• About us
  • Contact us
  • Disclaimer
Wednesday, July 22, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

Coastal Times by Coastal Times
July 22, 2026
in ಕ್ರೈಮ್ ನ್ಯೂಸ್
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು
25
VIEWS
WhatsappTelegramShare on FacebookShare on Twitter

ಮಂಗಳೂರು, ಜು.21: ಕಮಿಷನ್ ಹಾಗೂ ಕೇವಲ 2,000 ರೂಪಾಯಿ ಆಸೆಗೆ ಪರಿಚಯಸ್ಥರಿಗೆ ಬ್ಯಾಂಕ್ ಖಾತೆ, ಸಿಮ್ ಕಾರ್ಡ್ ನೀಡಿದ ಯುವಕನೊಬ್ಬ ಸೈಬರ್ ನೆಟ್‌ವರ್ಕ್ ಜಾಲಕ್ಕೆ ಸಿಲುಕಿ ಸಂಕಷ್ಟ ಎದುರಿಸುತ್ತಿರುವ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

ಯುವಕನ ಕೆವೈಸಿ ದಾಖಲೆಗಳನ್ನು ಬಳಸಿ ಸೌತ್ ಇಂಡಿಯನ್ ಬ್ಯಾಂಕ್‌ನಲ್ಲಿ ಖಾತೆ ತೆಗೆಸಿ, ಅದನ್ನು ದೇಶಾದ್ಯಂತ ನಡೆದ ಆನ್‌ಲೈನ್ ವಂಚನೆಯ ಅಕ್ರಮ ಹಣ ವರ್ಗಾವಣೆಗೆ ಬಳಸಿಕೊಂಡಿರುವ ಕುರಿತು ಮಂಗಳೂರು ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಾಲೇಜು ದಿನಗಳಲ್ಲಿ ಶುರುವಾದ ಜಾಲ: ಮಂಗಳೂರಿನ ಬಲ್ಮಠದ ಹೆಬಿಕ್ ಟೆಕ್ನಿಕಲ್ ಇನ್‌ಸ್ಟಿಟ್ಯೂಟ್‌ನಲ್ಲಿ 2022ರಲ್ಲಿ ಐಟಿಐ ಕಲಿಯುತ್ತಿದ್ದ ಯುವಕನಿಗೆ (23) ಮಂಥನ್ ಎಂಬಾತನ ಪರಿಚಯವಾಗಿತ್ತು. 2023ರ ಅಕ್ಟೋಬರ್‌ನಲ್ಲಿ ಮಂಥನ್, ತನ್ನ ಸ್ನೇಹಿತರಾದ ಮೊಹಮ್ಮದ್ ಹಮ್ರಾಜ್ ಹಾಗೂ ಮೊಹಮ್ಮದ್ ನಿಜಾಮುದ್ದೀನ್ ಎಂಬವರನ್ನು ಕಾಲೇಜಿನ ಬಳಿ ಕರೆತಂದು ಯುವಕನಿಗೆ ಪರಿಚಯಿಸಿದ್ದ. ಈ ವೇಳೆ ಹಮ್ರಾಜ್, “ನನಗೆ ವಿದೇಶದಿಂದ ಹಣ ಬರಲಿದ್ದು, ಅದನ್ನು ವರ್ಗಾಯಿಸಲು ತುರ್ತಾಗಿ ಒಂದು ಬ್ಯಾಂಕ್ ಖಾತೆಯ ಅಗತ್ಯವಿದೆ” ಎಂದು ನಂಬಿಸಿ ಯುವಕನ ನೆರವು ಕೋರಿದ್ದ.

2,000 ರೂ. ನೀಡಿ ಪಾಸ್‌ಬುಕ್, ಎಟಿಎಂ, ಸಿಮ್ ಲೂಟಿ: ಹಮ್ರಾಜ್‌ನ ಮಾತುಗಳನ್ನು ನಿಜವೆಂದು ನಂಬಿದ ಯುವಕ, ಅಕ್ಟೋಬರ್ ಮೊದಲ ವಾರದಲ್ಲಿ ತನ್ನ ಆಧಾರ್ – ಪ್ಯಾನ್ ದಾಖಲೆಗಳನ್ನು ನೀಡಿ ಮಂಗಳೂರಿನ ಸೌತ್ ಇಂಡಿಯನ್ ಬ್ಯಾಂಕ್ ಶಾಖೆಯಲ್ಲಿ ನೂತನ ಖಾತೆ ತೆರೆದಿದ್ದ. ಖಾತೆಗೆ ಹೊಸ ಮೊಬೈಲ್ ಸಂಖ್ಯೆ ಲಿಂಕ್ ಮಾಡಿಸಿದ ಬಳಿಕ, ಬ್ಯಾಂಕ್‌ನಿಂದ ಸಿಕ್ಕ ಪಾಸ್‌ಬುಕ್, ಸಹಿ ಮಾಡಿದ ಚೆಕ್‌ಬುಕ್, ಎಟಿಎಂ ಕಾರ್ಡ್ ಹಾಗೂ ಲಿಂಕ್ ಆಗಿದ್ದ ಸಿಮ್ ಕಾರ್ಡ್‌, ಬ್ಯಾಂಕ್ ಹೊರಭಾಗದಲ್ಲೇ ಹಮ್ರಾಜ್‌ಗೆ ಹಸ್ತಾಂತರಿಸಿದ್ದ. ಪ್ರತಿಯಾಗಿ ಹಮ್ರಾಜ್ ಯುವಕನಿಗೆ 2,000 ರೂಪಾಯಿ ನಗದು ನೀಡಿದ್ದ. ಕೋರ್ಸ್ ಮುಗಿದ ನಂತರ ಯುವಕ ಆ ತಂಡದೊಂದಿಗೆ ಸಂಪರ್ಕ ಕಳೆದುಕೊಂಡಿದ್ದ.

ವಿವಿಧ ರಾಜ್ಯಗಳಲ್ಲಿ ದೂರು – ಬ್ಯಾಂಕ್ ಅಕೌಂಟ್ ಫ್ರೀಜ್: ಇತ್ತೀಚೆಗೆ ತಮ್ಮ ಖಾತೆಯಲ್ಲಿ ಏನೋ ಸಮಸ್ಯೆಯಾಗಿದೆ ಎಂಬುದನ್ನು ಅರಿತ ಯುವಕ ಬ್ಯಾಂಕಿಗೆ ತೆರಳಿ ಪರಿಶೀಲಿಸಿದಾಗ ಭೀಕರ ಸೈಬರ್ ವಂಚನೆ ಬೆಳಕಿಗೆ ಬಂದಿದೆ. ಈ ಬ್ಯಾಂಕ್ ಖಾತೆಯನ್ನು ದೇಶದ ವಿವಿಧ ಭಾಗಗಳಲ್ಲಿ ನಡೆದ ಆನ್‌ಲೈನ್ ಸೈಬರ್ ಕ್ರೈಂ ಹಣ ವರ್ಗಾವಣೆಗೆ ಬಳಸಿರುವುದು ಹಾಗೂ ಚೆಕ್ ಮೂಲಕ ಹಣ ಡ್ರಾ ಮಾಡಿರುವುದು ತಿಳಿದು ಬಂದಿದೆ. ಪರಿಣಾಮವಾಗಿ ದೇಶದ ವಿವಿಧ ರಾಜ್ಯಗಳ ಪೊಲೀಸ್ ಠಾಣೆಗಳಲ್ಲಿ ಈ ಖಾತೆಯ ವಿರುದ್ಧ ದೂರುಗಳು ದಾಖಲಾಗಿ, ಬ್ಯಾಂಕ್ ಅಕೌಂಟ್ ಫ್ರೀಜ್ ಆಗಿರುವುದು ಖಚಿತವಾಗಿದೆ.

ತನ್ನ ಹೆಸರಿನಲ್ಲಿದ್ದ ಖಾತೆಯನ್ನು ಅಕ್ರಮ ಸೈಬರ್ ವಂಚನೆ ಜಾಲಕ್ಕೆ ದುರ್ಬಳಕೆ ಮಾಡಿಕೊಂಡ ಸುರತ್ಕಲ್‌ನ 7ನೇ ಬ್ಲಾಕ್ ಕೃಷ್ಣಾಪುರ ನಿವಾಸಿ ಮೊಹಮ್ಮದ್ ಹಮ್ರಾಜ್ ಹಾಗೂ ಈ ಜಾಲದಲ್ಲಿ ಭಾಗಿಯಾಗಿರುವ ಇತರ ಶಂಕಿತರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಯುವಕ ದೂರು ನೀಡಿದ್ದಾರೆ. ದೂರು ಸ್ವೀಕರಿಸಿರುವ ಮಂಗಳೂರು ಸಿಇಎನ್ (CEN) ಸೈಬರ್ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ, ಮಂಗಳೂರಿನ ಹಾಪ್‌ಕಾಮ್ಸ್ ಜಿಎಂ ರವಿ ಶೆಟ್ಟಿ ಸ್ಥಳದಲ್ಲೇ ಸಾವು

Next Post

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

Related Posts

ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ, ಮಂಗಳೂರಿನ ಹಾಪ್‌ಕಾಮ್ಸ್ ಜಿಎಂ ರವಿ ಶೆಟ್ಟಿ ಸ್ಥಳದಲ್ಲೇ ಸಾವು
ಕ್ರೈಮ್ ನ್ಯೂಸ್

ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ, ಮಂಗಳೂರಿನ ಹಾಪ್‌ಕಾಮ್ಸ್ ಜಿಎಂ ರವಿ ಶೆಟ್ಟಿ ಸ್ಥಳದಲ್ಲೇ ಸಾವು

July 21, 2026
76
ಮೂಡಬಿದ್ರೆ ಬಸ್ ನಿಲ್ದಾಣದಲ್ಲಿ ತಲ್ವಾರ್ ಹಿಡಿದು ಯುವಕನ ರಂಪಾಟ: ಮೊಬೈಲ್ ಶಾಪ್‌ಗೆ ನುಗ್ಗಿ ಬೆದರಿಕೆ, ಯುವಕನ ಬಂಧನ
ಕ್ರೈಮ್ ನ್ಯೂಸ್

ಮೂಡಬಿದ್ರೆ ಬಸ್ ನಿಲ್ದಾಣದಲ್ಲಿ ತಲ್ವಾರ್ ಹಿಡಿದು ಯುವಕನ ರಂಪಾಟ: ಮೊಬೈಲ್ ಶಾಪ್‌ಗೆ ನುಗ್ಗಿ ಬೆದರಿಕೆ, ಯುವಕನ ಬಂಧನ

July 19, 2026
85
Next Post
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

Discussion about this post

Recent News

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
16
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
25
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ, ಮಂಗಳೂರಿನ ಹಾಪ್‌ಕಾಮ್ಸ್ ಜಿಎಂ ರವಿ ಶೆಟ್ಟಿ ಸ್ಥಳದಲ್ಲೇ ಸಾವು

ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ, ಮಂಗಳೂರಿನ ಹಾಪ್‌ಕಾಮ್ಸ್ ಜಿಎಂ ರವಿ ಶೆಟ್ಟಿ ಸ್ಥಳದಲ್ಲೇ ಸಾವು

July 21, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d