ತುಮಕೂರು, ಮಾ.22: ತುಮಕೂರು ತಾಲೂಕಿನ ಕುಚ್ಚಂಗಿ ಕೆರೆಯ ಬಳಿ ಸುಟ್ಟ ಸ್ಥಿತಿಯಲ್ಲಿ ಮೂರು ಅಪರಿಚಿತ ಶವಗಳು ಪತ್ತೆಯಾಗಿದ್ದು, ಮೃತರ ಗುರುತು ತಿಳಿದುಬಂದಿಲ್ಲ. ನಿನ್ನೆ(ಮಾ.21) ರಾತ್ರಿ ನಡೆದಿರುವ ಘಟನೆ ಇದಾಗಿದ್ದು, ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಕೆರೆಗೆ ಕಾರು ತಳ್ಳಿರುವ ಶಂಕೆ ವ್ಯಕ್ತವಾಗಿದೆ. ಇದು ದಕ್ಷಿಣ ಕನ್ನಡ ಮೂಲದ ರಫಿಕ್ ಎಂಬುವರಿಗೆ ಸೇರಿದ ಕಾರು ಎನ್ನಲಾಗಿದೆ. ಸ್ಥಳಕ್ಕೆ ತುಮಕೂರು ಎಸ್ ಪಿ ಅಶೋಕ್ ಕೆ.ವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಘಟನೆ ಕೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕಾರಿನ ನಂಬರ್ ಆಧರಿಸಿ ತನಿಖಗೆ ನಡೆಸಿದಾಗ ಕಾರು ದಕ್ಷಿಣ ಕನ್ನಡದ ಬೆಳ್ತಂಗಡಿಯ ರಫಿಕ್ ಎಂಬುವವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ, ಕಳೆದ ರಾತ್ರಿ ಕಾರಿಗೆ ಬೆಂಕಿ ಹಚ್ಚಿರಬಹುದು ಎನ್ನಲಾಗಿದೆ. ಕಾರಿನಲ್ಲಿದ್ದ ಶವ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ (45), ಕುವೆಟ್ಟು ಗ್ರಾಮದ ಮದ್ದಡ್ಕ ನಿವಾಸಿ ಇಸಾಕ್ (56) ಮತ್ತು ಶಿರ್ಲಾಲು ನಿವಾಸಿ ಇಮ್ತಿಯಾಜ್ (34) ಎಂದು ಹೇಳಲಾಗುತ್ತಿದೆ. ಮೃತರ ಸಂಬಂಧಿಕರು ತುಮಕೂರಿಗೆ ಬಂದಿದ್ದು ಮೂವರ ಶವಗಳೂ ಗುರುತು ಸಿಗದಷ್ಟು ಸುಟ್ಟು ಹೋಗಿವೆ. ಪೊಲೀಸರು ಎಲ್ಲಾ ಆಯಾಮದಲ್ಲೂ ತನಿಖೆ ಕೈಗೊಂಡಿದ್ದಾರೆ, ಮೃತ ದೇಹಗಳ ಮತ್ತೆಗಾಗಿ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದು, ಸಂಪೂರ್ಣ ತನಿಖೆಯಿಂದಷ್ಟೆ ಈ ಘಟನೆಯ ಹಿಂದಿನ ಸತ್ಯಾಂಶ ಹೊರ ಬೀಳಲಿದೆ ಎನ್ನುವುದು ಪೊಲೀಸ್ ಅಧಿಕಾರಿಯೊಬ್ಬರ ವಿವರಣೆ.
ಇನ್ನು ಭೇಟಿ ಬಳಿಕ ಮಾತನಾಡಿದ ತುಮಕೂರು ಎಸ್ ಪಿ ಅಶೋಕ್ ಕೆ.ವಿ, ಘಟನೆ ಕುರಿತು ಇವತ್ತು ಮಧ್ಯಾಹ್ನ 1 ಗಂಟೆಗೆ ನಮಗೆ ಮಾಹಿತಿ ಬಂದಿದೆ. ತುಮಕೂರು ಗ್ರಾಮಾಂತರದ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಕುಚ್ಚಂಗಿ ಕೆರೆಯ ಮಧ್ಯದಲ್ಲಿ ವೈಟ್ ಕಲರ್ ಮಾರುತಿ ಎಸ್ ಪ್ರೆಸ್ ಕಾರಿನಲ್ಲಿ ಮೂರು ಮೃತದೇಹಗಳು ಸುಟ್ಟು ಸ್ಥಿತಿಯಲ್ಲಿ ಸಿಕ್ಕಿವೆ. ಕೂಡಲೇ ನಮ್ಮ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈಗ ಎಫ್ಎಸ್ಎಲ್ ಟೀಂ ಬಂದಿದೆ, ತಪಾಸಣೆ ನಡಿತಿದೆ. ಕಾರಿನ ನಂಬರ್ ಬೇಸ್ ಮೇಲೆ ಕಾರು ಎಲ್ಲಿಂದ ಬಂತು, ಹೇಗೆ ಬಂತು ಎಂಬುದರ ಬಗ್ಗೆ ತನಿಖೆ ನಡೆಸಲಾಗಿದೆ. ಈ ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸಿಕೊಂಡು. ಪ್ರಕರಣವನ್ನ ಆದಷ್ಟು ಬೇಗ ಪತ್ತೆ ಮಾಡುತ್ತೇವೆ ಎಂದರು.
ಘಟನಾ ಸ್ಥಳಕ್ಕೆ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್.ಕೆ.ವಿ, ಅಡಿಷನಲ್ ಎಸ್ಪಿ ಮರಿಯಪ್ಪ, ಡಿವೈಎಸ್‌ಪಿ ಚಂದ್ರಶೇಖರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post