ಆಂಧ್ರ ಪ್ರದೇಶ: ಅನಕಪಲ್ಲಿ ಜಿಲ್ಲೆಯ ರಾಂಬಿಲ್ಲಿ ಮಂಡಲದ ಅಚ್ಯುತಪುರಂನಲ್ಲಿನ ಎಸ್ಸೆಂಟಿಯಾ ಫಾರ್ಮಾ ಕಂಪನಿಯಲ್ಲಿ ಬುಧವಾರ ರಿಯಾಕ್ಟರ್ ಸ್ಫೋಟಗೊಂಡು ಭಾರೀ ಅನಾಹುತ ಸಂಭವಿಸಿದೆ. ಘಟನೆಯಲ್ಲಿ ಸದ್ಯ 17 ಮಂದಿ ಸಾವನ್ನಪ್ಪಿದ್ದರೆ, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಭಾರೀ ಪ್ರಮಾಣದಲ್ಲಿ ದುರಂತ ಸಂಭವಿಸಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ.
ಮಧ್ಯಾಹ್ನದ ಊಟದ ವಿರಾಮದ ವೇಳೆ ರಿಯಾಕ್ಟರ್ ಸ್ಫೋಟಗೊಂಡು, ಬೆಂಕಿ ಹೊತ್ತಿಕೊಂಡಿತ್ತು. ಕಂಪನಿಯ ಆವರಣದಲ್ಲಿ ದಟ್ಟ ಹೊಗೆ ಆವರಿಸಿತ್ತು. ದೊಡ್ಡ ಸದ್ದು ಕೇಳಿ ವಿರಾಮದಲ್ಲಿದ್ದ ಕಾರ್ಮಿಕರು ಬೆಚ್ಚಿಬಿದ್ದರು. ಕೆಲವರು ಕಂಪನಿಯ ಒಳಗಿನಿಂದ ಕಿರುಚುತ್ತ ಓಡಿ ಬಂದರು. ರಿಯಾಕ್ಟರ್ ಸ್ಫೋಟದ ಸಮಯದಲ್ಲಿ 300 ಕಾರ್ಮಿಕರು ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ದೇಹಗಳು ಛಿದ್ರ ಛಿದ್ರ: ರಿಯಾಕ್ಟರ್ ಸ್ಫೋಟದಿಂದಾಗಿ ಕಂಪನಿಯ ಮೊದಲ ಮಹಡಿಯ ಸ್ಲ್ಯಾಬ್ ಕುಸಿದಿದೆ. ಸ್ಫೋಟದ ತೀವ್ರತೆಗೆ ಕಾರ್ಮಿಕರು ದೇಹಗಳು ಛಿದ್ರವಾಗಿವೆ. ಐವರ ಮೃತದೇಹಗಳನ್ನು ಅನಕಾಪಲ್ಲಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಹೊಗೆ ಮತ್ತು ಬೆಂಕಿ ಆವರಿಸಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಗಾಯಗೊಂಡವರ ಪೈಕಿ ಐವರಿಗೆ ಶೇ.60ಕ್ಕೂ ಹೆಚ್ಚು ಸುಟ್ಟ ಗಾಯಗಳಾಗಿವೆ. ಸ್ಫೋಟದಲ್ಲಿ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಶಂಕಿಸಲಾಗಿದೆ.
Discover more from Coastal Times Kannada
Subscribe to get the latest posts sent to your email.
Discussion about this post