ಹೈದರಾಬಾದ್: ಕನ್ನಡದ ಅಮೃತವರ್ಷಿಣಿ ಸಿನಿಮಾ ಖ್ಯಾತಿಯ ನಟ ಶರತ್ ಬಾಬು ಅವರು ಸೋಮವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ನಟ ಶರತ್ ಬಾಬು ಅವರನ್ನು ಏಪ್ರಿಲ್ ಮೊದಲ ವಾರದಲ್ಲಿ ಬೆಂಗಳೂರಿನ ಚಿಕಿತ್ಸೆ ನೀಡಲಾಗಿತ್ತು. ಆರೋಗ್ಯದಲ್ಲಿ ಚೇತರಿಕೆ ಕಂಡ ಬಳಿಕ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತು. ಬಹು ಅಂಗಾಂಗ ವೈಫಲ್ಯದಿಂದ ಶರತ್ ಬಾಬು ಅವರು ಬಳಲುತ್ತಿದ್ದರು. ಈಗ ಚಿಕಿತ್ಸೆ ಫಲಕಾರಿಯಾಗದೇ ನಟ ಶರತ್ ಇಂದು (ಮೇ.22) ಇಹಲೋಕ ತ್ಯಜಿಸಿದ್ದಾರೆ. ಐಸಿಯು ವಾರ್ಡ್‌ನಲ್ಲಿಟ್ಟು ಸೂಕ್ತ ಚಿಕಿತ್ಸೆ ನೀಡಿ, ಲಕ್ಷ ಲಕ್ಷ ಖರ್ಚು ಮಾಡಿದ್ರು ಕೂಡ ಶರತ್ ಬಾಬು ಅವರನ್ನ ಉಳಿಸಿಕೊಳ್ಳಲು ಆಗಲಿಲ್ಲ.
ನಾಲ್ಕು ದಶಕಗಳ ಕಾಲ ಚಿತ್ರೋದ್ಯಮದಲ್ಲಿ ಕಲಾವಿದರಾಗಿ ಗುರುತಿಸಿಕೊಂಡಿರುವ ಶರತ್ ಬಾಬು, ಹುಟ್ಟಿದ್ದು ಆಂಧ್ರಪ್ರದೇಶದಲ್ಲಿ. ಆದರೂ, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಅವರು ನಟಿಸಿದ್ದಾರೆ. ಕನ್ನಡದಲ್ಲಿ ಅವರು ‘ಅಮೃತವರ್ಷಿಣಿ’ ಶರತ್ ಬಾಬು ಎಂದೇ ಫೇಮಸ್ ಆಗಿದ್ದಾರೆ. ಇನ್ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಹೆಗ್ಗಳಿಕೆ ಅವರದಾಗಿತ್ತು. ಶಕ್ತಿ, ಕಂಪನ, ರಣಚಂಡಿ, ತುಳಸಿದಳ ಸೇರಿದಂತೆ ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.
ಶರತ್ ಬಾಬು ಅವರ ನಿಧನಕ್ಕೆ ಚಿತ್ರರಂಗದ ನಟ- ನಟಿಯರು ಸಂತಾಪ ಸೂಚಿಸಿದ್ದಾರೆ. ನೆಚ್ಚಿನ ನಟನ ನಿಧನಕ್ಕೆ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post