳಲ್ಲಿ ಕಳ್ಳತನ ಪ್ರಕರಣ ದಾಖಲಾಗಿವೆ. ಇನ್ನು ಆರೋಪಿಗಳು ವಿಚಾರಣೆ ವೇಳೆ ಮೂಲ್ಕಿ ಮತ್ತು ಬೆಳ್ತಂಗಡಿಯಲ್ಲಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
Discover more from Coastal Times Kannada
Subscribe to get the latest posts sent to your email.
Discussion about this post