ಬೆಳಗಾವಿ, ಮೇ 22: ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗನನ್ನು ಬೆಳಗಾವಿಯ ಹಿಂಡಲಗಾ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಸಿದ್ದಾಪುರ ಮಹೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗನನ್ನು ಬಂಧಿಸಲಾಗಿತ್ತು. ಬೆಂಗಳೂರಿನ ಜೈಲಿನಲ್ಲಿದ್ದಾಗ, ನಟ ದರ್ಶನ್ ಜೊತೆ ಚಹಾ ಸೇವಿಸುತ್ತಿರುವ ನಾಗನ ಫೋಟೋ ವೈರಲ್ ಆಗಿತ್ತು. ಈ ಘಟನೆಯ ನಂತರ, ಜೈಲಿನ ವ್ಯವಸ್ಥೆಯ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ಆ ಬಳಿಕ ನಾಗನನ್ನು ಬೆಂಗಳೂರಿನಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ 2024ರ ಜುಲೈನಲ್ಲಿ ವರ್ಗಾವಣೆ ಮಾಡಲಾಗಿತ್ತು. ಹೈಕೋರ್ಟ್‌ನಿಂದ ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ ವಿಲ್ಸನ್ ಗಾರ್ಡನ್ ನಾಗ ಈಗ ಬಿಡುಗಡೆಯಾಗಿದ್ದಾನೆ. ಅನಾರೋಗ್ಯದ ಕಾರಣ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ನಾಗ, ಅಲ್ಲಿಂದ ಸ್ವಂತ ವಾಹನದಲ್ಲಿ ತೆರಳಿದ್ದಾನೆ.
Discover more from Coastal Times Kannada
Subscribe to get the latest posts sent to your email.







Discussion about this post