ಪುತ್ತೂರು, ಜ.21 : ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಜ.12ರಂದು ನಡೆದ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಪ್ರಭಾಕರ ಭಟ್ ದ್ವೇಷ ಪೂರಿತ ಭಾಷಣ ಮಾಡಿದ್ದಾರೆಂದು ಮಾನವ ಬಂಧುತ್ವ ವೇದಿಕೆಯ ರಾಮಚಂದ್ರ ಕೆ ಎಂಬವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
ಮಾನವ ಬಂಧುತ್ವ ವೇದಿಕೆಯ ವತಿಯಿಂದ ನೀಡಲಾಗಿರುವ ದೂರಿನಂತೆ ಕಲ್ಲಡ್ಕ ಪ್ರಭಾಕರ ಭಟ್ ಮತ್ತು ವಿಕಸನ ಟಿವಿ ಯೂಟ್ಯೂಬ್ ಚಾನಲ್ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಯಕ್ರಮದಲ್ಲಿ ಕೋಮು ದ್ವೇಷ ಹಾಗೂ ಹಿಂಸೆಗೆ ಪ್ರಚೋದಿಸುವಂತೆ ಭಾಷಣ ಮಾಡಿದ ಕಲ್ಲಡ ಪ್ರಭಾಕರ ಭಟ್ ವಿರುದ್ಧ ಹಾಗೂ ಭಾಷಣವನ್ನು ಪ್ರಸಾರ ಮಾಡಿದ “VIKASANA TV” (ವಿಕಸನ ಟಿವಿ) ಎಂಬ ಹೆಸರಿನ ಯೂಟ್ಯೂಬ್ ಚಾನಲ್ ಹಾಗೂ ಸದ್ರಿ ಕಾರ್ಯಕ್ರಮವನ್ನು ಆಯೋಜಿಸಿದ್ದ ಆಯೋಜಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 10/2026, ಕಲಂ:196, 299, 302, 353(2), 3(5) BNS ರಂತೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇತ್ತೀಚೆಗೆ ಪುತ್ತೂರು ಠಾಣೆಯಲ್ಲಿ ಕೋಮು ದ್ವೇಷದ ಭಾಷಣ ನೆಪದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಅದರಲ್ಲಿ ಜಾಮೀನು ಸಿಗಲು ಎರಡು ತಿಂಗಳು ಬೇಕಾಗಿತ್ತು. ಕೊನೆಗೆ, ಜಾಮೀನು ನೀಡುವ ಸಂದರ್ಭದಲ್ಲಿ ಇಂತಹ ಭಾಷಣ ಮಾಡಬಾರದು, ಕೇಸು ದಾಖಲಾಗದಂತೆ ನೋಡಿಕೊಳ್ಳಬೇಕು ಎಂದು ಕೋರ್ಟ್ ಎಚ್ಚರಿಕೆ ನೀಡಿತ್ತು.
Discover more from Coastal Times Kannada
Subscribe to get the latest posts sent to your email.








Discussion about this post