ಇಸ್ಲಾಮಾಬಾದ್: ತೋಷಖಾನಾ ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಪತ್ನಿ ಬುಶ್ರಾ ಬೀಬಿಗೆ 17 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಪಾಕ್ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಇಮ್ರಾಮ್ ಖಾನ್ ಮತ್ತು ಬುಶ್ರಾ ಅವರಿಗೆ ಪಾಕಿಸ್ತಾನ ದಂಡ ಸಂಹಿತೆಯ ಸೆಕ್ಷನ್ 409 (ಕ್ರಿಮಿನಲ್ ನಂಬಿಕೆ ಉಲ್ಲಂಘನೆ) ಅಡಿಯಲ್ಲಿ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.
2023ರಲ್ಲಿ ತೋಷಖಾನಾ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಶ್ರಾ ಬೀಬಿಗೆ ನ್ಯಾಯಾಲಯವು 14 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಅದಕ್ಕೂ ಮುನ್ನ ಸೋರಿಕೆಯಾದ ದಾಖಲೆಗೆ ಸಂಬಂಧಿಸಿದ ವಿವಾದಾತ್ಮಕ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು.
ಸೈಫರ್ ಪ್ರಕರಣದಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಮಾಜಿ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ ಅವರಿಗೆ ತಲಾ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. 1974 ರಲ್ಲಿ ಸ್ಥಾಪಿತವಾದ ತೋಷಖಾನಾವು ಕ್ಯಾಬಿನೆಟ್ ವಿಭಾಗದ ಆಡಳಿತ ನಿಯಂತ್ರಣದಲ್ಲಿರುವ ಒಂದು ಇಲಾಖೆಯಾಗಿದೆ.
ಇತರ ಸರ್ಕಾರಗಳು ಮತ್ತು ರಾಜ್ಯಗಳ ಮುಖ್ಯಸ್ಥರು ಮತ್ತು ವಿದೇಶಿ ಗಣ್ಯರು ಆಡಳಿತಗಾರರು, ಸಂಸದರು, ಅಧಿಕಾರಿಗಳು ಮತ್ತು ಅಧಿಕಾರಿಗಳಿಗೆ ನೀಡಿದ ಅಮೂಲ್ಯ ಉಡುಗೊರೆಗಳನ್ನು ಸಂಗ್ರಹಿಸುತ್ತದೆ.
ಉಡುಗೊರೆಯಾಗಿ ಬಂದ ಆಸ್ತಿಗಳನ್ನು ಇಮ್ರಾನ್ ತಾವೇ ಉಳಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ತೋಷಖಾನಾವು ಕ್ಯಾಬಿನೆಟ್ ವಿಭಾಗದ ಅಡಿಯಲ್ಲಿ ಬರುವ ಒಂದು ಇಲಾಖೆ,, ಇದು ಆಡಳಿತಗಾರರು ಮತ್ತು ಸರ್ಕಾರಿ ಅಧಿಕಾರಿಗಳಿಗೆ ಇತರ ಸರ್ಕಾರಗಳ ಮುಖ್ಯಸ್ಥರು ಮತ್ತು ವಿದೇಶಿ ಗಣ್ಯರು ನೀಡಿದ ಉಡುಗೊರೆಗಳನ್ನು ಸಂಗ್ರಹಿಸುತ್ತದೆ. ಖಾನ್ ಅವರು ಬೆಲೆಬಾಳುವ ವಾಚ್ ಸೇರಿದಂತೆ ಕೆಲವು ಉಡುಗೊರೆಗಳನ್ನು ತೆಗೆದುಕೊಂಡು ಅವುಗಳನ್ನು ಲಾಭಕ್ಕಾಗಿ ಮಾರಾಟ ಮಾಡಿದ್ದರು ಎಂಬುದು ಆರೋಪವಾಗಿದೆ.
ಏನಿದು ತೋಶಖಾನ ಕೇಸ್? ತೋಷಖಾನ (Toshakhana) ಸರ್ಕಾರದ ಖಜಾನೆಯಾಗಿದ್ದು, ಸರ್ಕಾರಕ್ಕೆ ಬಂದ ಕಾಣಿಕೆಗಳನ್ನ ನಿರ್ವಹಣೆ ಮಾಡುತ್ತದೆ. 1974ರಲ್ಲಿ ತೋಶಖಾನ ಇಲಾಖೆಯನ್ನ ಸ್ಥಾಪಿಸಲಾಯಿತು. ಭಾರತ ಸೇರಿದಂತೆ ಅನೇಕ ದೇಶಗಳು ತೋಶಖಾನಗಳನ್ನ ಹೊಂದಿವೆ. ಅಲ್ಲಿ ಇದನ್ನು ವಿದೇಶಾಂಗ ಸಚಿವಾಲಯ ನಿರ್ವಹಿಸುತ್ತದೆ. ಉಡುಗೊರೆಗಳನ್ನು ದೇಶದ ಆಸ್ತಿ ಎಂದು ಭಾವಿಸಲಾಗುತ್ತದೆ. ಸದ್ಯ ಇಮ್ರಾನ್ ಖಾನ್ ತಮ್ಮ ಅಧಿಕಾರಾವಧಿಯಲ್ಲಿ ತಮಗೆ ಬಂದ ಉಡುಗೊರೆಗಳನ್ನು ಈ ತೋಶಖಾನ ನಿಧಿಗೆ ನೀಡಬೇಕಿತ್ತು. ಆದ್ರೆ ಖಾನ್ ಅದನ್ನು ಮಾರಾಟ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಇದೆ. ಖಾನ್ ಅವರು 2018ರ ನವೆಂಬರ್‌ನಲ್ಲಿ ಸೌದಿ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಅವರಿಂದ ಪಡೆದ ನಾಲ್ಕು ಉಡುಗೊರೆಗಳನ್ನು ಮಾರಾಟ ಮಾಡಿದ್ದಾರೆ. ಪ್ರಾಚೀನ ಗಡಿಯಾರ, ಚಿನ್ನದ ಪೆನ್, ಉಂಗುರ, ನೆಕ್ಲೆಸ್ ಮತ್ತು ಇತರೆ ಅಮೂಲ್ಯ ಉಡುಗೊರೆಗಳನ್ನು ಮಾರಾಟ ಮಾಡಿಕೊಂಡಿದ್ದಾರೆ ಎನ್ನುವ ಆರೋಪಗಳು ಇದೆ. ಪಕ್ಷದ ಮಾಜಿ ಅಧ್ಯಕ್ಷರಾದವರ ಪೈಕಿ ಆಸಿಫ್ ಅಜಿ ಜರ್ಧಾರಿ ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್, ಯೂಸೂಫ್ ರಾಜಾ ಗಿಲಾನಿ ಕೂಡ ಇಂತಹ ಅಪರಾಧ ಎಸಗಿದ್ದಾರೆ. ಇಮ್ರಾನ್ ಖಾನ್ ಪತ್ನಿ ಬುಷ್ರಾ ಕೂಡ ಉಡುಗೊರೆಗಳನ್ನ ದುರುಪಯೋಗ ಮಾಡಿದ್ದಾರೆ ಎಂದು ಪ್ರಾಸಿಕ್ಯೂಷನ್ ಆರೋಪಿಸಿದೆ.
ತೋಶಖಾನಾ ಕೇಸ್ ಹಿನ್ನೆಲೆ ಏನು?
ಆಗಸ್ಟ್ 2022: ಪ್ರಕರಣವನ್ನ ಚುನಾವಣಾ ಆಯೋಗದ ಪರಿಶೀಲನೆಗೆ ಒಪ್ಪಿಸಿದ ರಾಷ್ಟ್ರೀಯ ಅಸೆಂಬ್ಲಿ ಸ್ಪೀಕರ್ ರಾಜಾ
ಅಕ್ಟೋಬರ್ 21, 2022: ಪ್ರಕರಣದ ತೀರ್ಪು ಕಾಯ್ದಿರಿಸಿದ್ದ ಆಯೋಗ
ಅಕ್ಟೋಬರ್ 21, 2022: ಇಮ್ರಾನ್‌ಖಾನ್‌ರಿಂದ ತಪ್ಪು ಹೇಳಿಕೆ, ಅಸಮರ್ಪಕ ಆಸ್ತಿ ಘೋಷಣೆ ಎಂದು ತೀರ್ಪು. ಸದಸ್ಯತ್ವ ರದ್ದು.
ನವೆಂಬರ್ 21,2022: ಕ್ರಿಮಿನಲ್ ವಿಚಾರಣೆ ಕೋರಿ ಖಾನ್ ವಿರುದ್ಧ ಸೆಷನ್ ಕೋರ್ಟ್‌ಗೆ ಆಯೋಗದಿಂದ ದೂರು.
ಜುಲೈ 4, 2023: ಅರ್ಜಿದಾರರ ವಾದ ಮರು ಆಲಿಸುವಂತೆ ಕೆಳಹಂತದ ನ್ಯಾಯಾಲಯಕ್ಕೆ ಇಸ್ಲಾಮಾಬಾದ್ ಹೈಕೋರ್ಟ್ ಆದೇಶ.
ಜುಲೈ 8, 2023: ಪ್ರಕರಣ ವಿಚಾರಣೆಗೆ ಅರ್ಹ ಎಂದು ಸೆಷನ್ಸ್ ಕೋರ್ಟ್ ನ್ಯಾಯಾಧೀಶರ ಘೋಷಣೆ.
ಆಗಸ್ಟ್ 2, 2023: ಇಮ್ರಾನ್ ಖಾನ್ ಸಲ್ಲಿಸಿದ್ದ ಸಾಕ್ಷಿಗಳ ಪಟ್ಟಿ ತಿರಸ್ಕರಿಸಿದ ಕೋರ್ಟ್.
ಆಗಸ್ಟ್ 5, 2023: ಆರೋಪ ಸಾಬೀತು. 3 ವರ್ಷ ಶಿಕ್ಷೆ ವಿಧಿಸಿ ಆದೇಶ.
ಕಳೆದ ವರ್ಷ ತೋಷಖಾನಾ ಪ್ರಕರಣದಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಅವರ ಪತ್ನಿ ಬುಶ್ರಾ ಬೀಬಿ ವಿರುದ್ಧ ಪಾಕಿಸ್ತಾನದ ನ್ಯಾಯಾಲಯ ಆರೋಪ ಹೊರಿಸಿತ್ತು. ರಾವಲ್ಪಿಂಡಿಯ ಅಡಿಯಾಲಾ ಜೈಲಿನಲ್ಲಿ ನಡೆದ ವಿಚಾರಣೆ ವೇಳೆ, ವಿಶೇಷ ನ್ಯಾಯಾಲದ ನ್ಯಾಯಾಧೀಶ ಶಾರುಕ್ ಅರ್ಜುಮಂದ್ ಅವರು ಈ ಇಬ್ಬರ ವಿರುದ್ಧ ಆರೋಪ ಹೊರಿಸಿದ್ದರು.
Discover more from Coastal Times Kannada
Subscribe to get the latest posts sent to your email.







Discussion about this post