• About us
  • Contact us
  • Disclaimer
Thursday, February 26, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪುತ್ತೂರಿನಲ್ಲಿ ಪುತ್ತಿಲ ಬೆಂಬಲಿಗರಿಂದ “ನಮ್ಮ ನಡಿಗೆ ಶ್ರೀ ಮಹಾಲಿಂಗೇಶ್ವರನ ನಡೆಗೆ” ಸಾವಿರಾರು ಕಾರ್ಯಕರ್ತರ ಕಾಲ್ನಡಿಗೆ ಜಾಥಾ

Coastal Times by Coastal Times
May 22, 2023
in ಕರಾವಳಿ
ಪುತ್ತೂರಿನಲ್ಲಿ ಪುತ್ತಿಲ ಬೆಂಬಲಿಗರಿಂದ “ನಮ್ಮ ನಡಿಗೆ ಶ್ರೀ ಮಹಾಲಿಂಗೇಶ್ವರನ ನಡೆಗೆ” ಸಾವಿರಾರು ಕಾರ್ಯಕರ್ತರ ಕಾಲ್ನಡಿಗೆ ಜಾಥಾ
38
VIEWS
WhatsappTelegramShare on FacebookShare on Twitter

ಪುತ್ತೂರು: ಬಿಜೆಪಿ ಬಂಡಾಯ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರ ಬೆಂಬಲಿಗರಿಂದ `ನಮ್ಮ ನಡಿಗೆ ಶ್ರೀ ಮಹಾಲಿಂಗೇಶ್ವರನ ನಡೆದ ಎಂಬ ಪಾದಯಾತ್ರೆ ಹಾಗೂ `ಸೇವಾ ಸಮರ್ಪಣಾ ಕಾರ್ಯಕ್ರಮ ರವಿವಾರ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಾಲಯದ ಮಾರುಗದ್ದೆಯಲ್ಲಿ ನಡೆಯಿತು. ಈ ಸಂದರ್ಭ `ಪುತ್ತಿಲ ಪರಿವಾರ’ ಲಾಂಚನ ಬಿಡುಡೆಗೊಳಿಸಲಾಯಿತು.

ಸಭಾ ಕಾರ್ಯಕ್ರಮಕ್ಕೆ ಮೊದಲು ನಗರದ ದರ್ಬೆಯಿಂದ ಮುಖ್ಯರಸ್ತೆಯಲ್ಲಿ ದೇವಸ್ಥಾನದ ಗದ್ದೆಗೆ ಪಾದಯಾತ್ರೆ ನಡೆಯಿತು ದರ್ಬೆಯಿಂದ ಕಾಲ್ನಡಿಗೆಯಲ್ಲಿ ಬಂದ ಕಾರ್ಯಕರ್ತರ ಪಡೆ ಮಹಾಲಿಂಗೇಶ್ವರ ದೇವಸ್ಥಾನ ಮುಂಭಾಗದಲ್ಲಿ ಸೇರಿತು. ಮೆರವಣಿಗೆ ಉದ್ದಕ್ಕೂ ಸಾಗರದೋಪಾದಿಯಲ್ಲಿ ಕೇಸರಿ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಅರುಣ್ ಕುಮಾರ್ ಪುತ್ತಿಲ ಮಾತನಾಡಿ ನಮ್ಮ ಹೋರಾಟ ಚುನಾವಣೆಗೆ ಸೀಮಿತವಾಗುವುದಿಲ್ಲ. ಹಿಂದುತ್ವ, ಹಿಂದುಗಳ ಶೋಷಣೆ ವಿರುದ್ಧ ನಮ್ಮ ಧ್ವನಿ ಸದಾ ಇರಲಿದೆ ಕೇವಲ 20 ದಿವಸಗಳಲ್ಲಿ 62 ಸಾವಿರ ಜನ ನಮ್ಮ ಜೊತೆಗೆ ಕೈಜೋಡಿಸಿದ್ದಾರಂದ್ರೆ, ಸಣ್ಣ ಮಾತಲ್ಲ. ನಿಮ್ಮ ಪ್ರೀತಿ, ಬೆಂಬಲಕ್ಕೆ ಚಿರ ಋಣಿಯಾಗಿರುತ್ತೇನೆ.  ಚುನಾವಣೆಗೆ ಸ್ಪರ್ಧಿಸುವಾಗ ಗೋ ಹತ್ಯೆ ಆಗುವುದಿಲ್ಲ. ಹಿಂದೂ ಸಹೋದರಿಯರ ಮಾನಭಂಗ ನಡೆಯುವುದಿಲ್ಲ. ಧಾರ್ಮಿಕ ಕೇಂದ್ರ ಸಮಾಜಕ್ಕೆ ಶಕ್ತಿ ಕೊಡುತ್ತದೆ ಎಂಬ ವಿಶ್ವಾಸ ನಮಗಿತ್ತು. ಆದರೆ ಹಣ ಹಂಚಿಕೆ, ಅಪಪ್ರಚಾರ ಇನ್ನಿತರ ವಾಮಮಾರ್ಗದ ಕಾರಣದಿಂದಾಗಿ ನಮಗೆ ಸಣ್ಣ ಅಂತರದಿಂದ ಸೋಲಾಯಿತು. ಹಿಂದೂ ಸಮಾಜ ಶಕ್ತಿಯಾಗಬೇಕು ಎಂಬುದು ತಾಯಂದಿರಲ್ಲಿ ಮಠಾಧಿಪತಿಗಳಲ್ಲಿ, ಸಂಘ ಪರಿವಾರದಲ್ಲಿ, ಬಿಜೆಪಿ ಪದಾಧಿಕಾರಿಗಳಲ್ಲಿತ್ತು. ಕೆಲ ನಾಯಕರ ತಪ್ಪು ಹೆಜ್ಜೆಗಳಿಂದಾಗಿ ಅಂತಹ ಅವಕಾಶ ತಪ್ಪಿ ಹೋಯಿತು. ಮೇಲಿನ ಸ್ಥಾನದಲ್ಲಿ ಕುಳಿತಿದ್ದ ನಾಯಕರು ಮಾಡಿದ ತಪ್ಪು ನಿರ್ಧಾರದಿಂದಾಗಿ ಹಿಂದೂ ಸಮಾಜಕ್ಕೆ ಶಕ್ತಿ ಕೊಡಬೇಕಾದ ನಾವು ಶಕ್ತಿ ಕಳೆದುಕೊಂಡೆವು ಎಂದರು.

ನನ್ನಲ್ಲಿ ಎಂದೂ ಜಾತಿ ಇಲ್ಲ. ಇರುವುದು ಹಿಂದುತ್ವ ಮಾತ್ರ. ಆಧಿಕಾರಕ್ಕಾಗಿ ಎಂದೂ ರಾಜಕಾರಣ ಮಾಡಿಲ್ಲ. ಆದರೂ ನನ್ನ ಬಗ್ಗೆ ಹಲವಾರು ಅಪಮಾನ, ಅಪವಾದಗಳನ್ನು ಮಾಡಿದರು. ಅವರಿಗೆ ನನ್ನ ಕಣ್ಣೀರಿನ ಹನಿ ತಟ್ಟಲಿದೆ. ಶ್ರೀ ಮಹಾಲಿಂಗೇಶ್ವರ ಉತ್ತರ ನೀಡಲಿದ್ದಾನೆ. ದೈವ ದೇವರುಗಳು ಅವರಿಗೆ ಪಶ್ಚಾತ್ತಾಪದ ಜೊತೆಗೆ ಸನ್ನಡತೆಯನ್ನು ನೀಡಲಿ ಎಂದ ಅವರು ಚುನಾವಣೆಯಲ್ಲಿ ನಾನು ಸೋತ್ತಿದ್ದರೂ ಕಾರ್ಯಕರ್ತರ ವಿಶ್ವಾಸಕ್ಕೆ ಪಾತ್ರನಾಗಿದ್ದೇನೆ. ಸ್ಪರ್ಧೆಯ ಮೂಲಕ ದೇಶಕ್ಕೆ ಬದಲಾವಣೆಯ ಚಿಂತನೆ ನೀಡಿದ್ದೇನೆ ಎಂದು ಹೇಳಿದರು.

ಪ್ರಸನ್ನ ಕುಮಾರ್ ಮಾರ್ತ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಡಾ. ಸುರೇಶ್ ಪುತ್ತೂರಾಯ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉದ್ಯಮಿ ರಾಜಶೇಖರ್ ಬನ್ನೂರು ಪುತ್ತಿಲ ಪರಿವಾರ ಸಂಘಟನೆಯ ನೂತನ ಲಾಂಚನ ಬಿಡುಗಡೆಗೊಳಿಸಿದರು. ವಸಂತ ಲಕ್ಷ್ಮೀ ಮತ್ತು ಡಾ. ಗಣೇಶ್ ಪ್ರಸಾದ್ ಮುದ್ರಜೆ ಉಪಸ್ಥಿತರಿದ್ದರು. ಉಮೇಶ್ ಕೋಡಿಬೈಲು ಸ್ವಾಗತಿಸಿದರು.  ನವೀನ್ ಪಂಜಳ ನಿರೂಪಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ತಣ್ಣೀರು ಬಾವಿ ಬೀಚ್‌ನಲ್ಲಿ G20 – ಮೆಗಾ ಬೀಚ್ ಕ್ಲೀನ್ ಕಾರ್ಯಕ್ರಮ

Next Post

ಅಮೃತವರ್ಷಿಣಿ ಖ್ಯಾತಿಯ ನಟ ಶರತ್ ಬಾಬು ಇನ್ನಿಲ್ಲ

Related Posts

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ
ಕರಾವಳಿ

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

February 25, 2026
32
‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ
ಕರಾವಳಿ

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 24, 2026
27
Next Post
ಅಮೃತವರ್ಷಿಣಿ ಖ್ಯಾತಿಯ ನಟ ಶರತ್ ಬಾಬು ಇನ್ನಿಲ್ಲ

ಅಮೃತವರ್ಷಿಣಿ ಖ್ಯಾತಿಯ ನಟ ಶರತ್ ಬಾಬು ಇನ್ನಿಲ್ಲ

Discussion about this post

Recent News

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
57
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
46
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

February 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d