• About us
  • Contact us
  • Disclaimer
Wednesday, September 9, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

Coastal Times by Coastal Times
July 22, 2026
in ಕ್ರೈಮ್ ನ್ಯೂಸ್
ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ
60
VIEWS
WhatsappTelegramShare on FacebookShare on Twitter

ಮಂಗಳೂರು, ಜುಲೈ 22: ಮಂಗಳೂರು ನಗರದ ಮೇರಿಹಿಲ್​ ಬಾಂದೋಟ್ಟು (ಕೊಪ್ಪಳಕಾಡು) ವ್ಯಾಪ್ತಿಯ ಮನೆಯೊಂದರಲ್ಲಿ ನಡೆದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣವನ್ನು ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಅತ್ಯಂತ ಕ್ಷಿಪ್ರವಾಗಿ ಹಾಗೂ ಕೂಲಂಕಷವಾಗಿ ತನಿಖೆ ನಡೆಸಿ, ದೂರು ದಾಖಲಾದ ಕೇವಲ 24 ಗಂಟೆಗಳ ಒಳಗಾಗಿ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಉತ್ತರ ಪ್ರದೇಶದ ಬಲರಾಮ್‌ಪುರ ಜಿಲ್ಲೆಯ ಜಹೀರುದ್ದೀನ್ (24) ಬಂಧಿತ ವ್ಯಕ್ತಿ. ಮನೆ ಕೆಲಸಕ್ಕೆ ಬಂದಿದ್ದ ಉತ್ತರ ಪ್ರದೇಶ ಮೂಲದ ಮೇಸ್ತ್ರಿಯೊಬ್ಬನೇ ಕೃತ್ಯ ಎಸಗಿರುವುದು ಸಾಬೀತಾಗಿದ್ದು, ಆತನನ್ನು ಬಂಧಿಸಿ ಕಳ್ಳತನವಾಗಿದ್ದ ಸಂಪೂರ್ಣ ಚಿನ್ನಾಭರಣ ಹಾಗೂ ವಾಚನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪದವು ಗ್ರಾಮದ ಕೊಪ್ಪಳಕಾಡುವಿನಲ್ಲಿರುವ ‘ಶ್ರೀದೇವಿ ನಿವಾಸ’ದ ಹಿಂಭಾಗದ ಕೊಠಡಿಯ ಛಾವಣಿ ಬದಲಾವಣೆ ಹಾಗೂ ಹಾಲ್‌ನಲ್ಲಿ ಫಾಲ್ಸ್ ಸೀಲಿಂಗ್ ಕಾಮಗಾರಿಯನ್ನು ಮೇಸ್ತ್ರಿಗಳು ಮತ್ತು ಕೆಲಸಗಾರರು ಜುಲೈ 6 ರಿಂದ ನಡೆಸುತ್ತಿದ್ದರು. ಈ ಅವಧಿಯಲ್ಲಿ ಮನೆಯ ಕೋಣೆಯೊಂದರಲ್ಲಿದ್ದ ಟೇಬಲ್ ಡ್ರಾವರ್‌ನಲ್ಲಿ ಪರ್ಸ್‌ನಲ್ಲಿ ಇರಿಸಲಾಗಿದ್ದ 20 ಗ್ರಾಂ ಚಿನ್ನದ ಕಡಗ, 17 ಗ್ರಾಂ ಚಿನ್ನದ ಚೈನ್, 8 ಗ್ರಾಂ ನವಗ್ರಹ ಉಂಗುರ, 4 ಗ್ರಾಂ ಸಾದಾ ಉಂಗುರ ಹಾಗೂ ಸೋನಾಟಾ ಕಂಪನಿಯ ವಾಚ್ ಸೇರಿ ಒಟ್ಟು 6,37,000 ರೂಪಾಯಿ ಮೌಲ್ಯದ ಸೊತ್ತುಗಳು ಕಳ್ಳತನವಾಗಿದ್ದವು. ಈ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ 68/2026, ಕಲಂ 305 BNS ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಿಸಿಕೊಂಡ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ಮನೆ ಕಾಮಗಾರಿಗೆ ಬಂದಿದ್ದ ಎಲ್ಲಾ ಕೆಲಸಗಾರರನ್ನು ಸತತ ಹಾಗೂ ಕೂಲಂಕಷ ವಿಚಾರಣೆಗೆ ಒಳಪಡಿಸಿದರು. ಈ ವೇಳೆ ಅನುಮಾನಾಸ್ಪದವಾಗಿ ನಡೆದುಕೊಂಡ ಮೇಸ್ತ್ರಿ ಜಹೀರುದ್ದೀನ್ (24) ಎಂಬಾತನನ್ನು ತೀವ್ರ ತನಿಖೆಗೆ ಒಳಪಡಿಸಿದಾಗ, ತಾನೇ ಆಭರಣಗಳನ್ನು ಕದ್ದು ಬಚ್ಚಿಟ್ಟಿರುವುದಾಗಿ ಆತ ತಪ್ಪೊಪ್ಪಿಕೊಂಡಿದ್ದಾನೆ. ಬಂಧಿತ ಆರೋಪಿ ಜಹೀರುದ್ದೀನ್ ನೀಡಿದ ಮಾಹಿತಿಯ ಮೇರೆಗೆ ಕಳವಾಗಿದ್ದ ಒಟ್ಟು 49 ಗ್ರಾಂ ತೂಕದ ಎಲ್ಲಾ ಚಿನ್ನದ ಆಭರಣಗಳನ್ನು ಹಾಗೂ ಸೋನಾಟಾ ವಾಚ್ ಅನ್ನು ಪೊಲೀಸರು ಯಶಸ್ವಿಯಾಗಿ ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ದೂರು ಬಂದ ತಕ್ಷಣ ಕ್ಷಿಪ್ರವಾಗಿ ಕಾರ್ಯಾಚರಣೆ ನಡೆಸಿ, ಕೇವಲ 24 ಗಂಟೆಯೊಳಗೆ ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಡಿ.ಆರ್. ಮಂಜಪ್ಪ, ಸಬ್‌ಇನ್ಸ್ಪೆಕ್ಟರ್ ಅರುಣ್ ಕುಮಾರ್ ಡಿ. ಹಾಗೂ ಠಾಣೆಯ ಸಿಬ್ಬಂದಿ ತಂಡದ ಸಂಪೂರ್ಣ ಸೊತ್ತನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

Next Post

ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

Related Posts

ವಿಟ್ಲ; ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ಮೂವರು ಆರೋಪಿಗಳ ಬಂಧನ
ಕ್ರೈಮ್ ನ್ಯೂಸ್

ವಿಟ್ಲ; ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ಮೂವರು ಆರೋಪಿಗಳ ಬಂಧನ

September 8, 2026
59
ಪುತ್ತೂರು: ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ ಪ್ರಕರಣ-ಕೇರಳದ ವ್ಯಕ್ತಿ ಬಂಧನ, ಕದ್ದ ಕಾಣಿಕೆ ಹುಂಡಿ, ಬೈಕ್ ವಶ
ಕ್ರೈಮ್ ನ್ಯೂಸ್

ಪುತ್ತೂರು: ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ ಪ್ರಕರಣ-ಕೇರಳದ ವ್ಯಕ್ತಿ ಬಂಧನ, ಕದ್ದ ಕಾಣಿಕೆ ಹುಂಡಿ, ಬೈಕ್ ವಶ

September 5, 2026
30
Next Post
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

Discussion about this post

Recent News

ಮಂಗಳೂರು ಜೈಲಿಗೆ ತಡರಾತ್ರಿ ಪೊಲೀಸ್ ದಾಳಿ ;ಕೊಲೆ, ಡ್ರಗ್ಸ್, ಕೋಕಾ ಆರೋಪಿಗಳಿಂದ 10 ಸ್ಮಾರ್ಟ್‌ಫೋನ್‌ಗಳು ಜಪ್ತಿ

ಮಂಗಳೂರು ಜೈಲಿಗೆ ತಡರಾತ್ರಿ ಪೊಲೀಸ್ ದಾಳಿ ;ಕೊಲೆ, ಡ್ರಗ್ಸ್, ಕೋಕಾ ಆರೋಪಿಗಳಿಂದ 10 ಸ್ಮಾರ್ಟ್‌ಫೋನ್‌ಗಳು ಜಪ್ತಿ

September 8, 2026
36
ವಿಟ್ಲ; ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ಮೂವರು ಆರೋಪಿಗಳ ಬಂಧನ

ವಿಟ್ಲ; ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ಮೂವರು ಆರೋಪಿಗಳ ಬಂಧನ

September 8, 2026
59
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಜೈಲಿಗೆ ತಡರಾತ್ರಿ ಪೊಲೀಸ್ ದಾಳಿ ;ಕೊಲೆ, ಡ್ರಗ್ಸ್, ಕೋಕಾ ಆರೋಪಿಗಳಿಂದ 10 ಸ್ಮಾರ್ಟ್‌ಫೋನ್‌ಗಳು ಜಪ್ತಿ

ಮಂಗಳೂರು ಜೈಲಿಗೆ ತಡರಾತ್ರಿ ಪೊಲೀಸ್ ದಾಳಿ ;ಕೊಲೆ, ಡ್ರಗ್ಸ್, ಕೋಕಾ ಆರೋಪಿಗಳಿಂದ 10 ಸ್ಮಾರ್ಟ್‌ಫೋನ್‌ಗಳು ಜಪ್ತಿ

September 8, 2026
ವಿಟ್ಲ; ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ಮೂವರು ಆರೋಪಿಗಳ ಬಂಧನ

ವಿಟ್ಲ; ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ಮೂವರು ಆರೋಪಿಗಳ ಬಂಧನ

September 8, 2026
ತಾ.14ರಿಂದ 16ರವರೆಗೆ ಮಂಗಳೂರಿನ “ಓಂಕಾರ ನಗರ” ಬಂಟ್ಸ್ ಹಾಸ್ಟೇಲ್‌ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಜರಗಲಿದೆ

ತಾ.14ರಿಂದ 16ರವರೆಗೆ ಮಂಗಳೂರಿನ “ಓಂಕಾರ ನಗರ” ಬಂಟ್ಸ್ ಹಾಸ್ಟೇಲ್‌ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಜರಗಲಿದೆ

September 8, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d